ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಯ ಇಲಾಖೆ, ಉದ್ಯಮಶೀಲತಾಭಿವೃದ್ಧಿ ಕೇಂದ್ರ(ಸಿಡಾಕ್) ಹಾಗೂ ಹಾಸನ ಜಿಲ್ಲಾ ಕೈಗಾರಿಕಾ ಕೇಂದ್ರದಿಂದ ನವೆಂಬರ್ 25ರಿಂದ 10 ದಿನಗಳ ಕಾಲ ಉದ್ಯಮಶೀಲತಾಭಿವೃದ್ಧಿ ತರಬೇತಿ ಕಾರ್ಯಕ್ರಮ ಪ್ರಾರಂಭವಾಗಲಿದೆ ಜಿಲ್ಲಾ ಕೈಗಾರಿಕಾ ಕೇಂದ್ರದ ಸಿಡಾಕ್ ಜಂಟಿ ನಿರ್ದೇಶಕರು ತಿಳಿಸಿದ್ದಾರೆ.
ಹಾಸನ ಜಿಲ್ಲಾ ಕೈಗಾರಿಕಾ ಕೇಂದ್ರದ ಸಿಡಾಕ್ ಜಂಟಿ ನಿರ್ದೇಶಕರು ಪ್ರಿಕೆ ಪ್ರಕಟಣೆ ಹೊರಡಿಸಿದ್ದು, “ಸರ್ಕಾರದ ವಿವಿಧ ಇಲಾಖೆಗಳಲ್ಲಿ ಸ್ವಯಂ ಉದ್ಯೋಗಕ್ಕಾಗಿ ಈಗಾಗಲೇ ಅರ್ಜಿ ಸಲ್ಲಿಸಿರುವ ಪರಿಶಿಷ್ಟ ಜಾತಿ ಅಭ್ಯರ್ಥಿಗಳಿಗೆ ಮತ್ತು ಕೈಗಾರಿಕಾ ಹಾಗೂ ಸೇವಾ ಚಟುವಟಿಕೆ ಪ್ರಾರಂಭಿಸಲು ಪಿಎಂಇಜಿಪಿ ಯೋಜನೆಯಡಿ ಸಾಲ ಬಯಸುವ ಪರಿಶಿಷ್ಟ ಜಾತಿಯ ಸ್ವಉದ್ಯೋಗಾಂಕಾಕ್ಷಿಗಳಿಗೆ ತರಬೇತಿಯಲ್ಲಿ ಭಾಗವಹಿಸಲು ಅವಕಾಶವಿದೆ” ಎಂದು ಹೇಳಿದ್ದಾರೆ.
“ಅರ್ಹ ಅಭ್ಯರ್ಥಿಯು ಎಸ್‌ಎಸ್‌ಎಲ್‌ಸಿ ವಿದ್ಯಾರ್ಹತೆಯುಳ್ಳ 18-50 ವಯೋಮಾನದವರಾಗಿರಬೇಕು. ಹೆಸರು ನೋಂದಾವಣೆಗೆ ನವೆಂಬರ್ 23ರಂದು ಕೊನೆಯ ದಿನವಾಗಿರುತ್ತದೆ.
ಈ ಸುದ್ದಿ ಓದಿದ್ದೀರಾ? ಮೈಸೂರು | ವಿಶ್ವ ಶೌಚಾಲಯ ದಿನಾಚರಣೆ ʼನಮ್ಮ ಶೌಚಾಲಯ-ನಮ್ಮ ಗೌರವʼ ಅಭಿಯಾನ
ತರಬೇತಿಯನ್ನು ಪಡೆಯಲು ಇಚ್ಛಿಸುವವರು ತಮ್ಮ ಇತ್ತೀಚಿನ ಎರಡು ಪಾಸ್ ಪೋರ್ಟ್ ಅಳತೆಯ ಭಾವಚಿತ್ರ ಮತ್ತು ಆಧಾರ್ ಕಾರ್ಡ್ ಜೆರಾಕ್ಸ್, ಜಾತಿ ಪ್ರಮಾಣ ಪತ್ರ ಜೆರಾಕ್ಸ್ ಪ್ರತಿಯೊಂದಿಗೆ ಸಿಡಾಕ್ ಹಾಸನ ಜಿಲ್ಲಾ ಕೈಗಾರಿಕಾ ಕೇಂದ್ರಕ್ಕೆ ಸಲ್ಲಿಸಬೇಕಾಗಿ ವಿನಂತಿಸಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ ಮೋಹನ್ ಹೆಚ್ ಪಿ ಮೊಬೈಲ್ ನಂ. 9743128159 ಹಾಗೂ ಇಮೇಲ್ cedokhassan@gmail.com ವಿಳಾಸಕ್ಕೆ ಕಚೇರಿ ವೇಳೆಯಲ್ಲಿ ಸಂಪರ್ಕಿಸಲು ಜಿಲ್ಲಾ ಕೈಗಾರಿಕಾ ಕೇಂದ್ರದ ಸಿಡಾಕ್ ಜಂಟಿ ನಿರ್ದೇಶಕರು ತಿಳಿಸಿದ್ದಾರೆ.