ಬೀದರನಲ್ಲಿ ಐ.ಟಿ ಪಾರ್ಕ್ ಸ್ಥಾಪನೆಗೆ ಗುರುನಾಥ ವಡ್ಡೆ ಆಗ್ರಹ

Date:

  • ಡಾ. ಡಿ ಎಂ ನಂಜುಂಡಪ್ಪ ಸಮಿತಿ ವರದಿ ಸಲ್ಲಿಸಿ 20 ವರ್ಷ ಕಳೆದಿವೆ
  • ಉದ್ಯೋಗಕ್ಕಾಗಿ ಬೆಂಗಳೂರು, ಹೈದರಬಾದ್‌, ಪುಣೆ ನಗರಗಳಿಗೆ ವಲಸೆ

ಡಾ. ಡಿ ಎಂ ನಂಜುಂಡಪ್ಪ ವರದಿ ಆಧರಿಸಿ, ಬೀದರ್‌ ಜಿಲ್ಲೆಯಲ್ಲಿ ಐ.ಟಿ ಪಾರ್ಕ್ ಸ್ಥಾಪನೆ ಮಾಡಬೇಕು ಎಂದು ಸಮಾಜಿಕ ಕಾರ್ಯಕರ್ತ ಗುರುನಾಥ ವಡ್ಡೆ ಒತ್ತಾಯಿಸಿದ್ದಾರೆ. ಬೀದರ್‌ ಜಿಲ್ಲಾಧಿಕಾರಿ ಮುಖಾಂತರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಿ ಆಗ್ರಹಿಸಿದ್ದಾರೆ.

ಬೀದರ್‌ ಜಿಲ್ಲೆ ರಾಜ್ಯದ ರಾಜಧಾನಿಯಿಂದ ದೂರದ ಜಿಲ್ಲೆಯಾಗಿದೆ. ವಿಜ್ಞಾನ ತಂತ್ರಜ್ಞಾನದ ಜೊತೆಗೆ ಅಭಿವೃದ್ಧಿಯಲ್ಲೂ ಬಹು ಹಿಂದೆ ಉಳಿದಿದೆ. ಆದ್ದರಿಂದ ಹಿಂದುಳಿದ ಬೀದರ ಜಿಲ್ಲೆಯಲ್ಲಿ ಐ.ಟಿ. ಪಾರ್ಕ್ ಸ್ಥಾಪನೆ ಮಾಡುವುದು ಅತ್ಯಂತ ಅವಶ್ಯಕವಾಗಿದೆ ಎಂದು ಮನವಿ ಮಾಡಿದ್ದಾರೆ.

ಬೀದರ್‌ ಜಿಲ್ಲೆಯಲ್ಲಿ ಐ.ಟಿ. ಪಾರ್ಕ್ ಸ್ಥಾಪನೆಗಾಗಿ 2014 ರಿಂದ ಸರ್ಕಾರಕ್ಕೆ ನಿರಂತರ ಮನವಿ ಮಾಡಲಾಗುತ್ತಿದ್ದು, ಇಂದಿನವರೆಗೆ ಸರ್ಕಾರದಿಂದ ಯಾವುದೇ ಸಕರಾತ್ಮಕ ಕ್ರಮ ಆಗಿಲ್ಲ. ಡಾ. ಡಿ ಎಂ ನಂಜುಂಡಪ್ಪ ಅವರು ಸರ್ಕಾರಕ್ಕೆ ಸಲ್ಲಿಸಿದ ವರದಿಯಲ್ಲಿ ಎಲ್ಲ ಜಿಲ್ಲೆಗಳಲ್ಲಿ ಐ.ಟಿ. ಪಾರ್ಕ್ ಸ್ಥಾಪಿಸಬೇಕೆಂದು ಸೂಚಿಸಿದ್ದಾರೆ. ಆದರೆ, ವರದಿ ಸಲ್ಲಿಸಿ 20ವರ್ಷ ಕಳೆದರೂ ಸರ್ಕಾರದಿಂದ ಡಾ. ಡಿ ಎಂ ನಂಜುಂಡಪ್ಪ ವರದಿ ಅನುಷ್ಠಾನಗೊಂಡಿಲ್ಲ. ಬೀದರ ಜಿಲ್ಲೆಯಲ್ಲಿ ಐ.ಟಿ. ಪಾರ್ಕ್ ಸ್ಥಾಪನೆ ಆಗಿಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಬೀದರ್‌ ಜಿಲ್ಲೆಯಲ್ಲಿ ಸಾವಿರಾರು ಐ.ಟಿ. ಉದ್ಯೋಗಿಗಳು ಕೆಲಸಕ್ಕಾಗಿ ರಾಜಧಾನಿ ಬೆಂಗಳೂರು ಅಲ್ಲದೇ ನೆರೆ ರಾಜ್ಯದ ಹೈದರಬಾದ್‌ ಹಾಗೂ ಪುಣೆಯಲ್ಲಿ ಉದ್ಯೋಗಕ್ಕಾಗಿ ವಲಸೆ ಹೋಗುವುದು ಸಾಮಾನ್ಯವಾಗಿದೆ. ಬೀದರನಲ್ಲಿ ಐ.ಟಿ. ಉದ್ಯಮಿಗಳಿದ್ದರೂ ಐ.ಟಿ. ಪಾರ್ಕ್ ಇಲ್ಲದ ಕಾರಣ ಅವರೂ ಸಂಕಷ್ಟದಲ್ಲಿದ್ದಾರೆ ಎಂದು ವಿವರಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ರಾಯಚೂರು | ಕಲುಷಿತ ನೀರು ಸೇವನೆ; ಮತ್ತೊಂದು ಗ್ರಾಮದಲ್ಲಿ 8 ಮಂದಿ ಅಸ್ವಸ್ಥ

“ಇದರಿಂದಾಗಿ ಬೀದರ ಜಿಲ್ಲೆಯ ಅಭಿವೃದ್ಧಿಗಾಗಿ ಮತ್ತು ಬೀದರ ಜಿಲ್ಲೆಯಲ್ಲಿನ ಐ.ಟಿ. ಉದ್ಯೋಗಿಗಳ ಅನುಕೂಲಕ್ಕಾಗಿ ಹಾಗೂ ಉದ್ಯಮಿಗಳ ಅನುಕೂಲಕ್ಕಾಗಿ ಬೀದರ ಜಿಲ್ಲೆಯಲ್ಲಿ ವಿಜ್ಞಾನ ತಂತ್ರಜ್ಞಾನದಲ್ಲಿ ಅಭಿವೃದ್ಧಿ ಪಡಿಸುವುದಕ್ಕಾಗಿ ಸರ್ಕಾರದಿಂದ ತಕ್ಷಣ ಬೀದರ ಜಿಲ್ಲೆಯಲ್ಲಿ ಐ.ಟಿ. ಪಾರ್ಕ್ ಸ್ಥಾಪನೆ ಮಾಡಬೇಕು” ಎಂದು ಸಾಮಾಜಿಕ ಕಾರ್ಯಕರ್ತ ಗುರುನಾಥ ವಡ್ಡೆ, ಸಿಎಂಗೆ ಸಲ್ಲಿಸಿದ ಮನವಿಯಲ್ಲಿ ಆಗ್ರಹಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಂದಾಯ ಕರ್ಮಕಾಂಡ -3 | ಲಂಚವಿಲ್ಲದೆ ಈ ಇಲಾಖೆಯಲ್ಲಿ ಒಂದು ಕಡತವೂ ಚಲಿಸುವುದಿಲ್ಲ!

'ಇತ್ತೀಚಿನ ದಿನಗಳಲ್ಲಿ ಕಂದಾಯ ಇಲಾಖೆಯಲ್ಲಿ ಉನ್ನತ ಶ್ರೇಣಿಯಿಂದ ಕೆಳಹಂತದವರೆಗೆ ಭ್ರಷ್ಟಾಚಾರ ತಾಂಡವವಾಡುತ್ತಿದೆ....

ದಕ್ಷಿಣ ಕನ್ನಡ | ಅಲೆಮಾರಿ ಶಿಳ್ಳೆಕ್ಯಾತ ಕುಟುಂಬಗಳಿಗೆ ಶಾಶ್ವತ ಸೂರು ಕಲ್ಪಿಸಲು ಡಿವೈಎಫ್ಐ ಒತ್ತಾಯ

ದಕ್ಷಿಣ ಕನ್ನಡ ಜಿಲ್ಲೆ ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಗೆ ಒಳಪಡುವ ಬೋಳಾರ...

ಬೆಳಗಾವಿ | ಹಿಡಕಲ್ ಡ್ಯಾಂನಿಂದ ನೀರು ಹರಿಸುವಂತೆ ರೈತರ ಪ್ರತಿಭಟನೆ

ಹಿಡಕಲ್‌ ಜಲಾಶಯದಿಂದ ಘಟಪ್ರಭಾ ಎಡದಂಡೆ ನಾಲೆಯ ರೈತರಿಗೆ ನೀರುಹರಿಸುವಂತೆ ಕೋರಿ ಚಿಕ್ಕೋಡಿ-ಮಿರಜ್‌...

ಗದಗ | ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿಗಿಲ್ಲ ಬೋಧಕರು; ವಿದ್ಯಾರ್ಥಿಗಳ ಭವಿಷ್ಯ ಅತಂತ್ರ

ಗದಗ ಜಿಲ್ಲೆಯ ಗಜೇಂದ್ರಗಡ ಪಟ್ಟಣದ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಸುಮಾರು 380...