ಕಾಶ್ಮೀರದ ಪಹಲ್ಗಾಮ್ ಉಗ್ರರ ದಾಳಿ ಹಾಗೂ ಅಮಾಯಕ ಪ್ರವಾಸಿಗರ ಮೇಲೆ ನಡೆದ ನರಮೇಧ ಖಂಡಿಸಿ, ಜಿಲ್ಲಾ ವಕೀಲರ ಸಂಘದಿಂದ ಶುಕ್ರವಾರ ಪ್ರತಿಭಟನೆ ನಡೆಸಿದರು.
ಶುಕ್ರವಾರ ನ್ಯಾಯಾಲಯದ ಕಲಾಪದಿಂದ ದೂರ ಉಳಿದ ವಕೀಲರು ತಮ್ಮ ಸಂಘದ ಕಚೇರಿ ಎದುರು ಪ್ರತಿಭಟನೆ ನಡೆಸುವ ಸಮಯದಲ್ಲಿ, ಭಾರತದ ಸಮಗ್ರತೆ ಮತ್ತು ಐಕ್ಯತೆಗೆ ಧಕ್ಕೆ ಉಂಟು ಮಾಡಿರುವ ಭಯೋತ್ಪಾದಕರನ್ನು ಕೂಡಲೇ ಬಂಧಿಸಿ ಶಿಕ್ಷಿಸಬೇಕು. ಹಾಗೆಯೇ, ಇದಕ್ಕೆ ಭಾರತ ಪ್ರತ್ಯುತ್ತರ ನೀಡಬೇಕು ಎಂದು ಆಗ್ರಹಿಸಿದರು.
ಇದನ್ನೂ ಓದಿದ್ದೀರಾ?ಹಾಸನ l ಫೈನಾನ್ಸ್ ಕಿರುಕುಳ ಆರೋಪ: ರೈತ ಆತ್ಮಹತ್ಯೆ
ಈ ವೇಳೆ ಸಂಘದ ಅಧ್ಯಕ್ಷ ಪ್ರಸನ್ನ, ಯೋಗೇಶ್, ಎಚ್.ಎನ್. ಪ್ರತಾಪ್ ವಕೀಲರ ಸಂಘದ ಸದಸ್ಯರು ಹಾಗೂ ಇನ್ನಿತರರಿದ್ದರು.
