ಹಾಸನ | ಬಸ್‌ನಲ್ಲಿ ಪ್ರಯಾಣಿಸುವಾಗ ಬ್ಯಾಗ್‌ನಲ್ಲಿದ್ದ 4 ಲಕ್ಷ ಹಣ ಕಳವು

Date:

ಕೆಎಸ್‌‍ಆರ್‌ಟಿಸಿ ಬಸ್‌‍ನಲ್ಲಿ ಪ್ರಯಾಣಿಸುವಾಗ ಗಮನಕ್ಕೆ ಬಾರದಂತೆ ಬ್ಯಾಗ್‌ನಲ್ಲಿದ್ದ 4 ಲಕ್ಷ ರೂ. ಹಣವನ್ನು ಕದ್ದಿರುವ ಘಟನೆ ಹಗರೆ-ಹಾಸನ ಮಾರ್ಗದಲ್ಲಿ ಭಾನುವಾರ ನಡೆದಿದೆ.

- Advertisement -

ಬೇಲೂರು ತಾಲೂಕು ಮಾದಿಹಳ್ಳಿ ಹೋಬಳಿ ಕಲ್ಯಾಣಪುರದ ಎಂ.ಎಸ್ ನಳಿನ ಹಾಗೂ ರವಿಕುಮಾರ್‌ ದಂಪತಿ ಹಣ ಕಳೆದುಕೊಂಡವರು. ಮಹಾರಾಷ್ಟ್ರದಲ್ಲಿ ಕೆಲಸ ಮಾಡಿಕೊಂಡಿರುವ ದಂಪತಿ ಇತ್ತೀಚೆಗೆ ಊರಿಗೆ ಬಂದಿದ್ದರು. 

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೀಸಲಾತಿ ಹೆಚ್ಚಳ ಮತ್ತು ನ್ಯಾಯಾಂಗದ ಮಿತಿ: ಸಾಮಾಜಿಕ ನ್ಯಾಯಕ್ಕೆ...

ಮೀಸಲಾತಿ ಬಯಸುವ ಜಾತಿಗಳೆಲ್ಲವೂ ಕೂಡ ವರ್ತಮಾನದ ಸಾಮಾಜಿಕ ಪರಿಸ್ಥಿತಿ ಮತ್ತು ಕಾನೂನು ನಿಯಮಗಳನ್ನು ಸಾಮಾಜಿಕ ನ್ಯಾಯದ ಬೆಳಕಿನಲ್ಲಿ ಅಂತಃಕರಣ ಪೂರ್ವಕವಾಗಿ ಅರ್ಥ ಮಾಡಿಕೊಳ್ಳಬೇಕಾಗಿದೆ. ಸರ್ಕಾರ ಈ ನಿಟ್ಟಿನಲ್ಲಿ ಕಾರ್ಯೋನ್ಮುಖವಾದಾಗ ಮಾತ್ರ ಸಾಮಾಜಿಕ ನ್ಯಾಯವೆಂಬ...

ರಾಮಲೀಲೆಗಳಲ್ಲಿ ರಾಮ, ಹನುಮ, ಲಕ್ಷ್ಮಣ ಪಾತ್ರಗಳಲ್ಲಿ ದಾನಿಶ್ –...

ರಾಮನಾಗಿ ದಾನಿಶ್. ಹನುಮಂತನಾಗಿ ಯೂನುಸ್. ಲಕ್ಷ್ಮಣನಾಗಿ ಶೇರ್ ಖಾನ್. ರಾವಣನಾಗಿ ಇಕ್ಬಾಲ್ ಅಹ್ಮದ್. ಇವರೆಲ್ಲರೂ ಮುಸ್ಲಿಂ ಕಲಾವಿದರು. ಆದರೆ, ಇವರು ಅಭಿನಯಿಸಿರುವುದು ಹಿಂದುಗಳ ಮಹಾಕಾವ್ಯ ರಾಮಾಯಣದ ಪಾತ್ರಗಳಲ್ಲಿ. ಉತ್ತರ ಭಾರತದ ಹಲವು ರಾಮಲೀಲೆಗಳಲ್ಲಿ...

ಅಮೆರಿಕದ ಮಧ್ಯಂತರ ಚುನಾವಣೆ: ಬೆಲೆ ಏರಿಕೆ, ಇರಾನ್ ಯುದ್ಧದ...

ಅಮೆರಿಕದಲ್ಲಿ ಏರುತ್ತಿರುವ ಪೆಟ್ರೋಲ್ ಬೆಲೆ, ದುಬಾರಿಯಾಗುತ್ತಿರುವ ದಿನಬಳಕೆಯ ವಸ್ತುಗಳು ಹಾಗೂ ಇರಾನ್ ವಿರುದ್ಧದ ಯುದ್ಧದ ಆರ್ಥಿಕ ಪರಿಣಾಮಗಳು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆಡಳಿತಕ್ಕೆ ದೊಡ್ಡ ರಾಜಕೀಯ ಸವಾಲಾಗಿವೆ. ನವೆಂಬರ್ 3ರಂದು ನಡೆಯಲಿರುವ ಮಧ್ಯಂತರ...

ಕಳೆದ ಫೆ. 28 ರಂದು ಮಹಾರಾಷ್ಟ್ರದಿಂದ ಪತಿ ರವಿಕುಮಾರ್ ಅವರೊಂದಿಗೆ ಕಲ್ಯಾಣಪುರಕ್ಕೆ ಬಂದು, ಸೈಟ್ ಮಾರಾಟ ಮಾಡಿ 4 ಲಕ್ಷ ಹಣದೊಂದಿಗೆ ಬೆಂಗಳೂರಿಗೆ ಪ್ರಯಾಣ ಮಾಡಲು ಭಾನುವಾರ ಮಧ್ಯಾಹ್ನ 12.30 ರಲ್ಲಿ ಕಲ್ಯಾಣಪುರದಿಂದ ಖಾಸಗಿ ವಾಹನದಲ್ಲಿ ಹಗರೆಗೆ, ಅಲ್ಲಿಂದ ಹಾಸನಕ್ಕೆ ಕೆಎ-18-ಎಫ್-0894 ನಂಬರಿನ ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಪ್ರಯಾಣ ಬೆಳೆಸಿದ್ದಾರೆ.

ಇದನ್ನೂ ಓದಿದ್ದೀರಾ?ಹಾಸನ | ರಾಷ್ಟ್ರೀಯ ಹೆದ್ದಾರಿ 75ರ ಹಲವು ಕಾಮಗಾರಿ ಸ್ಥಳ ಪರಿಶೀಲಿಸಿದ ಸಂಸದ ಶ್ರೇಯಸ್ ಎಂ ಪಟೇಲ್

ಹಗರೆಯಿಂದ ಹಾಸನಕ್ಕೆ ಬರಲು ಕೆಎಸ್‌‍ಆರ್‌ಟಿಸಿ ಬಸ್‌‍ ಹತ್ತಿದ್ದು, ಹೊಸ ಬಸ್‌‍ ನಿಲ್ದಾಣದಲ್ಲಿ ಬಸ್‌‍ ಇಳಿದು ಬ್ಯಾಗ್‌ ನೋಡಿಕೊಂಡಾಗ ಹಣ ಕಳುವಾಗಿರುವುದು ತಿಳಿದಿದೆ. ಬಡಾವಣೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿಯಲ್ಲಿ ನವೀಕೃತ ಆಭರಣ ಜ್ಯುವೆಲ್ಲರ್ಸ್ ಮಳಿಗೆ ಅ. 21ರಂದು ಪುನರಾರಂಭ

ಉಡುಪಿ ನಗರದ ಸಿಬಿ ರಸ್ತೆಯಲ್ಲಿರುವ ಆಭರಣ ಜ್ಯುವೆಲ್ಲರ್ಸ್‌ನ ಮೂಲ ಮಳಿಗೆಯನ್ನು ಆಧುನಿಕ...

ಉಡುಪಿ | ಉಚ್ಚಿಲ ದಸರಾ ಶೋಭಾಯಾತ್ರೆ: ಅ. 21ರಂದು ವಾಹನ ಸಂಚಾರಕ್ಕೆ ಬದಲಿ ಮಾರ್ಗ

ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ನಡೆಯುತ್ತಿರುವ ಉಡುಪಿ-ಉಚ್ಚಿಲ ದಸರಾ 2026ರ ಅಂಗವಾಗಿ...

ಬಂಡೀಪುರ ಅರಣ್ಯದಲ್ಲಿ ಹೆಣ್ಣಾನೆ ಕಳೇಬರ ಪತ್ತೆ

ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಮದ್ದೂರು ವಲಯದ ಮಾರಿಕಟ್ಟೆ ಕೆರೆ ಸಮೀಪದ...

ಬಂಡೀಪುರದಲ್ಲಿ ಉರುಳು ಹಾಕಿ ಹುಲಿ ಕೊಂದ ಆರೋಪ: ವ್ಯಕ್ತಿ ಬಂಧನ

ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಉರುಳು ಹಾಕಿ ಹುಲಿಯನ್ನು ಕೊಂದ ಪ್ರಕರಣಕ್ಕೆ...