ಹಾಸನ | ಮದ್ಯದ ನಶೆಯಲ್ಲಿ ತಂದೆ, ಅಣ್ಣನನ್ನೇ ಕೊಲೆಗೈದ ದುರುಳ

Date:

Advertisements

ಮದ್ಯದ ಅಮಲಿನಲ್ಲಿದ್ದ ವ್ಯಕ್ತಿಯೊಬ್ಬ ತನ್ನ ತಂದೆ ಹಾಗೂ ಅಣ್ಣನನ್ನೇ ಬರ್ಬರಬಾಗಿ ಕೊಲೆಗೈದಿರುವ ಘಟನೆ ಹಾಸನ ಜಿಲ್ಲೆ ಹೊಳೆನರಸೀಪುರ ತಾಲೂಕಿನ ಗಂಗೂರು ಗ್ರಾಮದಲ್ಲಿ ನಡೆದಿದೆ.

ದೇವೇಗೌಡ (70), ಮಂಜುನಾಥ್ (50) ಕೊಲೆಯಾದವರಾಗಿದ್ದು, ಮೋಹನ್ (47) ತಂದೆ ಹಾಗೂ ಅಣ್ಣನನ್ನೇ ಕೊಲೆಗೈದ ಆರೋಪಿಯಾಗಿದ್ದಾನೆ.

ಅವಿವಾಹಿತರಾಗಿದ್ದ ಮಂಜುನಾಥ್ ಹಾಗೂ ಮೋಹನ್ ಒಂದೇ ಮನೆಯಲ್ಲಿದ್ದರೂ ಸಹ ಮೋಹನ್ ಪ್ರತ್ಯೇಕವಾಗಿ ವಾಸವಿದ್ದ ಎನ್ನಲಾಗಿದ್ದು, ತಂದೆ-ತಾಯಿ ಜೊತೆ ಮಂಜುನಾಥ್ ವಾಸವಿದ್ದರಂತೆ. ಆಸ್ತಿ ವಿಚಾರಕ್ಕೆ ಕೊಲೆ ನಡೆದಿರುವ ಶಂಕೆ ವ್ಯಕ್ತವಾಗಿದೆ.

Advertisements
WhatsApp Image 2025 07 10 at 10.25.33 AM
ಕೊಲೆಯಾದವರು

ಇತ್ತೀಚೆಗೆ ಕೊಲೆಯಾದ ತಂದೆ ದೇವೇಗೌಡರು ಜಮೀನು ಮಾರಾಟ ಮಾಡಿದ್ದರು. ಈ ಹಣವನ್ನು ತನಗೇ ಕೊಡುವಂತೆ ಆರೋಪಿ ಮೋಹನ್‌ ದುಂಬಾಲು ಬಿದ್ದಿದ್ದ. ಸಾಲ ತೀರಿಸಿ ಉಳಿದ ಹಣದಲ್ಲಿ ಮಕ್ಕಳೆಲ್ಲರಿಗೂ ಹಂಚಿಕೆ ಮಾಡುವುದಾಗಿ ದೇವೇಗೌಡರು ಹೇಳಿದ್ದರು. ಬುಧವಾರ ತಡರಾತ್ರಿ ಕುಡಿದು ಮನೆಗೆ ಬಂದ ಮೋಹನ ಅಣ್ಣ ಮಂಜುನಾಥನನ್ನು ಕೊಡಲಿಯಿಂದ ಕೊಚ್ಚಿ ಕೊಲೆ ಮಾಡಿದ್ದಾನೆ. ಜಗಳ ಬಿಡಿಸಲು ಹೋದ ತಂದೆಯನ್ನೂ ಕೊಚ್ಚಿದ್ದಾನೆ ಎಂದು ದೇವೇಗೌಡರ ಪತ್ನಿ ಜಯಮ್ಮ ದೂರು ನೀಡಿದ್ದಾರೆ.

ಹೊಳೆನರಸೀಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ: ಹಾಸನ | ಮಹಿಳಾ ಮತ್ತು ಮಕ್ಕಳ ಹಕ್ಕುಗಳಿಗಾಗಿ ಹೋರಾಟ; ಬೃಹತ್ ಸಮಾವೇಶಕ್ಕೆ ಜಾಗೃತಿ ಜಾಥಾ

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಕಲೇಶಪುರ | ಮಕ್ಕಳನ್ನು ಡ್ರಗ್ಸ್‌ ದಾಸರನ್ನಾಗಿ ಮಾಡಿ ಭಾರತವನ್ನು ಮುಳುಗಿಸುವಲ್ಲಿ ದೊಡ್ಡ ದೊಡ್ಡ ದೇಶಗಳ ಕೈವಾಡವಿದೆ: ಎಚ್‌ ಎಂ ವಿಶ್ವನಾಥ್

ದೊಡ್ಡ ದೊಡ್ಡ ದೇಶಗಳು ನಮ್ಮ ದೇಶದ ಮಕ್ಕಳನ್ನು ಗುರಿಯಾಗಿಸಿಕೊಂಡು ಡ್ರಗ್ಸ್‌ನಲ್ಲಿ ಮುಳುಗಿಸುತ್ತಿದ್ದಾರೆ....

ಹಾವೇರಿ | ಮಾದಕ ವಸ್ತು ಮಾರಾಟ; ನಾಲ್ವರು ಬಂಧನ

ಗಾಂಜಾ ಮಾರಾಟ ಮಾಡುತ್ತಿದ್ದ ವೇಳೆ ನಾಲ್ವರನ್ನು ಪೊಲೀಸರು ಬಂಧಿಸಿದ ಘಟನೆ ಹಾವೇರಿ...

ಶಿವಮೊಗ್ಗ | ಕಾಂಗ್ರೆಸ್ ಕಚೇರಿಯಲ್ಲಿ ಅರಸು ಮತ್ತು ರಾಜೀವ್‍ಗಾಂಧಿಯವರ ಜನ್ಮದಿನಾಚರಣೆ

ಶಿವಮೊಗ್ಗ, ನಗರದ ಜಿಲ್ಲಾ ಕಾಂಗ್ರೆಸ್ ಕಛೇರಿಯಲ್ಲಿ ಹಿಂದುಳಿದ ವರ್ಗಗಳ ನಾಯಕ ಹಾಗೂ...

ಶಿವಮೊಗ್ಗ | ಆರು ಜಿಲ್ಲೆಯ ಮುಖಂಡರಿಂದ ಅಹಿಂದ ಸಮಾವೇಶದ ಪೂರ್ವಭಾವಿ ಸಭೆ : ತೀ.ನ. ಶ್ರೀನಿವಾಸ್

ಶಿವಮೊಗ್ಗ, ಮಲೆನಾಡು ರೈತರ ಸಮಸ್ಯೆ ಹಾಗೂ ಕಾಂತ್‌ರಾಜ್ ವರದಿಯ ಜಾರಿಗೆ ಆಗ್ರಹಿಸಿ...

Download Eedina App Android / iOS

X