ಹಾಸನ | ವಿದ್ಯುತ್‌ ಬಿಲ್‌ ಕೇಳಿದ್ದಕ್ಕೆ ಸಿಬ್ಬಂದಿ ಮೇಲೆ ಹಲ್ಲೆ

Date:

ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಘೋಷಣೆ ಮಾಡಿದ್ದ ಐದು ಗ್ಯಾರಂಟಿಗಳಲ್ಲಿ ಒಂದಾದ ‘200 ಯುನಿಟ್ ಉಚಿತ ವಿದ್ಯುತ್’ ಯೋಜನೆ ಇನ್ನೂ ಜಾರಿಗೆ ಬಂದಿಲ್ಲ. ಆದರೆ, ವಿದ್ಯುತ್ ಬಿಲ್ ಕಟ್ಟುವ ವಿಚಾರದಲ್ಲಿ ಪ್ರತಿದಿನ ಗ್ರಾಹಕರು ಮತ್ತು ಕೆಇಬಿ ಸಿಬ್ಬಂದಿ ನಡುವೆ ಘರ್ಷಣೆ ನಡೆಯುತ್ತಿದೆ. ವಿದ್ಯುತ್ ಬಿಲ್​ ಸಂಗ್ರಹಕ್ಕೆ ಹೋಗುವ ಸಿಬ್ಬಂದಿಗಳ ಮೇಲೆ ಹಲವೆಡೆ ಹಲ್ಲೆಗಳು ನಡೆಯುತ್ತಿವೆ.

ಹಾಸನ ಜಿಲ್ಲೆ ಅರಕಲಗೂಡು ತಾಲೂಕಿನ ಹಳೆ ಕೋರ್ಟ್​ ರಸ್ತೆಯಲ್ಲಿರುವ ಮನೆಯೊಂದಕ್ಕೆ ಚಾಮುಂಡೇಶ್ವರಿ ವಿದ್ಯುತ್‌ ಸರಬರಾಜು ನಿಗಮ(ಸೆಸ್ಕಾಂ) ಸಿಬ್ಬಂದಿ ಸಂತೋಷ್​ ಎಂಬುವರು ವಿದ್ಯುತ್ ಮೀಟರ್ ರೀಡಿಂಗ್​ಗೆ ಹೋಗಿದ್ದರು. ಆ ವೇಳೆ, ಅವರ ಮೇಲೆ ಮನೆಯ ಯಜಮಾನ ಮತ್ತು ಅವನ ಅಪ್ರಾಪ್ತ ಮಗ ಸೇರಿ ಹಲ್ಲೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.

ಈ ಸುದ್ದಿ ಓದಿದ್ದೀರಾ? ಕೊಪ್ಪಳ | ಉದ್ಯೋಗ ಖಾತ್ರಿ ಯೋಜನೆ ಸಮರ್ಪಕ ಜಾರಿಗೆ ಕೂಲಿ ಕಾರ್ಮಿಕರ ಆಗ್ರಹ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಮನೆ ಮಾಲೀಕ ಕೋಳಿ ಅಂಗಡಿ ನಡೆಸುತ್ತಿದ್ದಾರೆ. ಸೆಸ್ಕಾಂ ಸಿಬ್ಬಂದಿ ಮೇ 31ರಂದು ಅವರ ಮನೆಗೆ ಹೋಗಿ, ಮೀಟರ್​ ರೀಡ್​ ಮಾಡಿ, ₹1,150 ರೂಪಾಯಿ ಬಿಲ್​ ಕೊಟ್ಟಿದ್ದಾರೆ. ಆದರೆ, ಸುರೇಶ್​ ಆತನಿಗೆ ಬೈದಿದ್ದು, ಅಲ್ಲೇ ಇದ್ದ ತನ್ನ ಮಗನೊಂದಿಗೆ ಸೇರಿ ಸಂತೋಷ್​ ಮೇಲೆ ಹಲ್ಲೆ ನಡೆಸಿದ್ದಾರೆ. ಸಂತೋಷ್​ಗೆ ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಘಟನೆಗೆ ಸಂಬಂಧಿಸಿದಂತೆ ಅರಕಲಗೂಡು ಠಾಣೆ ಪೊಲೀಸರು ಆಸ್ಪತ್ರೆಗೆ ಭೇಟಿ ನೀಡಿ, ಪರಿಶೀಲನೆ ಮಾಡಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ಮನರೇಗಾ ಯೋಜನೆಯ ಲಾಭ ಬಡವರಿಗೆ ದೊರಕಲಿ: ಬಸವರಾಜ ಗಿರಿತಿಮ್ಮಣ್ಣವರ 

ಮನರೇಗಾ ಯೋಜನೆಯಡಿ ಈ ಬಾರಿ ಸಮುದಾಯ ಕಾಮಗಾರಿಗಳನ್ನು ಸಮರ್ಪಕವಾಗಿ ಕಾರ್ಯ ರೂಪಕ್ಕೆ...

ಕೋಲಾರ ಲೋಕಸಭಾ ಕ್ಷೇತ್ರಕ್ಕೆ ಮಾದಿಗ ಸಮುದಾಯದ ಅಭ್ಯರ್ಥಿ ಘೋಷಣೆಗೆ ಆಗ್ರಹ

2024ನೇ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವು ಕೋಲಾರ ಲೋಕಸಭಾ ಕ್ಷೇತ್ರಕ್ಕೆ ಮಾದಿಗ...

ಬೀದರ್‌ | ಕೇಂದ್ರ ಸಚಿವ ಭಗವಂತ ಖೂಬಾಗೆ ಇದು ಕೊನೆ ಚುನಾವಣೆ: ಸಚಿವ ಈಶ್ವರ ಖಂಡ್ರೆ

ಕೇಂದ್ರ ಸಚಿವ ಭಗವಂತ ಖೂಬಾ ಅವರ ದುರಂಕಾರ, ಅಧಿಕಾರದ ದರ್ಪ ಹಾಗೂ...