ಹೊಸ ವರ್ಷದ ಶುಭಾಶಯಗಳು ಕೋರುವ ಹಾನಿಕಾರಕ ಲಿಂಕ್ ಮತ್ತು ಎಪಿಕೆ ಫೈಲ್‌ಗಳ ಕುರಿತು ಮುನ್ನೆಚ್ಚರಿಕೆ ವಹಿಸಬೇಕೆಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ್ ಗುಂಟಿ ಹೇಳಿದ್ದಾರೆ.
‘2025ನೇ ಹೊಸ ವರ್ಷದ ಸಂದರ್ಭವನ್ನು ಬಳಸಿಕೊಂಡು ಸೈಬರ್ ಕ್ರಿಮಿನಲ್‌ಗಳು ಸಾರ್ವಜನಿಕರ ಮೊಬೈಲ್‌ಗಳಿಗೆ ಹಾನಿಕಾರಕ ಲಿಂಕ್ ಮತ್ತು ಎಪಿಕೆ ಫೈಲ್‌ಗಳನ್ನು ಕಳುಹಿಸಿ ಮೊಬೈಲ್‌ಗಳನ್ನು ಹ್ಯಾಕ್ ಮಾಡುವ ಸಾಧ್ಯತೆ ಇರುತ್ತದೆ. ನಂತರ ಹ್ಯಾಕ್ ಮಾಡಿದ ಮೊಬೈಲ್‌ನಿಂದ ವಾಟ್ಸಾಪ್ ಸೇರಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ಹಾನಿಕಾರಕ ಲಿಂಕ್ ಮತ್ತು ಎಪಿಕೆ ಫೈಲ್‌ಗಳನ್ನು ದೊಡ್ಡಮಟ್ಟದಲ್ಲಿ ಶೇರ್ ಮಾಡುವ ಸಾಧ್ಯತೆ ಇರುತ್ತದೆ’ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
‘ಸಾರ್ವಜನಿಕರು ಈ ರೀತಿಯ ಹೊಸ ವರ್ಷದ ಶುಭಾಶಯ ಕೋರುವ ಯಾವುದೇ ಹಾನಿಕಾರಕ ಲಿಂಕ್ ಮತ್ತು ಎಪಿಕೆ ಫೈಲ್‌ಗಳನ್ನು ವಾಟ್ಸಾಪ್ ಸೇರಿದಂತೆ ಯಾವುದೇ ಸಾಮಾಜಿಕ ಜಾಲತಾಣದಲ್ಲಿ ಬಂದಲ್ಲಿ ಅದನ್ನು ತಕ್ಷಣ ಡಿಲೀಟ್ ಮಾಡಿರಿ. ಯಾವುದೇ ಕಾರಣಕ್ಕೂ ಸದರಿ ಹಾನಿಕರ ಲಿಂಕ್ ಮತ್ತು ಎಪಿಕೆ ಫೈಲ್‌ಗಳನ್ನು ಕ್ಲಿಕ್ ಮಾಡಬೇಡಿ, ಯಾರಿಗೂ ಶೇರ್ ಮಾಡಬೇಡಿ’ ಎಂದು ಎಚ್ಚರಿಕೆ ನೀಡಿದ್ದಾರೆ.
ಹಾನಿಕಾರಕ ಲಿಂಕ್ ಮತ್ತು ಎಪಿಕೆ ಫೈಲ್‌ಗಳನ್ನು ಯಾವುದಾದರೂ ವಾಟ್ಸಾಪ್ ಗ್ರೂಪ್ ಗಳಿಗೆ ನಿಮ್ಮ ಪರಿಚಿತ ವಾಟ್ಸಾಪ್ ಸಂಖ್ಯೆಯಿಂದಲೇ ಪೋಸ್ಟ್ ಮಾಡಿದಲ್ಲಿ ಸದರಿ ಗ್ರೂಪ್ ಅಡ್ಮಿನ್‌ಗಳು ಅಂತಹ ಲಿಂಕ್ ಮತ್ತು ಎಪಿಕೆ ಫೈಲ್‌ಗಳನ್ನು ಪರಿಶೀಲಿಸಿ ಕೂಡಲೇ ಡಿಲೀಟ್ ಮಾಡುವಂತೆ ಸಲಹೆ ನೀಡಿದ್ದಾರೆ.
ಈ ಸುದ್ದಿ ಓದಿದ್ದೀರಾ? ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣ ತನಿಖೆ ಸಿಐಡಿಗೆ: ಗೃಹ ಸಚಿವ ಪರಮೇಶ್ವರ್
ಯಾವುದೇ ಸೈಬರ್ ಕ್ರೈಂ ಅಪರಾಧಕ್ಕೆ ಒಳಗಾದಲ್ಲಿ ಕೂಡಲೇ 1930 ಸಂಖ್ಯೆಗೆ ಕರೆ ಮಾಡಿ ಅಥವಾ www.cybercrime.gov.in ಈ ವೆಬ್ಸೈಟ್‌ನಲ್ಲಿ ದೂರು ದಾಖಲಿಸಿ ಎಂದು ಎಸ್ಪಿ ಪ್ರದೀಪ ಗುಂಟಿ ಮನವಿ ಮಾಡಿದ್ದಾರೆ.