ಹಳಿಯಾಳ | ಅರ್ಹ ಫಲಾನುಭವಿಗಳಿಗೆ ಗೃಹಜ್ಯೋತಿ ಸೌಲಭ್ಯ ತಪ್ಪದಂತೆ ಕ್ರಮವಹಿಸಿ: ಸತೀಶ್ ನಾಯ್ಕ

Date:

ಹಳಿಯಾಳ: ಗೃಹಜ್ಯೋತಿ ಯೋಜನೆಯಡಿ ಅರ್ಹ ಫಲಾನುಭವಿಗಳಿಗೆ 200 ಯೂನಿಟ್‌ವರೆಗೆ ಉಚಿತ ವಿದ್ಯುತ್ ಸೌಲಭ್ಯ ಸಮರ್ಪಕವಾಗಿ ತಲುಪುತ್ತಿರುವುದನ್ನು ಖಚಿತಪಡಿಸಿಕೊಳ್ಳಬೇಕು. ಯೋಜನೆಯ ಪರಿಶೀಲನಾ ಕಾರ್ಯದಲ್ಲಿ ಯಾವುದೇ ಅರ್ಹ ಫಲಾನುಭವಿ ಸೌಲಭ್ಯದಿಂದ ವಂಚಿತರಾಗದಂತೆ ಹೆಸ್ಕಾಂ ಅಧಿಕಾರಿಗಳು ಎಚ್ಚರಿಕೆ ವಹಿಸಬೇಕು ಎಂದು ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಸತೀಶ್ ನಾಯ್ಕ ಸೂಚಿಸಿದರು.

- Advertisement -

ಹಳಿಯಾಳ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ನಡೆದ ಜಿಲ್ಲಾ ಗ್ಯಾರಂಟಿ ಯೋಜನೆಗಳ ಪ್ರಾಧಿಕಾರದ ಮಾಸಿಕ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಗೃಹಜ್ಯೋತಿ ಯೋಜನೆಯಡಿ 2023ರ ಆಗಸ್ಟ್‌ನಿಂದ 2026ರ ಜುಲೈವರೆಗೆ ಮೂರು ವರ್ಷಗಳ ಅವಧಿಯಲ್ಲಿ ಉಚಿತ ವಿದ್ಯುತ್ ಸರಬರಾಜಿಗಾಗಿ ಸರ್ಕಾರವು ಒಟ್ಟು ರೂ.641.45 ಕೋಟಿ ವೆಚ್ಚ ಭರಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಲೈಂಗಿಕ ಕಿರುಕುಳ ಆರೋಪಕ್ಕೆ ಜಾತಿದೌರ್ಜನ್ಯ ಗುರಾಣಿಯೇ? ಸಂತ್ರಸ್ತೆಯ ವಿರುದ್ಧ...

ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್ ಸಮೀಪ ನಡೆದ ಪ್ರತಿಭಟನೆಯಲ್ಲಿ ಮೂವರು ಮಹಿಳಾ ಪತ್ರಕರ್ತೆಯರಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪ ಎದುರಿಸುತ್ತಿರುವ ದೆಹಲಿ ಪೊಲೀಸ್ ಸಹಾಯಕ ಆಯುಕ್ತ (ಎಸಿಪಿ)...

ಚಿಕ್ಕಬಳ್ಳಾಪುರ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟ: ಶಾಸಕ ಪ್ರದೀಪ್ ಈಶ್ವರ್...

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರು ತಾವು ರಾಜಕೀಯಕ್ಕೆ ಬರಲು ಮತ್ತು ಟಿಕೆಟ್ ಪಡೆಯಲು ಚಿಂತಾಮಣಿ ಶಾಸಕ ಹಾಗೂ ಮಾಜಿ ಸಚಿವ ಡಾ. ಎಂ.ಸಿ. ಸುಧಾಕರ್ ಅವರೇ ಕಾರಣ ಎಂದು ಬಹಿರಂಗವಾಗಿ ಹಲವಾರು...

ಬೆವರಿನ ಹಣಕ್ಕೆ ಮೋದಿ ಸರ್ಕಾರದ ಕಂಟಕ: ಹೊಸ ಪಿಎಫ್...

ತಮ್ಮದೇ ಬೆವರಿನ ಗಳಿಕೆ, ತುರ್ತು ಬದುಕಿನ ಆಸರೆ ಪಿಎಫ್. ಆದರೆ ಇಂದು ಆ ಹಣವನ್ನು ಪಡೆಯಲಾಗದೆ ಗಾರ್ಮೆಂಟ್ಸ್ ಕಾರ್ಮಿಕರು ಕಣ್ಣೀರು ಹಾಕುವಂತಾಗಿದೆ. ಬಟ್ಟೆ ಕಾರ್ಖಾನೆಗಳ ಶ್ರಮಿಕರ ಬದುಕಿಗೆ ಕೇಂದ್ರದ ಮೋದಿ ಸರ್ಕಾರದ ಹೊಸ...

ಪ್ರಸ್ತುತ ನಡೆಯುತ್ತಿರುವ ಫಲಾನುಭವಿಗಳ ಮನೆ-ಮನೆ ಪರಿಶೀಲನೆ ಸಂದರ್ಭದಲ್ಲಿ ಅರ್ಹ ಫಲಾನುಭವಿಗಳಿಗೆ ಯೋಜನೆಯ ಸೌಲಭ್ಯ ದೊರೆಯುತ್ತಿರುವ ಕುರಿತು ಸಮಗ್ರವಾಗಿ ಪರಿಶೀಲಿಸಬೇಕು. ಸಾರ್ವಜನಿಕರಿಂದ ದಾಖಲೆಗಳನ್ನು ಸಂಗ್ರಹಿಸುವ ವೇಳೆ ಅಧಿಕಾರಿಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು ಎಂದು ಅವರು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಕಾರವಾರ | ಅಕ್ರಮ ಹಣ ವರ್ಗಾವಣೆ ಆರೋಪ: ಸಿದ್ದಿಕ್ ಖಾನ್‌ಗೆ ಸೇರಿದ ನಾಲ್ಕು ಮನೆಗಳ ಮೇಲೆ ಇಡಿ ದಾಳಿ

ಶಕ್ತಿ ಯೋಜನೆ ಕುರಿತು ಮಾತನಾಡಿದ ಅವರು, ಬಸ್ ನಿಲ್ದಾಣಗಳಲ್ಲಿ ಸಾರ್ವಜನಿಕರಿಗೆ ಅಗತ್ಯ ಮೂಲಸೌಕರ್ಯಗಳನ್ನು ಕಲ್ಪಿಸುವುದರ ಜೊತೆಗೆ ಶೌಚಾಲಯಗಳ ಸ್ವಚ್ಛತೆ ಹಾಗೂ ನಿರ್ವಹಣೆಗೆ ಹೆಚ್ಚಿನ ಆದ್ಯತೆ ನೀಡಬೇಕು. ಈ ಕುರಿತು ಸಂಬಂಧಪಟ್ಟ ಟೆಂಡರ್‌ದಾರರಿಗೆ ಅಗತ್ಯ ಸೂಚನೆಗಳನ್ನು ನೀಡಬೇಕು ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಅನ್ನಭಾಗ್ಯ ಯೋಜನೆಗೆ ಸಂಬಂಧಿಸಿದ ವಿವರಗಳು ಹಾಗೂ ಫಲಾನುಭವಿಗಳ ಪಟ್ಟಿಯನ್ನು ಪರಿಶೀಲಿಸಿ, ಸರ್ವರ್ ಸಮಸ್ಯೆಯಿಂದ ಉಂಟಾಗುತ್ತಿರುವ ತೊಂದರೆಗಳನ್ನು ಶೀಘ್ರವಾಗಿ ಪರಿಹರಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು.

ಯುವನಿಧಿ ಯೋಜನೆಯ ಅಂಕಿ-ಅಂಶಗಳನ್ನು ಪರಿಶೀಲಿಸಿ, ಯೋಜನೆಗೆ ಅರ್ಹರಾಗಿರುವ ಯುವಜನರಿಗೆ ಅಗತ್ಯ ಕೌಶಲ್ಯ ತರಬೇತಿ ದೊರೆಯುವಂತೆ ಕ್ರಮವಹಿಸಬೇಕು ಎಂದು ಸೂಚಿಸಿದರು. ಗೃಹಲಕ್ಷ್ಮಿ ಯೋಜನೆಗೆ ಸಂಬಂಧಿಸಿದಂತೆ ಮೃತಪಟ್ಟ ಫಲಾನುಭವಿಗಳ ಮಾಹಿತಿಯನ್ನು ಸಮರ್ಪಕವಾಗಿ ಪರಿಷ್ಕರಿಸಬೇಕು. ಇದೇ ವೇಳೆ ಇದುವರೆಗೆ ಯೋಜನೆಯಿಂದ ಹೊರಗುಳಿದಿರುವ ಅರ್ಹ ಫಲಾನುಭವಿಗಳ ವಿವರಗಳನ್ನು ಸಂಗ್ರಹಿಸಿ, ಅವರಿಗೆ ಯೋಜನೆಯ ಸೌಲಭ್ಯ ದೊರೆಯುವಂತೆ ಕ್ರಮ ಕೈಗೊಳ್ಳಬೇಕು ಎಂದು ಸತೀಶ್ ನಾಯ್ಕ ತಿಳಿಸಿದರು.

ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಅಲ್ಲಬಕ್ಷ ಮಾತನಾಡಿ, ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳು ಅರ್ಹ ಫಲಾನುಭವಿಗಳಿಗೆ ಪರಿಣಾಮಕಾರಿಯಾಗಿ ತಲುಪುವಂತೆ ಅಧಿಕಾರಿಗಳು ತಮ್ಮ ಕರ್ತವ್ಯವನ್ನು ಜವಾಬ್ದಾರಿಯಿಂದ ನಿರ್ವಹಿಸಬೇಕು ಎಂದು ಸೂಚಿಸಿದರು.

ಸಭೆಯಲ್ಲಿ ಜಿಲ್ಲಾ ಗ್ಯಾರಂಟಿ ಯೋಜನೆಗಳ ಪ್ರಾಧಿಕಾರದ ಉಪಾಧ್ಯಕ್ಷ ನಾಗರಾಜ್ ಮುರ್ಡೇಶ್ವರ, ಪುರುಷೋತ್ತಮ ನಾಯಕ್, ಜನಾರ್ಧನ್ ದೇವಾಡಿಗ, ಹಳಿಯಾಳ ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ವಿಲಾಸರಾಜ್ ಪ್ರಸನ್ನ ಸೇರಿದಂತೆ ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನಾಧಿಕಾರಿಗಳು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ನೆಟ್‌ವರ್ಕ್ ಸಮಸ್ಯೆ ಬಗೆಹರಿಸಿ, ಗ್ರಾಹಕರಿಗೆ ಗುಣಮಟ್ಟದ ಸೇವೆ ನೀಡಿ: ಕೋಟ ಶ್ರೀನಿವಾಸ ಪೂಜಾರಿ

ಬಿ.ಎಸ್.ಎನ್.ಎಲ್. ಸಂಸ್ಥೆಯು ನೆಟ್‌ವರ್ಕ್ ಸಮಸ್ಯೆಗಳನ್ನು ತ್ವರಿತವಾಗಿ ಪರಿಹರಿಸಿ, ಖಾಸಗಿ ಟೆಲಿಕಾಂ ಕಂಪನಿಗಳಿಗೆ...

ಕಾರವಾರ | ಅಕ್ಟೋಬರ್ 16ರಂದು ಹಾರವಾಡದಿಂದ ಮಾಜಾಳಿವರೆಗೆ ಮೀನುಗಾರಿಕೆಗೆ ನಿರ್ಬಂಧ

ಕಾರವಾರ: ಗೌರವಾನ್ವಿತ ಉಪರಾಷ್ಟ್ರಪತಿ ಹಾಗೂ ರಾಜ್ಯಪಾಲರು ಅಕ್ಟೋಬರ್ 16ರಂದು ಉತ್ತರ ಕನ್ನಡ...

ಕೋಲಾರ | 108 ಆಂಬ್ಯುಲೆನ್ಸ್ ನೌಕರರ ನ್ಯಾಯಯುತ ಬೇಡಿಕೆ ಈಡೇರಿಸಿ: ಕೆ.ನಾರಾಯಣಗೌಡ

ಅಪತ್ಬಾಂಧವರೆಂದೇ ಕರೆಯಲಾಗುವ 108 ಆಂಬ್ಯುಲೆನ್ಸ್ ನೌಕರರ ವಿವಿಧ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸುವ...