ಹಳಿಯಾಳ | ಶ್ವಾನಗಳನ್ನು ಹಿಡಿದು ಕಾಡಿಗೆ ಬಿಟ್ಟ ಆರೋಪ; ಇಐಡಿ ಪ್ಯಾರಿ ಕಾರ್ಖಾನೆಯ ನಾಲ್ವರು ಅಧಿಕಾರಿಗಳ ವಿರುದ್ಧ ಎಫ್‌ಐಆರ್

Date:

ಹಳಿಯಾಳ: ಪಟ್ಟಣದ ಇಐಡಿ ಪ್ಯಾರಿ ಸಕ್ಕರೆ ಕಾರ್ಖಾನೆಯ ಆವರಣದಲ್ಲಿ ಬೀದಿ ಶ್ವಾನಗಳು ಹಾಗೂ ಸಾಕು ಶ್ವಾನಗಳನ್ನು ಅಮಾನುಷವಾಗಿ ಹಿಡಿದು ಅರಣ್ಯ ಪ್ರದೇಶದಲ್ಲಿ ಬಿಡಲಾಗುತ್ತಿದೆ ಎಂಬ ಗಂಭೀರ ಆರೋಪ ಕೇಳಿಬಂದಿದ್ದು, ಈ ಕೃತ್ಯಕ್ಕೆ ಸಂಬಂಧಿಸಿದಂತೆ ಕಾರ್ಖಾನೆಯ ನಾಲ್ವರು ಪ್ರಮುಖ ಅಧಿಕಾರಿಗಳ ವಿರುದ್ಧ ಹಳಿಯಾಳ ಪೊಲೀಸ್ ಠಾಣೆಯಲ್ಲಿ ಪ್ರಾಣಿ ಹಿಂಸೆ ನಿಷೇಧ ಕಾಯ್ದೆಯಡಿ ಎಫ್‌ಐಆರ್ ದಾಖಲಾಗಿದೆ.

- Advertisement -

ವರದಿಗಾರ ಹಾಗೂ ಪ್ರಾಣಿಗಳ ಹಕ್ಕುಗಳ ಹೋರಾಟಗಾರ ಯೋಗರಾಜ ಶಿವಾಜಿ ಕರಾಂಡೆ ಅವರು ನೀಡಿದ ದೂರಿನ ಮೇರೆಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ. ರಾಜೇಂದ್ರ ಆಚಾರಿ, ರಮೇಶ್ ರೆಡ್ಡಿ, ಶಂಕರ್ ಅಗಡಿ ಮತ್ತು ನೀತಾ ಎಲ್. ಎಫ್‌ಐಆರ್‌ನಲ್ಲಿ ಹೆಸರಿಸಲಾದ ಆರೋಪಿ ಅಧಿಕಾರಿಗಳಾಗಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕತ್ತಲೆಯಿಂದ ಬೆಳಕಿನತ್ತ ಸೌಜನ್ಯ ಹೋರಾಟ: ಸುಪ್ರೀಂ ಆದೇಶದೊಂದಿಗೆ ಮೂಡಿದ...

ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣವು ಕೇವಲ ಒಂದು ಕಾನೂನು ಪ್ರಕ್ರಿಯೆಯಾಗಿ ಉಳಿಯದೆ, ಸಾರ್ವಜನಿಕ ಜಾಗೃತಿ ಮತ್ತು ನ್ಯಾಯದ ಪರವಾದ ಗಟ್ಟಿಯಾದ ಧ್ವನಿಯಾಗಿ ಮಾರ್ಪಟ್ಟಿದೆ. ಸುಪ್ರೀಂ ಕೋರ್ಟ್‌ನ ಈ ಹೊಸ ಆದೇಶವು ಸೌಜನ್ಯ ಕುಟುಂಬಕ್ಕೆ...

ವಿಜಯಪುರ | ಮಳೆ ಕೊರತೆಯಿಂದ ಮೇವಿಗೂ ಬರ: ಜಾನುವಾರು...

ಹಸಿರು ಮೇವು ಕಡಿಮೆಯಾಗಿ, ಸಂಗ್ರಹಿತ ಒಣಮೇವು ಖಾಲಿಯಾಗುತ್ತಿರುವುದರಿಂದ ಹೈನುಗಾರಿಕೆ ಮತ್ತು ಕುರಿ-ಮೇಕೆ ಸಾಕಾಣಿಕೆ ಅವಲಂಬಿತ ಕುಟುಂಬಗಳ ಆದಾಯಕ್ಕೆ ಹೊಡೆತ ಬೀಳುವ ಭೀತಿ ಎದುರಾಗಿದೆ. ಬೋರ್‌ವೆಲ್‌ಗಳಲ್ಲಿನ ನೀರಿನ ಮಟ್ಟ ಕುಸಿತ ಮತ್ತು ಹೊರ ಜಿಲ್ಲೆ/ರಾಜ್ಯಗಳಿಂದ...

ತುಳುವಿಗೆ ಅಧಿಕೃತ ಮಾನ್ಯತೆ | ಭಾಷಾ ಬೆಳವಣಿಗೆಗೆ ಇಷ್ಟೇ...

ತುಳು ಭಾಷೆಗೆ ಸಿಗುವ ಹೊಸ ಸ್ಥಾನಮಾನ ಭಾಷಾ ಹೋರಾಟದ ಅಂತಿಮ ಗುರಿಯಾಗಬಾರದು. ಬದಲಾಗಿ ಅದೊಂದು ಹೊಸ ಅಧ್ಯಾಯದ ಆರಂಭವಾಗಬೇಕು. ಸರ್ಕಾರಿ ಯೋಜನೆಗಳು, ಶೈಕ್ಷಣಿಕ ಪೋಷಣೆ ಮತ್ತು ಸ್ಥಳೀಯ ಆರ್ಥಿಕತೆಯ ಬೆಂಬಲ ಸಿಕ್ಕಾಗ ಮಾತ್ರವೇ...

ಘಟನೆಯ ಹಿನ್ನೆಲೆ: ಮನೆಯಿಂದ ಹೊರಗೆ ತಿರುಗಾಡಲು ಬಿಟ್ಟಿದ್ದ ಸಾಕು ಶ್ವಾನಗಳು ನಿರಂತರವಾಗಿ ನಾಪತ್ತೆಯಾಗುತ್ತಿರುವ ಕುರಿತು ಮಾಹಿತಿ ಪಡೆದ ಪ್ರಾಣಿದಯಾ ಕಾರ್ಯಕರ್ತರು ಮತ್ತು ರೈತ ಮುಖಂಡರು ಶೋಧ ನಡೆಸಿದ್ದರು. ಸೆಪ್ಟೆಂಬರ್ 19 ಮತ್ತು 20 ರಂದು ಕಾರ್ಖಾನೆಯ ಆವರಣ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಪರಿಶೀಲನೆ ನಡೆಸಿದಾಗ, ಬಾಗಲಕೋಟೆ ಜಿಲ್ಲೆಯ ಲೋಕಾಪುರ ಮೂಲದ ಸುಮಾರು 25 ರಿಂದ 30 ಜನರ ತಂಡವು ಶ್ವಾನಗಳನ್ನು ಹಿಡಿಯುತ್ತಿರುವುದು ಪತ್ತೆಯಾಗಿದೆ.

ಈ ಸುದ್ದಿ ಓದಿದ್ದೀರಾ ? ಉತ್ತರ ಕನ್ನಡ | ಏಳು ದ್ವೀಪಗಳ ಅಭಿವೃದ್ಧಿ, ಕಾರವಾರ ವಿಮಾನ ನಿಲ್ದಾಣ ವಿಸ್ತರಣೆಗೆ ಸಚಿವ ಸಂಪುಟ ಅಸ್ತು

ಆರೋಪಿತರು ಕೆಎ 65 1394 ನಂಬರಿನ ಮಹೀಂದ್ರಾ ಗೂಡ್ಸ್ ವಾಹನದಲ್ಲಿ ಸುಮಾರು 6 ಶ್ವಾನಗಳನ್ನು ಅರೆಪ್ರಜ್ಞಾವಸ್ಥೆಯಲ್ಲಿ ತುಂಬಿಕೊಂಡು ಬೇರೆಡೆಗೆ ಸಾಗಿಸಲು ಯತ್ನಿಸುತ್ತಿದ್ದ ವೇಳೆ ಪ್ರಾಣಿ ಪ್ರಿಯರ ಕೈಗೆ ಸಿಕ್ಕಿಬಿದ್ದಿದ್ದಾರೆ. ಕಾರ್ಖಾನೆಯವರ ಕರೆಯ ಮೇರೆಗೆ ಈ ತಂಡವು ಬಂದಿದ್ದು, ಸೆಪ್ಟೆಂಬರ್ 19ರಿಂದ ಈವರೆಗೆ 30ಕ್ಕೂ ಅಧಿಕ ಶ್ವಾನಗಳನ್ನು ಹಿಡಿದು ಅರಣ್ಯ ಪ್ರದೇಶದಲ್ಲಿ ಬಿಟ್ಟು ಬಂದಿರುವುದಾಗಿ ವಿಚಾರಣೆ ವೇಳೆ ತಿಳಿದುಬಂದಿದೆ.

ಆತಂಕ ಮತ್ತು ಆಕ್ರೋಶ: ನಾಡಿನಲ್ಲಿ ವಾಸಿಸುವ ಶ್ವಾನಗಳನ್ನು ಅರಣ್ಯ ಪ್ರದೇಶಕ್ಕೆ ಬಿಡುವುದರಿಂದ ಅವು ವನ್ಯಪ್ರಾಣಿಗಳ ದಾಳಿಗೆ ತುತ್ತಾಗುವ ಅಪಾಯವಿದೆ. ಜೊತೆಗೆ, ಶ್ವಾನಗಳಲ್ಲಿ ಸಾಂಕ್ರಾಮಿಕ ರೋಗಗಳಿದ್ದಲ್ಲಿ ಅವು ವನ್ಯಜೀವಿಗಳಿಗೂ ಹರಡುವ ಗಂಭೀರ ಆತಂಕವನ್ನು ಪ್ರಾಣಿಪ್ರಿಯರು ವ್ಯಕ್ತಪಡಿಸಿದ್ದಾರೆ.

ಈ ಅಮಾನವೀಯ ಕೃತ್ಯದ ವಿರುದ್ಧ ರೈತ ಮುಖಂಡ ನಾಗೇಂದ್ರ ಜಿವೋಜಿ ಹಾಗೂ ಪ್ರಾಣಿದಯಾ ಕಾರ್ಯಕರ್ತ ಯೋಗರಾಜ ಎಸ್.ಕೆ. ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಈ ಘಟನೆಯ ಕುರಿತು ಸಮಗ್ರ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು, ಇಲ್ಲದಿದ್ದರೆ ಉಗ್ರ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.

ಈ ಸಂಬಂಧ ಮೋಟಾರು ವಾಹನ ಕಾಯ್ದೆ 1988ರ ಕಲಂ 192(ಎ) ಹಾಗೂ ಪ್ರಾಣಿ ಹಿಂಸೆ ತಡೆ ಕಾಯ್ದೆ 1960ರ ಕಲಂ 11(1)(ಡಿ), 11(1)(ಎ) ಅಡಿ ಪ್ರಕರಣ ದಾಖಲಿಸಲಾಗಿದೆ. ಶ್ವಾನಗಳನ್ನು ಹಿಡಿಯಲು ಆದೇಶ ನೀಡಿದವರು ಯಾರು, ಸ್ಥಳೀಯ ಸಂಸ್ಥೆ ಅಥವಾ ಪಶುಸಂಗೋಪನಾ ಇಲಾಖೆಯ ಅನುಮತಿ ಇತ್ತೇ ಹಾಗೂ ನಿದ್ರಾಜನಕ ಔಷಧಗಳನ್ನು ಬಳಸಲಾಗಿದೆಯೇ ಎಂಬಿತ್ಯಾದಿ ಅಂಶಗಳ ಕುರಿತು ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತುಳುವಿಗೆ ಅಧಿಕೃತ ಮಾನ್ಯತೆ | ಭಾಷಾ ಬೆಳವಣಿಗೆಗೆ ಇಷ್ಟೇ ಸಾಕೇ, ಇನ್ನಷ್ಟು ಬೇಕೇ?

ತುಳು ಭಾಷೆಗೆ ಸಿಗುವ ಹೊಸ ಸ್ಥಾನಮಾನ ಭಾಷಾ ಹೋರಾಟದ ಅಂತಿಮ ಗುರಿಯಾಗಬಾರದು....

ಚಿಕ್ಕಬಳ್ಳಾಪುರ | ದಲಿತರ ಕೇರಿಗೆ ಹೋದರೆ ‘ನಾನು ಸಾಯ್ತೀನಿ’: ಉದ್ಧಟತನ ಮೆರೆದ ಪೂಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯ ಪಿಡಚಲಹಳ್ಳಿ ಗ್ರಾಮದಲ್ಲಿ ದಲಿತರ ಕೇರಿಗೆ ದೇವರ ಮೂರ್ತಿ ಹೋಗುವುದನ್ನು...

ಮೈಸೂರು | ದಸರಾ ವೀಕ್ಷಣೆಗೆ ಗೋಲ್ಡ್ ಕಾರ್ಡ್, ಆನ್ಲೈನ್‌ ಟಿಕೆಟ್ ಬುಕಿಂಗ್‌ ಆರಂಭ

ದಸರಾ ಮಹೋತ್ಸವಕ್ಕೆ ದಿನಗಣನೆ ಆರಂಭವಾಗಿದ್ದು, ಮೈಸೂರು ಜಿಲ್ಲಾಡಳಿತ ಇಂದಿನಿಂದ (ಸೆಪ್ಟೆಂಬರ್ 21)...

ಬಾಗಲಕೋಟೆ | ಗ್ರಾಮ ಒನ್ ಫ್ರಾಂಚೈಸಿಗಳಿಗೆ ಮೂಲಸೌಲಭ್ಯ, ರಕ್ಷಣೆ ನೀಡುವಂತೆ ಆಗ್ರಹ

ಪ್ರಜಾ ಸೇವಾ ಆಂದೋಲನ ಕಾರ್ಯಕ್ರಮಗಳಲ್ಲಿ ಭಾಗವಹಿಸುವ ಗ್ರಾಮ ಒನ್ ಫ್ರಾಂಚೈಸಿಗಳಿಗೆ ಅಗತ್ಯ...