ಯಾದಗಿರಿ | ಕಾಂಗ್ರೆಸ್‌ ಅಭ್ಯರ್ಥಿ ಬಾಬುರಾವ ಚಿಂಚನಸೂರ ಆರೋಗ್ಯದಲ್ಲಿ ಚೇತರಿಕೆ

Date:

Advertisements
  • ಕಾರು ಅಪಘಾತದಿಂದ ಗಾಯಗಳಾಗಿ ಆಸ್ಪತ್ರೆಗೆ ದಾಖಲಾಗಿದ್ದರು
  • ಚುನಾವಣೆ ಪ್ರಚಾರ ಮುಗಿಸಿ ಹಿಂತಿರುಗುವ ವೇಳೆ ಅಪಘಾತವಾಗಿತ್ತು

ಕಾರು ಅಪಘಾತದಿಂದ ಗಾಯಗೊಂಡಿದ್ದ ಯಾದಗಿರಿ ಜಿಲ್ಲೆ ಗುರಮಠಕಲ್‌ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಬಾಬುರಾವ ಚಿಂಚನಸೂರ ಆರೋಗ್ಯದಲ್ಲಿ ಚೇತರಿಕೆ ಕಂಡಿದ್ದು, ಕೆಲವೇ ದಿನಗಳಲ್ಲಿ ಆಸ್ಪತ್ರೆಯಿಂದ ಬಿಡುಗಡೆಯಾಗಲಿದ್ದಾರೆ.

ಬಾಬುರಾವ ಚಿಂಚನಸೂರ ಅವರಿಗೆ ಚಿಕಿತ್ಸೆ ನೀಡಿದ ಕಲಬುರಗಿ ಯುನೈಟೆಡ್ ಆಸ್ಪತ್ರೆಯ ವೈದ್ಯ ಡಾ. ರಾಜು ಕುಲಕರ್ಣಿ ಈ ಕುರಿತು ಸುದ್ದಿಗಾರರಿಗೆ ಮಾಹಿತಿ ನೀಡಿದ್ದಾರೆ. “ಕಾರು ಅಪಘಾತದಲ್ಲಿ ಗಾಯಗೊಂಡಿದ್ದ ಬಾಬುರಾವ ಚಿಂಚನಸೂರ ಅವರಿಗೆ ಯಶಸ್ವಿಯಾಗಿ ಚಿಕಿತ್ಸೆ ನೀಡಲಾಗಿದೆ. ನೂರಕ್ಕೆ ತೊಂಬತ್ತು ಪ್ರತಿಶತ ಗುಣಮುಖರಾಗಿದ್ದಾರೆ. ಇನ್ನು ಕೆಲವೇ ದಿನಗಳಲ್ಲಿ ಆಸ್ಪತ್ರೆಯಿಂದ ಬಿಡುಗಡೆ ಆಗಲಿದ್ದಾರೆ” ಎಂದು ತಿಳಿಸಿದ್ದಾರೆ.

ಕರ್ನಾಟಕ ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದು ಕಾಂಗ್ರೆಸ್‌ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಬಾಬುರಾವ ಚಿಂನನಸೂರ ಅವರು ಚುನಾವಣಾ ಪ್ರಚಾರದಲ್ಲಿ ತೊಡಗಿಕೊಳ್ಳಲು ಯಾವುದೇ ತೊಂದರೆ ಇಲ್ಲ ಪೂರ್ತಿ ಗುಣಮುಖರಾಗುತ್ತಾರೆ ಎಂದು ಡಾ. ರಾಜು ಕುಲಕರ್ಣಿ ಹೇಳಿದ್ದಾರೆ.

Advertisements

ಈ ಸುದ್ದಿ ಓದಿದ್ದೀರಾ? ಶಾಸಕರನ್ನು ಕಳ್ಳತನ ಮಾಡುವ ಸಂಸ್ಕೃತಿ ಬಿಜೆಪಿಯಲ್ಲಿ ಬೇರೂರಿದೆ; ಸುಭದ್ರ ಸರ್ಕಾರಕ್ಕೆ ಅವಕಾಶ ಕೊಡಿ: ಖರ್ಗೆ ಮನವಿ

ಏಪ್ರಿಲ್‌ 14ರಂದು ಯಾದಗಿರಿ ನಗರದ ಆಕಾಶವಾಣಿ ಬಳಿ ಬಾಬುರಾವ ಚಿಂಚನಸೂರ ಅವರ ಕಾರು ಅಪಘಾತವಾಗಿತ್ತು. ಈ ವೇಳೆ ಅವರಿಗೆ ಕಾಲು, ಮುಖ, ತಲೆಗೆ ಗಾಯಗಳಾಗಿದ್ದವು. ಬಳಿಕ ಅವರನ್ನು ಕಲಬುರಗಿಯ ಯುನೈಟೆಡ್‌ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚುನಾವಣಾ ಪ್ರಚಾರ ಮುಗಿಸಿ ಹಿಂತಿರುಗುತ್ತಿದ್ದ ವೇಳೆ ಈ ದುರ್ಘಟನೆ ನಡೆದಿತ್ತು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

ಚಿಕ್ಕಮಗಳೂರು l ತೆಂಗಿನಕಾಯಿ ಕಳ್ಳತನ ಆರೋಪ: ವ್ಯಕ್ತಿಯ ಹತ್ಯೆ; ಆರೋಪಿಗಳ ಬಂಧನ

ತೆಂಗಿನಕಾಯಿ ಕಳ್ಳತನ ಮಾಡಿದ್ದಾನೆ ಎಂಬ ಕಾರಣಕ್ಕೆ ವ್ಯಕ್ತಿಯನ್ನು ಹತ್ಯೆ ಮಾಡಿರುವ ಘಟನೆ...

Download Eedina App Android / iOS

X