ಹಾಸನ | ಏ.29ರಂದು ಸಕಲೇಶಪುರಕ್ಕೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ

Date:

  • ಸಕಲೇಶಲಪುರ ವಿಧಾನಸಭಾ ಕ್ಷೇತ್ರದ ಬಾಳುಪೇಟೆಯಲ್ಲಿ ಏ.29ರಂದು ಬಹಿರಂಗ ಸಭೆ
  • ಜನಪರ ಕೆಲಸ ಮಾಡಲು, ಕಾಂಗ್ರೆಸ್ ಅಧಿಕಾರಕ್ಕೆ ಬರಲು ಮತದಾರರು ಬೆಂಬಲ ನೀಡಬೇಕು

ರಾಜ್ಯ ವಿಧಾನಸಭಾ ಚುನಾವಣೆಯ ಹಿನ್ನಲೆಯಲ್ಲಿ ಏಪ್ರಿಲ್ 29ರಂದು ಅರಕಲಗೂಡು ತಾಲೂಕು ಮತ್ತು ಕಟ್ಟಾಯ-ಆಲೂರು-ಸಕಲೇಶಪುರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಮೇ.1ರಂದು ಅರಸೀಕೆರೆಯಲ್ಲಿ ರಾಹುಲ್ ಗಾಂಧಿ ಪ್ರಚಾರ ನಡೆಸಲಿದ್ದಾರೆ ಎಂದು ಕಾಂಗ್ರೆಸ್‌ ಜಿಲ್ಲಾಧ್ಯಕ್ಷ ಇ.ಎಚ್ ಲಕ್ಷ್ಮಣ್ ತಿಳಿಸಿದ್ದಾರೆ.

ಹಾಸನದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು,“ಎಐಸಿಸಿ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಡಿ.ಕೆ ಶಿವಕುಮಾರ್, ಡಿ.ಕೆ ಸುರೇಶ್ ಸೇರಿದಂತೆ ಪಕ್ಷದ ಇತರೆ ಮುಖಂಡರು ಏ.29ರಂದು ಜಿಲ್ಲೆಗೆ ಆಗಮಿಸಲಿದ್ದಾರೆ. ಅಂದು ಬೆಳಗ್ಗೆ 10-30ಕ್ಕೆ ಅರಕಲಗೂಡು ಕ್ರೀಡಾಂಗಣದಲ್ಲಿ ಬಹಿರಂಗ ಸಭೆ ಏರ್ಪಡಿಸಲಾಗಿದೆ” ಎಂದು ತಿಳಿಸಿದರು. 

“ಮಧ್ಯಾಹ್ನ 3ಕ್ಕೆ ಸಕಲೇಶಲಪುರ ವಿಧಾನಸಭಾ ಕ್ಷೇತ್ರದ ಬಾಳುಪೇಟೆಯಲ್ಲಿ ಬಹಿರಂಗ ಸಭೆ ನಡೆಯಲಿದೆ. ಸಭೆಗಳಿಗೆ ಜಿಲ್ಲೆಯ  ಎಲ್ಲ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು” ಎಂದು ಕೋರಿದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

“ಮೇ. 1ರಂದು ಅರಸೀಕೆರೆ ವಿಧಾನಸಭಾ ಕ್ಷೇತ್ರಕ್ಕೆ ರಾಹುಲ್ ಗಾಂಧಿ ಬರುವುದು ಖಚಿತವಾಗಿದೆ. ಜಿಲ್ಲೆಯ ಏಳು ಕ್ಷೇತ್ರದಲ್ಲಿಯೂ ಕಾಂಗ್ರೆಸ್‌ನ ಉತ್ತಮ ಅಭ್ಯರ್ಥಿಗಳು ಸ್ಪರ್ಧಿಸಿದ್ದಾರೆ. ಏಳು ಕ್ಷೇತ್ರಗಳಲ್ಲಿ ಗೆಲ್ಲುವ ಖಚಿತವಿದೆ. ಕಾಂಗ್ರೆಸ್‌ನಿಂದ ಐದು ಗ್ಯಾರಂಟಿ ಕಾರ್ಡ್ ನೀಡಿದ್ದೇವೆ. ಜನಪರ ಕೆಲಸ ಮಾಡಲು, ಕಾಂಗ್ರೆಸ್ ಅಧಿಕಾರಕ್ಕೆ ಬರಲು ಮತದಾರರು ಬೆಂಬಲ ನೀಡಬೇಕು” ಎಂದು ಮನವಿ ಮಾಡಿದರು.

ಈ ಸುದ್ದಿ ಓದಿದ್ದೀರಾ? ಚುನಾವಣೆ 2023 | ಅಭಿವೃದ್ಧಿ ಕಾಣದ ಕೋಲಾರ ಕ್ಷೇತ್ರದಲ್ಲಿ ಈ ಬಾರಿ ಜಿದ್ದಾಜಿದ್ದಿನ ತ್ರೀಕೋನ ಸ್ಪರ್ಧೆ ಸಾಧ್ಯತೆ

ಕಾಂಗ್ರೆಸ್ ಮುಖಂಡ ಬಾಗೂರು ಮಂಜೇಗೌಡ ಮಾತನಾಡಿ, “ಜಿಲ್ಲೆಯ ಹೊಳೆನರಸೀಪುರ ಕ್ಷೇತ್ರದಲ್ಲಿ 65 ಸಾವಿರ ಮತ ನೀಡಿದ್ದಾರೆ ಎಂದು ರೇವಣ್ಣನವರ ವಿರುದ್ಧ ಇದ್ದಾರೆ ಎಂದರ್ಥ. ರೇವಣ್ಣನವರ ಹೆಸರು ಬಳಸದೆ ಪ್ರಜ್ವಲ್ ಬಂದಿದ್ದರೆ ಇವರನ್ನೂ ಜನರು ಓಡಿಸುತ್ತಿದ್ದರು. ಈಗಲೂ ಜನರು ಒಂದಲ್ಲ ಒಂದು ದಿನ ಓಡಿಸುತ್ತಾರೆ ಎನ್ನುವ ವಿಶ್ವಾಸವಿದೆ. ನನ್ನ ಮೇಲೆ ಯಾರಿಗೂ ಏಕವಚನದಲ್ಲಿ ಮಾತನಾಡುವ ಹಕ್ಕಿಲ್ಲ. ಅದು ಅವರಿಗೆ ಶೋಭೆ ತರುವುದಿಲ್ಲ” ಎಂದು ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ತಿರುಗೇಟು ನೀಡಿದರು.

“ಹಾಸನದಲ್ಲೂ ಕೂಡ ಕಾಂಗ್ರೆಸ್ ಅಭ್ಯರ್ಥಿ ಪರ ಮತದಾರರ ಒಲವು ಇದ್ದು, ಅವರೂ ಪ್ರಚಾರ ಮಾಡುತ್ತಿದ್ದಾರೆ” ಎಂದು ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ದೇವರಾಜೇಗೌಡರು, ಮುಖಂಡರು ಹೆಚ್.ಕೆ. ಮಹೇಶ್, ತಾರ ಚಂದನ್, ಅಬ್ದೂಲ್ ಸಮದ್ ಸೇರಿದಂತೆ ಇತರರು ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಕುಟುಂಬ ರಾಜಕಾರಣದ ವಿರುದ್ಧ ನನ್ನ ಹೋರಾಟ: ವಿನಯ್ ಕುಮಾರ್

ಪಾಳೇಗಾರಿಕೆ, ಕುಟುಂಬ ರಾಜಕಾರಣದ ವಿರುದ್ಧ ಹೋರಾಟ ನನ್ನದು. ಸಚಿವ ಎಸ್ ಎಸ್...

ಕಲಬುರಗಿ | ನನ್ನನ್ನು ಎನ್‌ಕೌಂಟರ್ ಮಾಡುವ ಜೀವ ಬೆದರಿಕೆ ಪತ್ರ ಬಂದಿದೆ: ಸಚಿವ ಪ್ರಿಯಾಂಕ್ ಖರ್ಗೆ

ಬಿಜೆಪಿಯವರು ಗಲಭೆ ಸೃಷ್ಟಿಸಿ ಚುನಾವಣೆ ಮಾಡಬೇಕು ಅಂತಿದ್ದಾರೆ. ನನ್ನ ಹೆಣ ಬೀಳಿಸಿಯಾದ್ರೂ...