ಹಾಸನ | ಗುತ್ತಿಗೆ ಆಧಾರದ ಮೇಲೆ ಹಲವು ಹುದ್ದೆಗಳಿಗೆ ಅರ್ಜಿ ಆಹ್ವಾನ; ನ.15ರಂದು ಕೊನೆಯ ದಿನ

Date:

Advertisements

ಹಾಸನ ಜಿಲ್ಲೆಯ ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ಗುತ್ತಿಗೆ ಆಧಾರದ ಮೇಲೆ ಹಲವು ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಆಸಕ್ತರು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ ಎಂದು ಹಾಸನ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳು ತಿಳಿಸಿದ್ದಾರೆ.

ಹುದ್ದೆಗಳ ಕುರಿತು ಪತ್ರಿಕೆ ಪ್ರಕಟಣೆ ಹೊರಡಿಸಿದ್ದು, “ಮಕ್ಕಳ ತಜ್ಞರು, ಫಿಜಿಷಿಯನ್, ಸೈಕಿಯಾಟ್ರಿಸ್ಟ್, ಎಂಬಿಬಿಎಸ್ ವೈದ್ಯಾಧಿಕಾರಿಗಳು, ಪಂಚಕರ್ಮ ತಜ್ಞ ವೈದ್ಯಾಧಿಕಾರಿಗಳು, ನೇತ್ರ ಶಾಸ್ತ್ರಜ್ಞರು, ಶುಶ್ರೂಷಕಿಯರು, ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯರು, ಕಿರಿಯ ಆರೋಗ್ಯ ಸಹಾಯಕರು, ಆಡಿಯೋ ಮೆಟ್ರಿಕ್ ಅಸಿಸ್ಟೆಂಟ್, ಬ್ಲಾಕ್ ಎಪಿಡವಾಲಾಜಿಸ್ಟ್, ಕೌನ್ಸೆಲರ್, ಡಯಟ್ ಕೌನ್ಸೆಲರ್, ಜಿಲ್ಲಾ ಸಂಯೋಜಕರು, ಲ್ಯಾಬ್ ಟೆಕ್ನಿಷಿಯನ್ಸ್, ಪ್ರೋಗ್ರಾಮ್ ಮ್ಯಾನೇಜರ್, ಟಿಬಿಹೆಜ್‌ವಿ ಮತ್ತು ಫಿಜಿಯೋಥೆರಪಿಸ್ಟ್ ಸಂಖ್ಯೆಗೆ ಅನುಗುಣವಾಗಿ ಅನ್ವಯಿಸುವ ರೋಸ್ಟರ್ ಕಂ ಮೆರಿಟ್ ಸಿಸ್ಟಮ್ ಆಧಾರದ ಮೇಲೆ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಷರತ್ತು ಮತ್ತು ನಿಬಂಧನೆಗೆ ಒಳಪಟ್ಟು ಆನ್‌ಲೈನ್ ಅರ್ಜಿಗಳನ್ನು ಆಹ್ವಾನಿಸಲಾಗಿದೆ” ಎಂದು ತಿಳಿಸಿದ್ದಾರೆ.

ಪ್ರಯುಕ್ತ ಸದರಿ ಹುದ್ದೆಗಳ ವಿದ್ಯಾರ್ಹತೆ, ವಯೋಮಿತಿ ಹುದ್ದೆಗಳ ಸಂಖ್ಯೆ ಮತ್ತು ಇತರೆ ಮಾಹಿತಿಯನ್ನು ಈ ಕಚೇರಿಯ ಸೂಚನಾ ಫಲಕ ಹಾಗೂ ಆರೋಗ್ಯ ನಿರ್ದೇಶನಾಲಯದ ವೆಬ್‌ಸೈಟ್‌ https://nhm.karnataka.gov.in/285URIನಲ್ಲಿ ಪಡೆದುಕೊಂಡು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಸೂಚಿಸಿದೆ. https://hassan.nic.in/en/notice category/recruitment/https://hassan.nic.in/en/ನಲ್ಲಿ ಅರ್ಜಿ ಸಲ್ಲಿಸಲು ನವೆಂಬರ್‌ 15 ಕೊನೆಯ ದಿನಾಂಕವಾಗಿದೆ.

Advertisements

ಈ ಸುದ್ದಿ ಓದಿದ್ದೀರಾ? ಉಡುಪಿ | ಮಹಾಲಕ್ಷ್ಮೀ ಬ್ಯಾಂಕ್‌ ಅವ್ಯವಹಾರ: ಸರ್ಕಾರದ ಮಧ್ಯಸ್ಥಿಕೆಗೆ ಬಿ ಕೆ ಹರಿಪ್ರಸಾದ್‌ ಆಗ್ರಹ

“ಪ್ರತಿ ದಿನ ಕೆಲಸದ ವೇಳೆಯಲ್ಲಿ ಈ ಕಚೇರಿಯಲ್ಲಿ ಗುತ್ತಿಗೆ ತಜ್ಞ ವೈದ್ಯರು ಹಾಗೂ ವೈದ್ಯಾಧಿಕಾರಿಗಳ ನೇರ ಸಂದರ್ಶನ ನಡೆಸಲಾಗುತ್ತದೆ. ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಈ ಕಚೇರಿಯಲ್ಲಿ ನವೆಂಬರ್‌ 28ರಂದು ಶುಶ್ರೂಷಕಿಯರಿಗೆ, ನವೆಂಬರ್‌ 30ರಂದು ಉಳಿದ ಹುದ್ದೆಗಳಿಗೆ ದಾಖಲಾತಿ ಪರಿಶೀಲನೆ ನಡೆಸಲಾಗುವುದು” ಎಂದು ತಿಳಿಸಿದ್ದಾರೆ.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X