ಹಂಪಿ ಉತ್ಸವ | ಪೌರ ಕಾರ್ಮಿಕರಿಗೆ VIP ಪಾಸ್‌ ಕೊಟ್ಟು, ಸ್ವಾಗತಿಸಿದ ಜಿಲ್ಲಾಧಿಕಾರಿ!

Date:

ವಿಜಯ ನಗರ ಜಿಲ್ಲೆಯ ಹಂಪಿಯಲ್ಲಿ ನಡೆಯಲಿರುವ ‘ಹಂಪಿ ಉತ್ಸವ’ಕ್ಕೆ ಪೌರ ಕಾರ್ಮಿಕರನ್ನು ಖುದ್ದು ಜಿಲ್ಲಾಧಿಕಾರಿಯೇ ಭೇಟಿಯಾಗಿ, ವಿಐಪಿ ಪಾಸ್‌ ನೀಡಿ ಸ್ವಾಗತಿಸಿದ್ದಾರೆ.

- Advertisement -

ವಿಜಯ ನಗರ ಜಿಲ್ಲಾಧಿಕಾರಿ ಎಂ.ಎಸ್‌ ದಿವಾಕರ ಅವರು ಗುರುವಾರ ಹೊಸಪೇಟೆ ಪಟ್ಟಣದಲ್ಲಿರುವ ಪೌರ ಕಾರ್ಮಿಕರ ಮನೆಗಳಿಗೆ ಭೇಟಿ ನೀಡಿದ್ದರು. ಪೌರ ಕಾರ್ಮಿಕರು ಮತ್ತು ಅವರ ಕುಟುಂಬಸ್ಥರಿಗೆ ಸುಮಾರು 2,000 ವಿಐಪಿ ಪಾಸ್‌ಗಳನ್ನು ಕೊಟ್ಟು, ಉತ್ಸವಕ್ಕೆ ಆಹ್ವಾನಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

“ಹಬ್ಬದ ದಿನಗಳೂ ಸೇರಿದಂತೆ ಪ್ರತಿನಿತ್ಯ ನಗರವನ್ನು ಸ್ವಚ್ಛವಾಗಿಡುವ ಕಾಯಕದಲ್ಲಿ ಪೌರ ಕಾರ್ಮಿಕರು ತೊಡಗಿದ್ದಾರೆ. ಅವರನ್ನು ನಾವು ಗೌರವಿಸಬೇಕು. ಈ ಬಾರಿಯ ಹಂಪಿ ಉತ್ಸವದಲ್ಲಿ ಪೌರ ಕಾರ್ಮಿಕರಿಗಾಗಿ ಪ್ರತ್ಯೇಕ ಗ್ಯಾಲರಿಯನ್ನು ನಿರ್ಮಿಸಿದ್ದೇವೆ. ಅವರೆಲ್ಲರೂ ಎಲ್ಲ ಮನರಂಜನೆ ಮತ್ತು ಕಾರ್ಯಕ್ರಮಗಳನ್ನು ಹತ್ತಿರದಿಂದ ವೀಕ್ಷಿಸಲು ಸಾಧ್ಯವಾಗುವಂತೆ ಮಾಡಿದ್ದೇವೆ” ಎಂದು ಜಿಲ್ಲಾಧಿಕಾರಿ ದಿವಾಕರ ತಿಳಿಸಿದ್ದಾರೆ.

“ಹಂಪಿ ಉತ್ಸವದ ಯಶಸ್ಸಿಗಾಗಿಯೂ ಸುಮಾರು 500ಕ್ಕೂ ಹೆಚ್ಚು ಕಾರ್ಮಿಕರು ದುಡಿಯುತ್ತಿದ್ದಾರೆ. ಆದರೆ, ಅವರಲ್ಲಿ ಹಲವರು ತಮ್ಮ ಕುಟುಂಬ ಸದಸ್ಯರೊಂದಿಗೆ ಕಾರ್ಯಕ್ರಮಗಳನ್ನು ವೀಕ್ಷಿಸಲು ಸಾಧ್ಯವಾಗುತ್ತಿಲ್ಲ. ಹೀಗಾಗಿ, ಅವರಿಗೆ ವಿಐಪಿ ಪಾಸ್‌ ನೀಡಿ, ಕುಟುಂಬದೊಂದಿಗೆ ಕಾರ್ಯಕ್ರಮಗಳನ್ನು ನೋಡಲು ಸಾಧ್ಯವಾಗುವಂತೆ ಮಾಡಿದ್ದೇವೆ. ಇದು ಅವರಿಗೆ ಜಿಲ್ಲಾಡಳಿತದಿಂದ ನೀಡುವ ಗೌರವವಾಗಿದೆ” ಎಂದು ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಾರ್ಮಿಕರು ಹಕ್ಕು ಮತ್ತು ಸೌಲಭ್ಯಗಳಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಟಿ.ಎಂ. ಶಾಹಿದ್ ತೆಕ್ಕಿಲ್

ಕಾರ್ಮಿಕರ ಹಿತಾಸಕ್ತಿಯನ್ನು ಕಾಪಾಡುವುದರೊಂದಿಗೆ ಸರ್ಕಾರದ ಕಲ್ಯಾಣ ಕಾರ್ಯಕ್ರಮಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ...

ಬಾಗೇಪಲ್ಲಿಯಲ್ಲಿ ರಸ್ತೆ ಅಪಘಾತ:ರೈತ ನಂಜಪ್ಪ ಸಾವು

ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದು ದ್ವಿಚಕ್ರ ವಾಹನದಲ್ಲಿ ಹೊಲಕ್ಕೆ ತೆರಳುತ್ತಿದ್ದ ನಡಂಪಲ್ಲಿ...

ಮಂಗಳೂರು | ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣ: ಆರೋಪಿಗಳ ಜಾಮೀನು ರದ್ದುಪಡಿಸಿದ ಸುಪ್ರೀಂ ಕೋರ್ಟ್

ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣದಲ್ಲಿ ಆರೋಪಿಗಳಿಗೆ ಇತ್ತೀಚೆಗೆ ನ್ಯಾಯಾಲಯ ಜಾಮೀನು ನೀಡಿತ್ತು....

ಕೋಲಾರ | ಚೈನಾ ಶಾಂಘೈನಲ್ಲಿ ಕನ್ನಡದ ಮೊದಲ ಜಾನಪದ ಕಾರ್ಯಕ್ರಮ: ಗೋ.ನಾ. ಸ್ವಾಮಿ ಭಾಗಿ

ಚೈನಾ ದೇಶದ ಶಾಂಘೈನಲ್ಲಿ ಕನ್ನಡಿಗರ ಸಂಘದ ವತಿಯಿಂದ ಆಯೋಜಿಸಿದ್ದ ಕನ್ನಡದ ಮೊದಲ...