ಹಾಸನ | ರೈತ ವಿರೊಧಿ ಮೋದಿ, ಬಿಜೆಪಿ, ಜೆಡಿಎಸ್ ಸೋಲಿಸಿ; ರೈತ ಸಂಘ ಕರೆ

Date:

ಕೃಷಿ ಬಿಕ್ಕಟ್ಟಿಗೆ ಕಾರಣವಾದ ರೈತ ವಿರೊಧಿ ಮೋದಿ, ಬಿಜೆಪಿ ಮತ್ತು ಮಿತ್ರ ಪಕ್ಷ ಜೆಡಿಎಸ್ ಸೋಲಿಸಿ ಎಂದು ರಾಜ್ಯ ಪ್ರಾಂತ ರೈತ ಸಂಘ ಹಾಗೂ ರಾಜ್ಯ ರೈತ ಸಂಘ ಕರೆ ನೀಡಿದೆ.

- Advertisement -

ಹಾಸನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾಥನಾಡಿದ ರೈತ ಮುಖಂಡರು, 2014 ರ ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ರೈತರ ಆಧಾಯವನ್ನು ಡಬಲ್ ಮಾಡುತ್ತೇನೆ. ಡಾ. ಎಂ.ಎಸ್‌. ಸ್ವಾಮಿನಾಥನ್ ಶಿಫಾರಸ್ಸುಗಳನ್ನು ಜಾರಿಗೊಳಿಸುತ್ತೇನೆ, ರೈತರ ಸಾಲ ಮನ್ನಾ ಮಾಡುತ್ತೇನೆ, ರೈತರು ಬೆಳೆದ ಬೆಳೆಗಳಿಗೆ ಸಿ2+50% ಆಧಾರದಲ್ಲಿ ಬೆಲೆ ನಿಗದಿ ಮಾಡುತ್ತೇನೆ ಎಂದು ದೇಶದ ರೈತ ಸಮುದಾಯಕ್ಕೆ ಭರವಸೆ ಕೊಟ್ಟು ಅಧಿಕಾರಕ್ಕೆ ಬಂದ ಮೋದಿ ಸರ್ಕಾರ ಕಳೆದ 10 ವರ್ಷಗಳಲ್ಲಿ ಕೊಟ್ಟ ಭರವಸೆಗಳಿಗೆ ವಿರುದ್ಧವಾಗಿ ನಡೆದುಕೊಂಡಿದೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಅಲ್ಲದೇ, ಹಿಂದೆಂದು ಕಂಡು ಕೇಳರಿಯದ ರೀತಿಯಲ್ಲಿ ರೈತ ಸಮುದಾಯವನ್ನು ಅವಮಾನಿಸಿ, ಅನ್ನದಾತರನ್ನು ಬೀದಿಯಲ್ಲಿ ನಿಲ್ಲಿಸಿ ಕೆಟ್ಟದಾಗಿ ನಡೆಸಿಕೊಂಡಿದೆ. ಮೋದಿ ಸರ್ಕಾರ ಅಧಿಕಾರಕ್ಕೆ ಬಂದ 6 ತಿಂಗಳಲ್ಲಿ ಡಾ.ಸ್ವಾಮಿನಾಥನ್ ವರದಿಯನ್ನು ಜಾರಿಗೆ ತರಲು ಸಾಧ್ಯವಿಲ್ಲವೆಂದು ಸುಪ್ರಿಂಕೋಟ್‌ಗೆ ಅಫಿಡೆವಿಟ್ ಸಲ್ಲಿಸಿದೆ. ಭೂಸ್ವಾಧಿನ ಕಾಯ್ದೆಗೆ ತಿದ್ದುಪಡಿ ತಂದು ರೈತರ ಭೂಮಿಯನ್ನು ಕಿತ್ತುಕೊಳ್ಳಲು ಪ್ರಯತ್ನಿಸಿದೆ ಎಂದರು.

ವಿದ್ಯುತ್ ಖಾಸಗೀಕರಣ ಮಸೂದೆ ತರುವ ಮೂಲಕ ರೈತರ ಕೃಷಿ ಪಂಪ್‌ಸೆಟ್‌ಗಳಿಗೆ ನೀಡುತ್ತಿದ್ದ ಉಚಿತ ವಿದ್ಯುತ್ ನಿಲ್ಲಿಸಿ ಸ್ಮಾರ್ಟ್ ಮೀಟರ್ ಅಳವಡಿಸಲು ಮುಂದಾಗಿದೆ. ಇಂತಹ ರೈತ ವಿರೊಧಿ ಮೋದಿ ನೇತೃತ್ವದ ಬಿಜೆಪಿ ಮತ್ತು ಅದರ ಮಿತ್ರ ಪಕ್ಷ ಜೆಡಿಎಸ್ ಅಭ್ಯರ್ಥಿಗಳನ್ನು ಈ ಚುನಾವಣೆಯಲ್ಲಿ ಹೀನಾಯವಾಗಿ ಸೋಲಿಸಬೇಕೆಂದು ರಾಜ್ಯದ ರೈತ ಸಮುದಾಯದಲ್ಲಿ ಕರ್ನಾಟಕ ಪ್ರಾಂತ ರೈತ ಸಂಘ ಮತ್ತು ಕರ್ನಾಟಕ ರಾಜ್ಯ ರೈತ ಸಂಘಟನೆಗಳು ಮನವಿ ಮಾಡಿವೆ.

ಸಂಕಷ್ಟದಲ್ಲಿರುವ ರೈತರನ್ನು ಕೈಹಿಡಿದು ಮೇಲೆತ್ತುವ ಬದಲಾಗಿ ಮೂರು ಕರಾಳ ಕೃಷಿ ಕಾಯ್ದೆಗಳನ್ನು ಸುಗ್ರೀವಾಜ್ಞೆ ಮೂಲಕ ಜಾರಿಗೆ ತಂದು ಸಣ್ಣ ರೈತರ ಮೇಲೆ ಅವಲಂಬಿತವಾಗಿರುವ, ದೊಡ್ಡಸಂಖ್ಯೆಯ ಉದ್ಯೋಗವನ್ನು ಸೃಷ್ಠಿಸಿರುವ ಭಾರತದ ಕೃಷಿಯನ್ನ ಕಾರ್ಪೊರೇಟ್ ಕಂಪನಿಗಳ ಪಾಲು ಮಾಡಲು ಮೋದಿ ಸರ್ಕಾರ ತೀರ್ಮಾನಿಸಿತು. ಇದರ ವಿರುದ್ಧ ರೈತರು ಸಂಘಟಿತರಾಗಿ ಪ್ರತಿಭಟಿಸಲು ದೆಹಲಿಯತ್ತ ತೆರಳಿದರೆ ಅವರ ಮೇಲೆ ಗುಂಡಿನ ದಾಳಿ, ಅಶೃವಾಯು, ಜಲಫಿರಂಗಿ, ಲಾಠಿ ಜಾರ್ಜ್ ಮಾಡಿ ರೈತರು ಮತ್ತು ಅವರ ಟ್ರ್ಯಾಕ್ಟರ್‌ಗಳು ದೆಹಲಿಯತ್ತ ಬರದಂತೆ ಹೆದ್ದಾರಿಗಳಲ್ಲಿ ಗುಂಡಿ ನಿರ್ಮಾಣ ಮಾಡಿ, ಚೂಪಾದ ಕಬ್ಬಿಣದ ಸಲಾಕೆಗಳನ್ನು ರಸ್ತೆಗೆ ಜಡಿದು, ಕಾಂಕ್ರೀಟ್ ಅಡ್ಡಗೋಡೆಗಳನ್ನು ನಿರ್ಮಾಣ ಮಾಡಿದರು. ರೈತರನ್ನು ಭಯೋತ್ಪಾದಕರೆಂದು ಕರೆದರು. ಇದನ್ನು ಪ್ರತಿಭಟಿಸಿ ದೆಹಲಿಯ 5 ರಾಷ್ಟ್ರೀಯ ಹೆದ್ದಾರಿಗಳಲ್ಲೇ ಲಕ್ಷಾಂತರ ರೈತರು ಸತತ 13 ತಿಂಗಳುಗಳ ಕಾಲ ಪ್ರತಿಭಟನೆ ನಡೆಸಿ ರೈತ ವಿರೊಧಿ ಕೃಷಿ ಕಾಯ್ದೆಗಳನ್ನು ವಾಪಸ್ ಪಡೆಯಲು ಸಾಧ್ಯವಾಯಿತು ಎಂದರು.

ಈ ಧೀರೋದ್ದಾತ್ತ ಹೋರಾಟದಲ್ಲಿ 752 ರೈತರು ಹುತಾತ್ಮರಾದರು. ಇದೇ ರೀತಿ ದೇಶಾದ್ಯಂತ ನಡೆದ ರೈತರ ಪ್ರತಿಭಟನೆಗಳನ್ನು ಹತ್ತಿಕ್ಕಲು ಬಿಜೆಪಿ ನೇತೃತ್ವದ ಸರ್ಕಾರಗಳು ನಿರಂತರವಾಗಿ ಪ್ರಯತ್ನಿಸಿವೆ. ಉತ್ತರ ಪ್ರದೇಶದ ಲಕ್ಕೀಂಪುರ್‌ ಖೇರಿಯಲ್ಲಿ ಕೇಂದ್ರ ಕೃಷಿ ಸಚಿವರ ಬೆಂಗಾವಲು ವಾಹನ ಐವರು ರೈತರು ಮತ್ತು ಒಬ್ಬ ಪತ್ರಕರ್ತರನ್ನು ಬಲಿತೆಗೆದುಕೊಂಡಿತು.

ಮೋದಿಯ ಅಧಿಕಾರದ ಅವಧಿಯಲ್ಲಿ 2014-2022 ನಡುವೆ 1,00,474 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆ ಮಾಡಿಕೊಂಡ ರೈತ ಕುಟುಂಬಗಳಿಗೆ ಪರಿಹಾರ ನೀಡುವಲ್ಲಿ ಮೋದಿ ಸರ್ಕಾರ ತಿರಸ್ಕಾರದ ದೋರಣೆ ಅನುಸರಿಸಿದೆ. ಮಾತ್ರವಲ್ಲ ರೈತರು ಪರಿಹಾರಕ್ಕಾಗಿಯೇ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ ಎಂದು ಕೇಂದ್ರ ಕೃಷಿ ಸಚಿವ ಹೇಳಿಕೆ ನೀಡಿ ರೈತರನ್ನು ಅವಮಾನಿಸಿದ್ದಾರೆ. ರೈತರ ಸಾಲ ಮನ್ನಾ ಮಾಡುತ್ತೇನೆಂದು ಹೇಳಿ ಅಧಿಕಾರಕ್ಕೆ ಬಂದು ಕಾರ್ಪೊರೇಟ್ ಕಂಪನಿಗಳ ಸಾಲ ಮನ್ನಾ ಮಾಡಿದ ರೈತ ವಿರೋಧಿ ಮೋದಿ ಸರ್ಕಾರ ಎಂದು ಕಿಡಿಕಾರಿದರು.

ಈ ಅವಧಿಯಲ್ಲಿ ರೈತರ ಆಧಾಯ ವಿಪರೀತವಾಗಿ ಕುಸಿದಿದೆ. ಪ್ರಧಾನಮಂತ್ರಿ ಫಸಲ್ ಭಿಮಾ ಯೋಜನೆ ಸಣ್ಣ ರೈತರಿಗೆ ಅನುಕೂಲ ಮಾಡಿಕೊಡುವ ಬದಲಿಗೆ ಖಾಸಗಿ ವಿಮಾ ಕಂಪನಿಗಳಿಗೆ ಅನುಕೂಲ ಮಾಡಿಕೊಟ್ಟಿದೆ. ಪ್ರೀಮಿಯಂ ಭರಿಸಿದ ರೈತರಿಗೂ ಸರಿಯಾದ ಬೆಳೆವಿಮಾ ಪರಿಹಾರ ನೀಡಲಿಲ್ಲ. ರಾಜ್ಯದಲ್ಲಿ 232 ತಾಲೂಕುಗಳು ಬರಪೀಡಿತವಾಗಿದ್ದರೂ ಮೋದಿ ಸರ್ಕಾರ ರಾಜಕೀಯ ಕಾರಣಗಳಿಗಾಗಿ ಬರ ಪರಪರಿಹಾರದ ಹಣವನ್ನು ಬಿಡುಗಡೆ ಮಾಡದೆ ಕರ್ನಾಟಕದ ರೈತರಿಗೆ ದ್ರೋಹ ಮಾಡಿದೆ ಎಂದರು.

ರೈತ ವಿರೊಧಿ ಬಿಜೆಪಿ ಜೊತೆ ಸೇರಿದ ಜೆಡಿಎಸ್ ಕೂಡ ರೈತ ವಿರೋಧಿಯಾಗಿದೆ. ರೈತರ ಪಕ್ಷ, ಮಣ್ಣಿನ ಮಕ್ಕಳ ಪಕ್ಷ ಎಂದು ಹೇಳಿಕೊಂಡು ಬರುತ್ತಿದ್ದ ಜಾತ್ಯಾತೀತ ಜನತಾದಳ, ರೈತ ವಿರೊಧಿ ಮೋದಿ ಪಕ್ಷ ಬಿಜೆಪಿಯ ಜೊತೆ ಕುಟುಂಬದ ಸ್ವಾರ್ಥಕ್ಕಾಗಿ ಚುನಾವಣಾ ಮೈತ್ರಿ ಮಾಡಿಕೊಂಡಿದ್ದಾರೆ. ಮೋದಿ ಸರ್ಕಾರದ ಎಲ್ಲಾ ರೈತ ವಿರೊಧಿ ನೀತಿಗಳನ್ನು ಬೆಂಬಲಿಸುತ್ತಾ ಇವರೂ ರೈತ ವಿರೊಧಿಗಳಾಗಿದ್ದಾರೆ. ಜಿಲ್ಲೆಯಲ್ಲಿ ಸತತವಾಗಿ ಗೆಲುವನ್ನು ಕಾಣುತ್ತಿರುವ ಜೆಡಿಎಸ್ ರೈತರ ಪರವಾದ ಯಾವ ನಿರ್ಣಾಯಕ ಕೆಲಸಗಳನ್ನು ಮಾಡಿಲ್ಲ ಎಂದರು.

ಜಿಲ್ಲೆಯ ಅಸ್ಮಿತೆ ಆಲೂಗೆಡ್ಡೆ ಬೆಳೆ ನಷಿಸಿಹೋಗಿದೆ. ಮಲೆನಾಡಿನಲ್ಲಿ ಕಾಡಾನೆಗಳ ಹಾವಳಿಯಿಂದ ಜನ ನೆಮ್ಮದಿಯಿಂದ ಬದುಕಲು ಸಾಧ್ಯವಾಗುತ್ತಿಲ್ಲ, ಶುಂಟಿಯಿಂದ ರೈತರ ಭೂಮಿ ಬಂಜರಾಗುತ್ತಿದೆ. ಕೊಬ್ಬರಿ ಬೆಳೆಗಾರರು ಬೆಲೆ ಸಿಗದೆ ಸಂಕಷ್ಟವನ್ನು ಅನುಭವಿಸುತ್ತಿದ್ದಾರೆ. ಕೃಷಿಯೇ ಜಿಲ್ಲೆಯ ಪ್ರಧಾನ ಆಧಾಯದ ಮೂಲವಾಗಿದ್ದರೂ ಇಷ್ಟು ವರ್ಷಗಳಲ್ಲಿ ಕೃಷಿ ಆಧಾರಿತ ಕೈಗಾರಿಕೆಗಳನ್ನು ಸ್ಥಾಪಿಸಲು ಜೆಡಿಎಸ್‌ನಿಂದ ಆಯ್ಕೆಯಾದವರೂ ಪ್ರಮಾಣಿಕವಾಗಿ ಪ್ರಯತ್ನಿಸಲೇ ಇಲ್ಲ ಎಂದರು. ಹಾಗಾಗಿ ಹಾಸನ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಜೆಡಿಎಸ್ ಮೈತ್ರಿ ಅಭ್ಯರ್ಥಿ ಪ್ರಜ್ವಲ್ ರೇವಣ್ಣರನ್ನು ಸೋಲಿಸಿ, ಇಂಡಿಯಾ ಮೈತ್ರಿ ಕೂಟದ ಅಭ್ಯರ್ಥಿಯನ್ನು ಬೆಂಬಲಿಸಿ ಎಂದು ಕರೆಕೊಟ್ಟರು.

ಈ ವೇಳೆ ಕರ್ನಾಟಕ ಪ್ರಾಂತ ರೈತ ಸಂಘದ ಜಿಲ್ಲಾ ಅಧ್ಯಕ್ಷ ಎಚ್.ಆರ್.ನವೀನ್ ಕುಮಾರ್, ಕರ್ನಾಟಕ ರಾಜ್ಯ ರೈತ ಸಂಘದ ಮಹಿಳಾ ಅಧ್ಯಕ್ಷರು ಸಿ.ಎ.ನಾಗರತ್ನ, ಚನ್ನರಾಯಪಟ್ಟಣ ತಾಲೂಕು ಅಧ್ಯಕ್ಷ ಎಸ್.ಎಸ್.ರಾಮಚಂದ್ರ ಉಪಸ್ಥಿತರಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಎಸ್‌ಐಆರ್ ವಿರೋಧಿಸಿ ಪ್ರತಿಭಟನೆ: ಜ್ಞಾನೇಶ ಕುಮಾರ ರಾಜೀನಾಮೆಗೆ ನಾಗರಿಕ ವೇದಿಕೆ ಆಗ್ರಹ

ಕೇಂದ್ರ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ ಕುಮಾರ ಅವರ ರಾಜೀನಾಮೆಗೆ ಆಗ್ರಹಿಸಿ...

ಕೆಮ್ಮಣ್ಣು ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ 10ನೇ ವರ್ಷದ ಸ್ವಚ್ಛತಾ ಆಂದೋಲನ

ಗಾಂಧಿ ಜಯಂತಿ ಅಂಗವಾಗಿ ಕೆಮ್ಮಣ್ಣು ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಹಳೆ...

ಧಾರವಾಡ | ಕರ್ನಾಟಕ ವಿದ್ಯಾವರ್ಧಕ ಸಂಘದಲ್ಲಿ ಗಾಂಧಿ‌ ಜಯಂತಿ‌ ಆಚರಣೆ

ಧಾರವಾಡ ಪಟ್ಟಣದ ಕರ್ನಾಟಕ ವಿದ್ಯಾವರ್ಧಕ ಸಂಘದಲ್ಲಿ ರಾಷ್ಟ್ರಪತಿ ಮಹಾತ್ಮಾ ಗಾಂಧೀಜಿ ಹಾಗೂ ...

ಧಾರವಾಡ | ಎನ್‌.ಎಸ್‌.ಎಸ್‌ ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನದ ದಾರಿ: ನಾಲತವಾಡ

ವಿದ್ಯಾರ್ಥಿಗಳಲ್ಲಿ ಕೇವಲ ಶೈಕ್ಷಣಿಕ ಜ್ಞಾನವಷ್ಟೇ ಅಲ್ಲದೆ, ಸಾಮಾಜಿಕ ಜವಾಬ್ದಾರಿ, ನಾಯಕತ್ವ ಗುಣ...