ಚಾಮುಂಡಿ ಸನ್ನಿಧಿಯಲ್ಲಿ ಸೂಕ್ತ ವ್ಯವಸ್ಥೆ ಕಲ್ಪಿಸದಿದ್ದರೆ ಕಠಿಣ ಕ್ರಮ: ಸಿಎಂ ಸಿದ್ದರಾಮಯ್ಯ ಎಚ್ಚರಿಕೆ

Date:

ಚಾಮುಂಡಿ ತಾಯಿ ಸನ್ನಿಧಿಯಲ್ಲಿ ಗುಣಮಟ್ಟದ ವ್ಯವಸ್ಥೆ ಕಲ್ಪಿಸದಿದ್ದರೆ ಸಂಬಂಧಪಟ್ಟವರ ಮೇಲೆ ಸೂಕ್ತ ಕ್ರಮ ಕೈಗೊಳ್ಳುವುದು ಖಚಿತ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಸಿದರು.

- Advertisement -

ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಮೊದಲ ಸಭೆಯನ್ನು ಚಾಮುಂಡಿ ಬೆಟ್ಟದಲ್ಲಿ ನಡೆಸಿ ಪ್ರಸ್ತಾವಿಕವಾಗಿ ಮಾತನಾಡಿದ ಅವರು, “ಹಿಂದೆಯೂ ಸಮಿತಿ ಇತ್ತು. ಆದರೆ ಪ್ರಾಧಿಕಾರ ರಚನೆಯಿಂದಾಗಿ ಅಭಿವೃದ್ಧಿಗೆ ಹೆಚ್ಚಿನ ಅಧಿಕಾರ ಮತ್ತು ಅವಕಾಶ ಒದಗಿದಂತಾಗಿದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ʻಬಳ್ಳಾರಿ ಚಲೋʼ ಕಾಂಗ್ರೆಸ್‌ ಭದ್ರಕೋಟೆಯಲ್ಲಿ ಬಿಜೆಪಿ ಪಾದಯಾತ್ರೆ; ಲಾಭ...

ವಿಧಾನಸಭೆ ಚುನಾವಣೆಯಲ್ಲಿ ಜಿಲ್ಲೆಯ ಎಲ್ಲಾ ಐದು ವಿಧಾನಸಭಾ ಕ್ಷೇತ್ರಗಳನ್ನು ಗೆದ್ದು ಕಾಂಗ್ರೆಸ್‌ ಬಿಜೆಪಿ ಪಕ್ಷವನ್ನು ಸಂಪೂರ್ಣವಾಗಿ ಮಣಿಸಿತ್ತು. ಲೋಕಸಭಾ ಚುನಾವಣೆಯಲ್ಲಿಯೂ ಕಾಂಗ್ರೆಸ್‌ ತನ್ನ ಪ್ರಾಬಲ್ಯವನ್ನು ಮುಂದುವರಿಸಿತು. ಇತ್ತೀಚೆಗೆ ನಡೆದ ಸಂಡೂರು ವಿಧಾನಸಭಾ ಕ್ಷೇತ್ರದ...

ಬಾಹ್ಯಾಕಾಶದಲ್ಲಿ ಶಸ್ತ್ರಾಸ್ತ್ರ ಸಮರ: ಕಕ್ಷೆಯಲ್ಲಿ ಆಯುಧಗಳನ್ನು ಇರಿಸಿದ್ದನ್ನು ಒಪ್ಪಿಕೊಂಡ...

ಉಪಗ್ರಹವನ್ನು ಸ್ಫೋಟಿಸದಿದ್ದರೂ ಬಾಹ್ಯಾಕಾಶದಲ್ಲಿ ಜಾಮರ್‌ಗಳು ಸಹ ಅತ್ಯಂತ ಮಾರಕವಾಗಿ ಪರಿಣಮಿಸಬಹುದು. ಇಂದಿನ ದಿನಗಳಲ್ಲಿ ಸಂಪರ್ಕ, ಹವಾಮಾನ ಮುನ್ಸೂಚನೆ, ವಿಮಾನ ಮತ್ತು ಹಡಗುಗಳ ಜಿಪಿಎಸ್ (GPS), ತುರ್ತು ಸೇವೆಗಳು ಮತ್ತು ಆರ್ಥಿಕ ಜಾಲಗಳು ಸಂಪೂರ್ಣವಾಗಿ...

ಗಣೇಶೋತ್ಸವ ಕೋಮು ಸೌಹಾರ್ದದ ಸೇತುವಾಗಲಿ; ಮನುಜ ಸಂಬಂಧದ ತಂತು...

ಗಣೇಶೋತ್ಸವ ಸಂಭ್ರಮ, ಭಕ್ತಿಯಿಂದ ಜನರು ಒಂದೆಡೆ ಸೇರಿ ಆಚರಿಸುವ ಹಬ್ಬ. ಆದರೆ ಇದೇ ಹಬ್ಬದ ಸಂದರ್ಭದಲ್ಲಿ ಕೆಲವೆಡೆ ಕೋಮು ಸಂಘರ್ಷಗಳು ನಡೆಯುತ್ತಿರುವುದು ಮಾತ್ರ ವಿಷಾದನೀಯ. ಭಾರತದಂತಹ ವಿವಿಧ ಧರ್ಮ, ಭಾಷೆ, ಸಂಸ್ಕೃತಿಗಳನ್ನು ಹೊಂದಿರುವ...

“ಇಲ್ಲಿಗೆ ಬರುವ ಭಕ್ತರಿಗೆ ಹೆಚ್ಚಿನ ಮತ್ತು ಉನ್ನತ ಮಟ್ಟದ ಆರೋಗ್ಯಕರ ಸವಲತ್ತು ಹಾಗೂ ಸೌಲಭ್ಯಗಳನ್ನು ಒದಗಿಸುವುದು ನಮ್ಮ ಗುರಿಯಾಗಿದೆ. ಶ್ರೀ ಕ್ಷೇತ್ರ ಹಾಗೂ ದೇವಸ್ಥಾನದ ಸಂಪ್ರದಾಯ ಮತ್ತು ಚರಿತ್ರೆ, ಘನತೆಯನ್ನು ಕಾಪಾಡುವ ಜೊತೆಗೆ ಉನ್ನತೀಕರಿಸಬೇಕು” ಎಂದು ಹೇಳಿದರು.

“ಪ್ರಾಧಿಕಾರ ವ್ಯವಸ್ಥಿತವಾಗಿ ನಡೆಯಬೇಕು. ಕಾಲ ಕಾಲಕ್ಕೆ ಸಭೆಗಳು ನಡೆದು ಹೆಚ್ಚಿನ ಶ್ರಮ ಶುಚಿತ್ವಕ್ಕೆ ಹಾಕಬೇಕು. ಕಸವನ್ನು ಆಗ್ಗಿಂದಾಗೇ ತೆರವುಗೊಳಿಸಬೇಕು. ವಾಹನಗಳ ಸಂಖ್ಯೆಯೂ ಹೆಚ್ಚಾಗಿದೆ. ವಾಹನ ನಿಲುಗಡೆಗೆ ಇನ್ನಷ್ಟು ಸುಸಜ್ಜಿತ ವ್ಯವಸ್ಥೆ ಕಲ್ಪಿಸಬೇಕಿದೆ” ಎಂದು ಸೂಚಿಸಿದರು.

“ಶ್ರೀ ಕ್ಷೇತ್ರದ ಅಭಿವೃದ್ಧಿಗೆ ಹಣಕ್ಕೆ ತೊಂದರೆ ಇಲ್ಲ. ಕೇಳಿದಷ್ಟು ಹಣವನ್ನು ಕೇಳಿದಾಗಲೆಲ್ಲಾ ಒದಗಿಸಲಾಗುತ್ತಿದ್ದರೂ ಕೆಲಸಗಳು ಮಾತ್ರ ನಿರೀಕ್ಷಿತ ವೇಗದಲ್ಲಿ ನಡೆಯುತ್ತಿಲ್ಲ. ಇದನ್ನು ನಾನು ಸಹಿಸಲ್ಲ. ಸಮಯಕ್ಕೆ ಸರಿಯಾಗಿ ಕೆಲಸ ಮಾಡದಿದ್ದರೆ ನಾನು ಮುಲಾಜಿಲ್ಲದೆ ಕ್ರಮ ತೆಗೆದುಕೊಳ್ಳುತ್ತೇನೆ” ಎಂದು ಎಚ್ಚರಿಸಿದರು.

“ತಾಯಿ, ಶಕ್ತಿ ದೇವತೆ ಚಾಮುಂಡಿ ದೇವಿ ಬಗ್ಗೆ ಕೋಟ್ಯಂತರ ಮಂದಿಗೆ ಅಪಾರ ಭಕ್ತಿ, ಶ್ರದ್ಧೆ, ನಂಬಿಕೆ ಇದೆ. ದೇಶದ ಮೂಲೆ ಮೂಲೆಗಳಿಂದ ಭಕ್ತರು ಬರುತ್ತಾರೆ. ಇವರೆಲ್ಲರಿಗೂ ಅಗತ್ಯ ಸವಲತ್ತುಗಳನ್ನು ಒದಗಿಸಬೇಕು” ಎಂದು ಸ್ಪಷ್ಟ ಸೂಚನೆ ನೀಡಿದರು.

“ಕೊಪ್ಪಳ ಹುಲಿಗಮ್ಮ ದೇವಸ್ಥಾನ ಮತ್ತು ಘಾಟಿ ಸುಬ್ರಮಣ್ಯ ದೇವಸ್ಥಾನಗಳ ಹೆಚ್ಚಿನ ಅಭಿವೃದ್ಧಿಗಾಗಿ ಪ್ರಾಧಿಕಾರ ರಚನೆ ಬಗ್ಗೆಯೂ ಹೆಚ್ಚಿನ ಬೇಡಿಕೆ ಇದೆ. ಈ ಬಗ್ಗೆಯೂ ಮುಂದುವರೆಯುವ ಅಗತ್ಯವಿದೆ” ಎಂದರು.

ಜಿಲ್ಲಾ ಉಸ್ತುವಾರಿ ಸಚಿವ ಹೆಚ್ ಸಿ ಮಹದೇವಪ್ಪ, ಪ್ರವಾಸೋದ್ಯಮ ಸಚಿವ ಎಚ್.ಕೆ.ಪಾಟೀಲ್, ಪಶು ಸಂಗೋಪನಾ ಸಚಿವ ಕೆ.ವೆಂಕಟೇಶ್, ಮುಜರಾಯಿ ಸಚಿವರಾದ ರಾಮಲಿಂಗಾರೆಡ್ಡಿ, ಶಾಸಕರಾದ ಯತೀಂದ್ರ ಸಿದ್ದರಾಮಯ್ಯ, ರವಿಶಂಕರ್, ಡಾ.ತಿಮ್ಮಯ್ಯ, ಹರೀಶ್ ಗೌಡ, ಜಿ.ಟಿ.ದೇವೇಗೌಡ, ವಿವೇಕಾನಂದ ಸೇರಿ ಹಲವು ಗಣ್ಯರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೈಸೂರು ಜಿಲ್ಲೆಯಲ್ಲಿ ಕೋಮು ಸೌಹಾರ್ದ ಕದಡುವ ಪ್ರಯತ್ನ: ಪ್ರತಾಪ್ ಸಿಂಹ ಗಡಿಪಾರಿಗೆ ದಸಂಸ ಆಗ್ರಹ

ಮೈಸೂರು ಜಿಲ್ಲೆಯಲ್ಲಿ ಕೋಮು ಸೌಹಾರ್ದಕ್ಕೆ ಧಕ್ಕೆ ತರುವಂತಹ ವಾತಾವರಣ ಸೃಷ್ಟಿಸಲು ಪ್ರಯತ್ನಿಸುತ್ತಿದ್ದಾರೆ...

ಹಾವೇರಿ | ಕುಮಧ್ವತಿ ನದಿಯ ನೀರು ಸಂಗ್ರಹಿಸಲು ರೈತರು ಪ್ರತಿಭಟನೆ

"ಕುಮಧ್ವತಿ ನದಿಗೆ ಅಡ್ಡಲಾಗಿ ಕಟ್ಟಿರುವ ಬ್ರಿಡ್ಜ್ ಕಂ ಬ್ಯಾರೇಜ್‌ಗಳಿಗೆ ಬರಗಾಲದ ಹಿನ್ನೆಲೆಯಲ್ಲಿ...

SIR | ಕರ್ನಾಟಕದಲ್ಲಿ 1.7 ಕೋಟಿ ಮತದಾರರ ಹೆಸರು ಡಿಲೀಟ್ ಆಗಿದೆ: ಕೆ ಸಿ ವೇಣುಗೋಪಾಲ್‌

ಕರ್ನಾಟಕದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ...

ಕರ್ನಾಟಕ SIR: ಹಿರಿಯರು, ಅನಾರೋಗ್ಯ ಪೀಡಿತರಿಗೆ ಮನೆಬಾಗಿಲಲ್ಲೇ ಪರಿಶೀಲನೆ

ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ವಿಚಾರಣೆಗೆ ಹಾಜರಾಗಲು ಸೂಚನೆ...