ಗುಳೇದಗುಡ್ಡ | ಕುರಬರ ಸಮುದಾಯವನ್ನು ಎಸ್‌ಟಿಗೆ ಸೇರಿಸುವ ಸರ್ಕಾರದ ಕ್ರಮ ಖಂಡಿಸಿ ವಾಲ್ಮೀಕಿ ಮಹಾಸಭಾ ಪ್ರತಿಭಟನೆ

Date:

Advertisements

ರಾಜ್ಯ ಸರ್ಕಾರ ಕುರಬ ಸಮುದಾಯವನ್ನು ಎಸ್‌ಟಿ ಪಟ್ಟಿಗೆ ಸೇರ್ಪಡೆ ಮಾಡಲು ಮುಂದಾಗಿರುವುದನ್ನು ಖಂಡಿಸಿ ಬಾಗಲಕೋಟೆ ಜಿಲ್ಲೆಯ ಗುಳೇದಗುಡ್ಡ ಪಟ್ಟಣದಲ್ಲಿ ಅಖಿಲ ಕರ್ನಾಟಕ ಮಹರ್ಷಿ ವಾಲ್ಮೀಕಿ ನಾಯಕ ಮಹಾಸಭಾ ಬೃಹತ್ ಪ್ರತಿಭಟನೆ ನಡೆಸಿತು.

ಪಟ್ಟಣದ ಅಂಬೇಡ್ಕರ್ ಭವನದಿಂದ ಪ್ರತಿಭಟನೆ ಆರಂಭಿಸಿ ಪವರ್ ಕ್ರಾಸ್, ಪುರಸಭೆ, ಬನ್ನಿಕಟ್ಟಿ, ಸರಫ್ ಬಜಾರ್, ಕಂಠಿಪೇಟೆ ಬಾದಾಮಿ ನಕ ಮೂಲಕ ತಹಶೀಲ್ದಾರ್ ಕಚೇರಿಗೆ ಆಗಮಿಸಿ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.

ಅಖಿಲ ಕರ್ನಾಟಕ ಮಹರ್ಷಿ ವಾಲ್ಮೀಕಿ ನಾಯಕ ಮಹಾಸಭಾ ತಾಲೂಕು ಅಧ್ಯಕ್ಷ ಫಕೀರಪ್ಪ ತಳವಾರ ಮಾತನಾಡಿ, “ಕುರುಬ ಸಮುದಾಯ ರಾಜ್ಯದ ಪ್ರಬಲ ಸಮುದಾಯಗಳಲ್ಲಿ ಒಂದಾಗಿದ್ದು, ಆ ಸಮುದಾಯ ಶಿಕ್ಷಣ ಸೇರಿದಂತೆ ಹಲವು ರಂಗಗಳಲ್ಲಿ ಬೆಳವಣಿಗೆ ಹೊಂದಿದೆ. ಅಂತಹ ಸಮುದಾಯವನ್ನು ಹಿಂದುಳಿದಿರುವ ಪರಿಶಿಷ್ಟ ಪಂಗಡ ಸಮುದಾಯಕ್ಕೆ ಸೇರಿಸಲು ಸರ್ಕಾರ ಹೊರಟಿದೆ. ಇದರಿಂದ ಪರಿಶಿಷ್ಟ ಪಂಗಡಗಳಿಗೆ ಅನ್ಯಾಯವಾಗಲಿದೆ. ಈಗಾಗಲೇ ರಾಜ್ಯಾದ್ಯಂತ ನಮ್ಮ ಸಮುದಾಯ ವಿರೋಧ ವ್ಯಕ್ತಪಡಿಸಿದೆ. ಇದು ಮುಂದುವರೆಯಲಿದೆ” ಎಂದರು.

“ತಾಲೂಕಿನಲ್ಲಿ 140 ಜನರು ನಕಲಿ ಪರಿಶಿಷ್ಟ ಪಂಗಡದ ಜಾತಿ ಪ್ರಮಾಣ ಪತ್ರ ಪಡೆದಿದ್ದು, ಇದರಿಂದ ನಮ್ಮ ನಮಗೆಲ್ಲ ಅನ್ಯಾಯವಾಗಿದೆ. ನಾಲ್ಕೈದು ತಿಂಗಳಿಂದ ನಕಲಿ ಜಾತಿ ಪ್ರಮಾಣ ಪತ್ರ ಪಡೆದವರ ಮೇಲೆ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದರು ಕ್ರಮ ಆಗಿಲ್ಲ. ಸೆ.30 ರೊಳಗೆ ಅವರ ಮೇಲೆ ಕ್ರಮ ಕೈಗೊಳ್ಳದಿದ್ದರೆ ಉಗ್ರ ಪ್ರತಿಭಟನೆ ಮಾಡಲಾಗುತ್ತದೆ” ಎಂದು ಎಚ್ಚರಿಸಿದರು.

ಇದನ್ನೂ ಓದಿ; ಬಾಗಲಕೋಟೆ | ಭಾರೀ ಮಳೆಯಿಂದ ಈರುಳ್ಳಿ ಬೆಳೆನಾಶ; ಪರಿಹಾರಕ್ಕೆ ಕಿಸಾನ್‌ ಸಂಘ ಆಗ್ರಹ

ಮುಖಂಡರಾದ ಶಿವಾನಂದ ವಾಲೆಕಾರ, ಪರಶುರಾಮ ತಳವಾರ,ಶಿವಾನಂದ ವಾಲೀಕಾರ, ರಾಮಣ್ಣ ಚಂದರಗಿ, ಲಾಯಪ್ಪ ಗುಡಿಸಲಮನಿ,ಯಮನಪ್ಪ ಗೌಡರ, ಶಂಕ್ರಪ್ಪ ಗೌಡರ,ಹನುಮಂತ ಎತ್ತಿನಮನಿ, ಭೀಮಪ್ಪ ಗೌಡರ, ಹನುಮಂತ ತಳವಾರ,ಕಲ್ಲನಗೌಡರ ಶಿವಾನಂದ, ಲಕ್ಷ್ಮಣ ಗದ್ದನಕೇರಿ, ಹೇಮಂತ ಮಲ್ಲಾರ, ದ್ಯಾಮಣ್ಣ ಗೌಡ,ಪರಶುರಾಮ ತಳವಾರ, ಅರ್ಜುನ ಮನ್ನಿಕಟ್ಟಿ, ಬರಮಪ್ಪ ಪೂಜಾರಿ, ರಾಮನಗೌಡ ಗೌಡರ, ಗಣಪತಿ ತಳವಾರ,ಸುಭಾಸ ಹೊಸಮನಿ,ಯಮನಪ್ಪ ಗುಡಿಸಲಮನಿ, ಶಿವಪ್ಪ, ಬಸವರಾಜ ಸಂಗೊಂದಿ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಜೆಪಿಯ ಆತ್ಮವಂಚನೆ ಪ್ರತಿಭಟನೆಗಳು ಕಲಬುರಗಿಗೆ ಅಗತ್ಯವಿಲ್ಲ: ಸಚಿವ ಪ್ರಿಯಾಂಕ್ ಖರ್ಗೆ

ಅಧಿಕಾರದಲ್ಲಿದ್ದಾಗ ಕಲಬುರಗಿ ಜಿಲ್ಲೆಯ ರೈತರಿಗೆ ದ್ರೋಹವೆಸಗಿದ್ದ ಬಿಜೆಪಿ ಈಗ ಪ್ರತಿಭಟನೆಯ ನಾಟಕ...

ಧಾರವಾಡ | ಹಿಂದುಳಿದ ವರ್ಗಗಳ ಸಮೀಕ್ಷೆ; ಸಬ್‌ಜೈಲ್ ಸುತ್ತ ಪ್ರದೇಶಗಳಲ್ಲಿ ನೆಟವರ್ಕ್ ಸಮಸ್ಯೆ

ಧಾರವಾಡ ಜಿಲ್ಲೆಯಲ್ಲಿ ಹಿಂದುಳಿದ ವರ್ಗಗಳ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಪ್ರಗತಿಯಲ್ಲಿದ್ದು,...

ವಿಜಯಪುರ | ಪರಿಸರ ಸಂರಕ್ಷಣೆ ಪ್ರತಿಯೊಬ್ಬರ ಕರ್ತವ್ಯ: ಶಂಕರಗೌಡ ಸೋಮನಾಳ

ಪರಿಸರಕ್ಕೆ ಹಾನಿ ಮಾಡದಂತಹ ತಂತ್ರಜ್ಞಾನಗಳನ್ನು ನಾವು ಪ್ರೋತ್ಸಾಹಿಸಬೇಕು. ಪರಿಸರ ಸಂರಕ್ಷಣೆಯಲ್ಲಿ ವಿದ್ಯಾರ್ಥಿಗಳ...

ಕೆಸಿ ವ್ಯಾಲಿ ಅಧಿಕಾರಿಗಳ ನಿರ್ಲಕ್ಷ್ಯ ರೈತರ ತೋಟಗಳಿಗೆ ನುಗ್ಗಿದ ನೀರು, ಲಕ್ಷಾಂತರ ರೂ ಬೆಳೆ ನಷ್ಟ

ಕೋಲಾರ: ಕೆ.ಸಿ ವ್ಯಾಲಿ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ನಿರ್ಲಕ್ಷ್ಯಕ್ಕೆ ರೈತರು ಬೀದಿಗೆ...

Download Eedina App Android / iOS

X