ಹಾಸನ ಜಿಲ್ಲೆಯಲ್ಲಿ 2025-26ನೇ ಸಾಲಿನ ಜಿಲ್ಲಾ ಹಾಗೂ ತಾಲೂಕು ಮಟ್ಟದ ಶ್ರೇಷ್ಠ ಕೃಷಿಕ ಪ್ರಶಸ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಸಮಗ್ರ ಬೆಳೆ ಪದ್ಧತಿ, ಸಮಗ್ರ ನೀರು ನಿರ್ವಹಣೆ, ಸಾವಯವ ಕೃಷಿ, ಆಧುನಿಕ ಯಂತ್ರೋಪಕರಣ ಬಳಕೆ, ತೋಟಗಾರಿಕೆ, ಹೈನುಗಾರಿಕೆ, ಕೋಳಿ ಸಾಕಾಣಿಕೆ, ಮೀನುಗಾರಿಕೆ, ರೇಷ್ಮೆ ಬೇಸಾಯ, ಹಸಿರು ಮನೆ ಅಳವಡಿಕೆ, ಕೃಷಿ ಸಂಸ್ಕರಣೆ, ಅರಣ್ಯ ಕೃಷಿ, ಆಡು, ಕುರಿ, ಮೊಲ ಸಾಕಾಣಿಕೆ ಇತ್ಯಾದಿ ಕೃಷಿ ಚಟುವಟಿಕೆಗಳಲ್ಲಿ ಸಾಧನೆ ಮಾಡಿದವರು, ಜಿಲ್ಲಾ ಹಾಗೂ ತಾಲೂಕು ಮಟ್ಟದ ಶ್ರೇಷ್ಠ ಕೃಷಿಕ ಪ್ರಶಸ್ತಿಗೆ ಅರ್ಜಿಯನ್ನು ಸಲ್ಲಿಸಲು ಅರ್ಹರಿರುತ್ತಾರೆ.
ರೈತರು ಮತ್ತು ರೈತ ಮಹಿಳೆಯರು ಅರ್ಜಿಗಳನ್ನು ಹತ್ತಿರದ ಸಹಾಯಕ ಕೃಷಿ ನಿರ್ದೇಶಕರುಗಳ ಕಚೇರಿಗಳಿಂದ ಪಡೆದುಕೊಂಡು ಜು.31 ರೊಳಗೆ ಸಂಬಂಧಿತ ತಾಲೂಕಿನ ಸಹಾಯಕ ಕೃಷಿ ನಿರ್ದೇಶಕರ ಕಚೇರಿಗೆ ಸಲ್ಲಿಸಬೇಕು. ಈಗಾಗಲೇ ಪ್ರಶಸ್ತಿ ಪಡೆದ ರೈತರು ಪುನಃ ಅರ್ಜಿ ಸಲ್ಲಿಸಲು ಅರ್ಹರಿರುವುದಿಲ್ಲ.
ಹೆಚ್ಚಿನ ಮಾಹಿತಿಗಾಗಿ ಹಾಸನ ಜಿಲ್ಲೆಯ ಎಲ್ಲಾ ಸಹಾಯಕ ಕೃಷಿ ನಿರ್ದೇಶಕರು ಹಾಗೂ ರೈತ ಸಂಪರ್ಕ ಕೇಂದ್ರದ ಅಧಿಕಾರಿಯವರನ್ನು ಸಂಪರ್ಕಿಸಬಹುದೆಂದು ಜಂಟಿ ಕೃಷಿ ನಿರ್ದೇಶಕರು ತಿಳಿಸಿದ್ದಾರೆ.
ಇದನ್ನೂ ಓದಿ: ಹಾಸನ | ತಹಶೀಲ್ದಾರ್‌ಗಳು ಕೇಂದ್ರ ಸ್ಥಾನದಲ್ಲಿದ್ದು ಕರ್ತವ್ಯ ನಿರ್ವಹಿಸುವಂತೆ ಡಿಸಿ ಸೂಚನೆ
