ಹಾಸನ | ಬಗರ್ ಹುಕುಂ ಕಡತಗಳ ವಿಲೇವಾರಿಗೆ ಕ್ರಮ: ಶಾಸಕ ಸಿಮೆಂಟ್ ಮಂಜು

Date:

ಬಗರ್‌ಹುಕಂ ಯೋಜನೆಯಡಿ ಸಲ್ಲಿಸಿರುವ ಎಲ್ಲ ಕಡತಗಳನ್ನು ಶೀಘ್ರವೇ ವಿಲೇವಾರಿ ಮಾಡುವ ಮೂಲಕ ರೈತಾಪಿ ಜನರಿಗೆ ಅನುಕೂಲ ಮಾಡಿಕೊಡಬೇಕು ಎಂದು ಶಾಸಕ ಸಿಮೆಂಟ್ ಮಂಜು ಹೇಳಿದರು.

- Advertisement -

ಹಾಸನ ಜಿಲ್ಲೆಯ ಸಕಲೇಶಪುರ ಪಟ್ಟಣದ ಮಿನಿ ವಿಧಾನಸೌಧದಲ್ಲಿ ಸೋಮವಾರ ನಡೆಸಿದ ಬಗರ್‌ಹುಕುಂ ಸಮಿತಿ ಸಭೆಯಲ್ಲಿ ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

“ಸಕಲೇಶಪುರ ತಾಲೂಕಿನಲ್ಲಿ ಫಾರಂ 53 ಹಾಗೂ 57ರಲ್ಲಿ ಮೂರು ಸಾವಿರಕ್ಕೂ ಅಧಿಕ ಅರ್ಜಿಗಳು ಸಲ್ಲಿಕೆಯಾಗಿವೆ. ಆದರೆ ಈ ಎಲ್ಲ ಅರ್ಜಿಗಳ ವಿಲೇವಾರಿಗೆ ಸಾಕಷ್ಟು ಅಡ್ಡಿಗಳಿದ್ದು, ಸೆಕ್ಷನ್ 4, ಗೋಮಾಳ, ಡೀಮ್ಡ್ ಹಾಗೂ ಮಾಜಿ ಯೋಧರಿಗೆ ಮೀಸಲಿಟ್ಟಿರುವ ಜಮೀನು ಹೊರತುಪಡಿಸಿ, ಅರಣ್ಯ ಇಲಾಖೆಯ ನಿರಾಪೇಕ್ಷಣೆ ಪಡೆದ ನಂತರ ಕಡತಗಳನ್ನು ಮಂಜೂರು ಮಾಡಲಾಗುವುದು” ಎಂದು ತಿಳಿಸಿದರು.

“ಸಭೆಯಲ್ಲಿ 34 ಕಡತಗಳಿಗೆ ಮಂಜೂರಾತಿ ನೀಡಲಾಗಿದೆ. ಮೊದಲ ಹಂತದಲ್ಲಿ ಯಾವುದೇ ಗೊಂದಲಗಳಿಲ್ಲದ ಕಡತಗಳನ್ನು ವಿಲೇವಾರಿ ಮಾಡಿ ನಂತರದ ಹಂತದಲ್ಲಿ ಇತರ ಕಡತಗಳನ್ನು ವಿಲೇವಾರಿ ಮಾಡಲಾಗುವುದು. ಒಟ್ಟಾರೆಯಾಗಿ ಬಡವರಿಗೆ ನ್ಯಾಯ ದೊರಕಿಸಲು ಪ್ರಾಮಾಣಿಕವಾಗಿ ಪ್ರಯತ್ನ ಮಾಡುತ್ತೇನೆ” ಎಂದು ಶಾಸಕ ಸಿಮೆಂಟ್ ಮಂಜು ಭರವಸೆ ನೀಡಿದರು.

ಇದನ್ನೂ ಓದಿದ್ದೀರಾ?ಹಾಸನ l 60 ವರ್ಷ ತುಂಬಿದ ರೈತರಿಗೆ ಪಿಂಚಣಿ ಯೋಜನೆ ಜಾರಿ ಮಾಡಬೇಕು: ರೈತ ಧರ್ಮರಾಜ್

ಈ ವೇಳೆ ಸಭೆಯಲ್ಲಿ ಬಗರ್ ಹುಕುಂ ಸಮಿತಿ ಸದಸ್ಯರಾದ ಉಚ್ಚಂಗಿ ಉದಯ, ಹಳೆಕೆರೆ ಚಂದ್ರು, ಗೀತಾ, ತಹಶೀಲ್ದಾರ್ ಮೇಘನಾ ಸೇರಿದಂತೆ ಇತರರು ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಆಡಳಿತದಲ್ಲಿ ಪಾರದರ್ಶಕತೆಗೆ ಮಾಹಿತಿ ಹಕ್ಕು ಕಾಯ್ದೆ ಪ್ರಮುಖ ಅಸ್ತ್ರ: ಹಣಮಂತ ಶಿಂದೆ

ಮಾಹಿತಿ ಹಕ್ಕು ಕಾಯ್ದೆಯ ಪರಿಣಾಮಕಾರಿ ಬಳಕೆ, ಆಡಳಿತದಲ್ಲಿ ಪಾರದರ್ಶಕತೆ ಹಾಗೂ ಸಾಮಾಜಿಕ...

ಯತ್ನಾಳ್ ವಿರುದ್ಧ ಹೊರ್ತಿ ವಾಗ್ದಾಳಿ; ಅರ್ಜಿ ವಾಪಸ್ ಪಡೆದ ಹಿಂದಿನ ಸತ್ಯ ಬಹಿರಂಗಪಡಿಸಲು ಸವಾಲು

ಮತದಾರರ ಪಟ್ಟಿಯಿಂದ ಹೆಸರುಗಳನ್ನು ತೆಗೆದುಹಾಕುವಂತೆ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಬರೆದಿರುವ...

ಆರೋಗ್ಯ ಸುರಕ್ಷತೆಗೆ ಆದ್ಯತೆ ನೀಡಿ: ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ

ಕೊಡಗು ಜಿಲ್ಲೆಯಲ್ಲಿ ಡೆಂಗ್ಯೂ, ಮಲೇರಿಯಾ ಸೇರಿದಂತೆ ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಅಗತ್ಯ...

ಉಡುಪಿ | ಯುವಜನರೇ, ನಿರಂತರ ಪರಿಶ್ರಮದಿಂದ ಯಶಸ್ಸಿನ ಮೆಟ್ಟಿಲೇರಿ: ಪ್ರಕಾಶ್ ಶೆಟ್ಟಿ

ಯುವಜನರು ನಿರಂತರ ಪ್ರಯತ್ನದ ಮೂಲಕ ಜೀವನದಲ್ಲಿ ಒಂದೊಂದೇ ಮೆಟ್ಟಿಲು ಏರುತ್ತಾ ಸಾಗಿದರೆ...