ಹಾಸನ | ಆಯುರ್ವೇದ ಮನುಷ್ಯನ ಆರೋಗ್ಯಕ್ಕೆ ವರದಾನ; ಶಾಸಕ ಸ್ವರೂಪ್ ಪ್ರಕಾಶ್

Date:

ಹಾಸನ ನಗರದ ಚನ್ನಪಟ್ಟಣ ಕೆ.ಎಚ್.ಬಿ ಲೇಔಟ್ ನಲ್ಲಿ ನೂತನವಾಗಿ ಆರಂಭವಾಗಿರುವ ಮೈ ಎಸ್.ಎಂ ವೆಲ್ನೆಸ್ ಕೇರ್ ನ ನೂತನ ಕಚೇರಿ ಉದ್ಘಾಟನೆ ನೆರವೇರಿಸಿ ಆಯುರ್ವೇದಿಕ್ ಉತ್ಪನ್ನಗಳು ಮನುಷ್ಯನ ಆರೋಗ್ಯ ರಕ್ಷಣೆಗೆ ವರದಾನ ಎಂದು ಶಾಸಕ ಸ್ವರೂಪ್ ಪ್ರಕಾಶ್ ಹೇಳಿದರು.

- Advertisement -

ಇತ್ತೀಚೆಗೆ ಬದಲಾದ ಆಹಾರ ಪದ್ಧತಿ ಹಾಗೂ ಬದಲಾದ ಜೀವನ ಶೈಲಿಯಿಂದ ಮನುಷ್ಯನ ಆರೋಗ್ಯ ದಿನೇ ದಿನೇ ಹಾಳಾಗುತ್ತಿದೆ ಆರೋಗ್ಯದ ಸುರಕ್ಷತೆ ದೃಷ್ಟಿಯಿಂದ ಆಯುರ್ವೇದ ಉತ್ಪನ್ನಗಳನ್ನು ಬಳಸುವುದು ಒಳಿತು. ರೋಗ ಮುಕ್ತ ಭಾರತ ನಿರ್ಮಾಣಕ್ಕೆ ಸಂಸ್ಥೆ ಕೆಲಸ ಮಾಡುತ್ತಿದ್ದು ಇದಕ್ಕೆ ಎಲ್ಲರೂ ಕೈಜೋಡಿಸುವ ಅಗತ್ಯವಿದೆ, ಆರೋಗ್ಯ ಸಮಸ್ಯೆ ಉಲ್ಬಣಗೊಳ್ಳುವ ಮೊದಲೇ ಎಚ್ಚೆತ್ತುಕೊಂಡು ಆಯುರ್ವೇದ ಉತ್ಪನ್ನಗಳ ಬಳಕೆ ಮಾಡುವುದು ಸೂಕ್ತ. ಇದರ ಜೊತೆ ಸಂಸ್ಥೆಯಲ್ಲಿರುವ ಆಯುರ್ವೇದ ಉತ್ಪನ್ನಗಳನ್ನು ಬಳಕೆಮಾಡಿದಲ್ಲಿ ಉತ್ತಮ ಆರೋಗ್ಯ ಕಾಪಾಡಿಕೊಳ್ಳಬಹುದಾಗಿದೆ ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಇದನ್ನೂ ಓದಿದ್ದೀರಾ?ಹಾಸನ | ಕಿಡ್ನಿ ವೈಪಲ್ಯ; ಆರ್ಥಿಕ ನೆರವಿಗೆ ಮನವಿ

ಬಿಪಿ, ಶುಗರ್, ಅಧಿಕ ಬೊಜ್ಜು, ಹೀಗೆ ನಾನಾ ರೀತಿಯ ಖಾಯಿಲೆಗಳು ಇತ್ತೀಚಿನ ದಿನಗಳಲ್ಲಿ ಜನರಿಗೆ ಬಳುವಳಿಯಾಗಿ ಬಂದಿವೆ. ಇಂತಹ ಎಲ್ಲಾ ಸಮಸ್ಯೆಗಳಿಗೆ  ಕಡಿವಾಣ ಹಾಕಿ ಆರೋಗ್ಯಕರ ಸಮಾಜ ನಿರ್ಮಾಣಕ್ಕೆ ಮುಂದಾಗಿರುವ ಎಂ.ಎಸ್ ವೆಲ್ನೆಸ್ ಕೇರ್ ನ ಸದುಪಯೋಗ ಪಡೆದುಕೊಳ್ಳಬೇಕು ಎಂದು ಮನವಿ ಮಾಡಿದರು. ಈ ವೇಳೆ ಸಂಸ್ಥೆಯ ಸಂಸ್ಥಾಪಕ ಯೂಸೀಫ್, ವ್ಯವಸ್ಥಾಪಕ ನಿರ್ದೇಶಕ ಮೊಹಮ್ಮದ್ ರಫೀಕ್, ಮುಖ್ಯ  ಕಾರ್ಯನಿರ್ವಹಣಾಧಿಕಾರಿ ಸಹ್ಯದ್ ಖಲಂದರ್, ನಿರ್ದೇಶಕ ಹಾಜಿ, ಇತರರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಾರ್ಮಿಕರು ಹಕ್ಕು ಮತ್ತು ಸೌಲಭ್ಯಗಳಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಟಿ.ಎಂ. ಶಾಹಿದ್ ತೆಕ್ಕಿಲ್

ಕಾರ್ಮಿಕರ ಹಿತಾಸಕ್ತಿಯನ್ನು ಕಾಪಾಡುವುದರೊಂದಿಗೆ ಸರ್ಕಾರದ ಕಲ್ಯಾಣ ಕಾರ್ಯಕ್ರಮಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ...

ಬಾಗೇಪಲ್ಲಿಯಲ್ಲಿ ರಸ್ತೆ ಅಪಘಾತ:ರೈತ ನಂಜಪ್ಪ ಸಾವು

ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದು ದ್ವಿಚಕ್ರ ವಾಹನದಲ್ಲಿ ಹೊಲಕ್ಕೆ ತೆರಳುತ್ತಿದ್ದ ನಡಂಪಲ್ಲಿ...

ಮಂಗಳೂರು | ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣ: ಆರೋಪಿಗಳ ಜಾಮೀನು ರದ್ದುಪಡಿಸಿದ ಸುಪ್ರೀಂ ಕೋರ್ಟ್

ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣದಲ್ಲಿ ಆರೋಪಿಗಳಿಗೆ ಇತ್ತೀಚೆಗೆ ನ್ಯಾಯಾಲಯ ಜಾಮೀನು ನೀಡಿತ್ತು....

ಕೋಲಾರ | ಚೈನಾ ಶಾಂಘೈನಲ್ಲಿ ಕನ್ನಡದ ಮೊದಲ ಜಾನಪದ ಕಾರ್ಯಕ್ರಮ: ಗೋ.ನಾ. ಸ್ವಾಮಿ ಭಾಗಿ

ಚೈನಾ ದೇಶದ ಶಾಂಘೈನಲ್ಲಿ ಕನ್ನಡಿಗರ ಸಂಘದ ವತಿಯಿಂದ ಆಯೋಜಿಸಿದ್ದ ಕನ್ನಡದ ಮೊದಲ...