ಬೀದರ್‌ | ಶಿಕ್ಷಕರ ಪರಿಶ್ರಮ ವಿದ್ಯಾರ್ಥಿಗಳ ಏಳಿಗೆಯಲ್ಲಿ ಅಡಗಿದೆ : ನಾಗೇಶ ಸ್ವಾಮಿ

Date:

Advertisements

ಶಿಕ್ಷಕರ ಪರಿಶ್ರಮ ವಿದ್ಯಾರ್ಥಿಗಳ ಏಳಿಗೆಯಲ್ಲಿ ಅಡಗಿದೆ. ಮಕ್ಕಳು ಸಮಾಜದಲ್ಲಿ ಉತ್ತಮ ಪ್ರಜೆಗಳಾಗಿ ವ್ಯಕ್ತಿತ್ವ ರೂಪಿಸಿಕೊಳ್ಳಬೇಕಾದರೆ ಶಿಕ್ಷಕರ ಪಾತ್ರ ಬಹುಮುಖ್ಯವಾಗಿದೆ ಎಂದು ಸ್ಪರ್ಧಾ ಸಂಕಲ್ಪ ಅಕಾಡೆಮಿ ಮುಖ್ಯಸ್ಥ ನಾಗೇಶ ಸ್ವಾಮಿ ಮಸ್ಕಲ್‌ ಹೇಳಿದರು.

ಬೀದರ್ ನಗರದ ಸ್ಪರ್ಧಾ ಸಂಕಲ್ಪ ಅಕಾಡೆಮಿಯ ಸಭಾಂಗಣದಲ್ಲಿ ಕರ್ನಾಟಕ ರಾಜ್ಯ ಶಿಕ್ಷಕರ ವಿಕಾಸ ಪರಿಷತ್ ಹಾಗೂ ಸ್ಪರ್ಧಾ ಸಂಕಲ್ಪ ಅಕಾಡೆಮಿ ಸಹಯೋಗದಲ್ಲಿ ಜರುಗಿದ ರಾಷ್ಟ್ರೀಯ ಶಿಕ್ಷಕರ ದಿನಾಚರಣೆ ಮತ್ತು ಗುರುವಂದನಾ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಮಾತನಾಡಿದರು.

ʼಶಿಕ್ಷಕರು ಮಕ್ಕಳಿಗೆ ಗುಣಮಟ್ಟ ಶಿಕ್ಷಣ ಜತೆಗೆ ವಿನಯಶೀಲತೆ, ಆತ್ಮವಿಶ್ವಾಸ, ಸಂಸ್ಕಾರ ಹಾಗೂ ಗುರು-ಹಿರಿಯರನ್ನು ಗೌರವಿಸುವುದು ಕಲಿಸಬೇಕು. ವಿದ್ಯಾರ್ಥಿಗಳಲ್ಲಿ ಸೃಜನಶೀಲತೆ ಬೆಳೆಸಲು ಶಿಕ್ಷಕರು ಪ್ರಾಮಾಣಿಕವಾಗಿ ಪ್ರಯತ್ನಿಸಬೇಕುʼ ಎಂದರು.

Advertisements

ಲೇಖಕ ಡಾ.ಸಂಗಮೇಶ ಹಿರೇಮಠ ಮಾತನಾಡಿ, ʼಉತ್ತಮ ರಾಷ್ಟ್ರ ನಿರ್ಮಾಣದಲ್ಲಿ ಶಿಕ್ಷಕರ ಪಾತ್ರ ಮುಖ್ಯವಾಗಿದೆ. ಪ್ರತಿಯೊಬ್ಬರ ಜೀವನದಲ್ಲಿ ಗುರು ಮತ್ತು ಗುರಿ ಇರಲೇಬೇಕು. ವಿದ್ಯಾರ್ಥಿಗಳ ಯಶಸ್ವಿ ಬದುಕಿಗೆ ಶಿಕ್ಷಕರ ಬೋಧನೆ ಪರಿಣಾಮಕಾರಿಯಾಗಬಲ್ಲದುʼ ಎಂದರು.

ಕಾರ್ಯಕ್ರಮದ ಸಾನಿಧ್ಯ ವಹಿಸಿದ ಹಲಬರ್ಗಾ ರಾಚೋಟೇಶ್ವರ ವಿರಕ್ತ ಮಠದ ಹಾವಲಿಂಗೇಶ್ವರ ಶಿವಾಚಾರ್ಯ ಮಾತನಾಡಿ, ʼಸಮಾಜದಲ್ಲಿ ಎಲ್ಲ ವೃತ್ತಿಗಿಂತ ಶಿಕ್ಷಕರ ವೃತ್ತಿ ಅತ್ಯಂತ ಪವಿತ್ರವಾದದ್ದು, ಶಿಕ್ಷಕ ಸಮಾಜದ ನಿರ್ಮಾಪಕ ಇದ್ದಂತೆ, ಉತ್ತಮ ನಾಗರಿಕರನ್ನಾಗಿ ರೂಪಿಸುವ ಕಾರ್ಯ ಶಿಕ್ಷಕರಿಂದ ಮಾತ್ರ ಸಾಧ್ಯʼ ಎಂದು ನುಡಿದರು.

ಮಾಜಿ ಜಿಲ್ಲಾ ಪಂಚಾಯತ ಅಧ್ಯಕ್ಷೆ ಗೀತಾ ಪಂಡಿತರಾವ ಚಿದ್ರಿ ಮಾತನಾಡಿ, ʼಮಕ್ಕಳ ಭವಿಷ್ಯ ರೂಪಿಸುವರು ಶಿಕ್ಷಕರೇ ರೂವಾರಿಗಳು. ಮಕ್ಕಳ ಸರ್ವಾಂಗೀಣ ವಿಕಾಸಕ್ಕೆ ಶಿಕ್ಷಕರ ಕರ್ತವ್ಯ ಮಹತ್ವದ್ದು, ಜೀವನದಲ್ಲಿ ಉತ್ತಮ ರಾಜಕಾರಣಿ ಆಗುವುದು ಸುಲಭವಿದೆ. ಆದರೆ ಆದರ್ಶ ಶಿಕ್ಷಕರಾಗುವುದು ತೀರ ಸರಳವಲ್ಲ. ನಾವೆಲ್ಲರೂ ಶಿಕ್ಷಕರನ್ನು ಗೌರವಿಸಬೇಕುʼ ಎಂದು ಸಲಹೆ ನೀಡಿದರು.

WhatsApp Image 2024 10 01 at 7.49.04 PM
ಕಾರ್ಯಕ್ರಮದಲ್ಲಿ ಆದರ್ಶ ಶಿಕ್ಷಕರಿಗೆ ಸನ್ಮಾನಿಸಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಕರ್ನಾಟಕ ರಾಜ್ಯ ಶಿಕ್ಷಕರ ವಿಕಾಸ ಪರಿಷತ್ತಿನ ಕಾರ್ಯದರ್ಶಿ ಸಂಜೀವಕುಮಾರ ಸ್ವಾಮಿ ಮಾತನಾಡಿ, ʼದೇಶದಲ್ಲಿ ಮಹೋನ್ನತ ಸಾಧನೆಗೈದ ವಿದ್ಯಾರ್ಥಿಗಳಿಗೆ ತಮ್ಮ ವಿದ್ಯಾಗುರುಗಳೇ ಆಗಿರುತ್ತಾರೆ. ಉತ್ತಮ ಶಿಕ್ಷಕನಿಂದ ಮಾತ್ರ ಉತ್ತಮ ಸಮಾಜ ನಿರ್ಮಾಣವಾಗಲು ಸಾಧ್ಯವಿದೆʼ ಎಂದು ಅಭಿಪ್ರಾಯಪಟ್ಟರು.

ಲಾಡಗೇರಿ ಹಿರೇಮಠದ ಗಂಗಾಧರ ಶಿವಾಚಾರ್ಯರು ಶಿಕ್ಷಕರಿಗೆ ʼಆದರ್ಶ ಶಿಕ್ಷಕ ಪ್ರಶಸ್ತಿʼ ಪ್ರದಾನ ಮಾಡಿದರು. ಕಲ್ಯಾಣ ಕರ್ನಾಟಕ ಪ್ರೌಢಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಪಾಂಡುರಂಗ ಬೆಲ್ದಾರ, ಉದ್ಯಮಿ ರಾಜಶೇಖರ ಚಂದಾ, ಬಾಬುರಾವ ದಾನಿ ಮಾತನಾಡಿದರು.

ಈ ಸುದ್ದಿ ಓದಿದ್ದೀರಾ? ಬೀದರ್ | ಹೃದಯಾಘಾತ : ಕರ್ತವ್ಯ ನಿರತ ಪೊಲೀಸ್ ಪೇದೆ ಸಾವು

ಕಾರ್ಯಕ್ರಮದಲ್ಲಿ ಶಿಕ್ಷಕರಾದ ಅನಂತ ಕುಲಕರ್ಣಿ, ಪ್ರಶಾಂತ ರಾಗಾ, ಓಂಪ್ರಕಾಶ ದಡ್ಡೆ, ದತ್ತಾತ್ರಿ ಸಂಪಾತೆ, ಬಸಯ್ಯಸ್ವಾಮಿ, ಬಳವಂತರಾವ ರಾಠೋಡ್, ರವಿ ಕುಮನೂರ, ವೈಜಿನಾಥ ಸಾಳೆ, ಶಿವರಾಜ್ ಜುಲಾಂಡೆ, ಮಲ್ಲಿಕಾರ್ಜುನ್ ಹಿಪ್ಪಳಗಾವೆ, ಸೂರ್ಯಕಾಂತ ಮಡಿವಾಳ, ಹನುಮಂತರಾವ , ಶಿವರಾಜ್ ಅಗ್ರೆ, ರಾಮರಾವ್ ಪಾಂಡ್ರೆ, ಗಣಪತಿ ಸಿದ್ದೇಶ್ವರ, ಶಶಿಕಾಂತ್ ಜೋಶಿ, ಮಲ್ಲಿಕಾರ್ಜುನ್ ಸಿಂದಗೇರಾ , ರಾಮಲಿಂಗ, ಲಕ್ಷ್ಮಿಬಾಯಿ ಬಿರಾದರ್, ಅಂಬಿಕಾ ಹಳ್ಳಿಖೇಡೆ, ಪೂಜಾ, ರಾಯಣ್ಣೂರ್, ರಾಖಿ, ಬಸವರಾಜ ಕಾಡೆ, ವೀರಭದ್ರಯ್ಯ ಸ್ವಾಮಿ, ವಿಶ್ವನಾಥ ಸ್ವಾಮಿ, ಮನೋಹರ ಸಿಂಗ್ ಪಾಟೀಲ್, ಮಾರುತಿ ಬಿರಾದಾರ, ವಿಜಯಕುಮಾರ ಪಾಟೀಲ್, ಗೋವಿಂದ ಪೂಜಾರಿ, ಹಿರೇಮಠ ಶಿವಕುಮಾರ, ಸಿದ್ರಾಮಯ್ಯ ಸ್ವಾಮಿ, ಮಹದೇವ ಮಠಪತಿ, ಅಲ್ಪಾ, ಅನಿತಾ, ಜಗದೇವಿ ಭೋಸ್ಲೆ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X