ಗುಂಡ್ಲುಪೇಟೆ | ಜಾತಿನಿಂದನೆ ಹಾಗೂ ಹಲ್ಲೆ ಆರೋಪ: ನಾಲ್ವರು ವಿರುದ್ಧ ಅಟ್ರಾಸಿಟಿ ಪ್ರಕರಣ ದಾಖಲು

Date:

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ತಾಲ್ಲೂಕಿನ ಬೇರಂಬಾಡಿ ಗ್ರಾಮದಲ್ಲಿ ಪರಿಶಿಷ್ಟ ಜಾತಿಗೆ ಸೇರಿದ ದಾಸನಾಯಕ ಮತ್ತು ಅವರ ಪತ್ನಿ ಲಕ್ಷ್ಮಮ್ಮ ಅವರ ಮೇಲೆ ಹಲ್ಲೆ ನಡೆಸಿ ಜಾತಿನಿಂದನೆ ಮಾಡಿರುವ ಆರೋಪದ ಹಿನ್ನೆಲೆಯಲ್ಲಿ ನಾಲ್ವರು ಸವರ್ಣೀಯರ ವಿರುದ್ಧ ಗುಂಡ್ಲುಪೇಟೆ ಪೊಲೀಸ್ ಠಾಣೆಯಲ್ಲಿ ಎಸ್ಸಿ/ಎಸ್ಟಿ ದೌರ್ಜನ್ಯ ತಡೆ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.

- Advertisement -

ಬೇರಂಬಾಡಿ ಗ್ರಾಮದ ಬೀಚನಹಳ್ಳಿ ಸರ್ವೇ ನಂ. 283/1ರಲ್ಲಿ ದಾಸನಾಯಕ ಅವರಿಗೆ ಸೇರಿದ ಎರಡು ಎಕರೆ ಜಮೀನು ಇದೆ. ಪಕ್ಕದ ಜಮೀನನ್ನು ಗ್ರಾಮದ ಲಿಂಗಾಯತ ಸಮುದಾಯದ ನಂದೀಶ್ ಎಂಬುವರು ಖರೀದಿಸಿದ್ದು, ತಮ್ಮ ಜಮೀನಿನಲ್ಲಿದ್ದ ಕಳೆಯನ್ನು ದಾಸನಾಯಕ ಅವರ ಜಮೀನಿಗೆ ಅತಿಕ್ರಮ ಪ್ರವೇಶ ಮಾಡಿ ಸುರಿದಿರುವುದಾಗಿ ಆರೋಪಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ವಿಜಯಪುರ | 80ರ ಗಡಿ ದಾಟಿದ ಬಿಳಿ ಜೋಳ,...

ವಿಜಯಪುರ ಎಂದಾಕ್ಷಣ ನೆನಪಾಗುವುದು ಬಿಳಿ ಜೋಳದ ರೊಟ್ಟಿ. ಉತ್ತರ ಕರ್ನಾಟಕದ ಜನರ ಬದುಕು, ಆಹಾರ ಸಂಸ್ಕೃತಿಯ ಅವಿಭಾಜ್ಯ ಭಾಗವಾಗಿರುವ ಜೋಳವೇ ಈಗ ಸಾಮಾನ್ಯ ಜನರ ಕೈಗೆಟುಕದ ವಸ್ತುವಾಗುತ್ತಿದೆ. ಕೆಲವೇ ದಿನಗಳ ಹಿಂದೆ ಕೆಜಿಗೆ...

ರಾಜಕಾರಣಿಯ ಬೆಡ್‌ರೂಮಿನಲ್ಲಿ ಪ್ರಜಾಪ್ರಭುತ್ವ ಹುಡುಕುವ ಮಾಧ್ಯಮಗಳು!

ಒಂದು ಸಣ್ಣ ಪ್ರಶ್ನೆ, ಪ್ರಿಯ ಓದುಗರೇ! ಬೆಡ್‌ರೂಮಿನ ಹೊಗೆಯ ಹಿಂದೆ ಓಡುವ ಮಾಧ್ಯಮಗಳಿಗೆ, ಜನರ ಬದುಕನ್ನು ಸುಡುತ್ತಿರುವ ಬೆಂಕಿ ಕಾಣುವುದಿಲ್ಲವೇ? ರಾಜಕಾರಣಿಯೊಬ್ಬರ ಖಾಸಗಿ ಬದುಕಿನ ಬಗ್ಗೆ ಸುದ್ದಿ ಹೊರಬಿದ್ದರೆ ಸಾಕು; ಮಾಧ್ಯಮಗಳಲ್ಲಿ ಚರ್ಚೆಗಳ ಮಹಾಪೂರ. ಯಾರು...

ಬ್ರೆಜಿಲ್‌ನಲ್ಲಿ ʼಲೂಲಾʼ ಐತಿಹಾಸಿಕ ಗೆಲುವು: ನಾಗರಿಕ ಸಂಘಟನೆಗಳು ಚುನಾವಣೆಯ...

ಬ್ರೆಜಿಲ್‌ನ ಅಧ್ಯಕ್ಷೀಯ ಚುನಾವಣೆಯಲ್ಲಿ ಎಡಪಂಥೀಯ ನಾಯಕ ಲೂಯಿಸ್ ಇನಾಸಿಯೊ ಲೂಲಾ ಡಿ ಸಿಲ್ವಾ ಅವರು ಅತ್ಯಂತ ಐತಿಹಾಸಿಕ ರೀತಿಯಲ್ಲಿ ಮರುಆಯ್ಕೆಯಾಗಿದ್ದಾರೆ. ಅಕ್ಟೋಬರ್ 25ರಂದು ನಡೆದ ಎರಡನೇ ಸುತ್ತಿನ ಮತದಾನದಲ್ಲಿ ಅವರು ಬಲಪಂಥೀಯ ಅಭ್ಯರ್ಥಿ...

ಈ ಹಿನ್ನೆಲೆಯಲ್ಲಿ ಅನುಮಾನಗೊಂಡ ದಾಸನಾಯಕ ಅವರು ಜೂನ್ 4ರಂದು ಸರ್ವೇಯರ್ ಮೂಲಕ ಜಮೀನಿನ ಸರ್ವೇ ಮಾಡಿಸಿದ್ದರು. ಬಳಿಕ ಮನೆಗೆ ಹಿಂದಿರುಗುವ ವೇಳೆ ನಂದೀಶ್, ಶಿವಾನಂದ್, ಮಣಿಕಂಠ ಹಾಗೂ ನಿಂಗರಾಜು ಎಂಬುವರು ತಗಾದೆ ತೆಗೆದು ಅವಾಚ್ಯ ಶಬ್ದಗಳಿಂದ ನಿಂದಿಸಿ, ಜಾತಿ ನಿಂದನೆ ಮಾಡಿ ಹಲ್ಲೆ ನಡೆಸಿರುವುದಾಗಿ ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಹಲ್ಲೆಯಿಂದ ಗಾಯಗೊಂಡ ದಾಸನಾಯಕ ಹಾಗೂ ಲಕ್ಷ್ಮಮ್ಮ ಅವರು ಗುಂಡ್ಲುಪೇಟೆ ತಾಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು, ಬಳಿಕ ಪೊಲೀಸ್ ಠಾಣೆಗೆ ದೂರು ಸಲ್ಲಿಸಿದ್ದಾರೆ. ಆರೋಪಿಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಹಾಗೂ ಜಾತಿನಿಂದನೆ ಮತ್ತು ಕೊಲೆ ಬೆದರಿಕೆ ಆರೋಪಗಳಡಿ ಪ್ರಕರಣ ದಾಖಲಿಸುವಂತೆ ಒತ್ತಾಯಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ?ಗುಂಡ್ಲುಪೇಟೆ | ಅಕ್ರಮ ಪ್ರವೇಶ–ಮದ್ಯಪಾನ ಪ್ರಕರಣ: ಮದ್ದೂರು ವಲಯದ ಆರ್‌ಎಫ್‌ಒ ಅಮಾನತು

ಪ್ರಕರಣ ದಾಖಲಾಗುತ್ತಿದ್ದಂತೆ ಆರೋಪಿಗಳಾದ ನಾಲ್ವರು ತಲೆಮರೆಸಿಕೊಂಡಿದ್ದು, ಅವರ ಬಂಧನಕ್ಕಾಗಿ ಪೊಲೀಸರು ಬಲೆ ಬೀಸಿದ್ದಾರೆ. ಗುಂಡ್ಲುಪೇಟೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.

eedina
ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಮತದಾರರ ಹಕ್ಕು ರಕ್ಷಣೆಗೆ ಕಾಂಗ್ರೆಸ್‌ನಿಂದ ‘ವೋಟ್ ಬಚಾವೋ–ದೇಶ್ ಬಚಾವೋ’ ಆಂದೋಲನ

ದೇಶದ ಪ್ರಜಾಪ್ರಭುತ್ವದ ಮೌಲ್ಯಗಳು ಹಾಗೂ ಮತದಾನದ ಹಕ್ಕುಗಳ ರಕ್ಷಣೆಗೆ ಅಖಿಲ ಭಾರತ...

ಯಾದಗಿರಿ | ಆಂಧ್ರಪ್ರದೇಶದಲ್ಲಿ ಪ್ರಜಾಪ್ರಭುತ್ವದ ಹಕ್ಕುಗಳ ದಮನದ ಆರೋಪ: ಎಐಬಿಎಸ್‌ಪಿ ತೀವ್ರ ಖಂಡನೆ

ಆಂಧ್ರಪ್ರದೇಶದಲ್ಲಿ ವಿರೋಧ ಪಕ್ಷಗಳ ಅಭ್ಯರ್ಥಿಗಳಿಗೆ ನಾಮಪತ್ರ ಸಲ್ಲಿಸಲು ಅಡ್ಡಿಪಡಿಸಲಾಗಿದೆ ಎಂಬ ಆರೋಪಗಳನ್ನು...

ಯಾದಗಿರಿ | ಮಲ್ಹಾರ ಗ್ರಾಮದಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ

ಯಾದಗಿರಿ ತಾಲೂಕಿನ ಮಲ್ಹಾರ ಗ್ರಾಮದಲ್ಲಿ ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ಅವರ...

ಉಡುಪಿ | ಜ್ಞಾನೇಶ್ ಕುಮಾರ್ ಅಣಕು ಶವಯಾತ್ರೆ ನಡೆಸಿ, ಪ್ರತಿಕೃತಿ ದಹಿಸಿ ಆಕ್ರೋಶ

ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ವಿರೋಧಿಸಿ ಹಾಗೂ ಮುಖ್ಯ...