ಗುಂಡ್ಲುಪೇಟೆ | ಹೆಚ್.ಸಿ. ಮಹದೇವಪ್ಪರಿಗೆ ಉಪಮುಖ್ಯಮಂತ್ರಿ ಹಾಗೂ ಸಚಿವ ಸ್ಥಾನ ನೀಡಲು ಅಭಿಮಾನಿ ಬಳಗ ಒತ್ತಾಯ

Date:

ರಾಜ್ಯ ಸಚಿವ ಸಂಪುಟ ಪುನರ್‌ರಚನೆಯಲ್ಲಿ ಹಿರಿಯ ಕಾಂಗ್ರೆಸ್ ನಾಯಕ ಡಾ. ಹೆಚ್.ಸಿ. ಮಹದೇವಪ್ಪ ಅವರಿಗೆ ಉಪಮುಖ್ಯಮಂತ್ರಿ ಸ್ಥಾನ ಹಾಗೂ ಮಹತ್ವದ ಸಚಿವ ಸ್ಥಾನ ನೀಡಬೇಕು ಎಂದು ಒತ್ತಾಯಿಸಿ ಅವರ ಅಭಿಮಾನಿ ಬಳಗದ ವತಿಯಿಂದ ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆಯ ಹೊಸ ಪ್ರವಾಸಿ ಮಂದಿರದಲ್ಲಿ ಪತ್ರಿಕಾಗೋಷ್ಠಿ ನಡೆಸಲಾಯಿತು.

- Advertisement -

ಇದಕ್ಕೂ ಮುನ್ನ ಪಟ್ಟಣದ ಹೊರವಲಯದಲ್ಲಿರುವ ಡಾ. ಬಿ.ಆರ್. ಅಂಬೇಡ್ಕರ್ ಭವನದಿಂದ ಪ್ರತಿಭಟನಾ ಮೆರವಣಿಗೆ ನಡೆಸಿದ ಅಭಿಮಾನಿಗಳು ಹೊಸ ಪ್ರವಾಸಿ ಮಂದಿರದವರೆಗೆ ತೆರಳಿ ತಮ್ಮ ಬೇಡಿಕೆಯನ್ನು ಸರ್ಕಾರದ ಗಮನಕ್ಕೆ ತಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಮುಖಂಡ ಮಹೇಶ್ ರಾಘವಾಪುರ, ಶೋಷಿತ ಸಮುದಾಯದ ಗಟ್ಟಿ ಧ್ವನಿಯಾಗಿ ಗುರುತಿಸಿಕೊಂಡಿರುವ ಡಾ. ಹೆಚ್.ಸಿ. ಮಹದೇವಪ್ಪ ಅವರು ಚಾಮರಾಜನಗರದಿಂದ ಬೀದರ್‌ವರೆಗೆ ಅಪಾರ ಬೆಂಬಲಿಗರು ಮತ್ತು ಅಭಿಮಾನಿಗಳನ್ನು ಹೊಂದಿದ್ದಾರೆ. ದಲಿತ ಸಮುದಾಯದ ಪ್ರಬುದ್ಧ ನಾಯಕರಾಗಿರುವ ಅವರು ಸಂವಿಧಾನದ ಆಶಯಗಳನ್ನು ಮನೆಮನೆಗೆ ತಲುಪಿಸುವಲ್ಲಿ ಮಹತ್ವದ ಪಾತ್ರ ವಹಿಸಿದ್ದಾರೆ ಎಂದು ಹೇಳಿದರು.

ಸಮಾಜ ಕಲ್ಯಾಣ ಸಚಿವರಾಗಿದ್ದ ಅವಧಿಯಲ್ಲಿ ದಲಿತ ಹೋರಾಟಗಾರರ ನ್ಯಾಯಬದ್ಧ ಮನವಿಗಳನ್ನು ಸಚಿವ ಸಂಪುಟದ ಮುಂದೆ ತಂದು ಪರಿಹಾರ ಕಂಡುಕೊಳ್ಳಲು ಪ್ರಾಮಾಣಿಕ ಪ್ರಯತ್ನ ನಡೆಸಿದ್ದಾರೆ. ಶೋಷಿತ ಸಮುದಾಯದ ಪರ ಧ್ವನಿಯಾಗಿರುವ ಮಹದೇವಪ್ಪ ಅವರಿಗೆ ಹೊಸ ಸಚಿವ ಸಂಪುಟದಲ್ಲಿ ಉಪಮುಖ್ಯಮಂತ್ರಿ ಹುದ್ದೆಯೊಂದಿಗೆ ಸಚಿವ ಸ್ಥಾನ ನೀಡಬೇಕು ಎಂದು ಒತ್ತಾಯಿಸಿದರು.

ಅಭಿಮಾನಿ ಬಳಗದ ಅಧ್ಯಕ್ಷ ರಾಜೇಂದ್ರ ಮಾತನಾಡಿ, ಕಾಂಗ್ರೆಸ್ ಪಕ್ಷ ದಲಿತ ಸಮುದಾಯಕ್ಕೆ ಮುಖ್ಯಮಂತ್ರಿ ಸ್ಥಾನ ನೀಡಬೇಕೆಂಬ ಬೇಡಿಕೆ ಹಲವು ವರ್ಷಗಳಿಂದ ಕೇಳಿಬರುತ್ತಿದೆ. ದಲಿತ ಸಮುದಾಯದ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ ಡಾ. ಹೆಚ್.ಸಿ. ಮಹದೇವಪ್ಪ ಅವರಿಗೆ ಉಪಮುಖ್ಯಮಂತ್ರಿ ಹಾಗೂ ಸಚಿವ ಸ್ಥಾನ ನೀಡುವ ಮೂಲಕ ಸಮುದಾಯಕ್ಕೆ ನ್ಯಾಯ ಒದಗಿಸಬೇಕು ಎಂದು ಆಗ್ರಹಿಸಿದರು.

ಕಬ್ಬಹಳ್ಳಿ ನಂಜುಂಡಸ್ವಾಮಿ ಹಾಗೂ ಹೆಗ್ಗವಾಡಿ ಕೆಂಪರಾಜು ಮಾತನಾಡಿ, ಮಹದೇವಪ್ಪ ಅವರಿಗೆ ಸಚಿವ ಸ್ಥಾನ ನೀಡದಿದ್ದಲ್ಲಿ ದಲಿತ ಸಮುದಾಯದ ವತಿಯಿಂದ ಹೋರಾಟ ರೂಪಿಸುವ ಅನಿವಾರ್ಯತೆ ಎದುರಾಗಲಿದೆ ಎಂದು ಎಚ್ಚರಿಕೆ ನೀಡಿದರು.

ಈ ಸುದ್ದಿ ಓದಿದ್ದೀರಾ?ಮಂಡ್ಯ | ಕಾಮಗಾರಿ ಆರಂಭಿಸದ ಅಧಿಕಾರಿಗಳ ವಿರುದ್ಧ ಆಕ್ರೋಶ-ಬೇಡಿಕೆ ಈಡೇರದಿದ್ದರೆ ಕಪ್ಪು ಬಾವುಟ ಪ್ರತಿಭಟನೆ: ಸಿದ್ದರಾಜು

ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಬೊಮ್ಮಯ್ಯ, ಹೊರೆಯಾಲ ಕರಿಯಯ್ಯ, ಪುರಸಭೆ ಮಾಜಿ ಸದಸ್ಯ ಮಲ್ಲರಾಜು, ಆರ್. ಸೋಮಣ್ಣ, ಮುತ್ತಣ್ಣ, ಹಿರಿಕಾಟಿ ಶಿವು, ಕಬ್ಬಳ್ಳಿ ಮಹದೇವು, ಮುರುಳಿ ಸೋಮಹಳ್ಳಿ, ಸುನಿಲ್, ಪ್ರಕಾಶ್, ಪಾಳ್ಯ ನಾಗರಾಜು, ಮಂಜು ಚನ್ನವಡೆಯನಪುರ, ಪ್ರದೀಪ್ ರಾಘವಾಪುರ, ಸಿದ್ದರಾಜು ಹೊರೆಯಾಲ, ಎಪಿಎಂಸಿ ಉಪಾಧ್ಯಕ್ಷ ರಾಜು, ಅಗತಗೌಡನಹಳ್ಳಿ ರಾಜು, ಲಕ್ಕೂರು ನಾಗೇಶ್, ಬೆಳವಾಡಿ ರವೀಶ್, ಬಸವರಾಜ್ ಸೇರಿದಂತೆ ಡಾ. ಹೆಚ್.ಸಿ. ಮಹದೇವಪ್ಪ ಅಭಿಮಾನಿ ಬಳಗದ ಮುಖಂಡರು ಹಾಗೂ ಕಾರ್ಯಕರ್ತರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಾರ್ಮಿಕರು ಹಕ್ಕು ಮತ್ತು ಸೌಲಭ್ಯಗಳಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಟಿ.ಎಂ. ಶಾಹಿದ್ ತೆಕ್ಕಿಲ್

ಕಾರ್ಮಿಕರ ಹಿತಾಸಕ್ತಿಯನ್ನು ಕಾಪಾಡುವುದರೊಂದಿಗೆ ಸರ್ಕಾರದ ಕಲ್ಯಾಣ ಕಾರ್ಯಕ್ರಮಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ...

ಬಾಗೇಪಲ್ಲಿಯಲ್ಲಿ ರಸ್ತೆ ಅಪಘಾತ:ರೈತ ನಂಜಪ್ಪ ಸಾವು

ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದು ದ್ವಿಚಕ್ರ ವಾಹನದಲ್ಲಿ ಹೊಲಕ್ಕೆ ತೆರಳುತ್ತಿದ್ದ ನಡಂಪಲ್ಲಿ...

ಮಂಗಳೂರು | ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣ: ಆರೋಪಿಗಳ ಜಾಮೀನು ರದ್ದುಪಡಿಸಿದ ಸುಪ್ರೀಂ ಕೋರ್ಟ್

ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣದಲ್ಲಿ ಆರೋಪಿಗಳಿಗೆ ಇತ್ತೀಚೆಗೆ ನ್ಯಾಯಾಲಯ ಜಾಮೀನು ನೀಡಿತ್ತು....

ಕೋಲಾರ | ಚೈನಾ ಶಾಂಘೈನಲ್ಲಿ ಕನ್ನಡದ ಮೊದಲ ಜಾನಪದ ಕಾರ್ಯಕ್ರಮ: ಗೋ.ನಾ. ಸ್ವಾಮಿ ಭಾಗಿ

ಚೈನಾ ದೇಶದ ಶಾಂಘೈನಲ್ಲಿ ಕನ್ನಡಿಗರ ಸಂಘದ ವತಿಯಿಂದ ಆಯೋಜಿಸಿದ್ದ ಕನ್ನಡದ ಮೊದಲ...