ಹಳಿಯಾಳ | ನಾಡಬಾಂಬ್ ಸ್ಫೋಟ ಪ್ರಕರಣ: ಪ್ರಮುಖ ಆರೋಪಿ ಹುಬ್ಬಳ್ಳಿಯಲ್ಲಿ ಬಂಧನ

Date:

ಹಳಿಯಾಳ: ತಾಲೂಕಿನ ಕಾಳಗಿನಕೊಪ್ಪ ಗ್ರಾಮದಲ್ಲಿ ನಡೆದ ನಾಡಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿಯನ್ನು ಉತ್ತರ ಕನ್ನಡ ಜಿಲ್ಲಾ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತ ಆರೋಪಿಯನ್ನು ವಸಂತ @ ವಾಸು ರಾಯಪ್ಪ ಕೊರವರ ಎಂದು ಗುರುತಿಸಲಾಗಿದೆ.

- Advertisement -

ಆರೋಪಿಯು ತನ್ನ ಮನೆಯಲ್ಲಿ ಕಾನೂನುಬಾಹಿರವಾಗಿ ನಾಡಬಾಂಬ್‌ಗಳನ್ನು ಸಂಗ್ರಹಿಸಿಟ್ಟಿದ್ದಾಗ ಈ ಘಟನೆ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಜೂನ್ 22, 2026ರಂದು ಬೆಳಗ್ಗೆ ಸುಮಾರು 5.10 ಗಂಟೆಗೆ ಆರೋಪಿಯ ಮನೆಯಲ್ಲಿ ಸಂಗ್ರಹಿಸಿಟ್ಟಿದ್ದ ನಾಡಬಾಂಬ್‌ಗಳು ಅಕಸ್ಮಿಕವಾಗಿ ಸ್ಫೋಟಗೊಂಡಿದ್ದವು. ಸ್ಫೋಟದ ತೀವ್ರತೆಗೆ ಆರೋಪಿಯ ಮನೆಯ ಹೆಂಚುಗಳು ಹಾಗೂ ಅಡುಗೆಮನೆಯ ಕಿಟಕಿಯ ಗಾಜುಗಳು ಚೂರಾಗಿದ್ದವು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

‘ಹಾಸ್ಟೆಲ್‌’ ಇಲ್ಲದ ಶಿಕ್ಷಣದ ಸ್ವರೂಪ ಹೇಗಿರಲಿದೆ?

ಸಾಮಾನ್ಯವಾಗಿ ʼಶಿಕ್ಷಣʼ ಎಂದರೆ ʼತರಗತಿ, ಪಠ್ಯಪುಸ್ತಕ ಮತ್ತು ಪರೀಕ್ಷೆಗಳʼ ಸುತ್ತ ಹೆಣೆದುಕೊಂಡಿರುವ ಕಲ್ಪನೆ. ಆದರೆ ಒಬ್ಬ ವಿದ್ಯಾರ್ಥಿ ದಿನದ ಬಹುಪಾಲು ಕಳೆಯುವ ಜಾಗ ʼಹಾಸ್ಟೆಲ್‌ʼ. ಹೆಚ್ಚಾಗಿ ಚರ್ಚೆಗೆ ಬಾರದ ಈ ʼಹಾಸ್ಟೆಲ್‌ʼ ಎಂಬ...

ಬರದ ಬೇಗೆಯಲ್ಲಿ ರಾಜ್ಯ ಬೆಂದರೂ ಅನುದಾನಕ್ಕ ದನಿ ಎತ್ತದ...

ಸದಾ ಕಾಲ 'ಮೋದಿ ಜಪ' ಮಾಡುತ್ತಾ, ಕೇವಲ ರಾಜಕೀಯಕ್ಕಾಗಿ ಮತ್ತು ಪಕ್ಷದ ಅಜೆಂಡಾಗಳಿಗಾಗಿ ರಾಜ್ಯಾದ್ಯಂತ ಸುತ್ತುವ ಈ ಸಂಸದರಿಗೆ, ನಾಡಿನ ಜನತೆ ಬರಗಾಲದ ತೀವ್ರ ಸಂಕಷ್ಟದಲ್ಲಿ ಬೆಂದು ಹೋಗುತ್ತಿರುವಾಗ ಅದೇ ಪ್ರಧಾನಿ ನರೇಂದ್ರ...

SIR ಅಕ್ರಮ | ಗ್ಯಾನೇಶ್‌ ಕುಮಾರ್ ‘ಅಪರಾಧಿ’ಯಾದ್ರೆ, ಮೋದಿ-ಅಮಿತ್...

ಭಾರತೀಯ ಪ್ರಜಾಪ್ರಭುತ್ವದ ಇತಿಹಾಸದಲ್ಲೇ ಅತ್ಯಂತ ಕರಾಳ ಅಧ್ಯಾಯವೊಂದು ಈಗ ಜಗಜ್ಜಾಹೀರಾಗಿದೆ. ಪ್ರತಿಯೊಬ್ಬ ನಾಗರಿಕನ ಅತಿ ದೊಡ್ಡ ರಾಜಕೀಯ ಶಕ್ತಿಯಾಗಿರುವ 'ಮತದಾನದ ಹಕ್ಕು' ಮತ್ತು ಅದನ್ನು ಕಾಯಬೇಕಾದ ಸಾಂವಿಧಾನಿಕ ಸಂಸ್ಥೆಯನ್ನೇ ಆಡಳಿತಾರೂಢ ಮೋದಿ-ಅಮಿತ್ ಶಾ...

ಈ ಸುದ್ದಿ ಓದಿದ್ದೀರಾ? ಸಿದ್ದಾಪುರ | ಕಾನಸೂರ ವಸತಿ ಶಾಲೆ ವಿದ್ಯಾರ್ಥಿ ಸಾವು ಪ್ರಕರಣ: ಶಿಕ್ಷಕನ ವಿರುದ್ಧ ಗಂಭೀರ ಆರೋಪ, FIR ದಾಖಲು!

ಅಲ್ಲದೆ, ಸುತ್ತಮುತ್ತಲಿನ ಕೆಲವು ಮನೆಗಳ ಹೆಂಚುಗಳು ಮತ್ತು ಬಾಗಿಲುಗಳು ಹಾನಿಗೊಳಗಾಗಿದ್ದು, ಸುಮಾರು ₹1.15 ಲಕ್ಷ ಮೌಲ್ಯದ ಆಸ್ತಿ ನಷ್ಟ ಸಂಭವಿಸಿತ್ತು. ಈ ಕುರಿತು ಹಳಿಯಾಳ ಪೊಲೀಸ್ ಠಾಣೆಯಲ್ಲಿ ಗುನ್ನಾ ಸಂಖ್ಯೆ 157/2026ರಡಿ ಬಿಎನ್‌ಎಸ್ ಕಲಂ 324(5), 326(ಜಿ) ಹಾಗೂ 3(5) ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು.

ಖಚಿತ ಮಾಹಿತಿಯ ಆಧಾರದ ಮೇಲೆ ಆರೋಪಿಯ ಸುಳಿವು ಪತ್ತೆಹಚ್ಚಿದ ಪೊಲೀಸರು, ಜೂನ್ 24ರಂದು ಹುಬ್ಬಳ್ಳಿಯ ತಾರಿಹಾಳ ಬಸ್ ನಿಲ್ದಾಣದ ಸಮೀಪ ಆರೋಪಿಯನ್ನು ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತ ಆರೋಪಿಯನ್ನು ಹಳಿಯಾಳ ಜೆಎಂಎಫ್‌ಸಿ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.

ಪ್ರಕರಣದ ಗಂಭೀರತೆಯನ್ನು ಪರಿಗಣಿಸಿ, ಉತ್ತರ ಕನ್ನಡ ಜಿಲ್ಲಾ ಪೊಲೀಸ್ ಅಧೀಕ್ಷಕರಾದ ದೀಪನ್ ಎಂ.ಎನ್., ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ಕೃಷ್ಣಮೂರ್ತಿ ಹಾಗೂ ದಾಂಡೇಲಿ ಉಪವಿಭಾಗದ ಡಿವೈಎಸ್‌ಪಿ ಶಿವಾನಂದ ಮದರಖಂಡಿ ಅವರ ಮಾರ್ಗದರ್ಶನದಲ್ಲಿ ವಿಶೇಷ ತಂಡವನ್ನು ರಚಿಸಲಾಗಿತ್ತು.

ಹಳಿಯಾಳ ಸಿಪಿಐ ಜಯಪಾಲ ಪಾಟೀಲ ಅವರ ನೇತೃತ್ವದಲ್ಲಿ, ದಾಂಡೇಲಿ ನಗರ ಠಾಣೆಯ ಪಿಎಸ್‌ಐ ಕಿರಣ ಪಾಟೀಲ, ಹಳಿಯಾಳ ಪಿಎಸ್‌ಐ ಕೃಷ್ಣಗೌಡ ಅರಕೇರಿ, ರಾಮನಗರ ಪಿಎಸ್‌ಐ ಮಹಾಂತೇಶ ನಾಯಕ ಹಾಗೂ ತಾಂತ್ರಿಕ ಸಹಾಯ ಸಿಬ್ಬಂದಿಗಳಾದ ಉದಯ ಗುನಗಾ ಮತ್ತು ಚಂದ್ರು ಪಾಟೀಲ ಅವರನ್ನೊಳಗೊಂಡ ತಂಡ ಆರೋಪಿಯನ್ನು ಪತ್ತೆ ಹಚ್ಚುವಲ್ಲಿ ಯಶಸ್ವಿಯಾಗಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು | ದರ್ಗಾ ಆವರಣದಲ್ಲಿ ದಫನ್‌ಗೆ ಅನುಮತಿ ನಿರಾಕರಣೆ ಖಂಡನೀಯ: SDPI

ಚಿಕ್ಕಮಗಳೂರು: ಹಜರತ್ ಬಾಬಾ ಬುಡನ್ ಅವರ ವಂಶಸ್ಥರಾದ ಸೈಯದ್ ಹುಸೇನ್ ಶಾ...

ಚಿಕ್ಕಮಗಳೂರು | ‘ಮಳಲೂರು ಏತ ನೀರಾವರಿ ಯೋಜನೆ’: ಹೆಸರಿಗಷ್ಟೇ ಈ ಯೋಜನೆ ಆಗಿದೆಯೇ?

ಸರ್ಕಾರದಿಂದ ಅನೇಕ ರೀತಿಯ ಯೋಜನೆ ಮಾಡುತ್ತ ಬರುತ್ತಿದೆ. ಹಾಗೆಯೇ, ಚಿಕ್ಕಮಗಳೂರು ತಾಲೂಕಿನ...