ಕಲ್ಯಾಣ ಕರ್ನಾಟಕ ಭಾಗದಲ್ಲಿ ಎಸ್‌ಎಸ್‌ಎಲ್‌ಸಿ ಫಲಿತಾಂಶವು ಸತತವಾಗಿ ತೀರಾ ಕಳಪೆ ಸಾಧನೆಯನ್ನು ತೋರಿಸುತ್ತಿದೆ. ಹೀಗಾಗಿ, ಈ ಭಾಗದಲ್ಲಿ ಶೈಕ್ಷಣಿಕ ಸುಧಾರಣೆಗಾಗಿ ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ಅಧ್ಯಯನ ನಡೆಸಿ, ಶಿಫಾರಸು ಮಾಡಲು ರಾಜ್ಯ ಸರ್ಕಾರವು ತಜ್ಞರ ಸಮಿತಿ ರಚಿಸಿದೆ. ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ (ಕೆಕೆಆರ್‌ಡಿಬಿ) ಅಡಿಯಲ್ಲಿ ಸಮಿತಿ ರಚಿಸಲಾಗಿದ್ದು, ಸಮಿತಿಯ ನೇತೃತ್ವವನ್ನು ಶಿಕ್ಷಣ ತಜ್ಞ ಎಂದು ಗುರುತಿಸಿಕೊಂಡಿರುವ ಗುರುರಾಜ ಕರಜಗಿ ಅವರಿಗೆ ನೀಡಲಾಗಿದೆ.
ಗುರುರಾಜ ಕರಜಗಿ ಅವರಿಗೆ ಸಮಿತಿಯ ನೇತೃತ್ವ ನೀಡಿರುವುದಕ್ಕೆ ಸಾಕಷ್ಟು ಟೀಕೆ, ವಿರೋಧಗಳು ವ್ಯಕ್ತವಾಗುತ್ತಿವೆ. ಬಿಜೆಪಿ-ಆರ್‌ಎಸ್‌ಎಸ್ ಸಿದ್ಧಾಂತವನ್ನು ಪ್ರತಿಪಾದಿಸುವ ಕರಜಗಿ ಅವರ ಆಯ್ಕೆಯು ರಾಜ್ಯ ಕಾಂಗ್ರೆಸ್ ಸರ್ಕಾರದ ಸೈದ್ಧಾಂತಿಕ ದಿವಾಳಿತನಕ್ಕೆ ಹಿಡಿದ ಕನ್ನಡಿಯಾಗಿದೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದೆ.
ಕೇಂದ್ರೀಯ ವಿಶ್ವವಿದ್ಯಾಲಯದ ಅಂಬೇಡ್ಕರ್ ವಿದ್ಯಾರ್ಥಿಗಳ ಸಂಘಟನೆ ವಿರೋಧ :
ʼಗುರುರಾಜ ಕರ್ಜಗಿ ಸನಾತನವಾದಿ, ಅವಕಾಶವಾದಿ ಹಾಗೂ ಸಂಘ ಪರಿವಾರದ ವ್ಯಕ್ತಿ ಎನ್ನುವುದು ಈಗಾಗಲೇ ನಾಡಿನ ಪ್ರಜ್ಞಾವಂತ ನಾಗರಿಕರಿಗೆ ತಿಳಿದಿರುವ ವಿಷಯ. ಕೇಶವ ಕೃಪೆಯಿಂದ ಕರ್ನಾಟಕದ ವಿವಿಧೆಡೆ ಕಾರ್ಯಕ್ರಮಗಳು ಆಯೋಜನೆಗೊಳ್ಳುವುದು. ಈ ಮೂಲಕವೇ ಶಿಕ್ಷಣ ತಜ್ಞರಾದವರು. ಕೇವಲ ಭಾವನಾತ್ಮಕ ಮಾತುಗಳ ಮೂಲಕವೇ ಸಾಮಾನ್ಯ ಜನರನ್ನು ಮೂಢರನ್ನಾಗಿಸುವಲ್ಲಿ ನಿಸ್ಸಿಮರು. ಜಾತಿ ವಿನಾಶದ ಕ್ರಾಂತಿಯ ನೆಲವಾದ ಕಲ್ಯಾಣ ಕರ್ನಾಟಕ ಭಾಗದ ಶೈಕ್ಷಣಿಕ ಗುಣಮಟ್ಟದ ಸುಧಾರಣಾ ಸಮಿತಿಗೆ ಸರ್ಕಾರವು ಮನುವಾದ ಪ್ರತಿಪಾದಕರನ್ನು ನೇಮಿಸಿರುವುದು ಒಪ್ಪಲಾಗದುʼ ಎಂದು ಸಂಘಟನೆಯ ಮುಖಂಡ ನಂದಕುಮಾರ್ ಪಿ. ದೂರಿದ್ದಾರೆ.
ಇತ್ತೀಚೆಗೆ ಕರ್ನಾಟಕ ಸರ್ಕಾರ ಕೈಗೊಳ್ಳುತ್ತಿರುವ ಈ ರೀತಿಯ ನಿರ್ಧಾರದ ಕಾರಣಕ್ಕೆ ಬಹುತೇಕರು ರಾಜ್ಯ ಸರ್ಕಾರವನ್ನು ಅನುಮಾನದಿಂದ ಮತ್ತು ಅಸಹನೆಯಿಂದ ನೋಡುವಂತ ಪರಿಸ್ಥಿತಿ ಬಂದೊದಗಿದೆ. ಇದು ಈ ಸರ್ಕಾರದ ನೈತಿಕ ದಿವಾಳಿ ಎತ್ತಿ ತೋರಿಸುವಂತೆ ಕಾಣುತ್ತಿದೆ. ಬಹಳ ಸೂಕ್ಷ್ಮವಾಗಿ ಗಮನಿಸಿದರೆ ನಮ್ಮ ರಾಜಕೀಯ ಚಿಂತನೆಯಲ್ಲೇ ಆಗಿರುವ ಬಹು ದೊಡ್ಡ ಲೋಪವನ್ನು ತೋರಿಸುತ್ತದೆʼ ಎಂದು ಕಳವಳ ವ್ಯಕ್ತಪಡಿಸಿದ್ದಾರೆ.
ʼವೈಚಾರಿಕ ತಿಳುವಳಿಕೆ, ಅನಿಕೇತನ ಪ್ರಜ್ಞೆ ಹಾಗೂ ಕವಿರಾಜ ಮಾರ್ಗ ಹಾಕಿರುವ ವಿವೇಕ ತತ್ವಕ್ಕೆ ಬುನಾದಿ ಹಾಕುವಂತ ಶಿಕ್ಷಣ ತಜ್ಞರನ್ನು ನೇಮಿಸಿದರೆ ಶೈಕ್ಷಣಿಕವಾಗಿ ಹಿಂದುಳಿದ ಕಲ್ಯಾಣ ಕರ್ನಾಟಕ ನಿಜವಾಗಿಯೂ ಕಲ್ಯಾಣ ಕರ್ನಾಟಕವಾಗುವುದು. ಈಗ ಹೆಸರಿಗಷ್ಟೇ ಕಲ್ಯಾಣ ಕರ್ನಾಟಕವಾಗಿದೆ. ಹಾಗಾಗಿ, ಶೈಕ್ಷಣಿಕ ಗುಣಮಟ್ಟದ ಸುಧಾರಣೆ ಸಮಿತಿಗೆ ನೇಮಕಗೊಂಡ ಗುರುರಾಜ್ ಕರ್ಜಗಿಯವರನ್ನು ಕೈಬಿಟ್ಟು, ರಾಜ್ಯದ ಹಿರಿಯ ಬುದ್ಧಿಜೀವಿಗಳ, ಸಾಹಿತಿಗಳ ಸಲಹೆಗಳನ್ನು ಪಡೆದು ಸಮಿತಿ ಸದಸ್ಯರನ್ನು ನೇಮಕ ಮಾಡುವುದು ಒಳಿತುʼ ಎಂದು ನಂದಕುಮಾರ್ ಆಗ್ರಹಿಸಿದ್ದಾರೆ.
ಶೈಕ್ಷಣಿಕ ಗುಣಮಟ್ಟ ಸುಧಾರಣಾ ಸಮಿತಿ ರಚನೆ ಅಪ್ರಜಾತಾಂತ್ರಿಕ : ಎಐಡಿಎಸ್‌ಒ
ಕಲ್ಯಾಣ ಕರ್ನಾಟಕ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಸರ್ಕಾರ ರಚಿಸಿರುವ ಸಮಿತಿಯಲ್ಲಿ ಈ ಭಾಗದ ಶಿಕ್ಷಣ ತಜ್ಞರು, ಶಿಕ್ಷಕರಿಲ್ಲ. ಬದಲಾಗಿ ದೊಡ್ಡ ದೊಡ್ಡ ಖಾಸಗಿ ಸಂಸ್ಥೆಗಳ ಹಾಗೂ ಖಾಸಗಿ ವಿಶ್ವವಿದ್ಯಾಲಯಗಳ ಪ್ರತಿನಿಧಿಗಳನ್ನು ಸಮಿತಿಗೆ ಆಯ್ಕೆ ಮಾಡಲಾಗಿದೆ. ಇದು ಅಪ್ರಜಾತಾಂತ್ರಿಕ ರಚನೆಯಾಗಿದೆ ಎಂದು ಪ್ರಶ್ನೆ ಹುಟ್ಟಿಸುವ ನಡೆಯಾಗಿದೆʼ ಎಂದು ಎಐಡಿಎಸ್‌ಓ ಯಾದಗಿರಿ ಜಿಲ್ಲಾ ಸಂಚಾಲಕಿ ಶಿಲ್ಪಾ ಬಿ.ಕೆ ಖಂಡಿಸಿದ್ದಾರೆ.
ʼಶೈಕ್ಷಣಿಕ ಗುಣಮಟ್ಟವನ್ನು ಸುಧಾರಣೆ ಮಾಡಬೇಕೆಂದರೆ ಆ ಭಾಗದ ಶಿಕ್ಷಣ ತಜ್ಞರ ಮತ್ತು ಶಿಕ್ಷಕರ ಪಾತ್ರ ಬಹಳ ಮುಖ್ಯವಾಗಿರುತ್ತದೆ. ಆದರೆ ಕಲ್ಯಾಣ ಕರ್ನಾಟಕ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಸರ್ಕಾರ ರಚಿಸಿದ ಸಮಿತಿಯಲ್ಲಿ ಶಿಕ್ಷಣ ತಜ್ಞರು, ಶಿಕ್ಷಕರು ಇಲ್ಲದೇ ಈ ಭಾಗದ ಶೈಕ್ಷಣಿಕ ಗುಣಮಟ್ಟ ಸುಧಾರಣೆಯಾಗಲು ಸಾಧ್ಯವಿಲ್ಲ. ಇದನ್ನು ವಿದ್ಯಾರ್ಥಿಗಳು, ಶಿಕ್ಷಣ ಪ್ರೇಮಿಗಳು, ಪೋಷಕರು ಒಪ್ಪುವುದಿಲ್ಲʼ ಎಂದು ದೂರಿದ್ದಾರೆ.
ಕಲ್ಯಾಣ ಕರ್ನಾಟಕ ಭಾಗದ ಶೈಕ್ಷಣಿಕ ಗುಣಮಟ್ಟದ ಹಿತದೃಷ್ಟಿಯಿಂದ ಕೂಡಲೇ ಈ ಸಮಿತಿಯನ್ನು ಪ್ರಜಾತಾಂತ್ರಿಕವಾಗಿ, ವೈಜ್ಞಾನಿಕ ದೃಷ್ಟಿಕೋನದಿಂದ ಈ ಭಾಗದ ಶಿಕ್ಷಣ ತಜ್ಞರು, ಶಿಕ್ಷಕರು, ನಿವೃತ್ತ ಪ್ರಾಧ್ಯಾಪಕರನ್ನು ಒಳಗೊಂಡ ಸಮಿತಿಯನ್ನು ಪುನರಚಿಸಬೇಕುʼ ಎಂದು ಎಐಡಿಎಸ್‌ಓ ವಿದ್ಯಾರ್ಥಿ ಸಂಘಟನೆ ಆಗ್ರಹಿಸಿದೆ.

ʼಕಲಬುರಗಿ ಕಲ್ಯಾಣ ಕರ್ನಾಟಕ ಭಾಗದಲ್ಲಿ ಶಾಲಾ ಶಿಕ್ಷಣ ಇಲಾಖೆ ಸಹಯೋಗದೊಂದಿಗೆ ಈ ಭಾಗದ ಎಸ್ಸೆಸ್ಸೆಲ್ಸಿ ಫಲಿತಾಂಶ ಸೇರಿದಂತೆ ಶಿಕ್ಷಣ ಕ್ಷೇತ್ರ ಸುಧಾರಣೆ ಸಂಬಂಧ ಡಾ.ಗುರುರಾಜ ಕರಜಗಿ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಲಾಗಿದೆʼ ಎಂದು ಶುಕ್ರವಾರ ಕೆಕೆಆರ್‌ಡಿಬಿ ಅಧ್ಯಕ್ಷ ಡಾ.ಅಜಯ್ ಸಿಂಗ್ ಹೇಳಿದರು.
ʼಸಾಮಾನ್ಯ ಪಠ್ಯಕ್ರಮದ ಜೊತೆಗೆ ಕೌಶಲ್ಯಗಳ ಕಲಿಕೆಗೂ ಅವಕಾಶ ಕಲ್ಪಿಸಿ, ಈಗಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ಯಶಸ್ವಿಯಾಗಲು ಇಲ್ಲಿನ ವಿದ್ಯಾರ್ಥಿಗಳನ್ನು ಸಜ್ಜುಗೊಳಿಸಲಾಗುತ್ತಿದೆ. ನಮ್ಮ ವಿವಿಧ ಪ್ರಯತ್ನಗಳ ಫಲವಾಗಿ, ಮುಂಬರುವ ಎಸ್ಸೆಸ್ಸೆಲ್ಸಿ ಹಾಗೂ ಪಿಯುಸಿ ಪರೀಕ್ಷೆಯ ಫಲಿತಾಂಶದಲ್ಲಿ ಗಣನೀಯ ಸುಧಾರಣೆ ಕಂಡುಬರುವ ವಿಶ್ವಾಸವಿದೆʼ ಎಂದಿದ್ದಾರೆ.
ಈ ಸುದ್ದಿ ಓದಿದ್ದೀರಾ? ಪಶ್ಚಿಮ ಬಂಗಾಳ | ಅಪ್ರಾಪ್ತ ಬಾಲಕಿಯ ಅತ್ಯಾಚಾರ, ಕೊಲೆ: ಹಿಂಸಾಚಾರಕ್ಕೆ ತಿರುಗಿದ ಪ್ರತಿಭಟನೆ
ಈ ಸಮಿತಿಯ ಅಧ್ಯಕ್ಷರಾಗಿ ಡಾ. ಗುರುರಾಜ ಕರಜಗಿ ಹಾಗೂ ಸದಸ್ಯರಾಗಿ ಅಜೀಂ ಪ್ರೇಮ್ ಜಿ ಫೌಂಡೆಷನ್ ಸಂಸ್ಥೆಯ ಡಾ. ರುದ್ರೇಶ್, ಹಿರೇಮಠ್ ಸ್ವಾಮಿ, ಬಳ್ಳಾರಿಯ ಫಾದರ್ ಫ್ರ್ಯಾನ್ಸಿಸ್, ಬೀದರ್ ಶಾಹೀನ್ ಶಿಕ್ಷಣ ಸಂಸ್ಥೆಯ ಅಬ್ದುಲ್ ಖದೀರ್ ಇರಲಿದ್ದು, ಸದಸ್ಯ ಕಾರ್ಯದರ್ಶಿಯಾಗಿ ಎನ್.ಬಿ.ಪಾಟೀಲ್ ಅವರನ್ನು ಆಯ್ಕೆ ಮಾಡಲಾಗಿದೆʼ ಎಂದು ತಿಳಿಸಿದ್ದಾರೆ.
Prajnavanta nagarikaru anta bared neenu adenta bhanda irabeku …ninna baravanigege nanna yakkada …sanatana Dharma virod madidare avraru prajnavantare ? Ninnandu baravanigeye byabbichara