ನಾನು ವಿದೇಶದಲ್ಲಿದ್ದರೆ ಚಲುವರಾಯಸ್ವಾಮಿಗೆ ಲೂಟಿ ಹೊಡೆಯುವುದು ಸುಲಭ: ಎಚ್‌ ಡಿ ಕುಮಾರಸ್ವಾಮಿ

Date:

  • ಕೃಷಿ ಸಚಿವ ಎನ್‌ ಚಲುವರಾಯಸ್ವಾಮಿ ಮಾತಿಗೆ ಎಚ್‌ಡಿಕೆ ತಿರುಗೇಟು
  • ‘ಅವರ ಪಾಪದ ಹಣದಲ್ಲಿ ವಿದೇಶಕ್ಕೆ ಹೋಗುವ ಅನಿವಾರ್ಯತೆ ನನಗಿಲ್ಲ’

ಇಲ್ಲಿ ಲೂಟಿ ಹೊಡೆಯಲು ನಮ್ಮನ್ನು ಬಿಟ್ಟುಬಿಡಿ, ನೀವು ವಿದೇಶದಲ್ಲಿ ಇರಿ ಅಂತ ಚಲುವರಾಯಸ್ವಾಮಿ ಸಲಹೆ ಕೊಟ್ಟ ಹಾಗಿದೆ. ಏಕೆಂದರೆ, ಮಾನ ಮಾರ್ಯಾದೆ ಇಲ್ಲದೆ ಇಲ್ಲಿ ದರೋಡೆ ಮಾಡಿಕೊಂಡು ಕೂತಿದ್ದಾರೆ. ನಾನು ಇಲ್ಲಿದ್ದರೆ ಅವರಿಗೆ ಕಷ್ಟ ಅಲ್ಲವೇ? ಎಂದು ಮಾಜಿ ಸಿಎಂ ಎಚ್‌ ಡಿ ಕುಮಾರಸ್ವಾಮಿ ಕಿಡಿಕಾರಿದರು.

ವಿದೇಶಿ ಪ್ರವಾಸ ಮುಗಿಸಿ ಭಾನುವಾರ ರಾತ್ರಿ ವಾಪಸಾದ ಅವರು ದೇವನಹಳ್ಳಿಯ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರ ಜೊತೆ ಮಾತನಾಡಿ, ‘ಕುಮಾರಸ್ವಾಮಿ ವಿದೇಶದಲ್ಲಿಯೇ ಇರಲಿ, ಅದಕ್ಕೆ ಬೇಕಾದ ವ್ಯವಸ್ಥೆ ನಾವು ಮಾಡುತ್ತೇವೆ’ ಎಂದು ಹೇಳಿದ್ದ ಕೃಷಿ ಸಚಿವ ಎನ್‌ ಚಲುವರಾಯಸ್ವಾಮಿ ಅವರಿಗೆ ತಿರುಗೇಟು ನೀಡಿದರು.

“ವಿದೇಶಿ ಪ್ರವಾಸಕ್ಕೆ ಅವರಿಂದ ವ್ಯವಸ್ಥೆ ಮಾಡಿಸಿಕೊಂಡು ಹೋಗಬೇಕಾ ನಾನು? ಆ ಪಾಪದ ಹಣ ತಗೊಂಡು ಹೋಗಬೇಕಾ? ವಿದೇಶಕ್ಕೆ ಹೋಗುವ ಯೋಗ್ಯತೆಯೂ ನನಗಿಲ್ಲವೇ? ಕಳೆದ 12 ವರ್ಷದಿಂದ ಪಕ್ಷದ ಸಂಘಟನೆಗೆ ಸಮಯ ಮೀಸಲಿಟ್ಟಿದ್ದೆ. ಎಲ್ಲೂ ಹೊರಗೆ ಹೋಗಿ ಬರುವ ಅವಕಾಶ ಸಿಕ್ಕಿರಲಿಲ್ಲ. ದೇಶ ಸುತ್ತು, ಕೋಶ ಓದು ಅಂತಾ ಹಿರಿಯರ ಮಾತಿದೆ. ಯಾವ ದೇಶದಲ್ಲಿ ಏನೇನಿದೆ ಅಂತಾ ತಿಳಿದುಕೊಳ್ಳಲು ಹೋಗುತ್ತಿದ್ದೇನೆ” ಎಂದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

“ಮೊದಲು ಪ್ರಾಮಾಣಿಕವಾಗಿ ನಡೆದುಕೊಳ್ಳುವುದನ್ನು ಕಲಿಯಬೇಕು. ಪ್ರಾಮಾಣಿಕವಾಗಿ ನಡೆದುಕೊಂಡರೆ ಇಂತಹ ಪರಿಸ್ಥಿತಿ ಏನಕ್ಕೆ ಬರುತ್ತದೆ? ಮಂತ್ರಿಗಿರಿ ಸಿಕ್ಕಿದೆ ಅಂತ ಹಗಲು ದರೋಡೆ ಮಾಡೋದಲ್ಲ. ಒಳ್ಳೆಯ ಕೆಲಸ ಮಾಡಲಿ” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ಆರೇಳು ತಿಂಗಳಲ್ಲಿ ಕಾಂಗ್ರೆಸ್‌ ‌ಸರ್ಕಾರ ಪತನ, ನಮ್ಮ ಸರ್ಕಾರ ರಚನೆ: ಯತ್ನಾಳ್‌ ಭವಿಷ್ಯ

ರಾಜ್ಯಪಾಲರ ಬಳಿ ಏಕೆ ಹೋದರು?

“ತಮ್ಮ ವಿರುದ್ಧ ಬರೆದಿರುವ ಪತ್ರ ನಕಲಿ ಎನ್ನುವುದಾದರೆ ಕೃಷಿ ಸಚಿವರು ರಾಜ್ಯಪಾಲರ ಬಳಿಗೆ ಏಕೆ ಹೋದರು? ನಾನು ಆ ಪ್ರಕರಣದ ಬಗ್ಗೆ ಚರ್ಚೆಯನ್ನೇ ಮಾಡಿಲ್ಲ. ಎಲ್ಲೂ ಆ ಬಗ್ಗೆ ಮಾತನಾಡಿಲ್ಲ. ನನ್ನ ಹೆಸರು ಯಾಕೆ ತಳುಕು ಹಾಕುತ್ತಿದ್ದಾರೆ? ಅವರಿಗೆ ಅಲ್ಲೂ ನನ್ನ ಹೆಸರೇ ಬೇಕು, ಯಾಕೆಂದರೆ ನನ್ನದೇ ಭಯ ಇರೋದು ಅವರಿಗೆ” ಎಂದರು.

“ನಮ್ಮಲ್ಲಿ ಹಣಕ್ಕೆ ಕೊರತೆ ಇಲ್ಲ, ಈಗ ಲೂಟಿ ಮಾಡುತ್ತಿದ್ದಾರೆ ಇವರು. ಮಧ್ಯಪ್ರದೇಶದಲ್ಲಿಯೂ 40% ಸರ್ಕಾರ ಅಂತಾ ಹೇಳಿ ಪೋಸ್ಟರ್ ಹಾಕ್ಕೊಂಡಿದ್ದಾರೆ. ಈ ದೇಶವನ್ನು ಇವರು ಎಲ್ಲಿಗೆ ತಗೊಂಡು ಹೋಗ್ತಿದ್ದಾರೆ?” ಎಂದು ಕಾಂಗ್ರೆಸ್‌ ನಾಯಕರ ವಿರುದ್ಧ ಹರಿಹಾಯ್ದರು.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ನಮ್ಮನ್ನು ಬೆಂಬಲಿಸಿ

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಭಿಕ್ಷೆ ಬೇಡಿ ಬದುಕುತ್ತಿರುವ ಅಲೆಮಾರಿ ಸಮುದಾಯಕ್ಕಿಲ್ಲ ನೆಲೆ

ಅಲೆಮಾರಿ ಸಮುದಾಯದ 40 ಕುಟುಂಬಗಳ ಜನರು ಜೇವರ್ಗಿ ಪಟ್ಟಣದ ಕೊಳ್ಳಕೂರು ಕ್ರಾಸ್...

ಮಂಗಳೂರು | ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾಗಿ ಉಮರ್ ಯು ಹೆಚ್ ಅಧಿಕಾರ ಸ್ವೀಕಾರ

ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯ ನೂತನ ಅಧ್ಯಕ್ಷರಾಗಿ ಇತ್ತೀಚೆಗಷ್ಟೇ ನೇಮಕಗೊಂಡಿದ್ದ ಉಮರ್...

ರೇಣುಕಸ್ವಾಮಿ ಕೊಲೆ | ಅಧಿಕಾರಿಗಳು ಪ್ರಾಮಾಣಿಕ ತನಿಖೆ ನಡೆಸಬೇಕು: ಬಸವರಾಜ ಬೊಮ್ಮಾಯಿ

ರೇಣುಕಸ್ವಾಮಿ ಕೊಲೆ ಗಂಭೀರ ಪ್ರಕರಣವಾಗಿದ್ದು ಈ ಪ್ರಕರಣದಲ್ಲಿ ಆರೋಪಿಗಳಿಗೆ ಕಠಿಣ ಶಿಕ್ಷೆ...

ಹೇಮಾವತಿ ಲಿಂಕ್ ಕೆನಾಲ್‌ ಯೋಜನೆಗೆ ವಿರೋಧ; ಜೂನ್ 25 ರಂದು ತುಮಕೂರು ಜಿಲ್ಲೆ ಬಂದ್

ತುಮಕೂರು ಜಿಲ್ಲೆಗೆ ನೀರು ಒಗಿಸುತ್ತಿರುವ ಹೇಮಾವತಿ ಎಡದಂಡೆ ನಾಲೆಗೆ ಲಿಂಕ್‌ ಕೆನಾಲ್...