ಹಳಿಯಾಳ | ಆಸ್ತಿ ವಿವಾದಕ್ಕಾಗಿ ಕೊಲೆ ಮಾಡಿದ್ದ ಮೂವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ

Date:

ಆಸ್ತಿ ಪಾಲು ನೀಡಲು ನಿರಾಕರಿಸಿದ ಕಾರಣಕ್ಕಾಗಿ ವ್ಯಕ್ತಿಯೊಬ್ಬನನ್ನು ಕೊಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ, ಹಳಿಯಾಳ ತಾಲ್ಲೂಕಿನ ಬದ್ರೊಳ್ಳಿಯ ಮೂವರು ಆರೋಪಿಗಳಿಗೆ ಶಿರಸಿಯ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಜೀವಾವಧಿ ಶಿಕ್ಷೆ ಹಾಗೂ ತಲಾ 25,000 ರೂಪಾಯಿ ದಂಡ ವಿಧಿಸಿ ತೀರ್ಪು ನೀಡಿದೆ.

- Advertisement -

ಪ್ರಕರಣದ ಹಿನ್ನೆಲೆ: 2019ರ ಸೆಪ್ಟೆಂಬರ್ 3ರಂದು ಹಳಿಯಾಳ ಪೊಲೀಸ್ ಠಾಣಾ ವ್ಯಾಪ್ತಿಯ ಬದ್ರೆಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿತ್ತು. ಮೃತ ಕೇಶವ ಎಂಬುವವರು ತನ್ನ ಆಸ್ತಿಯಲ್ಲಿ ಪಾಲು ಕೇಳಿದಾಗ, ಪಾಲು ಕೊಡಬಾರದೆಂಬ ಉದ್ದೇಶದಿಂದ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

ಆರೋಪಿಗಳಾದ ಅಕ್ಷಯ್ ಅಲಿಯಾಸ್ ಆಕಾಶ್ ಕಿತ್ತೂರಕರ್, ಪಾಂಡುರಂಗ ಕಿತ್ತೂರಕರ್ ಮತ್ತು ಲತಾ ಅಲಿಯಾಸ್ ತುಳಸಬಾಯಿ ಕಿತ್ತೂರಕರ್ ಅವರು ಪ್ಲಾಸ್ಟಿಕ್ ಹಗ್ಗದಿಂದ ಹೊಡೆದು, ನಂತರ ಕುತ್ತಿಗೆಗೆ ಹಗ್ಗ ಬಿಗಿದು ಕೇಶವ ಅವರನ್ನು ಕೊಲೆ ಮಾಡಿದ್ದರು.

ಈ ಸುದ್ದಿ ಓದಿದ್ದೀರಾ? ಉತ್ತರ ಕನ್ನಡ | ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಕುಮಟಾ ಮತ್ತು ಶಿರಸಿ ತಾಲ್ಲೂಕುಗಳಿಗೆ ಅಗ್ರಸ್ಥಾನ

ಸಾಕ್ಷ್ಯ ನಾಶಪಡಿಸುವ ಉದ್ದೇಶದಿಂದ ಮೃತನ ರಕ್ತಸಿಕ್ತ ಬಟ್ಟೆಗಳನ್ನು ಬದಲಾಯಿಸಿ ಬೇರೆ ಬಟ್ಟೆಗಳನ್ನು ಹಾಕಲಾಗಿತ್ತು. ಈ ಕುರಿತು ಹಳಿಯಾಳ ಪೊಲೀಸ್ ಠಾಣೆಯ ಅಂದಿನ ತನಿಖಾಧಿಕಾರಿ ಬಿ.ಎಸ್. ಲೋಕಾಪುರ ಅವರು ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು.

ನ್ಯಾಯಾಲಯದ ತೀರ್ಪು: ಶಿರಸಿಯ 1ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ (ಕಾರವಾರ, ಪೀಠಾಸೀನ ಯಲ್ಲಾಪುರ) ನ್ಯಾಯಾಧೀಶರಾದ ಶ್ರೀ ಕಿರಣ ಕಿಣಿ ಅವರು ಪ್ರಕರಣದ ವಿಚಾರಣೆ ನಡೆಸಿದರು. ಆರೋಪಿಗಳ ವಿರುದ್ಧ ಅಪರಾಧ ಸಾಬೀತಾದ ಹಿನ್ನೆಲೆಯಲ್ಲಿ ಶಿಕ್ಷೆ ಪ್ರಕಟಿಸಲಾಗಿದೆ

ಅಕ್ಷಯ್ ಅಲಿಯಾಸ್ ಆಕಾಶ್ ಕಿತ್ತೂರಕರ್, ಪಾಂಡುರಂಗ ಕಿತ್ತೂರ್, ಲತಾ ಯಾನೆ ತುಳಸಬಾಯಿ ಕಿತ್ತೂರಕರ್ ಮೂವರಿಗೂ ಜೀವಾವಧಿ ಶಿಕ್ಷೆ ಹಾಗೂ ತಲಾ 25,000 ರೂ. ದಂಡ ವಿಧಿಸಲಾಗಿದೆ. ಪ್ರಕರಣದ 4 ಮತ್ತು 5ನೇ ಆರೋಪಿಗಳ ವಿರುದ್ಧ ಸೂಕ್ತ ಸಾಕ್ಷ್ಯಾಧಾರಗಳು ಲಭ್ಯವಾಗದ ಕಾರಣ ಅವರನ್ನು ಬಿಡುಗಡೆ ಮಾಡಲಾಗಿದೆ.

ಸರ್ಕಾರದ ಪರವಾಗಿ ಪಬ್ಲಿಕ್ ಪ್ರಾಸಿಕ್ಯೂಟರ್ ಶ್ರೀ ರಾಜೇಶ್ ಎಂ. ಮಳಗಿಕರ್ ಅವರು ವಾದ ಮಂಡಿಸಿದ್ದರು. ಹಳಿಯಾಳ ಪೊಲೀಸ್ ಠಾಣೆಯ ಕಾನ್ಸ್‌ಟೇಬಲ್ ಹನುಮಂತ ಬರ್ಗಿ ಅವರು ಸಾಕ್ಷಿದಾರರನ್ನು ಹಾಜರುಪಡಿಸುವಲ್ಲಿ ಸಹಕರಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ ಬಿದ್ದ ಸಮುದಾಯ ಭವನ

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ...

ವಿಜಯಪುರ | ದಸಂಸ ರಾಜ್ಯ ಸಂಘಟನಾ ಸಂಚಾಲಕಿಯಾಗಿ ಪ್ರತಿಭಾ ಹೊಸಮನಿ ಆಯ್ಕೆ

ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್‌ವಾದ) ಚಿಕ್ಕಮಗಳೂರಿನಲ್ಲಿ ಆಯೋಜಿಸಲಾಗಿದ್ದ ರಾಜ್ಯ...

ಮುದ್ದೇಬಿಹಾಳ | ದೆಹಲಿ ಸಭೆಗೂ ಮುನ್ನ ಕಬ್ಬು ಬೆಳೆಗಾರರ ಬೇಡಿಕೆ ಈಡೇರಿಕೆಗೆ ಆಗ್ರಹ

ಕಬ್ಬು ಬೆಳೆಗಾರರಿಗೆ ಪ್ರತಿ ಟನ್‌ಗೆ ₹8,500 ಕನಿಷ್ಠ ಬೆಲೆ ಹಾಗೂ ಹೆಚ್ಚುವರಿಯಾಗಿ...

ಕೃಷ್ಣೆಯ ನೀರು ಕೇಳಲು ತೆಲಂಗಾಣಕ್ಕೆ ನೈತಿಕ ಹಕ್ಕಿಲ್ಲ: ಅಖಂಡ ಕರ್ನಾಟಕ ರೈತ ಸಂಘ

ರಾಜ್ಯದ ರೈತರ ಹಿತಾಸಕ್ತಿಯನ್ನು ಬಲಿಕೊಟ್ಟು ತೆಲಂಗಾಣಕ್ಕೆ ಕೃಷ್ಣೆಯ ನೀರು ಹರಿಸುವುದನ್ನು...