ಗುಂಡ್ಲುಪೇಟೆ | ಅರಣ್ಯ ಇಲಾಖೆ ಹಂಗಾಮಿ ನೌಕರರ ಮುಷ್ಕರ: ಬೇಡಿಕೆಗಳ ಪರಿಶೀಲನೆಗೆ ಸಮಿತಿ ರಚನೆ

Date:

ಅರಣ್ಯ ಇಲಾಖೆಯಲ್ಲಿ ಮುಂಚೂಣಿ ಸಿಬ್ಬಂದಿ ಹಾಗೂ ವಾಹನ ಚಾಲಕರಾಗಿ ಹಲವು ವರ್ಷಗಳಿಂದ ಹೊರಗುತ್ತಿಗೆ ಆಧಾರದ ಮೇಲೆ ಸೇವೆ ಸಲ್ಲಿಸುತ್ತಿರುವ ಹಂಗಾಮಿ ನೌಕರರು ವಿವಿಧ ಬೇಡಿಕೆಗಳನ್ನು ಮುಂದಿಟ್ಟು ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ತಾಲ್ಲೂಕು, ಬಂಡೀಪುರದಲ್ಲಿ ಮುಷ್ಕರ ಆರಂಭಿಸಿದ್ದಾರೆ.

- Advertisement -

ಈ ಹಿನ್ನೆಲೆಯಲ್ಲಿ, 2017ರ ಮೊದಲು ಮುಂಚೂಣಿ ಸಿಬ್ಬಂದಿ ಹಾಗೂ ಇಲಾಖೆಯ ವಾಹನ ಚಾಲಕರಾಗಿ ಕಾರ್ಯನಿರ್ವಹಿಸುತ್ತಿರುವ ಮತ್ತು 10 ವರ್ಷಗಳಿಗಿಂತ ಹೆಚ್ಚು ಸೇವೆ ಸಲ್ಲಿಸಿರುವ ನೌಕರರ ಬೇಡಿಕೆಗಳ ನ್ಯಾಯೋಚಿತತೆ ಕುರಿತು ಸರ್ಕಾರ ಗಂಭೀರವಾಗಿ ಪರಿಗಣನೆ ನಡೆಸಿದೆ. ಇವರನ್ನು ಇಲಾಖೆಯ ವತಿಯಿಂದಲೇ ಹಿಂದಿನಂತೆ ನೇಮಕ ಮಾಡಿಕೊಳ್ಳಲು ಕಾನೂನಿನಲ್ಲಿ ಅವಕಾಶವಿದೆಯೇ, ಸೇವಾ ಹಿರಿತನದ ಆಧಾರದ ಮೇಲೆ ಹೆಚ್ಚುವರಿ ವೇತನ ಹಾಗೂ ಭತ್ಯೆ ನೀಡುವ ಸಾಧ್ಯತೆಗಳಿವೆಯೇ ಎಂಬ ಅಂಶಗಳನ್ನು ಸಮಗ್ರವಾಗಿ ಪರಿಶೀಲಿಸುವ ಅಗತ್ಯವಿದೆ ಎಂದು ಅಭಿಪ್ರಾಯ ವ್ಯಕ್ತವಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಮುಸ್ಲಿಯಾರ್ ಹೇಳಿಕೆ ಎಬ್ಬಿಸಿದ ಪ್ರಶ್ನೆ— ಧಾರ್ಮಿಕ ಮೌಲ್ಯಗಳ ನಡುವೆ...

ಮಹಿಳೆಯ ಗೌರವವನ್ನು ರಕ್ಷಿಸುವ ಹೆಸರಿನಲ್ಲಿ ಆಕೆಯ ಶಿಕ್ಷಣ, ಪ್ರತಿಭೆ, ವೃತ್ತಿ ಅಥವಾ ಸಾಮಾಜಿಕ ಸೇವೆಯ ಬಾಗಿಲುಗಳನ್ನು ಮುಚ್ಚುವುದು ಒಂದು ವಿಷಯ; ಧಾರ್ಮಿಕ ಹಯಾ ಮತ್ತು ಮೌಲ್ಯಗಳನ್ನು ಕಾಪಾಡಿಕೊಂಡೇ ಸಮಾಜದಲ್ಲಿ ಜವಾಬ್ದಾರಿಯುತವಾಗಿ ಪಾಲ್ಗೊಳ್ಳಲು ಅವಕಾಶ...

ಧಾರವಾಡ | ಹುಲಕೊಪ್ಪ‌ ಶಾಲೆ ಶೌಚಾಲಯ ಕಾಮಗಾರಿ ಅಪೂರ್ಣ;...

ಧಾರವಾಡ ಜಿಲ್ಲೆಯ ಕಲಘಟಗಿ ಪ್ರಾಥಮಿಕ ಶಾಲೆಯಲ್ಲಿ‌ ಶೌಚಾಲಯ ಸೇರಿದಂತೆ ಮೂಲಭೂತ ಸೌಲಭ್ಯಗಳ ಕೊರತೆಯಿಂದ ವಿದ್ಯಾರ್ಥಿಗಳು ಸಮಸ್ಯೆ ಎದುರಿಸುತ್ತಿದ್ದಾರೆ. ಹೈಟೆಕ್ ಶೌಚಾಲಯ ಆರಂಭವಾಗಿ ಸುಮಾರು ವರ್ಷಗಳೇ ಕಳೆದರೂ ಇನ್ನೂ ಕಾಮಗಾರಿ ಮುಗಿದಿಲ್ಲ. ಶಾಲೆಯ...

ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ಮತ್ತು ಸದ್ಯದ ಬಿಕ್ಕಟ್ಟುಗಳು

ಇಂದು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ. ಜಾಗತಿಕವಾಗಿ ಕುಸಿಯುತ್ತಿರುವ ಪ್ರಜಾಪ್ರಭುತ್ವವನ್ನು ಎತ್ತಿಹಿಡಿಯಲು ಯುನೈಟೆಡ್ ನೇಷನ್ಸ್ ಜನರಲ್ ಅಸೆಂಬ್ಲಿಯು ಸೆಪ್ಟಂಬರ್ 15ನ್ನು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನವನ್ನಾಗಿ ಆಚರಿಸುವ ಘೋಷಣೆ ಮಾಡಿತು. ಪರಿಣಾಮ ಇಂಟರ್ ಪಾರ್ಲಿಮೆಂಟರಿ ಯೂನಿಯನ್...

ಈ ಸಂಬಂಧ, ಅರಣ್ಯಪಡೆ ಮುಖ್ಯಸ್ಥರ ನೇತೃತ್ವದಲ್ಲಿ ವಿಶೇಷ ಸಮಿತಿಯನ್ನು ರಚಿಸಲು ಸೂಚನೆ ನೀಡಲಾಗಿದೆ. ಸಮಿತಿ ಕಾನೂನಾತ್ಮಕ ಮತ್ತು ಮಾನವೀಯ ದೃಷ್ಟಿಕೋನಗಳಿಂದ ವಿಚಾರಿಸಿ, ರಾಜ್ಯದ ಅಡ್ವಕೇಟ್ ಜನರಲ್ ಅವರ ಅಭಿಪ್ರಾಯ ಪಡೆದು, ನ್ಯಾಯಸಮ್ಮತವಾದ ವರದಿಯನ್ನು 7 ದಿನಗಳೊಳಗಾಗಿ ಸಲ್ಲಿಸಲು ಸೂಚಿಸಲಾಗಿದೆ.

ಈ ಸುದ್ದಿ ಓದಿದ್ದೀರಾ? ಮೈಸೂರು | ವಾಣಿಜ್ಯ ಗ್ಯಾಸ್ ಬೆಲೆ ಏರಿಕೆ ಖಂಡಿಸಿ ಪ್ರತಿಭಟನೆ–ಯುವ ಕಾಂಗ್ರೆಸ್ ಆಕ್ರೋಶ

ಇದೇ ವೇಳೆ, ವನ್ಯಜೀವಿ ವಿಭಾಗದಲ್ಲಿ ವಾಹನ ಚಾಲಕರಾಗಿ ಕೆಲಸ ನಿರ್ವಹಿಸುತ್ತಿರುವ ನೌಕರರಿಗೆ ಅಪಾಯ ಭತ್ಯೆ ವಿಸ್ತರಿಸುವುದಕ್ಕೂ ನಿರ್ದೇಶನ ನೀಡಲಾಗಿದೆ ಎಂದು ಅರಣ್ಯ ಸಚಿವ ಈಶ್ವರ್ ಖಂಡ್ರೆ ತಿಳಿಸಿದ್ದಾರೆ.

ಈ ವಿಶೇಷ ಸುದ್ದಿ ಓದಿದ್ದೀರಾ?ಮೈಸೂರು | ಚೆಲುವಾಂಬ ಆಸ್ಪತ್ರೆಯಲ್ಲಿ ಶಿಶುಗಳ ಸರಣಿ ಸಾವು: ವ್ಯವಸ್ಥೆಯ ವೈಫಲ್ಯವೇ?

ಹಂಗಾಮಿ ನೌಕರರ ಬೇಡಿಕೆಗಳಿಗೆ ಸ್ಪಂದನೆ ನೀಡುವ ದಿಸೆಯಲ್ಲಿ ಸರ್ಕಾರ ಕ್ರಮ ಕೈಗೊಂಡಿರುವುದು ಮುಷ್ಕರಕ್ಕೆ ಶೀಘ್ರ ಪರಿಹಾರ ಕಂಡುಕೊಳ್ಳುವ ನಿರೀಕ್ಷೆಯನ್ನು ಹುಟ್ಟಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | UAPA, NSA ಕಾಯ್ದೆಗಳು ಸಂವಿಧಾನಿಕ ಹಕ್ಕುಗಳ ದಮನಕ್ಕೆ ಅಸ್ತ್ರವಾಗುತ್ತಿವೆ : ಪ್ರೊ. ಫಣಿರಾಜ್

ವಿದ್ಯಾರ್ಥಿ ನಾಯಕ ಉಮರ್ ಖಾಲಿದ್ ಬಂಧನವಾಗಿ ಆರು ವರ್ಷ ಪೂರ್ಣಗೊಂಡ ಹಿನ್ನೆಲೆಯಲ್ಲಿ,...

ಉಡುಪಿ | ಕಟ್‌ಬೇಲ್ತೂರು ರೈಲ್ವೆ ಸೇತುವೆ ಅಪಾಯಕಾರಿ ತಿರುವು ಸರಿಪಡಿಸಲು ಆಗ್ರಹಿಸಿ ಸಿಪಿಎಂ ಪ್ರತಿಭಟನೆ

ಕಟ್‌ಬೇಲ್ತೂರು ಗ್ರಾಮದ ರೈಲ್ವೆ ಸೇತುವೆಯಲ್ಲಿರುವ ಅಪಾಯಕಾರಿ ತಿರುವನ್ನು ತಕ್ಷಣ ಸರಿಪಡಿಸಿ, ಸಾರ್ವಜನಿಕರ...

ಉಡುಪಿ | ಮಲ್ಪೆ–ತೀರ್ಥಹಳ್ಳಿ ಹೆದ್ದಾರಿ ಕಾಮಗಾರಿ ಅಂತಿಮ ಹಂತ; ಬಾಕಿ ಭೂಸ್ವಾಧೀನಕ್ಕೆ ಕೋಟ ಶ್ರೀನಿವಾಸ ಪೂಜಾರಿ ಸೂಚನೆ

ರಾಷ್ಟ್ರೀಯ ಹೆದ್ದಾರಿ 169ಎರ ಮಲ್ಪೆ–ಕರಾವಳಿ ಬೈಪಾಸ್‌ವರೆಗಿನ ಬಾಕಿ ಉಳಿದಿರುವ ಭೂಸ್ವಾಧೀನ ಪ್ರಕ್ರಿಯೆಯನ್ನು...