ಹಳಿಯಾಳ | ವರ್ಗಾವಣೆ ಕಮಿಷನ್, ‘ಮಂತ್ಲಿ ಹಪ್ತಾ’ ಕುರಿತ ಆಡಿಯೋ ವೈರಲ್: ಮೂವರು ಪಿಎಸ್‌ಐ ಅಮಾನತು

Date:

ಪೊಲೀಸ್ ಇಲಾಖೆಯ ವರ್ಗಾವಣೆ ವಿಚಾರದಲ್ಲಿ ಹಣದ ವ್ಯವಹಾರ ಹಾಗೂ ಮೇಲಧಿಕಾರಿಗಳಿಗೆ ಮಾಸಿಕವಾಗಿ ‘ಮಂತ್ಲಿ’ ನೀಡುವ ಕುರಿತು ಪಿಎಸ್‌ಐಗಳ ನಡುವೆ ನಡೆದಿದೆಯೆನ್ನಲಾದ ದೂರವಾಣಿ ಸಂಭಾಷಣೆಯ ಆಡಿಯೋ ವೈರಲ್ ಆಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಹಳಿಯಾಳದ ಮೂವರು ಪಿಎಸ್‌ಐಗಳನ್ನು ಅಮಾನತುಗೊಳಿಸಲಾಗಿದೆ.

- Advertisement -

ಹಳಿಯಾಳ ಪೊಲೀಸ್ ಠಾಣೆಯ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಪಿಎಸ್‌ಐ ಕಿರಣ್ ಪಾಟೀಲ್, ಕ್ರೈಂ ವಿಭಾಗದ ಪಿಎಸ್‌ಐ ಕೃಷ್ಣ ಹಾಗೂ ಈ ಹಿಂದೆ ಹಳಿಯಾಳದಲ್ಲಿ ಪಿಎಸ್‌ಐ ಆಗಿ ಕರ್ತವ್ಯ ನಿರ್ವಹಿಸಿದ್ದ ವಿನೋದ್ ರೆಡ್ಡಿ ಅಮಾನತುಗೊಂಡಿರುವ ಅಧಿಕಾರಿಗಳು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕ್ಷಿಪಣಿ ಬಿಡಿಭಾಗಗಳ ಖರೀದಿಯಲ್ಲಿ ಸ್ವಜನಪಕ್ಷಪಾತ; ಬಿಡಿಎಲ್ ಮಾಜಿ ಮುಖ್ಯಸ್ಥನ...

ಕ್ಷಿಪಣಿಯ ಆಪ್ಟಿಕಲ್ ಸೈಟ್‌ಗಳ ಪೂರೈಕೆಗಾಗಿ ಭಾರತ್ ಡೈನಾಮಿಕ್ಸ್ ಲಿಮಿಟೆಡ್ (BDL) ತನ್ನದೇ ಸಂಸ್ಥೆಯ ಮಾಜಿ ಅಧ್ಯಕ್ಷ ಹಾಗೂ ವ್ಯವಸ್ಥಾಪಕ ನಿರ್ದೇಶಕರ (CMD) ಪತ್ನಿಯ ಒಡೆತನದ ಖಾಸಗಿ ಕಂಪನಿಗೆ 'ತುರ್ತು' ನೆಪವೊಡ್ಡಿ 56.8 ಕೋಟಿ...

ನುಡಿ ನಮನ | ಚೆರುವಯಲ್ ರಾಮನ್ – ಭತ್ತದ...

ಕೃಷಿ ಎಂದರೆ ಕೇವಲ ಬೆಳೆ ಬೆಳೆಯುವುದಲ್ಲ; ಬಿತ್ತನೆಗೆ ಸೂಕ್ತವಾದ ಬೀಜಗಳನ್ನು ಆಯ್ಕೆ ಮಾಡುವುದು, ಅವುಗಳನ್ನು ಸಂಗ್ರಹಿಸುವುದು ಹಾಗೂ ಮುಂದಿನ ಋತುವಿಗೆ ಉಳಿಸುವುದೂ ಕೃಷಿಯ ಅವಿಭಾಜ್ಯ ಅಂಗ ಎನ್ನುತ್ತಿದ್ದ ರಾಮನ್, ತಮ್ಮ ಇಡೀ ಜೀವನವನ್ನೇ...

ಬರಗಾಲದ ದಸರಾದಲ್ಲಿ ಕಂಬಳದ ಹಠ: ಜನಾಭಿಪ್ರಾಯಕ್ಕೆ ಬೆಲೆಯಿಲ್ಲವೇ?

ನೀರಿನ ಅಭಾವ, ಪರಿಸರ ನಾಶ, ಸಾರ್ವಜನಿಕ ಹಣದ ವೆಚ್ಚದ ನಡುವೆ ಸರ್ಕಾರದ ಸಮರ್ಥನೆ; ಇತಿಹಾಸದ ಹೆಸರಿನಲ್ಲಿ ವಿವಾದ, ಆಡಳಿತದ ನಡೆಗೆ ಸಾರ್ವಜನಿಕರ ಪ್ರಶ್ನೆ. ರಾಜ್ಯದ ಜನತೆ ಬರಗಾಲದ ಸಂಕಷ್ಟ ಎದುರಿಸುತ್ತಿರುವಾಗ, ರೈತರು ಮಳೆ-ಬೆಳೆಯಿಲ್ಲದೆ ಕಂಗಾಲಾಗಿರುವಾಗ,...

ಈ ಮೂವರ ನಡುವಿನ ದೂರವಾಣಿ ಸಂಭಾಷಣೆ ಎನ್ನಲಾದ ಆಡಿಯೋವೊಂದು ಇತ್ತೀಚೆಗೆ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿತ್ತು. ವಿಶೇಷವಾಗಿ ಜೆಡಿಎಸ್ ಪಕ್ಷದ ಅಧಿಕೃತ ಫೇಸ್‌ಬುಕ್ ಪುಟದಲ್ಲಿ ಈ ಆಡಿಯೋವನ್ನು ಹಂಚಿಕೊಳ್ಳಲಾಗಿದ್ದು, ಬಳಿಕ ಪ್ರಕರಣ ರಾಜ್ಯಮಟ್ಟದಲ್ಲಿ ವ್ಯಾಪಕ ಚರ್ಚೆಗೆ ಗ್ರಾಸವಾಗಿತ್ತು.

ಈ ಸುದ್ದಿ ಓದಿದ್ದೀರಾ? ಕಾರವಾರ | ಕೈಗಾ ರಸ್ತೆಯಲ್ಲಿ ಭಾರಿ ವಾಹನಗಳಿಗೆ ಕಡಿವಾಣ; ಶಾಸಕ ಸತೀಶ ಸೈಲ್, ಜಿಲ್ಲಾಧಿಕಾರಿ ಸ್ಥಳ ಪರಿಶೀಲನೆ

ಆಡಿಯೋದಲ್ಲಿ ಹಳಿಯಾಳ ಠಾಣೆಯ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಪಿಎಸ್‌ಐ ಹುದ್ದೆ ಪಡೆಯಲು ನಡೆದಿದೆಯೆನ್ನಲಾದ ಹಣದ ವ್ಯವಹಾರ ಹಾಗೂ ಪೊಲೀಸ್ ಇಲಾಖೆಯಲ್ಲಿ ಮೇಲಧಿಕಾರಿಗಳಿಗೆ ನೀಡಲಾಗುತ್ತದೆ ಎನ್ನಲಾದ ಮಾಸಿಕ ಹಣದ ಕುರಿತು ಮಾತುಕತೆ ನಡೆದಿರುವುದು ಕೇಳಿಬರುತ್ತದೆ.

ಜೆಡಿಎಸ್‌ನ ಅಧಿಕೃತ ಸಾಮಾಜಿಕ ಜಾಲತಾಣ ಖಾತೆಯಲ್ಲಿ ಆಡಿಯೋ ಪ್ರಕಟವಾದ ಬಳಿಕ ಪ್ರಕರಣ ಸಾರ್ವಜನಿಕ ಹಾಗೂ ರಾಜಕೀಯ ವಲಯದಲ್ಲಿ ಗಮನ ಸೆಳೆದಿತ್ತು. ಪೊಲೀಸ್ ಇಲಾಖೆಯಲ್ಲಿನ ವರ್ಗಾವಣೆ ಹಾಗೂ ‘ಮಂತ್ಲಿ’ ಹಣದ ಕುರಿತಾದ ಆರೋಪಗಳು ಚರ್ಚೆಗೆ ಬಂದ ಹಿನ್ನೆಲೆಯಲ್ಲಿ ಇಲಾಖೆ ಕೂಡ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ.

ಘಟನೆ ಕುರಿತು ವಾಸ್ತವಾಂಶ ತಿಳಿಯಲು ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಕೃಷ್ಣಮೂರ್ತಿ ಅವರ ನೇತೃತ್ವದಲ್ಲಿ ತನಿಖೆಗೆ ಆದೇಶಿಸಲಾಗಿತ್ತು. ಪ್ರಾಥಮಿಕ ಹಂತದ ತನಿಖೆ ನಡೆಸಿದ ಎಎಸ್‌ಪಿ ಕೃಷ್ಣಮೂರ್ತಿ ಅವರು ವರದಿಯನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಸಲ್ಲಿಸಿದ್ದರು.

ಈ ವರದಿಯ ಆಧಾರದ ಮೇಲೆ ಇಲಾಖೆಯ ಶಿಸ್ತು ಮತ್ತು ನಿಯಮ ಉಲ್ಲಂಘನೆಯ ಆರೋಪದ ಹಿನ್ನೆಲೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ.ಎನ್. ದೀಪನ್ ಅವರು ಕಿರಣ್ ಪಾಟೀಲ್, ಕೃಷ್ಣ ಹಾಗೂ ವಿನೋದ್ ರೆಡ್ಡಿ ಅವರನ್ನು ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಇಲಾಖಾ ತನಿಖೆ ಮುಂದುವರಿಯಲಿದ್ದು, ವೈರಲ್ ಆಗಿರುವ ಆಡಿಯೋದಲ್ಲಿನ ಮಾತುಕತೆಯ ಸತ್ಯಾಸತ್ಯತೆ ಸೇರಿದಂತೆ ವಿವಿಧ ಅಂಶಗಳನ್ನು ತನಿಖೆಯ ವೇಳೆ ಪರಿಶೀಲಿಸುವ ಸಾಧ್ಯತೆಯಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೈಸೂರು | ‘SIR’ ವಿರುದ್ಧ ಮಾನಸಗಂಗೋತ್ರಿಯಲ್ಲಿ ಪ್ರತಿಭಟನಾ ಜಾಥಾ

ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯನ್ನು ವಿರೋಧಿಸಿ, ಸಂವಿಧಾನದ...

ಕಂಬಳ, ತುಳುನಾಡಿನ ಟ್ಯಾಬ್ಲೋ ಈ ಬಾರಿಯ ಮೈಸೂರು ದಸರಾದ ಭಾಗವಾಗಿವೆ: ಸಿಎಂ ಡಿ ಕೆ ಶಿವಕುಮಾರ್

“ಕರಾವಳಿಯ ಕಂಬಳ, ತುಳುನಾಡಿನ ಟ್ಯಾಬ್ಲೋ ಈ ಬಾರಿಯ ಮೈಸೂರು ದಸರಾದ ಭಾಗವಾಗಿವೆ”...

ಕೋಲಾರ | ಟಾಟಾ ಎಲೆಕ್ಟ್ರಾನಿಕ್ಸ್‌ನಲ್ಲಿ ಮಹಿಳಾ ಕಾರ್ಮಿಕರ ಸಾವು: ಸಮಗ್ರ ತನಿಖೆಗೆ ಸಿಐಟಿಯು ಒತ್ತಾಯ

ನರಸಾಪುರ ಕೈಗಾರಿಕಾ ಪ್ರದೇಶದ ಟಾಟಾ ಎಲೆಕ್ಟ್ರಾನಿಕ್ಸ್ ಕಂಪನಿಯಲ್ಲಿ ಮಹಿಳಾ ಕಾರ್ಮಿಕರ ಸಾವಿನ...

ಮಹಿಳೆಯರ ಸ್ವಾವಲಂಬನೆಗೆ ಬಿ.ಎಸ್ ಡಬ್ಲ್ಯೂ ಹೊಲಿಗೆ ತರಬೇತಿ ಶಿಬಿರ ಪೂರಕ: ರಾಮಕೃಷ್ಣ

"ಮಹಿಳೆಯರು ಕೌಶಲ್ಯಾಧಾರಿತ ತರಬೇತಿಯನ್ನು ಪಡೆದು ಆರ್ಥಿಕವಾಗಿ ಸ್ವಾವಲಂಬಿಗಳಾಗಲು ಉಚಿತ ಹೊಲಿಗೆ ತರಬೇತಿ...