ಗುಂಡ್ಲುಪೇಟೆ | ಚನ್ನಾಜಯ್ಯನಹುಂಡಿ ಗೋಮಾಳ ತೆರವು ಕಾರ್ಯ ಸ್ಥಗಿತ; ಗ್ರಾಮಸ್ಥರ ನಡುವೆ ವಾಗ್ವಾದ

Date:

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ತಾಲ್ಲೂಕಿನ ಚನ್ನಾಜಯ್ಯನಹುಂಡಿ ಗ್ರಾಮದಲ್ಲಿರುವ ಸರ್ವೆ ನಂ. 138ರ ಸರ್ಕಾರಿ ಗೋಮಾಳ ಜಾಗದ ಒತ್ತುವರಿ ತೆರವು ಕಾರ್ಯವು ಗ್ರಾಮಸ್ಥರ ವಿರೋಧ ಮತ್ತು ಪರಸ್ಪರ ವಾಗ್ವಾದದ ಹಿನ್ನೆಲೆಯಲ್ಲಿ ತಾತ್ಕಾಲಿಕವಾಗಿ ಸ್ಥಗಿತಗೊಂಡ ಘಟನೆ ಗುರುವಾರ ನಡೆದಿದೆ.

- Advertisement -

ಗ್ರಾಮದ ಸರ್ವೆ ನಂ. 138ರಲ್ಲಿ ಸುಮಾರು 18 ಎಕರೆ 38 ಗುಂಟೆ ಗೋಮಾಳ ಜಾಗವನ್ನು ಅನೇಕರು ಒತ್ತುವರಿ ಮಾಡಿಕೊಂಡು ಕೃಷಿ ಚಟುವಟಿಕೆ ನಡೆಸುತ್ತಿರುವುದಲ್ಲದೆ ಶೆಡ್‌ಗಳನ್ನು ನಿರ್ಮಿಸಿಕೊಂಡಿದ್ದಾರೆ ಎಂದು ಆರೋಪಿಸಿ ಗ್ರಾಮಸ್ಥರು ತೆರವುಗೊಳಿಸುವಂತೆ ಅರ್ಜಿ ಸಲ್ಲಿಸಿದ್ದರು. ಈ ಹಿನ್ನೆಲೆಯಲ್ಲಿ ಅಧಿಕಾರಿಗಳು ಜಾಗದ ಸರ್ವೆ ಮತ್ತು ಗುರುತು ಕಾರ್ಯವನ್ನು ಪೂರ್ಣಗೊಳಿಸಿ ಒತ್ತುವರಿ ತೆರವು ಕಾರ್ಯಕ್ಕೆ ಮುಂದಾಗಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

137 ಜೀವ ರಕ್ಷಕ ಕ್ಯಾನ್ಸರ್ ಔಷಧಗಳ ದರ ಶೇ.70ರಷ್ಟು...

ಕ್ಯಾನ್ಸರ್ ಚಿಕಿತ್ಸೆಯ ದುಬಾರಿ ವೆಚ್ಚದಿಂದ ಕಂಗೆಟ್ಟಿರುವ ರೋಗಿಗಳಿಗೆ ಕೇಂದ್ರ ಸರ್ಕಾರದಿಂದ ಕೊಂಚ ನಿರಾಳತೆಯ ಸುದ್ದಿಯೊಂದಿದೆ! 137 ಜೀವರಕ್ಷಕ ಕ್ಯಾನ್ಸರ್ ಔಷಧಗಳ ಬೆಲೆ ಇಳಿಕೆಯಾಗುವ ಸಾಧ್ಯತೆಯಿದ್ದು, ಕೆಲವು ಔಷಧಗಳ ಗರಿಷ್ಠ ಚಿಲ್ಲರೆ ಬೆಲೆ ಶೇ.70ರವರೆಗೆ...

‘ದೇಶ್ ಕೋ ಬಿಕನೇ ನಹೀ ದೂಂಗಾ’ ಎಂದು ನವಮಂಗಳೂರು...

​ರೈಲ್ವೆ, ವಿಮಾನ ನಿಲ್ದಾಣ, ಟೆಲಿಕಾಂ ಸೇರಿದಂತೆ ದೇಶದ ಪ್ರಮುಖ ಜಯಶೀಲ ಸಾರ್ವಜನಿಕ ವಲಯಗಳನ್ನು ಈಗಾಗಲೇ ಆಯ್ದ ಕಾರ್ಪೊರೇಟ್ ಕುಳಗಳಿಗೆ ಒಪ್ಪಿಸಿರುವ ಮೋದಿ ಸರ್ಕಾರ, ಈಗ ತನ್ನ ದೃಷ್ಟಿಯನ್ನು ಕಡಲತೀರಗಳತ್ತ ಹರಿಸಿದೆ. ದೇಶದ ಆಮದು-ರಫ್ತು...

SIRನ ಒಳನೋಟ: ಸೇರ್ಪಡೆಗಿಂತ ಹೊರಗಿಡುವುದಕ್ಕೆ ಆದ್ಯತೆ ನೀಡಿದಾಗ ಏನಾಗುತ್ತದೆ?

SIR ಕರಡು ಪಟ್ಟಿಯಲ್ಲಿರುವ ಮತದಾರರ ಸಂಖ್ಯೆಯು ನೈಜ ವಯಸ್ಕ ಜನಸಂಖ್ಯೆಯ ಅಂದಾಜಿಗಿಂತ ಅಷ್ಟೊಂದು ದೊಡ್ಡ ಪ್ರಮಾಣದಲ್ಲಿ ಕಡಿಮೆಯಾಗಿರುವುದಕ್ಕೆ ಕಾರಣವೇನು? ಈ ಕಾಣೆಯಾದ ಮತದಾರರೆಲ್ಲ ಯಾರು? ಅವರು ಮತದಾರರ ಪಟ್ಟಿಯಲ್ಲಿ ಬಿಟ್ಟು ಹೋಗಿದ್ದು ಹೇಗೆ?...

ಆದರೆ, ಒತ್ತುವರಿ ಮಾಡಿಕೊಂಡಿರುವ ಕೆಲವರು ತೆರವು ಕಾರ್ಯಕ್ಕೆ ಅವಕಾಶ ನೀಡುವುದಿಲ್ಲ ಎಂದು ಪಟ್ಟು ಹಿಡಿದ ಪರಿಣಾಮ ಸ್ಥಳದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣಗೊಂಡಿತು. ಎರಡೂ ಗುಂಪಿನವರ ನಡುವೆ ಮಾತಿನ ಚಕಮಕಿ ನಡೆದು ಕೈಕೈ ಮಿಲಾಯಿಸುವ ಹಂತಕ್ಕೂ ತಲುಪಿದ ಹಿನ್ನೆಲೆಯಲ್ಲಿ ಅಧಿಕಾರಿಗಳು ಮಧ್ಯಪ್ರವೇಶಿಸಿ ಪರಿಸ್ಥಿತಿಯನ್ನು ನಿಯಂತ್ರಿಸಿದರು.

ಈ ವೇಳೆ ತಹಶೀಲ್ದಾರ್ ಎಂ.ಎಸ್. ತನ್ಮಯ್ ಹಾಗೂ ಸರ್ಕಲ್ ಇನ್ಸ್‌ಪೆಕ್ಟರ್ ಜಯಕುಮಾರ್ ಗ್ರಾಮಸ್ಥರನ್ನು ಸಮಾಧಾನಪಡಿಸಿ, ಮತ್ತೊಂದು ದಿನ ಸಭೆ ನಡೆಸಿ ಚರ್ಚಿಸಿದ ಬಳಿಕ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಆದರೆ, ಕೆಲ ಗ್ರಾಮಸ್ಥರು ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿ, ಮೂರು ತಿಂಗಳ ಹಿಂದೆಯೇ ಅರ್ಜಿ ಸಲ್ಲಿಸಿ ಸರ್ವೆ ಕಾರ್ಯ ಪೂರ್ಣಗೊಂಡಿದ್ದರೂ ತೆರವು ಕಾರ್ಯ ವಿಳಂಬವಾಗುತ್ತಿರುವುದು ಏಕೆ ಎಂದು ಪ್ರಶ್ನಿಸಿದರು. ಇನ್ನೊಂದೆಡೆ, ಹಲವು ವರ್ಷಗಳಿಂದ ತಾವು ಜಮೀನು ಬಳಕೆ ಮಾಡಿಕೊಂಡು ಶೆಡ್‌ಗಳನ್ನು ನಿರ್ಮಿಸಿಕೊಂಡಿದ್ದೇವೆ. ಹೀಗಾಗಿ ತೆರವು ಕಾರ್ಯಕ್ಕೆ ಅವಕಾಶ ನೀಡುವುದಿಲ್ಲ ಎಂದು ಒತ್ತುವರಿದಾರರು ವಾದಿಸಿದರು.

ನಂತರ ಮಾತನಾಡಿದ ತಹಶೀಲ್ದಾರ್ ತನ್ಮಯ್, ಮಾನವೀಯ ದೃಷ್ಟಿಯಿಂದ ಸಂಬಂಧಪಟ್ಟವರಿಗೆ ಸ್ವಲ್ಪ ಕಾಲಾವಕಾಶ ನೀಡಲಾಗುವುದು. ಬಳಿಕ ಕಾನೂನು ಪ್ರಕಾರ ಕ್ರಮ ಕೈಗೊಂಡು ಒತ್ತುವರಿ ತೆರವು ಕಾರ್ಯ ನಡೆಸಲಾಗುವುದು ಎಂದು ಸ್ಪಷ್ಟಪಡಿಸಿದರು.

ಈ ವಿಶೇಷ ಸುದ್ದಿ ಓದಿದ್ದೀರಾ?ಕುಂಡೆಹಬ್ಬ–ಬೋಡ್ ನಮ್ಮೆ: ಕೊಡಗಿನ ಜನಪದ ಸಂಸ್ಕೃತಿಯ ಜೀವಂತ ಪರಂಪರೆ

ಗ್ರಾಮದ ಮಲ್ಲು ಮಾತನಾಡಿ, “ಗ್ರಾಮಕ್ಕೆ ಗೋಮಾಳ, ಸ್ಮಶಾನ ಹಾಗೂ ಆಟದ ಮೈದಾನದ ಅಗತ್ಯವಿದೆ. ಸರ್ಕಾರಿ ಗೋಮಾಳ ಜಾಗವನ್ನು ಕೆಲವರು ಅತಿಕ್ರಮಿಸಿಕೊಂಡಿದ್ದಾರೆ. ತೆರವುಗೊಳಿಸಲು ಆದೇಶ ನೀಡಿದ ಬಳಿಕ ಮತ್ತೆ ವಿಳಂಬ ಮಾಡುತ್ತಿರುವುದು ಸರಿಯಲ್ಲ. ಹತ್ತು ಜನರ ಅನುಕೂಲಕ್ಕಾಗಿ ಇಡೀ ಗ್ರಾಮದ ಹಿತಾಸಕ್ತಿಯನ್ನು ಕಡೆಗಣಿಸಲಾಗುತ್ತಿದೆ” ಎಂದು ಆರೋಪಿಸಿದರು.

ಈ ಸುದ್ದಿ ಓದಿದ್ದೀರಾ?ಗುಂಡ್ಲುಪೇಟೆ | ನಿರ್ಬಂಧಿತ ಅರಣ್ಯ ಪ್ರದೇಶದಲ್ಲಿ ರೌಡಿ ಶೀಟರ್ ಮದ್ಯಪಾರ್ಟಿ; ಅರಣ್ಯ ಇಲಾಖೆಯ ಭದ್ರತೆ ಬಗ್ಗೆ ಪ್ರಶ್ನೆ

ಸ್ಥಳದಲ್ಲಿ ತಹಶೀಲ್ದಾರ್ ಎಂ.ಎಸ್. ತನ್ಮಯ್, ಸರ್ಕಲ್ ಇನ್ಸ್‌ಪೆಕ್ಟರ್ ಜಯಕುಮಾರ್, ರಾಜಸ್ವ ನಿರೀಕ್ಷಕರು, ಗ್ರಾಮ ಲೆಕ್ಕಾಧಿಕಾರಿ ಸೇರಿದಂತೆ ಹಲವು ಅಧಿಕಾರಿಗಳು ಹಾಗೂ ಗ್ರಾಮಸ್ಥರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಗಲಕೋಟೆ | ಬಡವರ ಅನ್ನಕ್ಕೂ ಕನ್ನ! ಅಹಮದಾಬಾದ್‌ಗೆ ಅನ್ನಭಾಗ್ಯದ ಅಕ್ಕಿ ಸಾಗಾಟ; 34 ಟನ್ ಅಕ್ಕಿ ತುಂಬಿದ ಲಾರಿ ಜಪ್ತಿ

ಬಡವರು ಹಸಿವಿನಿಂದ ಬಳಲಬಾರದು, ಪ್ರತಿಯೊಂದು ಕುಟುಂಬಕ್ಕೂ ಆಹಾರ ಭದ್ರತೆ ದೊರೆಯಬೇಕು ಎಂಬ...

ಬಳ್ಳಾರಿ | ಆಂಧ್ರದ ಮಲ್ಲಯ್ಯನ ಜಾತ್ರೆಯಲ್ಲಿ ಬಡಿಗೆ ಕಾಳಗ: ಓರ್ವ ಸಾವು, 80 ಮಂದಿಗೆ ಗಾಯ

ಆಂಧ್ರದ ಆಲೂರು ಮಂಡಲದ ನೇರಣಿಕೆ ಗುಡ್ಡದ ಮಲ್ಲಯ್ಯನ ಜಾತ್ರೆಯಲ್ಲಿ ನಡೆಯುವ ಬಡಿಗೆ...

ಮಂಡ್ಯ | ಟನ್ ಕಬ್ಬಿಗೆ ₹5,500 ಎಫ್‌ಆರ್‌ಪಿ ಘೋಷಿಸಲು ಆಗ್ರಹ

2025-26ನೇ ಸಾಲಿನ ಕಬ್ಬಿಗೆ ಟನ್‌ಗೆ ₹5,500ರ ನ್ಯಾಯಯುತ ಮತ್ತು ಲಾಭದಾಯಕ ಬೆಲೆ...

ಗದಗ | ಮೋಹನ ಲಿಂಬಿಕಾಯಿ ಬೆಂಬಲಿಸಲು ಸಿಪಿಐ(ಎಂ) ಕರೆ

"ಇದೇ ಅಕ್ಟೋಬರ್ 23 ರಂದು ನಡೆಯಲಿರುವ ರಾಜ್ಯ ವಿಧಾನ ಪರಿಷತ್ ಚುನಾವಣೆಯಲ್ಲಿ...