ಹಾಸನ ಪೆನ್‌ಡ್ರೈವ್ ಪ್ರಕರಣ | ಸಂಬಂಧಪಟ್ಟವರ ಬಂಧನಕ್ಕೆ ಆಗ್ರಹಿಸಿ ಏ.29ರಂದು ಪ್ರತಿಭಟನೆ

Date:

Advertisements

ನೂರಾರು ಅಶ್ಲೀಲ ವಿಡಿಯೋಗಳು, ಚಿತ್ರಗಳು ಇರುವ ಹಾಸನದ ಪೆನ್ ಡ್ರೈವ್ ಲೈಂಗಿಕ ಹಗರಣದ ರೂವಾರಿ ಸೇರಿದಂತೆ, ಇದರಲ್ಲಿ ಪಾಲ್ಗೊಂಡವರನ್ನು ಬಂಧಿಸಿ ತನಿಖೆ ನಡೆಸಲು ಒತ್ತಾಯಿಸಿ, ಏ.29ರಂದು ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.

ಈ ಕುರಿತು ಪ್ರಕಟಣೆ ನೀಡಿರುವ ಹಾಸನ ಜಿಲ್ಲಾ ಜನಪರ ಚಳುವಳಿಗಳ ಒಕ್ಕೂಟವು, ಇಡೀ ನಾಗರಿಕ ಸಮಾಜವೇ ಬೆಚ್ಚಿಬೀಳುವಂತಹ ಘಟನೆ ಹಾಸನದಲ್ಲಿ ನಡೆದಿದೆ. ಪೆನ್‌ಡ್ರೈವ್ ಮುಖಾಂತರ ಮಹಿಳೆಯರ ಲೈಂಗಿಕ ಚಿತ್ರಗಳು ಮತ್ತು ದೃಶ್ಯಗಳನ್ನು ಬಿಡುಗಡೆ ಮಾಡಿ ವಾಟ್ಸ್‌ಆಪ್ ಮೂಲಕ ವ್ಯಾಪಕವಾಗಿ ಹರಡಲಾಗುತ್ತಿದೆ ಎಂದು ಆತಂಕ ವ್ಯಕ್ತಪಡಿಸಿದೆ.

ಹಾಸನ ಜಿಲ್ಲೆಯ ಪ್ರಭಾವಿ ವ್ಯಕ್ತಿಯೊಬ್ಬರು ನೂರಾರು ಮಹಿಳೆಯರನ್ನು ಅಕ್ರಮವಾಗಿ ಲೈಂಗಿಕವಾಗಿ ಬಳಸಿಕೊಂಡು ಅವರ ಖಾಸಗಿ ದೃಶ್ಯಗಳನ್ನು ತನ್ನ ಮೊಬೈಲ್‌ನಲ್ಲಿ ಚಿತ್ರೀಕರಿಸಿಕೊಂಡಿರುವ ದೃಶ್ಯಗಳು ವ್ಯಾಪಕವಾಗಿ ಹಂಚಿಕೆಯಾಗುತ್ತಿವೆ. ಆ ದೃಶ್ಯಗಳಲ್ಲಿರುವ ಮಹಿಳೆಯರ ಖಾಸಗಿ ಬದುಕು ಛಿದ್ರಗೊಂಡಿದೆ ಎಂದು ಹೇಳಿದೆ.

Advertisements

ಮಹಿಳೆಯರನ್ನು ಲೈಂಗಿಕವಾಗಿ ದುರ್ಬಳಕೆ ಮಾಡಿಕೊಂಡು ಅವರ ಖಾಸಗಿ ದೃಶ್ಯಗಳನ್ನು ಚಿತ್ರೀಕರಿಸಿಕೊಂಡಿರುವ ಪ್ರಭಾವಿ ವ್ಯಕ್ತಿ ಹಾಗೂ ಮಹಿಳೆಯರ ಖಾಸಗಿ ಲೈಂಗಿಕ ದೃಶ್ಯಗಳನ್ನು ಸಾರ್ವಜನಿಕವಾಗಿ ಹರಡುತ್ತಿರುವ ವ್ಯಕ್ತಿಗೆ ಯಾವುದೇ ಶಿಕ್ಷೆಯಾಗುತ್ತಿಲ್ಲ. ಇಂತಹ ವಿಕ್ಷಿಪ್ತ ಮತ್ತು ವಿಕೃತ ಲೈಂಗಿಕ ಅಕ್ರಮದಿಂದಾಗಿ ಹಾಸನ ಜಿಲ್ಲೆಯ ಜನರು ನಾಚಿಕೆಯಿಂದ ತಲೆ ತಗ್ಗಿಸುವಂತಾಗಿದೆ ಎಂದು ಪ್ರಕಟಣೆ ತಿಳಿಸಿದೆ.

ಈ ಹಿನ್ನೆಲೆಯಲ್ಲಿ ನೂರಾರು ಮಹಿಳೆಯರನ್ನು ಲೈಂಗಿಕವಾಗಿ ದುರ್ಬಳಕೆ ಮಾಡಿಕೊಂಡು ಅದನ್ನು ತನ್ನ ಮೊಬೈಲ್‌ನಲ್ಲಿ ಚಿತ್ರೀಕರಿಸಿಕೊಂಡಿರುವ ಜಿಲ್ಲೆಯ ಪ್ರಭಾವಿ ವ್ಯಕ್ತಿ ಮತ್ತು ಆ ದೃಶ್ಯಗಳನ್ನು ಸಾರ್ವಜನಿಕವಾಗಿ ಬಿತ್ತರಿಸಿ ಮಹಿಳೆಯರ ಖಾಸಗಿ ಬದುಕಿಗೆ ಧಕ್ಕೆ ತಂದಿರುವ ವ್ಯಕ್ತಿಯನ್ನು ಕೂಡಲೇ ಬಂಧಿಸಿ ಶಿಕ್ಷೆಗೊಳಪಡಿಸಬೇಕೆಂದು ಆಗ್ರಹಿಸಿ ಏಪ್ರಿಲ್ 29 ರ ಸೋಮವಾರ ಹಾಸನದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.

ಈ ಪ್ರತಿಭಟನೆ ಬೆಂಬಲಿಸುವ ಎಲ್ಲರೂ ಅಂದು ಬೆಳಗ್ಗೆ 11 ಗಂಟೆಗೆ ಸರಿಯಾಗಿ ಹಾಸನದ ಮಹಾರಾಜ ಪಾರ್ಕ್‌ನಲ್ಲಿ ಬಂದು ಸೇರಬೇಕೆಂದು ಪ್ರಕಟಣೆಯಲ್ಲಿ ಮನವಿ ಮಾಡಲಾಗಿದೆ.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

ಮಂಗಳೂರು | ನ್ಯಾಯಬೆಲೆ ಅಂಗಡಿಯಲ್ಲಿ ‘ಗೋಣಿಚೀಲ’ಕ್ಕಾಗಿ ಜಗಳ: ಮಹಿಳೆಯ ವಿಡಿಯೋ ಮಾಡಿ ತೇಜೋವಧೆಗೆ ಯತ್ನ!

ನ್ಯಾಯಬೆಲೆ ಅಂಗಡಿಯಲ್ಲಿ 'ಗೋಣಿಚೀಲ' ನೀಡುವಂತೆ ಪಟ್ಟು ಹಿಡಿದದ್ದಲ್ಲದೇ, ಗ್ರಾಹಕನೋರ್ವ ನ್ಯಾಯಬೆಲೆ ಅಂಗಡಿಯವರ...

ಮೈಸೂರು | ಜಿ ಟಿ ದೇವೇಗೌಡರ ದಲಿತ ವಿರೋಧಿ ಹೇಳಿಕೆ ಖಂಡಿಸಿ ವಿದ್ಯಾರ್ಥಿಗಳಿಂದ ಪ್ರತಿಭಟನೆ

ಮೈಸೂರು ವಿಶ್ವವಿದ್ಯಾನಿಲಯದ ಸಂಶೋಧಕರ ಸಂಘ ಹಾಗೂ ದಲಿತ ವಿದ್ಯಾರ್ಥಿ ಒಕ್ಕೂಟದ ವಿದ್ಯಾರ್ಥಿಗಳು...

Download Eedina App Android / iOS

X