ಉಡುಪಿ | ಕೋಮು ಪ್ರಚೋದಕ ಪೋಸ್ಟ್‌ಗಳ ಬಗ್ಗೆ ನಿಗಾ – ಜಿಲ್ಲಾ ಪೊಲೀಸ್ ಅಧೀಕ್ಷಕ ಹರಿರಾಮ್ ಶಂಕ‌ರ್

Date:

ಸಾಮಾಜಿಕ ಜಾಲತಾಣಗಳಲ್ಲಿನ ಕೋಮು ಪ್ರಚೋದನಕಾರಿ ಪೋಸ್ಟ್‌ಗಳ ಬಗ್ಗೆ ನಿಗಾ ಇರಿಸಲು ಈಗಾಗಲೇ ಉಡುಪಿ ಜಿಲ್ಲೆಯಲ್ಲಿ ವಿಶೇಷ ಪೊಲೀಸ್‌ ತಂಡ ರಚಿಸಲಾಗಿದೆ. ಅಲ್ಲದೇ ಇಡೀ ಕರ್ನಾಟಕ ರಾಜ್ಯದಲ್ಲೂ ಹಲವು ತಂಡಗಳು ಈ ರೀತಿಯ ಕೋಮು ಪ್ರಚೋದಕ ಪೋಸ್ಟ್‌ಗಳ ಬಗ್ಗೆ ನಿಗಾ ಇರಿಸಿದೆ. ಆದುದರಿಂದ ಸಾಮಾಜಿಕ ಜಾಲತಾಣಗಳಲ್ಲಿ ಕೋಮು ಪ್ರಚೋದನಕಾರಿ ವಿಡಿಯೋ ಹಾಗೂ ಫೋಟೋಗಳನ್ನು ಶೇರ್ ಮಾಡುವವರ ವಿರುದ್ಧ ಕಠಿಣ ಕಾನೂನು ಕ್ರಮ ಜರಗಿಸಲಾಗುವುದು ಎಂದು ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ಹರಿರಾಮ್ ಶಂಕ‌ರ್ ತಿಳಿಸಿದ್ದಾರೆ.

- Advertisement -

ಇತ್ತೀಚೆಗೆ ನಡೆದ ಘಟನೆಯ ಹಿನ್ನೆಲೆಯಲ್ಲಿ ಈ ವಿಚಾರವನ್ನು ನಾವು ತುಂಬಾ ಗಂಭೀರವಾಗಿ ಪರಿಗಣಿಸಿ ದ್ದೇವೆ. ಆದುದರಿಂದ ಸಾಮಾಜಿಕ ಜಾಲ ತಾಣಗಳಲ್ಲಿ ಪೋಸ್ಟ್ ಮಾಡಲು ಹೋಗಬಾರದು. ಒಮ್ಮೆ ಪೊಲೀಸ್ ಕೇಸ್ ದಾಖಲಾದರೆ ಅವರಿಗೆ ಯಾವುದೇ ಖಾಸಗಿ, ಸರಕಾರಿ, ಸೈನ್ಯ ಅಥವಾ ಪೊಲೀಸ್ ಸೇರಿದಂತೆ ಯಾವುದೇ ಕೆಲಸ ಸಿಗುವುದಿಲ್ಲ. ಯುವ ಜನತೆ ಈ ರೀತಿ ಅಸಂಬದ್ಧ ಮಾಡಲು ಹೋಗಬಾ ರದು. ವಾಟ್ಸಾಪ್ ಗ್ರೂಪ್, ಫೇಸ್ ಬುಕ್‌ನಲ್ಲಿ ಎಲ್ಲವನ್ನು ನಾವು ವಾಚ್ ಮಾಡುತ್ತಿದ್ದೇವೆ. ಅದರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಜರಗಿಸಲಾಗುವುದು ಎಂದು ಎಸ್ಪಿ ಹೇಳಿಕೆಯಲ್ಲಿ ಎಚ್ಚರಿಕೆ ನೀಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ಶೈಕ್ಷಣಿಕ ಸಂಯೋಜಕರನ್ನು ಆಯ್ಕೆ ಮಾಡಿಕೊಳ್ಳದಿದ್ದರೆ ಹೋರಾಟ: ಹನಮಂತ ಕಲ್ಮನಿ ಎಚ್ಚರಿಕೆ

"ಅಕ್ಟೋಬರ್ ಮೊದಲ ವಾರದೊಳಗೆ ನಾನ್ ಯುಜಿಸಿ ಅತಿಥಿ ಉಪನ್ಯಾಸಕರನ್ನು ಶೈಕ್ಷಣಿಕ ಸಂಯೋಜಕರನ್ನಾಗಿ...

ಕಲಬುರಗಿ | ಸಿಇಸಿ ಜ್ಞಾನೇಶ್ ಕುಮಾರ್ ವಜಾಕ್ಕೆ ಆಗ್ರಹ: ಎಸ್‌ಐಆರ್ ಸ್ಥಗಿತಕ್ಕೆ ಸಿಪಿಐ ಒತ್ತಾಯ

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ವಜಾಗೊಳಿಸಬೇಕು, ಮತದಾರರ ಪಟ್ಟಿಯ...

ಧಾರವಾಡ | ಗ್ರಂಥಾಲಯದಲ್ಲಿ ಎಐ ಬಳಕೆ ಇತಿ-ಮಿತಿ ಇರಲಿ: ವಿಶ್ರಾಂತ ಕುಲಪತಿ ಪ್ರೊ. ಬಿ.ಡಿ.ಕುಂಬಾರ

"ಗ್ರಂಥಾಲಯದಲ್ಲಿ ಎಐ ಅಳವಡಿಕೆ ಮಾಡಿಕೊಳ್ಳುವದು ಒಳ್ಳೆಯದು. ಆದರೆ ಇದು ಮನುಷ್ಯನ ಸೃಜನಶೀಲತೆ...

ಯಾದಗಿರಿ | ಕಟ್ಟಡ ಕಾರ್ಮಿಕರ ಬೇಡಿಕೆ ಈಡೇರಿಸುವಂತೆ ಸಿಡಬ್ಲ್ಯೂ‌ಎಫ್‌ಐ, ಸಿಐಟಿಯು ಆಗ್ರಹ

ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ...