ಹಾಸನ | ಶಾಂತಿಯುತ ಮತದಾನಕ್ಕೆ ಸಕಲ ಸಿದ್ಧತೆ: ಜಿಲ್ಲಾಧಿಕಾರಿ ಅರ್ಚನಾ

Date:

Advertisements

ಮೇ 10ರಂದು ನಡೆಯುವ ವಿಧಾನಸಭಾ ಚುನಾಚಣೆಗೆ ಹಾಸನ ಜಿಲ್ಲಾಡಳಿತದಿಂದ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಮೇ 10ರ ಬೆಳಿಗ್ಗೆ 7ರಿಂದ ಸಂಜೆ 6ರ ತನಕ ಜಿಲ್ಲೆಯ ಏಳು ವಿಧಾನಸಭಾ ಕ್ಷೇತ್ರಗಳಲ್ಲೂ ಮತದಾನ ನಡೆಯಲಿದೆ” ಎಂದು ಜಿಲ್ಲಾಧಿಕಾರಿ ಎಂ.ಎಸ್ ಅರ್ಚನಾ ತಿಳಿಸಿದ್ದಾರೆ.

ಶನಿವಾರ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, “ಜಿಲ್ಲೆಯಲ್ಲಿ 7,49,720 ಮಂದಿ ಪುರುಷ ಮತದಾರರು, 7,50,153 ಮಹಿಳಾ ಹಾಗೂ 44 ಇತರ ಮತದಾರರು ಸೇರಿದಂತೆ ಒಟ್ಟು 14,99,917 ಮತದಾರರಿದ್ದಾರೆ. ಈ ಬಾರಿ ಪುರುಷರಿಗಿಂತ ಮಹಿಳಾ ಮತದಾರರೇ ಅಧಿಕವಾಗಿರುವುದು ಗಮನಾರ್ಹ.  ಜೊತೆಗೆ  ಜಿಲ್ಲೆಯ ಒಟ್ಟು 27,135 ಮಂದಿ ಯುವಮತದಾರರಿದ್ದಾರೆ” ಎಂದು ಮಾಹಿತಿ ನೀಡಿದರು.

ಮನೆ ಮತದಾನ: “ಜಿಲ್ಲೆಯಲ್ಲಿ ಒಟ್ಟು 1,062 ವಿಶೇಷಚೇತನ ಮತದಾರರು ಮನೆ ಮತದಾನಕ್ಕೆ ನೊಂದಣಿ ಮಾಡಿಸಿದ್ದರು. ಈ ಪೈಕಿ 1,031 ಮಂದಿ ಮತ ಚಲಾಯಿಸಿದ್ದಾರೆ. ಹಾಗೆಯೇ 80 ವರ್ಷ ಮೇಲ್ಪಟ್ಟ 3,056 ಮಂದಿ ಹಿರಿಯ ನಾಗರಿಕರು ಮನೆ ಮತದಾನಕ್ಕೆ ಇಚ್ಛೆ ವ್ಯಕ್ತಪಡಿಸಿದ್ದು, ಈ ಪೈಕಿ 2,874 ಮಂದಿ ಹಕ್ಕು ಚಲಾಯಿಸಿದ್ದಾರೆ” ಎಂದರು.

Advertisements

“ಜಿಲ್ಲೆಯಲ್ಲಿ ಮತಗಟ್ಟೆ ಅಧ್ಯಕ್ಷಾಧಿಕಾರಿ 2182, ಮೊದಲನೇ ಮತಗಟ್ಟೆ ಅಧಿಕಾರಿ 2182, ಎರಡನೇ ಮತಗಟ್ಟೆ ಅಧಿಕಾರಿ 2182, ಮೂರನೇ ಮತಗಟ್ಟೆ ಅಧಿಕಾರಿ 2182 ಹಾಗೂ ನಾಲ್ಕನೇ ಮತಗಟ್ಟೆ ಅಧಿಕಾರಿ 2182 ಮಂದಿ ಸೇರಿದಂತೆ ಒಟ್ಟು 10,910 ಅಧಿಕಾರಿ ಹಾಗೂ ಸಿಬ್ಬಂದಿ ನಿಯೋಜನೆ ಮಾಡಲಾಗಿದೆ” ಎಂದು ಹೇಳಿದರು.

“ಹಾಗೆಯೇ ಪ್ರತಿ ವಿಧಾನಸಭಾ ಕ್ಷೇತ್ರಗಳ 10ರಿಂದ 12 ಮತಗಟ್ಟೆಗಳಿಗೆ ಒಬ್ಬರಂತೆ ಜಿಲ್ಲೆಯಲ್ಲಿ ಒಟ್ಟು 223 ಸೆಕ್ಟರ್ ಅಧಿಕಾರಿಗಳನ್ನು ನೇಮಿಸಲಾಗಿದೆ. ಪ್ರತಿ ವಿಧಾನಸಭಾ ಕ್ಷೇತ್ರಗಳ ಭೌಗೋಳಿಕ ಪ್ರದೇಶಗಳಿಗೆ ಅನುಗುಣವಾಗಿ ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ 6-9 ಫೈಯಿಂಗ್ ಸ್ಕ್ಯಾಡ್ ತಂಡ ನೇಮಿಸಲಾಗಿದೆ. ಜಿಲ್ಲೆಯಲ್ಲಿ 83 ತಂಡಗಳು, ದಿನದ 24 ಗಂಟೆಯೂ ಕೆಲಸ ನಿರ್ವಹಿಸಲಿವೆ” ಎಂದರು.

“ಜಿಲ್ಲೆಯ ಏಳೂ ವಿಧಾನಸಭಾ ಕ್ಷೇತ್ರಗಳ ಪೈಕಿ 643 ಸೂಕ್ಷ್ಮ ಮತಗಟ್ಟೆಗಳಿದ್ದು, 10 ಅತಿಸೂಕ್ಷ ಎಂದು ಗುರುತಿಸಲಾಗಿದೆ. 1,006 ಕಡೆಗಳಲ್ಲಿ ವೆಬ್ ಕ್ಯಾಸ್ಟಿಂಗ್ ಮಾಡಲಾಗುತ್ತಿದೆ. 460 ಕಡೆ ಮೈಕ್ರೋ ಅಬ್ಸರ್‌ವರ್ಸ್‌ ಕರ್ತವ್ಯ ನಿರ್ವಹಿಸುವರು” ಎಂದು ಅರ್ಚನಾ ವಿವರಿಸಿದರು.

ಇಡಿಸಿ ಮತ ದುರ್ಬಳಕೆ, ಒಂದು ಪಕ್ಷದ ಕೆಲಸ ಆರೋಪದಡಿ ನಮ್ಮ ಕಚೇರಿಯ ಓರ್ವ ಸಿಬ್ಬಂದಿಯನ್ನು ಅಮಾನತು ಮಾಡಲಾಗಿದೆ. ಇಡಿಸಿ ಮತ ಚಲಾವಣೆ ಪ್ರಕ್ರಿಯೆ ಬಿಗಿಗೊಳಿಸಲಾಗಿದೆ. ಮತಗಳನ್ನು ಪೋಸ್ಟ್ ಮಾಡುವುದನ್ನೂ ಸದ್ಯಕ್ಕೆ ನಿಲ್ಲಿಸಲಾಗಿದೆ. ಕೆಲ ಅಧಿಕಾರಿಗಳ ವಿರುದ್ಧ ಮೇಲಧಿಕಾರಿಗಳಿಗೆ ಪತ್ರ ಬರೆಯಲಾಗಿದೆ” ಎಂದು ತಿಳಿಸಿದರು.

ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಹರಿರಾಂ ಮಾತನಾಡಿ, “ಕಾನೂನು ಸುವ್ಯವಸ್ಥೆ ಕಾಪಾಡಲು 23 ಸಿಎಪಿಎಫ್‌ ತುಕಡಿ ಬಂದಿವೆ. ಏಳು ಕ್ಷೇತ್ರಗಳಿಗೂ ತಲಾ ಒಂದರಂತೆ ಕೆಎಸ್‌ಆರ್‌ಪಿ ನಿಯೋಜಿಸಲಾಗಿದೆ. ನಮ್ಮ ಜಿಲ್ಲೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ ಜೊತೆಗೆ 1700 ಮಂದಿ  ಸಿಬ್ಬಂದಿಗಳನ್ನು ಹೊರಗಿನಿಂದ ಕರೆಸಿಕೊಳ್ಳಲಾಗಿದೆ” ಎಂದು ತಿಳಿಸಿದರು.

ಜಿಲ್ಲೆಯಲ್ಲಿ 33 ಚೆಕ್‌ಪೋಸ್ಟ್ ಕಾರ್ಯ ನಿರ್ವಹಿಸುತ್ತಿದ್ದು, ಈವರೆಗೆ ದಾಖಲೆ ಇಲ್ಲದ 1.87 ಕೋಟಿ ನಗದು ವಶಪಡಿಸಿಕೊಳ್ಳಲಾಗಿದೆ. 29,964 ಲೀಟರ್ ಮದ್ಯ, 1.05 ಕೆಜಿ ಡ್ರಗ್ಸ್, ನಗರದ ಹೊರ ವಲಯದ ಗೋದಾಮಿನಲ್ಲಿ ಸಂಗ್ರಹಿಸಿದ್ದ ಸುಮಾರು 1.19 ಕೋಟಿ ರೂ ಮೊತ್ತದ ಸೀರೆಗಳನ್ನು ವಶಪಡಿಸಿಕೊಳ್ಳಲಾಗಿದೆ” ಎಂದು ಮಾಹಿತಿ ನೀಡಿದರು.

ಈ ಸುದ್ದಿ ಓದಿದ್ದೀರಾ? ಬೇಲೂರು | ಹೆಬ್ಬಾಳು ಏತ ನೀರಾವರಿ ಯೋಜನೆಗೆ ಬಿಜೆಪಿ ಅಭ್ಯರ್ಥಿ ಅಡ್ಡಿ; ಲಿಂಗೇಶ್ ಆರೋಪ

“ಪೊಲೀಸ್‌ ಇಲಾಖೆ ಅಬಕಾರಿ ಇಲಾಖೆ ಒಗ್ಗೂಡಿ ಒಟ್ಟು 1,433 ಎಫ್‌ಐಆರ್ ದಾಖಲಿಸಲಾಗಿದೆ. ಈವರೆಗೆ 24 ಮಂದಿ ರೌಡಿಗಳನ್ನು ಗಡಿಪಾರು ಮಾಡಲಾಗಿದೆ” ಎಂದರು.

ಜಿಲ್ಲಾ ಪಂಚಾಯತ್ ಸಿಇಒ ಬಿ.ಆ‌ರ್ ಪೂರ್ಣಿಮಾ ಮಾತನಾಡಿ, “ಕಳೆದ ಎರಡು ತಿಂಗಳಿಂದ ಜಿಲ್ಲಾದ್ಯಂತ ಮತದಾನ ಅರಿವು ಮೂಡಿಸಲಾಗಿದೆ. ಕಳೆದ ಚುನಾವಣೆಯಲ್ಲಿ ಶೇ.72ಕ್ಕಿಂತ ಕಡಿಮೆ ಮತದಾನ ಆಗಿದ್ದ 181 ಮತಗಟ್ಟೆಗಳಲ್ಲಿ ಅರಿವು ಮೂಡಿಸಲಾಗಿದೆ. ವಿಶೇಷ ಚೇತನರು, ಯುವಮತದಾರರು ಸೇರಿ ಒಟ್ಟು 47 ವಿಶೇಷ ಮತಗಟ್ಟೆಗಳನ್ನು ತೆರೆಯಲಾಗಿದೆ” ಎಂದು ತಿಳಿಸಿದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X