ಮುಸ್ಲಿಮರ ವಿರುದ್ಧ ಹರಿಹಾಯ್ದಿದ್ದ ಭಜರಂಗದಳದ ರಘು | ಎಫ್ಐಆರ್ ದಾಖಲಾಗಿಲ್ಲ ಎಂದ ಪೊಲೀಸ್ ವರಿಷ್ಠಾಧಿಕಾರಿ

Date:

“ಭಜರಂಗದಳ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ಯಾವ ಹೇಳಿಕೆ ನೀಡಿದ್ದಾರೆಂಬುದು ಗಮನಕ್ಕೆ ಬಂದಿಲ್ಲ. ಯಾವುದೇ ರೀತಿಯ ಎಫ್‌ಐಆರ್‌ ದಾಖಲಾಗಿಲ್ಲ” ಎಂದು ಹಾಸನ ಜಿಲ್ಲಾ ವರಿಷ್ಠಾಧಿಕಾರಿ ಹರಿರಾಂ ಶಂಕರ್‌ ತಿಳಿಸಿದ್ದಾರೆ.

- Advertisement -

ಅಕ್ರಮ ಗೋ ಹತ್ಯೆ ಖಂಡಿಸಿ ಭಜರಂಗದಳ ನಡೆಸಿದ ಪ್ರತಿಭಟನೆಯಲ್ಲಿ ರಾಜ್ಯ ಸಹ ಸಂಚಾಲಕ ರಘು ಎಂಬಾತ ಪ್ರಚೋದನಕಾರಿ ಭಾಷಣ ಮಾಡಿರುವ ಘಟನೆ ಹಾಸನ ಜಿಲ್ಲೆಯ ಸಕಲೇಶಪುರದಲ್ಲಿ ನಡೆದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಶಿಕ್ಷಣ ಮಾರಾಟ ಮಾಡಿದ ಶಾಲೆಗಳೇ ಈಗ ಮಾರಾಟಕ್ಕೆ!

ಕರ್ನಾಟಕದಲ್ಲಿ ಖಾಸಗಿ ಶಾಲೆಗಳು ಮುಚ್ಚುವ ಹಂತಕ್ಕೆ ತಲುಪಿದ್ದು, ಮಾರಾಟಕ್ಕೆ ಸಜ್ಜಾಗಿವೆ. ಕೋವಿಡ್-19 ಆಕ್ರಮಣದ ನಂತರದಲ್ಲಿ ಖಾಸಗಿ ಶಾಲೆಗಳಲ್ಲಿ ದಾಖಲಾತಿಯಲ್ಲಿ ಭಾರೀ ಕುಸಿತ, ಪ್ರತಿಷ್ಠಿತ ಶಾಲೆಗಳ ಜೊತೆಗೆ ಪೈಪೋಟಿ, ಮೂಲಭೂತ ಸೌಕರ್ಯಕ್ಕೆ ತಕ್ಕಂತೆ ಲಾಭದ...

ಬಿಗಿದ ತುಟಿಯ ದೃಶ್ಯಭಾಷೆ: ನಿರ್ಬಂಧಗಳ ನೆರಳಲ್ಲಿ ರೂಪಕಗಳ ಪ್ರತಿರೋಧ

ಸಿನೆಮಾವನ್ನು ನಿಯಂತ್ರಿಸಲು ಅಧಿಕಾರಶಾಹಿ ಸದಾ ಹೊಸ ಕಟ್ಟುಪಾಡುಗಳನ್ನು ಸೃಷ್ಟಿಸುತ್ತಲೇ ಇರುತ್ತದೆ; ಆದರೆ ಕಲೆಗೆ ಇರುವ ಶಕ್ತಿಯೆಂದರೆ, ಅದು ನಿರ್ಬಂಧಗಳ ಗೋಡೆಗಳನ್ನೇ ಹೊಸ ನೋಟದ ಕಿಟಕಿಗಳನ್ನಾಗಿಸಿಕೊಳ್ಳುತ್ತದೆ. ನೇರ ಮಾತನ್ನು ಕಸಿದುಕೊಂಡಷ್ಟೂ ರೂಪಕಗಳ ನಡಿಗೆ ಬಿಗಿಯಾಗುತ್ತದೆ,...

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಸಂಘಟನೆಯ ಮುಖಂಡ ರಘು ಪ್ರತಿಭಟನೆ ವೇಳೆ, “ನೀನು ತರಕಾರಿ ಮಾರಾಟ ಮಾಡಲು ಮನೆಯ ಮುಂದೆ ಬಂದರೆ ಗುಂಡು ಹಾರಿಸಬೇಕಾಗುತ್ತದೆ” ಎಂದು ವಿವಾದಾತ್ಮಕವಾಗಿ ಮಾತನಾಡಿದ್ದಾರೆ.

“ತರಕಾರಿ, ಮೀನು ಮಾರಾಟ ಮಾಡಲು ಹಿಂದೂಗಳ ಮನೆಯ ಬಳಿ ಬರುವಂತಹ ವ್ಯಾಪಾರಿಗಳು ಎಚ್ಚರಿಕೆಯಿಂದಿರಿ. ಇಲ್ಲಾಂದ್ರೆ ನಮ್ಮಲ್ಲಿರುವ ಕೋವಿಯೊಳಗಿನ ಗುಂಡು ಹೊರಗಡೆ ಬರುತ್ತೆ. ನಾವೂ ಕೂಡ ಗುಂಡು ಹಾರಿಸಬೇಕಾಗುತ್ತದೆ” ಎಂದು ಬೆದರಿಕೆ ಹಾಕಿದ್ದಾರೆ.

“ಸಚಿವ ಪ್ರಿಯಾಂಕ ಖರ್ಗೆ ಇತ್ತೀಚಿಗೆ ಮಾತನಾಡುತ್ತಾ ಆ ದಳ, ಈ ದಳ ಎಂದು ಹೇಳಿದ್ದಾರೆ. ನೇರವಾಗಿ ಭಜರಂಗದಳವೆಂದು ಹೇಳಲಿ ಆಗ ನಾವು ನಮ್ಮ ಭಜರಂಗದಳದ ತಾಕತ್ತು ತೋರಿಸುತ್ತೇವೆ” ಎಂದು ಸವಾಲು ಹಾಕಿದ್ದಾರೆ.

ಘಟನೆಗೆ ಸಂಬಂಧಿಸಿದಂತೆ ಹಾಸನ ಜಿಲ್ಲಾ ವರಿಷ್ಠಾಧಿಕಾರಿ ಹರಿರಾಂ ಶಂಕರ್‌ ಹಾಗೂ ಸಕಲೇಶಪುರ ಪೊಲೀಸ್‌ ಅಧಿಕಾರಿ ಈ ದಿನ.ಕಾಮ್‌ನೊಂದಿಗೆ ಮಾತನಾಡಿ, “ಭಜರಂಗದಳ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ಯಾವ ಹೇಳಿಕೆ ನೀಡಿದ್ದಾರೆಂಬುದು ಗಮನಕ್ಕೆ ಬಂದಿಲ್ಲ. ಯಾವುದೇ ರೀತಿಯ ಎಫ್‌ಐಆರ್‌ ದಾಖಲಾಗಿಲ್ಲ” ಎಂದು ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು | ಭಾರತದಲ್ಲಿ ಮಹಿಳೆಯರ ಮೇಲೆ ನಿರಂತರ ದೌರ್ಜನ್ಯ; ಮಾವಳ್ಳಿ ಶಂಕರ್

ಚಿಕ್ಕಮಗಳೂರಿನ ಮಹಾರಾಜ ಗ್ರ್ಯಾಂಡ್ ಹೋಟೆಲ್ ನಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿ...

ಹಾಸನ | ಪ್ರತಿಭಟನೆ ಹತ್ತಿಕ್ಕುವ ಪ್ರಜಾಪ್ರಭುತ್ವ ವಿರೋಧಿ ಕ್ರಮ ಖಂಡಿಸಿ ಜನಪರ ಒಕ್ಕೂಟ ಪ್ರತಿಭಟನೆ 

ಪ್ರತಿಭಟನೆಯನ್ನು ಹತ್ತಿಕ್ಕುವ ಪ್ರಜಾಪ್ರಭುತ್ವ ವಿರೋಧಿ ಕ್ರಮವನ್ನು ಖಂಡಿಸಿ ಹಾಸನದ ಹೇಮಾವತಿ ಪ್ರತಿಮೆಯ...

ಚಿಕ್ಕಮಗಳೂರು | SIR ವಿರೋಧ: ಫಾರಂ – 7ರಲ್ಲಿ ತಪ್ಪು ಮಾಹಿತಿ ನೀಡಿ, ಮತವಂಚಿಸಲಾಗಿದೆ; ಎದ್ದೇಳು ಕರ್ನಾಟಕ 

SIR ವಿರೋಧಿಸಿ, ಚುನಾವಣಾ ಆಯುಕ್ತರಾದ ಜ್ಞಾನೇಶ್‌ಕುಮಾರ್‌ರವರನ್ನು ವಜಾಗೊಳಿಸಲು ಮತ್ತು ಫಾರಂ ನಂ.7...

ಗದಗ | ಮಾಜಿ ಗ್ರಾ. ಪಂ ಸದಸ್ಯನ ಬರ್ಬರ ಹತ್ಯೆ

ಲಕ್ಕುಂಡಿ ಗ್ರಾಮದ ಹೊರವಲಯದಲ್ಲಿ ಗ್ರಾಮ ಪಂಚಾಯಿತಿ ಮಾಜಿ ಸದಸ್ಯರೊಬ್ಬರನ್ನು ಬರ್ಬರವಾಗಿ ಹತ್ಯೆ...