ದಕ್ಷಿಣ ಕನ್ನಡ | ಯುಗಾದಿ ಹಬ್ಬ ಸಮೀಪಿಸುತ್ತಿದ್ದಂತೆ ಮತ್ತೆ ಮುನ್ನೆಲೆಗೆ ಬಂದ ಹಲಾಲ್ ಕಟ್

Date:

  • ಕಳೆದ ವರ್ಷವೂ ಯುಗಾದಿ ಹಬ್ಬದ ಸಂದರ್ಭದಲ್ಲಿ ಉಂಟಾಗಿದ್ದ ವಿವಾದ
  • ‘ಜಟ್ಕಾ ಕಟ್ ಮುಂದುವರಿಸಿ – ಹಲಾಲ್ ಕಟ್ ಬಹಿಷ್ಕಾರ’ ಅಭಿಯಾನಕ್ಕೆ ಕರೆ

ಯುಗಾದಿ ಹಬ್ಬದಂದು ಎಣ್ಣೆ ಸ್ನಾನ ಮಾಡಿ, ಬೇವು ಬೆಲ್ಲ ತಿಂದು, ಹೋಳಿಗೆ ಸಿಹಿ ಊಟದೊಂದಿಗೆ ಆಚರಿಸಲಾಗುತ್ತದೆ. ಆದರೆ, ಮಾರನೇ ದಿನ ಹೊಸತೊಡಕು ಹೆಸರಿನಲ್ಲಿ ಮಾಂಸಹಾರ ಮಾಡುವ ಸಂಪ್ರದಾಯ ಇದೆ. ಈ ಸಂದರ್ಭವನ್ನು ಬಳಸಿಕೊಂಡು ಸಮಾಜದಲ್ಲಿ ಅಶಾಂತಿ ಉಂಟುಮಾಡಲು ಹುನ್ನಾರ ನಡೆಸಿರುವ ಶ್ರೀರಾಮಸೇನೆ ಈ ವರ್ಷವೂ ಮತ್ತೆ ‘ಹಲಾಲ್ ಕಟ್’ ಮಾಂಸ ಬಹಿಷ್ಕಾರ ಅಭಿಯಾನಕ್ಕೆ ಮುಂದಾಗಿದೆ.

ಕಳೆದ ವರ್ಷ ಯುಗಾದಿ ಸಂದರ್ಭದಲ್ಲಿ ಆರಂಭವಾಗಿ ಮತ್ತೆ ತಣ್ಣಗಾಗಿದ್ದ ಹಲಾಲ್ ಕಟ್ ಮಾಂಸದ ವಿಚಾರವನ್ನು ಶ್ರೀರಾಮಸೇನೆ ಮತ್ತೆ ಮುನ್ನೆಲೆಗೆ ತರಲು ಯತ್ನಿಸುತ್ತಿದೆ. ಹಿಜಾಬ್, ಆಝಾನ್, ಹಾಲಾಲ್ ಕಟ್, ದೇವಸ್ಥಾನಗಳಲ್ಲಿ ಹಿಂದುಯೇತರರಿಗೆ ಅವಕಾಶ ನಿರ್ಬಂಧ ಸೇರಿದಂತೆ ನಾನಾ ವಿಚಾರವಾಗಿ ಕಳೆದ ವರ್ಷ ಭಾರಿ ವಿವಾದ ಉಂಟಾಗಿತ್ತು. ಆ ಮೂಲಕ ಒಂದು ಸಮುದಾಯದ ಆಚರಣೆಗಳನ್ನು ಟೀಕೆ ಮಾಡುವ ಜೊತೆಗೆ ಸಮಾಜದಲ್ಲಿ ಗಲಬೆ ಸೃಷ್ಠಿಸುವ ಹುನ್ನಾರ ನಡೆಸಲಾಗಿತ್ತು. ಆದರೆ, ಅದು ನಿರೀಕ್ಷಿತ ಮಟ್ಟದಲ್ಲಿ ಫಲ ನೀಡಲಿಲ್ಲ. ಪ್ರಸ್ತುತ ಕರ್ನಾಟಕ ವಿಧಾನಸಭೆ ಚುನಾವಣೆ ಸಮೀಪಿಸುತ್ತಿದ್ದು, ಶ್ರೀರಾಮಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಮತ್ತೆ ಹಲಾಲ್ ಕಟ್ ಬಹಿಷ್ಕಾರ ಅಭಿಯಾನಕ್ಕೆ ಕರೆ ನೀಡಿದ್ದಾರೆ.

ಈ ಕುರಿತು ಮಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿರುವ ಪ್ರಮೋದ್ ಮುತಾಲಿಕ್, “ಕಳೆದ ವರ್ಷ ಯುಗಾದಿ ಸಂದರ್ಭದಲ್ಲಿ ಹಲಾಲ್ ವಿರುದ್ಧ ಜಟ್ಕಾ ಕಟ್ ಅಭಿಯಾನ ಮಾಡಿದ್ದೇವು. ಈ ವರ್ಷವೂ ಅಭಿಯಾನವನ್ನು ಮುಂದುವರೆಸಲಿದ್ದೇವೆ. ‘ಜಟ್ಕಾ ಕಟ್ ಮುಂದುವರಿಸಿ – ಹಲಾಲ್ ಕಟ್ ಬಹಿಷ್ಕಾರ’ ಅಭಿಯಾನ ಮಾಡಲಿದ್ದೇವೆ” ಎಂದು ಮುತಾಲಿಕ್ ಹೇಳಿದ್ದಾರೆ.

“ಹಲಾಲ್ ಇಸ್ಲಾಂನದ್ದು, ಹಿಂದೂಗಳಿಗೆ ಸಂಬಂಧಿಸಿದ್ದಲ್ಲ. ಮುಸ್ಲಿಮರು ಹಿಂದುಗಳು ಕತ್ತರಿಸಿದ ಮಾಂಸ ತಿನ್ನುವುದಿಲ್ಲ. ನಾವು ಯಾಕೆ ಅವರ ಹಲಾಲ್ ಮಾಂಸವನ್ನು ತಿನ್ನಬೇಕು? ಹಾಲಾಲ್‌ನಿಂದ ಜಲಾಮ್ – ಉಲೇಮಾ ಟ್ರಸ್ಟ್‌ಗೆ ಎರಡು ಲಕ್ಷ ಕೋಟಿ ರೂಪಾಯಿ ಆದಾಯವಿದೆ. ಈ ದುಡ್ಡು ಎಲ್ಲಿ ಖರ್ಚು ಆಗುತ್ತಿದೆ? ಹಲಾಲ್‌ನ ದುಡ್ಡು ಉಗ್ರಗಾಮಿಗಳಿಗೆ ಸಂದಾಯವಾಗುತ್ತದೆ” ಎಂದು ಆರೋಪಿಸಿದ್ದಾರೆ.

ಸಚಿವ ವಿ ಸುನಿಲ್ ಕುಮಾರ್ ವಿರುದ್ಧ ವಾಗ್ದಾಳಿ

“ಸಚಿವ ವಿ ಸುನೀಲ್ ಕುಮಾರ್ ಅವರು ಶಾಸಕ ಮತ್ತು ಸಚಿವ ಸ್ಥಾನಕ್ಕೆ ಏರಲು ಕೇಸರಿ ಶಾಲು, ಹಿಂದುತ್ವವೇ ಕಾರಣ. ಸುನೀಲ್ ಕುಮಾರ್‌ಗೆ ನಾಚಿಕೆ ಮಾನ ಮರ್ಯಾದೆ ಇದ್ಯಾ. ಹಿಂದುತ್ವ ಎಂದರೆ ದುಡ್ಡು ಮಾಡೋದು, ಸೊಕ್ಕು ತೊರಿಸೋದು ಅಲ್ಲ. ಕೇಸರಿ ಶಾಲು ಹಾಕಿ ದತ್ತಪೀಠ ಹೋರಾಟ ಮಾಡಿರೋದು ಮರೆತು ಹೋಯ್ತಾ? ಸುನೀಲ್ ಕುಮಾರ್ ಹಿಂದೂ ಸಂಘಟನೆಯ ಕಾರ್ಯಕರ್ತರನ್ನು ಕಡೆಗಣಿಸಿದ್ದೀರಿ” ಎಂದು ಪ್ರಮೋದ್ ಮುತಾಲಿಕ್ ವಾಗ್ದಾಳಿ ನಡೆಸಿದರು.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಸ್ಲಂ ನಿವಾಸಿಗಳ ನಿವೇಶನ ಅಭಿವೃದ್ಧಿಪಡಿಸಲು ಅಧಿಕಾರಿಗಳ ನಿರ್ಲಕ್ಷ್ಯ; ಜಿಲ್ಲಾಧಿಕಾರಿ ಕಿಡಿ

ಸ್ಲಂ ನಿವಾಸಿಗಳಿಗೆ ನಿವೇಶನಕ್ಕಾಗಿ ಭೂಮಿ ಮಂಜೂರು ಮಾಡಿದ್ದು, ಹಕ್ಕುಪತ್ರಗಳನ್ನು ವಿತರಣೆ ಮಾಡಿದೆ,...

ಜೀವ ಪ್ರಮಾಣ ಪತ್ರ ಸಲ್ಲಿಸಲು ಪಿಂಚಣಿದಾರರಿಗೆ ಎರಡೇ ದಿನ ಬಾಕಿ

ಕೇಂದ್ರ ಸರ್ಕಾರ ಹಾಗೂ ನಾನಾ ರಾಜ್ಯಗಳಲ್ಲಿ ಉದ್ಯೋಗ ಮಾಡಿ ನಿವೃತ್ತಿ ಹೊಂದಿ...

ಹುಬ್ಬಳ್ಳಿ | ಕಸದ ರಾಶಿಯಿಂದ ಸೂಸುವ ದಟ್ಟ ಹೊಗೆ; ಜನರ ಪರದಾಟ

ಹುಬ್ಬಳ್ಳಿ-ಧಾರವಾಡ ಅವಳಿ ನಗರಗಳಲ್ಲಿ ದಶಕಗಳಷ್ಟು ಹಳೆಯದಾದ ಕಸದ ರಾಶಿಗಳಿದ್ದು, ಸಾಕಷ್ಟು ಸಮಸ್ಯೆಗಳನ್ನು...

ಸರ್ಕಾರಿ ಶಾಲೆಗಳಲ್ಲಿ ಮೂಲಭೂತ ಸೌಕರ್ಯಗಳ ಕೊರತೆ; ಮಕ್ಕಳಿಗಿದು ಸುರಕ್ಷಿತ ತಾಣವೇ?

ಕಳೆದ ಐದು ವರ್ಷಗಳಲ್ಲಿ ಕರ್ನಾಟಕ ನಾಲ್ವರು ಮುಖ್ಯಮಂತ್ರಿಗಳನ್ನು ಕಂಡಿದೆ. ಆದರೂ ರಾಜ್ಯದ...