ಹಾಸನ ನಗರದ ಹಿಮ್ಸ್ ಆಸ್ಪತ್ರೆ ಆವರಣದಲ್ಲಿ ಖಾಸಗಿ ಆಸ್ಪತ್ರೆಗೆ ರೋಗಿಯನ್ನು ಕರೆದೊಯ್ಯುವ ವಿಚಾರಕ್ಕೆ ಆ್ಯಂಬುಲೆನ್ಸ್ ಚಾಲಕರಿಬ್ಬರು ಬಡಿದಾಡಿಕೊಂಡ ಘಟನೆ ನಡೆದಿದೆ.
ಹಿಮ್ಸ್ ಆಸ್ಪತ್ರೆಗೆ ದಾಖಲಾಗಿದ್ದ ರೋಗಿಯನ್ನು ಖಾಸಗಿ ಆಸ್ಪತ್ರೆಗೆ ಕರೆದೊಯ್ಯುಬೇಕಿತ್ತು. ಆ ಸಮಯದಲ್ಲಿ ಆಸ್ಪತ್ರೆ ಆವರಣಕ್ಕೆ ಬಂದ ಎರಡು ಆ್ಯಂಬುಲೆನ್ಸ್‌ಗಳ ಚಾಲಕರು, ರೋಗಿಯನ್ನು ಕರೆದೊಯ್ಯುವ ವಿಚಾರಕ್ಕೆ ಪೈಪೋಟಿಗಿಳಿದಿದ್ದಾರೆ.
ಬಳಿಕ ವಾಗ್ವಾದ ತಾರಕಕ್ಕೇರಿ, ಪರಸ್ಪರ ಬಡಿದಾಡಿಕೊಂಡಿರುವುದಾಗಿ ತಿಳಿದು ಬಂದಿದೆ. ಈ ವೇಳೆ ಸ್ಥಳದಲ್ಲಿದ್ದ ಹಿಮ್ಸ್ ಆಸ್ಪತ್ರೆಯ ಸಿಬ್ಬಂದಿ ಮಧ್ಯ ಪ್ರವೇಶಿಸಿ, ಜಗಳವನ್ನು ನಿಲ್ಲಿಸಿದ್ದಾರೆ.
ಈ ಮಧ್ಯೆ ಸ್ಥಳದಲ್ಲಿದ್ದ ಕೆಲವರು ಮೊಬೈಲ್‌ನಲ್ಲಿ ಬಡಿದಾಡಿಕೊಂಡ ದೃಶ್ಯವನ್ನು ಸೆರೆ ಹಿಡಿದಿದ್ದಾರೆ. ಬಳಿಕ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿರುವುದಾಗಿ ತಿಳಿದು ಬಂದಿದೆ.

