ಗುಂಡ್ಲುಪೇಟೆ | ಅಕ್ರಮ ಪ್ರವೇಶ–ಮದ್ಯಪಾನ ಪ್ರಕರಣ: ಮದ್ದೂರು ವಲಯದ ಆರ್‌ಎಫ್‌ಒ ಅಮಾನತು

Date:

ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಅಕ್ರಮ ಪ್ರವೇಶ ಹಾಗೂ ಮದ್ಯಪಾನ ಪ್ರಕರಣಕ್ಕೆ ಸಂಬಂಧಿಸಿದಂತೆ ಮದ್ದೂರು ವನ್ಯಜೀವಿ ವಲಯದ ವಲಯ ಅರಣ್ಯಾಧಿಕಾರಿ (ಆರ್‌ಎಫ್‌ಒ) ಪುನೀತ್ ಕುಮಾರ್ ಡಿ. ಅವರನ್ನು ಅರಣ್ಯ ಇಲಾಖೆ ಸೇವೆಯಿಂದ ಅಮಾನತುಗೊಳಿಸಿದೆ.

- Advertisement -

ಜೂನ್ 5ರಂದು ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ತಾಲ್ಲೂಕು, ಮದ್ದೂರು ವಲಯದ ಹುಲಿಕಟ್ಟೆ ಕಳ್ಳಬೇಟೆ ತಡೆ ಶಿಬಿರ ವ್ಯಾಪ್ತಿಯ ಸೂಕ್ಷ್ಮ ಹುಲಿ ಸಂರಕ್ಷಿತ ಪ್ರದೇಶಕ್ಕೆ ಮೂವರು ಖಾಸಗಿ ವ್ಯಕ್ತಿಗಳು ಅಕ್ರಮವಾಗಿ ಪ್ರವೇಶಿಸಿ ಮದ್ಯಪಾನ ಮಾಡಿರುವ ಛಾಯಾಚಿತ್ರಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದವು. ಈ ಘಟನೆ ರಾಜ್ಯದ ಅರಣ್ಯ ವಲಯದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ʼಸ್ಟಿಂಗ್‌ʼ ಸರ್ಕಸ್‌ | ಬೇಳೆ ಬೇಯಿಸಿಕೊಂಡವರಾರೋ, ಸಂತ್ರಸ್ತರಾರೋ!

ರಾಜ್ಯಾದ್ಯಂತ ಈಗ ಭಾರೀ ಸದ್ದು ಮಾಡುತ್ತಿರುವ ಸ್ಟಿಂಗ್ ಆಪರೇಷನ್ ಪ್ರಕರಣವು ಹೊಸ ಪರ-ವಿರೋಧ ಚರ್ಚೆಗಳಿಗೆ ವೇದಿಕೆ ಸೃಷ್ಟಿಸಿದೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವರ್ಚಸ್ಸನ್ನು ಕುಗ್ಗಿಸಲು ಮತ್ತು ಅವರ ತೇಜೋವಧೆ ಮಾಡಲೆಂದೇ ಈ...

ರಾಹುಲ್ ಗಾಂಧಿಯವರನ್ನು ಕೆಣಕಿದವರೇ, ಅವರು ಸಿಡಿದೇಳಲು ಕಾರಣರಾದರು! ಅದು...

ರಾಹುಲ್ ಗಾಂಧಿಯವರನ್ನು ರಾಜಕೀಯವಾಗಿ ಅಪ್ರಸ್ತುತಗೊಳಿಸಲು ನಿರಂತರವಾಗಿ ಪ್ರಯತ್ನಿಸಿದವರು, ಅವರ ಹೆಸರನ್ನು ದೇಶದ ರಾಜಕೀಯ ಚರ್ಚೆಯಿಂದ ಅಳಿಸಲು ಸಾಧ್ಯವಾಗಲಿಲ್ಲ. ಬದಲಾಗಿ ಅವರ ರಾಜಕೀಯ ಚಟುವಟಿಕೆಗಳು ಮತ್ತು ಅವರು ಎತ್ತುವ ಪ್ರಶ್ನೆಗಳೇ ಸಾರ್ವಜನಿಕ ಚರ್ಚೆಯ ಭಾಗವಾದವು. ರಾಜಕೀಯದಲ್ಲಿ...

ಅಮೆರಿಕದಲ್ಲಿ ಟ್ರಂಪ್ ಬೇಡ – ಭಾರತದಲ್ಲಿ ಮೋದಿ ಬೇಕು;...

ಅಮೆರಿಕದಲ್ಲಿ 2026ರ ನವೆಂಬರ್ ಮಧ್ಯಂತರ ಚುನಾವಣೆ ನಡೆದು, ಫಲಿತಾಂಶ ಪ್ರಕಟಗೊಳ್ಳುತ್ತಿದೆ. ಈ ಚುನಾವಣೆಗೂ ಮುನ್ನ ‘ಕಾರ್ನೆಗಿ ಎಂಡೋಮೆಂಟ್ ಫಾರ್ ಇಂಟರ್‌ನ್ಯಾಷನಲ್ ಪೀಸ್ ಮತ್ತು ಯೂಗವ್’ ಸಂಸ್ಥೆ ರಾಜಕೀಯ ಸಮೀಕ್ಷೆಯೊಂದನ್ನು ನಡೆಸಿದೆ. ಮಹತ್ವದ ರಾಜಕೀಯ...

ಪ್ರಕರಣದ ತನಿಖೆ ವೇಳೆ ದಾಖಲಿಸಲಾದ ಅರಣ್ಯ ಕಾಯ್ದೆಯಡಿ ಅಪರಾಧ ವರದಿಯಲ್ಲಿ ಛಾಯಾಚಿತ್ರಗಳಲ್ಲಿ ಸ್ಪಷ್ಟವಾಗಿ ಕಾಣಿಸಿಕೊಂಡಿದ್ದ ಶಂಕಿತ ಆರೋಪಿಗಳ ಹೆಸರನ್ನು ದಾಖಲಿಸದೇ ಇರುವುದು ಹಾಗೂ ಅವರ ವಿರುದ್ಧ ಅಗತ್ಯ ಕಾನೂನು ಕ್ರಮ ಕೈಗೊಳ್ಳದಿರುವುದು ಗಂಭೀರ ಕರ್ತವ್ಯ ಲೋಪವಾಗಿದೆ ಎಂದು ಅರಣ್ಯ ಇಲಾಖೆಯ ಹಿರಿಯ ಅಧಿಕಾರಿಗಳು ಪರಿಗಣಿಸಿದ್ದಾರೆ.

ಸೂಕ್ಷ್ಮ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಅನಧಿಕೃತ ಪ್ರವೇಶವೇ ಗಂಭೀರ ಅಪರಾಧವಾಗಿರುವ ಸಂದರ್ಭದಲ್ಲಿ ಸಂಬಂಧಪಟ್ಟ ಅಧಿಕಾರಿಯ ನಿರ್ಲಕ್ಷ್ಯ ಮೇಲ್ನೋಟಕ್ಕೆ ಕಂಡುಬಂದ ಹಿನ್ನೆಲೆಯಲ್ಲಿ ಇಲಾಖಾ ವಿಚಾರಣೆ ಪೂರ್ಣಗೊಳ್ಳುವವರೆಗೆ ಅಮಾನತು ಕ್ರಮ ಕೈಗೊಳ್ಳಲಾಗಿದೆ.

ಈ ಸುದ್ದಿ ಓದಿದ್ದೀರಾ?ಕೊಡಗು | ಹೋಂಸ್ಟೇನಲ್ಲಿ ಗ್ಯಾಸ್ ಗೀಸರ್ ವಿಷಾನಿಲ ಸೋರಿಕೆ: ಮೈಸೂರಿನ ಯುವತಿ ಸಾವು

ಈ ಸಂಬಂಧ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಮೀನಾಕ್ಷಿ ನೇಗಿ ಅವರು ಅಮಾನತು ಆದೇಶ ಹೊರಡಿಸಿದ್ದು, ಪ್ರಕರಣದ ಕುರಿತು ಇಲಾಖಾ ತನಿಖೆ ಮುಂದುವರಿದಿದೆ.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕುಮ್ಕಿ, ಗೇರು ಲೀಸ್ ಭೂಮಿಗೆ ಹಕ್ಕುಪತ್ರ ನೀಡಿ; ಕಾಡುಪ್ರಾಣಿಗಳ ಹಾವಳಿ ನಿಯಂತ್ರಿಸಿ

ಪಶ್ಚಿಮ ಘಟ್ಟ ಹಾಗೂ ಕರಾವಳಿ ಭಾಗದ ಪರಿಸರ ಸಂರಕ್ಷಣೆ ಅತ್ಯಂತ ಅಗತ್ಯ....

ಕೋಲಾರ | ಕಾಂಗ್ರೆಸ್ಸಿಗರನ್ನು ತುಂಡು ಮಾಡಿ ಅರಬ್ಬಿ ಸಮುದ್ರಕ್ಕೆ ಎಸೆಯುವ ಹೇಳಿಕೆ: ನಗರ ಪೊಲೀಸ್ ಠಾಣೆಯಲ್ಲಿ 3 ದೂರು ಸಲ್ಲಿಕೆ

ಕಾಂಗ್ರೆಸ್ಸಿಗರನ್ನು ತುಂಡು ತುಂಡಾಗಿ ಕತ್ತರಿಸಿ ಅರಬ್ಬಿ ಸಮುದ್ರಕ್ಕೆ ಎಸೆಯಬೇಕು ಎಂಬ ಹೇಳಿಕೆ...

ಹಾಲಿನ ದರ ಏರಿಕೆ ಖಂಡಿಸಿ ವಿಮೆನ್ ಇಂಡಿಯಾ ಮೂವ್ಮೆಂಟ್ ವತಿಯಿಂದ ಬೃಹತ್ ಪ್ರತಿಭಟನೆ

ಹಾಲಿನ ದರ ಏರಿಕೆಯಿಂದ ಬಡ ಮತ್ತು ಮಧ್ಯಮ ವರ್ಗದ ಕುಟುಂಬಗಳ ಮೇಲೆ...

ದೀಪಾವಳಿ; ಯಶವಂತಪುರ-ಮಡಗಾಂವ್-ಬೆಂಗಳೂರು ನಡುವೆ ವಿಶೇಷ ರೈಲುಗಳ ಸಂಚಾರ

ದೀಪಾವಳಿ ಹಬ್ಬದ ಸಂದರ್ಭದಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ನಿಭಾಯಿಸಲು, ನೈಋತ್ಯ ರೈಲ್ವೆಯು...