ಕಲ್ಯಾಣ ಕರ್ನಾಟಕ ಶೈಕ್ಷಣಿಕ ಸುಧಾರಣಾ ಸಮಿತಿಗೆ ಗುರುರಾಜ ಕರಜಗಿ ಅಧ್ಯಕ್ಷತೆ : ವ್ಯಾಪಕ ಟೀಕೆ

Date:

ಕಲ್ಯಾಣ ಕರ್ನಾಟಕ ಭಾಗದಲ್ಲಿ ಎಸ್‌ಎಸ್‌ಎಲ್‌ಸಿ ಫಲಿತಾಂಶವು ಸತತವಾಗಿ ತೀರಾ ಕಳಪೆ ಸಾಧನೆಯನ್ನು ತೋರಿಸುತ್ತಿದೆ. ಹೀಗಾಗಿ, ಈ ಭಾಗದಲ್ಲಿ ಶೈಕ್ಷಣಿಕ ಸುಧಾರಣೆಗಾಗಿ ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ಅಧ್ಯಯನ ನಡೆಸಿ, ಶಿಫಾರಸು ಮಾಡಲು ರಾಜ್ಯ ಸರ್ಕಾರವು ತಜ್ಞರ ಸಮಿತಿ ರಚಿಸಿದೆ. ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ (ಕೆಕೆಆರ್‌ಡಿಬಿ) ಅಡಿಯಲ್ಲಿ ಸಮಿತಿ ರಚಿಸಲಾಗಿದ್ದು, ಸಮಿತಿಯ ನೇತೃತ್ವವನ್ನು ಶಿಕ್ಷಣ ತಜ್ಞ ಎಂದು ಗುರುತಿಸಿಕೊಂಡಿರುವ ಗುರುರಾಜ ಕರಜಗಿ ಅವರಿಗೆ ನೀಡಲಾಗಿದೆ.

- Advertisement -

ಗುರುರಾಜ ಕರಜಗಿ ಅವರಿಗೆ ಸಮಿತಿಯ ನೇತೃತ್ವ ನೀಡಿರುವುದಕ್ಕೆ ಸಾಕಷ್ಟು ಟೀಕೆ, ವಿರೋಧಗಳು ವ್ಯಕ್ತವಾಗುತ್ತಿವೆ. ಬಿಜೆಪಿ-ಆರ್‌ಎಸ್‌ಎಸ್‌ ಸಿದ್ಧಾಂತವನ್ನು ಪ್ರತಿಪಾದಿಸುವ ಕರಜಗಿ ಅವರ ಆಯ್ಕೆಯು ರಾಜ್ಯ ಕಾಂಗ್ರೆಸ್‌ ಸರ್ಕಾರದ ಸೈದ್ಧಾಂತಿಕ ದಿವಾಳಿತನಕ್ಕೆ ಹಿಡಿದ ಕನ್ನಡಿಯಾಗಿದೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಕೇಂದ್ರೀಯ ವಿಶ್ವವಿದ್ಯಾಲಯದ ಅಂಬೇಡ್ಕರ್ ವಿದ್ಯಾರ್ಥಿಗಳ ಸಂಘಟನೆ ವಿರೋಧ :

ʼಗುರುರಾಜ ಕರ್ಜಗಿ ಸನಾತನವಾದಿ, ಅವಕಾಶವಾದಿ ಹಾಗೂ ಸಂಘ ಪರಿವಾರದ ವ್ಯಕ್ತಿ ಎನ್ನುವುದು ಈಗಾಗಲೇ ನಾಡಿನ ಪ್ರಜ್ಞಾವಂತ ನಾಗರಿಕರಿಗೆ ತಿಳಿದಿರುವ ವಿಷಯ. ಕೇಶವ ಕೃಪೆಯಿಂದ ಕರ್ನಾಟಕದ ವಿವಿಧೆಡೆ ಕಾರ್ಯಕ್ರಮಗಳು ಆಯೋಜನೆಗೊಳ್ಳುವುದು. ಈ ಮೂಲಕವೇ ಶಿಕ್ಷಣ ತಜ್ಞರಾದವರು. ಕೇವಲ ಭಾವನಾತ್ಮಕ ಮಾತುಗಳ ಮೂಲಕವೇ ಸಾಮಾನ್ಯ ಜನರನ್ನು ಮೂಢರನ್ನಾಗಿಸುವಲ್ಲಿ ನಿಸ್ಸಿಮರು. ಜಾತಿ ವಿನಾಶದ ಕ್ರಾಂತಿಯ ನೆಲವಾದ ಕಲ್ಯಾಣ ಕರ್ನಾಟಕ ಭಾಗದ ಶೈಕ್ಷಣಿಕ ಗುಣಮಟ್ಟದ ಸುಧಾರಣಾ ಸಮಿತಿಗೆ ಸರ್ಕಾರವು ಮನುವಾದ ಪ್ರತಿಪಾದಕರನ್ನು ನೇಮಿಸಿರುವುದು ಒಪ್ಪಲಾಗದುʼ ಎಂದು ಸಂಘಟನೆಯ ಮುಖಂಡ ನಂದಕುಮಾರ್ ಪಿ. ದೂರಿದ್ದಾರೆ.

ಇತ್ತೀಚೆಗೆ ಕರ್ನಾಟಕ ಸರ್ಕಾರ ಕೈಗೊಳ್ಳುತ್ತಿರುವ ಈ ರೀತಿಯ ನಿರ್ಧಾರದ ಕಾರಣಕ್ಕೆ ಬಹುತೇಕರು ರಾಜ್ಯ ಸರ್ಕಾರವನ್ನು ಅನುಮಾನದಿಂದ ಮತ್ತು ಅಸಹನೆಯಿಂದ ನೋಡುವಂತ ಪರಿಸ್ಥಿತಿ ಬಂದೊದಗಿದೆ. ಇದು ಈ ಸರ್ಕಾರದ ನೈತಿಕ ದಿವಾಳಿ ಎತ್ತಿ ತೋರಿಸುವಂತೆ ಕಾಣುತ್ತಿದೆ. ಬಹಳ ಸೂಕ್ಷ್ಮವಾಗಿ ಗಮನಿಸಿದರೆ ನಮ್ಮ ರಾಜಕೀಯ ಚಿಂತನೆಯಲ್ಲೇ ಆಗಿರುವ ಬಹು ದೊಡ್ಡ ಲೋಪವನ್ನು ತೋರಿಸುತ್ತದೆʼ ಎಂದು ಕಳವಳ ವ್ಯಕ್ತಪಡಿಸಿದ್ದಾರೆ.

ʼವೈಚಾರಿಕ ತಿಳುವಳಿಕೆ, ಅನಿಕೇತನ ಪ್ರಜ್ಞೆ ಹಾಗೂ ಕವಿರಾಜ ಮಾರ್ಗ ಹಾಕಿರುವ ವಿವೇಕ ತತ್ವಕ್ಕೆ ಬುನಾದಿ ಹಾಕುವಂತ ಶಿಕ್ಷಣ ತಜ್ಞರನ್ನು ನೇಮಿಸಿದರೆ ಶೈಕ್ಷಣಿಕವಾಗಿ ಹಿಂದುಳಿದ ಕಲ್ಯಾಣ ಕರ್ನಾಟಕ ನಿಜವಾಗಿಯೂ ಕಲ್ಯಾಣ ಕರ್ನಾಟಕವಾಗುವುದು. ಈಗ ಹೆಸರಿಗಷ್ಟೇ ಕಲ್ಯಾಣ ಕರ್ನಾಟಕವಾಗಿದೆ. ಹಾಗಾಗಿ, ಶೈಕ್ಷಣಿಕ ಗುಣಮಟ್ಟದ ಸುಧಾರಣೆ ಸಮಿತಿಗೆ ನೇಮಕಗೊಂಡ ಗುರುರಾಜ್ ಕರ್ಜಗಿಯವರನ್ನು ಕೈಬಿಟ್ಟು, ರಾಜ್ಯದ ಹಿರಿಯ ಬುದ್ಧಿಜೀವಿಗಳ, ಸಾಹಿತಿಗಳ ಸಲಹೆಗಳನ್ನು ಪಡೆದು ಸಮಿತಿ ಸದಸ್ಯರನ್ನು ನೇಮಕ ಮಾಡುವುದು ಒಳಿತುʼ ಎಂದು ನಂದಕುಮಾರ್ ಆಗ್ರಹಿಸಿದ್ದಾರೆ.‌

ಶೈಕ್ಷಣಿಕ ಗುಣಮಟ್ಟ ಸುಧಾರಣಾ ಸಮಿತಿ ರಚನೆ ಅಪ್ರಜಾತಾಂತ್ರಿಕ : ಎಐಡಿಎಸ್‌ಒ

ಕಲ್ಯಾಣ ಕರ್ನಾಟಕ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಸರ್ಕಾರ ರಚಿಸಿರುವ ಸಮಿತಿಯಲ್ಲಿ ಈ ಭಾಗದ ಶಿಕ್ಷಣ ತಜ್ಞರು, ಶಿಕ್ಷಕರಿಲ್ಲ. ಬದಲಾಗಿ ದೊಡ್ಡ ದೊಡ್ಡ ಖಾಸಗಿ ಸಂಸ್ಥೆಗಳ ಹಾಗೂ ಖಾಸಗಿ ವಿಶ್ವವಿದ್ಯಾಲಯಗಳ ಪ್ರತಿನಿಧಿಗಳನ್ನು ಸಮಿತಿಗೆ ಆಯ್ಕೆ ಮಾಡಲಾಗಿದೆ. ಇದು ಅಪ್ರಜಾತಾಂತ್ರಿಕ ರಚನೆಯಾಗಿದೆ ಎಂದು ಪ್ರಶ್ನೆ ಹುಟ್ಟಿಸುವ ನಡೆಯಾಗಿದೆʼ ಎಂದು ಎಐಡಿಎಸ್‌ಓ ಯಾದಗಿರಿ ಜಿಲ್ಲಾ ಸಂಚಾಲಕಿ ಶಿಲ್ಪಾ ಬಿ.ಕೆ ಖಂಡಿಸಿದ್ದಾರೆ.

ʼಶೈಕ್ಷಣಿಕ ಗುಣಮಟ್ಟವನ್ನು ಸುಧಾರಣೆ ಮಾಡಬೇಕೆಂದರೆ ಆ ಭಾಗದ ಶಿಕ್ಷಣ ತಜ್ಞರ ಮತ್ತು ಶಿಕ್ಷಕರ ಪಾತ್ರ ಬಹಳ ಮುಖ್ಯವಾಗಿರುತ್ತದೆ. ಆದರೆ ಕಲ್ಯಾಣ ಕರ್ನಾಟಕ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಸರ್ಕಾರ ರಚಿಸಿದ ಸಮಿತಿಯಲ್ಲಿ ಶಿಕ್ಷಣ ತಜ್ಞರು, ಶಿಕ್ಷಕರು ಇಲ್ಲದೇ ಈ ಭಾಗದ ಶೈಕ್ಷಣಿಕ ಗುಣಮಟ್ಟ ಸುಧಾರಣೆಯಾಗಲು ಸಾಧ್ಯವಿಲ್ಲ. ಇದನ್ನು ವಿದ್ಯಾರ್ಥಿಗಳು, ಶಿಕ್ಷಣ ಪ್ರೇಮಿಗಳು, ಪೋಷಕರು ಒಪ್ಪುವುದಿಲ್ಲʼ ಎಂದು ದೂರಿದ್ದಾರೆ.

ಕಲ್ಯಾಣ ಕರ್ನಾಟಕ ಭಾಗದ ಶೈಕ್ಷಣಿಕ ಗುಣಮಟ್ಟದ ಹಿತದೃಷ್ಟಿಯಿಂದ ಕೂಡಲೇ ಈ ಸಮಿತಿಯನ್ನು ಪ್ರಜಾತಾಂತ್ರಿಕವಾಗಿ, ವೈಜ್ಞಾನಿಕ ದೃಷ್ಟಿಕೋನದಿಂದ ಈ ಭಾಗದ ಶಿಕ್ಷಣ ತಜ್ಞರು, ಶಿಕ್ಷಕರು, ನಿವೃತ್ತ ಪ್ರಾಧ್ಯಾಪಕರನ್ನು ಒಳಗೊಂಡ ಸಮಿತಿಯನ್ನು ಪುನರಚಿಸಬೇಕುʼ ಎಂದು ಎಐಡಿಎಸ್‌ಓ ವಿದ್ಯಾರ್ಥಿ ಸಂಘಟನೆ ಆಗ್ರಹಿಸಿದೆ.

WhatsApp Image 2024 10 05 at 8.21.13 PM

ʼಕಲಬುರಗಿ ಕಲ್ಯಾಣ ಕರ್ನಾಟಕ ಭಾಗದಲ್ಲಿ ಶಾಲಾ ಶಿಕ್ಷಣ ಇಲಾಖೆ ಸಹಯೋಗದೊಂದಿಗೆ ಈ ಭಾಗದ ಎಸ್ಸೆಸ್ಸೆಲ್ಸಿ ಫಲಿತಾಂಶ ಸೇರಿದಂತೆ ಶಿಕ್ಷಣ ಕ್ಷೇತ್ರ ಸುಧಾರಣೆ ಸಂಬಂಧ ಡಾ.ಗುರುರಾಜ ಕರಜಗಿ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಲಾಗಿದೆʼ ಎಂದು ಶುಕ್ರವಾರ ಕೆಕೆಆರ್‌ಡಿಬಿ ಅಧ್ಯಕ್ಷ ಡಾ.ಅಜಯ್‌ ಸಿಂಗ್‌ ಹೇಳಿದರು.

ʼಸಾಮಾನ್ಯ ಪಠ್ಯಕ್ರಮದ ಜೊತೆಗೆ ಕೌಶಲ್ಯಗಳ ಕಲಿಕೆಗೂ ಅವಕಾಶ ಕಲ್ಪಿಸಿ, ಈಗಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ಯಶಸ್ವಿಯಾಗಲು ಇಲ್ಲಿನ ವಿದ್ಯಾರ್ಥಿಗಳನ್ನು ಸಜ್ಜುಗೊಳಿಸಲಾಗುತ್ತಿದೆ. ನಮ್ಮ ವಿವಿಧ ಪ್ರಯತ್ನಗಳ ಫಲವಾಗಿ, ಮುಂಬರುವ ಎಸ್ಸೆಸ್ಸೆಲ್ಸಿ ಹಾಗೂ ಪಿಯುಸಿ ಪರೀಕ್ಷೆಯ ಫಲಿತಾಂಶದಲ್ಲಿ ಗಣನೀಯ ಸುಧಾರಣೆ ಕಂಡುಬರುವ ವಿಶ್ವಾಸವಿದೆʼ ಎಂದಿದ್ದಾರೆ.

ಈ ಸುದ್ದಿ ಓದಿದ್ದೀರಾ? ಪಶ್ಚಿಮ ಬಂಗಾಳ | ಅಪ್ರಾಪ್ತ ಬಾಲಕಿಯ ಅತ್ಯಾಚಾರ, ಕೊಲೆ: ಹಿಂಸಾಚಾರಕ್ಕೆ ತಿರುಗಿದ ಪ್ರತಿಭಟನೆ

ಈ ಸಮಿತಿಯ ಅಧ್ಯಕ್ಷರಾಗಿ ಡಾ. ಗುರುರಾಜ ಕರಜಗಿ ಹಾಗೂ ಸದಸ್ಯರಾಗಿ ಅಜೀಂ ಪ್ರೇಮ್‌ ಜಿ ಫೌಂಡೆಷನ್ ಸಂಸ್ಥೆಯ ಡಾ. ರುದ್ರೇಶ್, ಹಿರೇಮಠ್ ಸ್ವಾಮಿ, ಬಳ್ಳಾರಿಯ ಫಾದರ್ ಫ್ರ್ಯಾನ್ಸಿಸ್, ಬೀದರ್ ಶಾಹೀನ್‌ ಶಿಕ್ಷಣ ಸಂಸ್ಥೆಯ ಅಬ್ದುಲ್ ಖದೀರ್ ಇರಲಿದ್ದು, ಸದಸ್ಯ ಕಾರ್ಯದರ್ಶಿಯಾಗಿ ಎನ್.ಬಿ.ಪಾಟೀಲ್ ಅವರನ್ನು ಆಯ್ಕೆ ಮಾಡಲಾಗಿದೆʼ ಎಂದು ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಹಿರಿಯ ಸಾಹಿತಿ ಎ.ಎಸ್.ಎನ್. ಹೆಬ್ಬಾರ್ ಅವರಿಗೆ ಸೂಕ್ತ ರಕ್ಷಣೆ ನೀಡಲು ಜಿಲ್ಲಾಧಿಕಾರಿಗೆ ಮನವಿ

ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಸ್ಥಾಪಕ ಅಧ್ಯಕ್ಷರು, ಹಿರಿಯ ವಕೀಲರು...

ಉಡುಪಿ | ಕಾರ್ಮಿಕರು ಹಕ್ಕು ಮತ್ತು ಸೌಲಭ್ಯಗಳಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಟಿ.ಎಂ. ಶಾಹಿದ್ ತೆಕ್ಕಿಲ್

ಕಾರ್ಮಿಕರ ಹಿತಾಸಕ್ತಿಯನ್ನು ಕಾಪಾಡುವುದರೊಂದಿಗೆ ಸರ್ಕಾರದ ಕಲ್ಯಾಣ ಕಾರ್ಯಕ್ರಮಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ...

ಬಾಗೇಪಲ್ಲಿಯಲ್ಲಿ ರಸ್ತೆ ಅಪಘಾತ:ರೈತ ನಂಜಪ್ಪ ಸಾವು

ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದು ದ್ವಿಚಕ್ರ ವಾಹನದಲ್ಲಿ ಹೊಲಕ್ಕೆ ತೆರಳುತ್ತಿದ್ದ ನಡಂಪಲ್ಲಿ...

ಮಂಗಳೂರು | ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣ: ಆರೋಪಿಗಳ ಜಾಮೀನು ರದ್ದುಪಡಿಸಿದ ಸುಪ್ರೀಂ ಕೋರ್ಟ್

ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣದಲ್ಲಿ ಆರೋಪಿಗಳಿಗೆ ಇತ್ತೀಚೆಗೆ ನ್ಯಾಯಾಲಯ ಜಾಮೀನು ನೀಡಿತ್ತು....