ಹಳಿಯಾಳ | ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣವಿದ್ದ ಪರ್ಸ್‌ ವಾರಸುದಾರರಿಗೆ ತಲುಪಿಸಿ ಪ್ರಾಮಾಣಿಕತೆ ಮೆರೆದ ಮಹಿಳೆ

Date:

ಹಳಿಯಾಳ: ರಸ್ತೆಯಲ್ಲಿ ದೊರೆತ ಚಿನ್ನಾಭರಣ ಹಾಗೂ ನಗದು ಹೊಂದಿದ್ದ ಪರ್ಸ್‌ನ್ನು ಪೊಲೀಸರಿಗೆ ಒಪ್ಪಿಸಿ, ಅದರ ವಾರಸುದಾರರಿಗೆ ತಲುಪುವಂತೆ ಮಾಡಿದ ಗೋಲಹಳ್ಳಿ ಗ್ರಾಮದ ಶಾನುಬಿ ಮಮ್ಮದ್ ಹನಿಫ್ ಅವರ ಪ್ರಾಮಾಣಿಕತೆಗೆ ಸಾರ್ವಜನಿಕರಿಂದ ಮೆಚ್ಚುಗೆ ವ್ಯಕ್ತವಾಗಿದೆ.

- Advertisement -

ಮುಂಡವಾಡ ಗ್ರಾಮದ ಬಸ್ ನಿಲ್ದಾಣದ ಸಮೀಪ ಮಂಗಳವಾಡ ಗ್ರಾಮದ ಸುಶೀಲಾ ವಾಲೇಕರ್ ಅವರು ಸೆ.22ರಂದು ತಮ್ಮ ಬ್ಯಾಗ್‌ನಲ್ಲಿದ್ದ ಪರ್ಸ್‌ ಕಳೆದುಕೊಂಡಿದ್ದರು. ಪರ್ಸ್‌ನಲ್ಲಿ ಆಧಾರ್ ಕಾರ್ಡ್, ಸುಮಾರು ₹2.50 ಲಕ್ಷ ಮೌಲ್ಯದ ಚಿನ್ನಾಭರಣ, ₹550 ನಗದು ಸೇರಿದಂತೆ ವಿವಿಧ ದಾಖಲೆಗಳು ಹಾಗೂ ವಸ್ತುಗಳಿದ್ದವು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

11 ವರ್ಷಗಳ ಬಳಿಕ ಅಮೆರಿಕಕ್ಕೆ ಜಿನ್‌ಪಿಂಗ್‌; ಸ್ವಾಗತಕ್ಕೆ ಖುದ್ದು...

ಬರೋಬ್ಬರಿ 11 ವರ್ಷಗಳ ಬಳಿಕ ಅಮೆರಿಕಕ್ಕೆ ಕಾಲಿಟ್ಟಿರುವ ಚೀನಾ ಅಧ್ಯಕ್ಷ ಷಿ ಜಿನ್‌ಪಿಂಗ್‌ ಅವರನ್ನು ಖುದ್ದು ತೆರಳಿ ಸ್ವಾಗತಿಸಿದ ಟ್ರಂಪ್‌, ಶ್ವೇತಭವನದಲ್ಲಿ ಅದ್ದೂರಿ ಸರ್ಕಾರಿ ಔತಣ ಆಯೋಜಿಸಿದ್ದಾರೆ. AI, ಅತ್ಯಾಧುನಿಕ ಚಿಪ್‌ಗಳು, ರೇರ್‌...

ದೆಹಲಿಯಲ್ಲಿ ಮತದಾರರ ಪಟ್ಟಿಯಿಂದ 47 ಲಕ್ಷ ಜನರ ಕೈಬಿಟ್ಟ...

ದೇಶದ ರಾಜಧಾನಿ ದೆಹಲಿಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ (SIR) ನೆಪದಲ್ಲಿ ಲಕ್ಷಾಂತರ ಜನರನ್ನು ಮತದಾನದ ಹಕ್ಕಿನಿಂದ ವಂಚಿತರನ್ನಾಗಿಸುತ್ತಿರುವ ಅತ್ಯಂತ ಆಘಾತಕಾರಿ ಸತ್ಯವೊಂದು ಇದೀಗ ಬಯಲಾಗಿದೆ. ಪ್ರಜಾಪ್ರಭುತ್ವದ ಅಡಿಪಾಯವನ್ನೇ ಅಲುಗಾಡಿಸುತ್ತಿರುವ ಈ ಗಂಭೀರವಾದ ವಿಷಯವನ್ನು...

‘ಹಾಸ್ಟೆಲ್‌’ ಇಲ್ಲದ ಶಿಕ್ಷಣದ ಸ್ವರೂಪ ಹೇಗಿರಲಿದೆ?

ಸಾಮಾನ್ಯವಾಗಿ ʼಶಿಕ್ಷಣʼ ಎಂದರೆ ʼತರಗತಿ, ಪಠ್ಯಪುಸ್ತಕ ಮತ್ತು ಪರೀಕ್ಷೆಗಳʼ ಸುತ್ತ ಹೆಣೆದುಕೊಂಡಿರುವ ಕಲ್ಪನೆ. ಆದರೆ ಒಬ್ಬ ವಿದ್ಯಾರ್ಥಿ ದಿನದ ಬಹುಪಾಲು ಕಳೆಯುವ ಜಾಗ ʼಹಾಸ್ಟೆಲ್‌ʼ. ಹೆಚ್ಚಾಗಿ ಚರ್ಚೆಗೆ ಬಾರದ ಈ ʼಹಾಸ್ಟೆಲ್‌ʼ ಎಂಬ...

ಈ ಸುದ್ದಿ ಓದಿದ್ದೀರಾ? ಮುಂಡಗೋಡ | ‘SIR ಪರಿಶೋಧನೆ–ಪ್ರತಿರೋಧ ಪ್ರವಾಸ’ಕ್ಕೆ ಚಾಲನೆ: ಮತದಾನದ ಹಕ್ಕು ರಕ್ಷಣೆಗೆ ಜನಪರ ಹೋರಾಟ

ಈ ಪರ್ಸ್ ಶಾನುಬಿ ಅವರಿಗೆ ಸಿಕ್ಕಿದ್ದು, ಅದರಲ್ಲಿದ್ದ ಬೆಲೆಬಾಳುವ ವಸ್ತುಗಳನ್ನು ಗಮನಿಸಿದ ಅವರು ಅದನ್ನು ತಮ್ಮ ಬಳಿ ಇಟ್ಟುಕೊಳ್ಳದೆ ನೇರವಾಗಿ ಹಳಿಯಾಳ ಪೊಲೀಸ್ ಠಾಣೆಗೆ ತೆರಳಿ ಪೊಲೀಸರಿಗೆ ಹಸ್ತಾಂತರಿಸಿದ್ದಾರೆ.

ಶಾನುಬಿ ಅವರ ಪ್ರಾಮಾಣಿಕತೆಯನ್ನು ಶ್ಲಾಘಿಸಿದ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿ ಅವರನ್ನು ಗೌರವಿಸಿ ಅಭಿನಂದಿಸಿದರು. ಬಳಿಕ ಪರ್ಸ್‌ನಲ್ಲಿದ್ದ ವಸ್ತುಗಳನ್ನು ಪರಿಶೀಲಿಸಿ, ಅವುಗಳ ವಾರಸುದಾರರಾದ ಸುಶೀಲಾ ವಾಲೇಕರ್ ಅವರಿಗೆ ಚಿನ್ನಾಭರಣ, ನಗದು ಹಾಗೂ ದಾಖಲೆಗಳನ್ನು ಹಸ್ತಾಂತರಿಸಲಾಯಿತು.

ಬೆಲೆಬಾಳುವ ವಸ್ತುಗಳು ದೊರೆತಿದ್ದರೂ ಅವುಗಳನ್ನು ಸ್ವಂತಕ್ಕೆ ಬಳಸಿಕೊಳ್ಳದೆ ವಾರಸುದಾರರಿಗೆ ತಲುಪಿಸುವಲ್ಲಿ ನೆರವಾದ ಶಾನುಬಿ ಮಮ್ಮದ್ ಹನಿಫ್ ಅವರ ನಡೆಗೆ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮುಂಡಗೋಡ | ‘SIR ಪರಿಶೋಧನೆ–ಪ್ರತಿರೋಧ ಪ್ರವಾಸ’ಕ್ಕೆ ಚಾಲನೆ: ಮತದಾನದ ಹಕ್ಕು ರಕ್ಷಣೆಗೆ ಜನಪರ ಹೋರಾಟ

ಮುಂಡಗೋಡ: ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕುರಿತು...

ಹಾವೇರಿ | ಹತ್ತು ತಾಸು ವಿದ್ಯುತ್ ಕೊಡಲು ರೈತ ಸಂಘ ಮನವಿ

ಬೊಮ್ಮನಹಳ್ಳಿ ಗ್ರೀಡ್ ನಿಂದ ರೈತರ ಬೋರ್ ವೆಲ್ ಪಂಪ್ಲೆಟ್ಟುಗಳಿಗೆ ಸರಿಯಾಗಿ ವಿದ್ಯುತ್...

ಧಾರವಾಡ | ಸೆ. 27ಕ್ಕೆ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ಕುಂದುಕೊರತೆ ಸಭೆ

ಜಿಲ್ಲಾ ಮಟ್ಟದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಮುಖಂಡರುಗಳ ಕುಂದುಕೊರತೆಗಳ...