ಬೀದರ್ | ಹೊಸ ವರ್ಷಾಚರಣೆ : ಶುಭ ಕೋರುವ APK ಫೈಲ್ ಕ್ಲಿಕ್ಕಿಸಬೇಡಿ : ಎಸ್ಪಿ ಪ್ರದೀಪ್ ಗುಂಟಿ

Date:

ಹೊಸ ವರ್ಷದ ಶುಭಾಶಯಗಳು ಕೋರುವ ಹಾನಿಕಾರಕ ಲಿಂಕ್ ಮತ್ತು ಎಪಿಕೆ ಫೈಲ್‌ಗಳ ಕುರಿತು ಮುನ್ನೆಚ್ಚರಿಕೆ ವಹಿಸಬೇಕೆಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ್ ಗುಂಟಿ ಹೇಳಿದ್ದಾರೆ.

- Advertisement -

‘2025ನೇ ಹೊಸ ವರ್ಷದ ಸಂದರ್ಭವನ್ನು ಬಳಸಿಕೊಂಡು ಸೈಬ‌ರ್ ಕ್ರಿಮಿನಲ್‌ಗಳು ಸಾರ್ವಜನಿಕರ ಮೊಬೈಲ್‌ಗಳಿಗೆ ಹಾನಿಕಾರಕ ಲಿಂಕ್ ಮತ್ತು ಎಪಿಕೆ ಫೈಲ್‌ಗಳನ್ನು ಕಳುಹಿಸಿ ಮೊಬೈಲ್‌ಗಳನ್ನು ಹ್ಯಾಕ್ ಮಾಡುವ ಸಾಧ್ಯತೆ ಇರುತ್ತದೆ. ನಂತರ ಹ್ಯಾಕ್ ಮಾಡಿದ ಮೊಬೈಲ್‌ನಿಂದ ವಾಟ್ಸಾಪ್ ಸೇರಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ಹಾನಿಕಾರಕ ಲಿಂಕ್ ಮತ್ತು ಎಪಿಕೆ ಫೈಲ್‌ಗಳನ್ನು ದೊಡ್ಡಮಟ್ಟದಲ್ಲಿ ಶೇರ್ ಮಾಡುವ ಸಾಧ್ಯತೆ ಇರುತ್ತದೆ’ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

‘ಸಾರ್ವಜನಿಕರು ಈ ರೀತಿಯ ಹೊಸ ವರ್ಷದ ಶುಭಾಶಯ ಕೋರುವ ಯಾವುದೇ ಹಾನಿಕಾರಕ ಲಿಂಕ್‌ ಮತ್ತು ಎಪಿಕೆ ಫೈಲ್‌ಗಳನ್ನು ವಾಟ್ಸಾಪ್ ಸೇರಿದಂತೆ ಯಾವುದೇ ಸಾಮಾಜಿಕ ಜಾಲತಾಣದಲ್ಲಿ ಬಂದಲ್ಲಿ ಅದನ್ನು ತಕ್ಷಣ ಡಿಲೀಟ್ ಮಾಡಿರಿ. ಯಾವುದೇ ಕಾರಣಕ್ಕೂ ಸದರಿ ಹಾನಿಕರ ಲಿಂಕ್ ಮತ್ತು ಎಪಿಕೆ ಫೈಲ್‌ಗಳನ್ನು ಕ್ಲಿಕ್‌ ಮಾಡಬೇಡಿ, ಯಾರಿಗೂ ಶೇರ್ ಮಾಡಬೇಡಿ’ ಎಂದು ಎಚ್ಚರಿಕೆ ನೀಡಿದ್ದಾರೆ.

ಹಾನಿಕಾರಕ ಲಿಂಕ್ ಮತ್ತು ಎಪಿಕೆ ಫೈಲ್‌ಗಳನ್ನು ಯಾವುದಾದರೂ ವಾಟ್ಸಾಪ್ ಗ್ರೂಪ್‌ ಗಳಿಗೆ ನಿಮ್ಮ ಪರಿಚಿತ ವಾಟ್ಸಾಪ್ ಸಂಖ್ಯೆಯಿಂದಲೇ ಪೋಸ್ಟ್ ಮಾಡಿದಲ್ಲಿ ಸದರಿ ಗ್ರೂಪ್ ಅಡ್ಮಿನ್‌ಗಳು ಅಂತಹ ಲಿಂಕ್ ಮತ್ತು ಎಪಿಕೆ ಫೈಲ್‌ಗಳನ್ನು ಪರಿಶೀಲಿಸಿ ಕೂಡಲೇ ಡಿಲೀಟ್ ಮಾಡುವಂತೆ ಸಲಹೆ ನೀಡಿದ್ದಾರೆ.

ಈ ಸುದ್ದಿ ಓದಿದ್ದೀರಾ? ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣ ತನಿಖೆ ಸಿಐಡಿಗೆ: ಗೃಹ ಸಚಿವ ಪರಮೇಶ್ವರ್

ಯಾವುದೇ ಸೈಬರ್ ಕ್ರೈಂ ಅಪರಾಧಕ್ಕೆ ಒಳಗಾದಲ್ಲಿ ಕೂಡಲೇ 1930 ಸಂಖ್ಯೆಗೆ ಕರೆ ಮಾಡಿ ಅಥವಾ www.cybercrime.gov.in ಈ ವೆಬ್ಸೈಟ್‌ನಲ್ಲಿ ದೂರು ದಾಖಲಿಸಿ ಎಂದು ಎಸ್ಪಿ ಪ್ರದೀಪ ಗುಂಟಿ ಮನವಿ ಮಾಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾವೇರಿ | ನಾಳೆ ಜಿಲ್ಲಾ ಮಟ್ಟದ ಕಾರ್ಯಾಗಾರ

ಸಾವಯವ ಹಾಗೂ ನೈಸರ್ಗಿಕ ಕೃಷಿ ಪದ್ಧತಿಯನ್ನು ಉತ್ತೇಜಿಸುವ ಜೊತೆಗೆ ರೈತರು ಬೆಳೆಯುವ...

ಬೀದರ್‌ | ಪಿಸ್ತೂಲ್‌ ಮಾರಾಟ ಜಾಲ ಪತ್ತೆ ಹಚ್ಚಿದ ಪೊಲೀಸರು: ಮುಖ್ಯ ಆರೋಪಿ ಸೇರಿ ನಾಲ್ವರ ಬಂಧನ

ಅಕ್ರಮವಾಗಿ ಪಿಸ್ತೂಲ್‌ ಹಾಗೂ ಜೀವಂತ ಗುಂಡುಗಳನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದ ದಂಧೆಕೋರರನ್ನು...

ಶಿರಸಿ | ರಾಜೇಂದ್ರ ಸಿರ್ಸಿಕರ್‌ಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಗೌರವ

ಶಿರಸಿ: ಪ್ರಾಣಿ-ಪಕ್ಷಿಗಳ ರಕ್ಷಣೆ ಮತ್ತು ಪುನರ್ವಸತಿ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿರಸಿಯ ರಾಜೇಂದ್ರ...

ಧಾರವಾಡ | ಪೊಲೀಸ್ ಹೆಸರೇಳಿ ರೂ. 15,700 ವಂಚನೆ: ನಾಲ್ಕು ಬೈಕ್‍ಗಳು ನಗದು ವಶ

ಪೊಲೀಸ್ ಹೆಸರೇಳಿ ವ್ಯಕ್ತಿಯೊಬ್ಬರಿಂದ ₹15,700 ಹಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ...