ಹಾಸನ ಜಿಲ್ಲೆ ಸಕಲೇಶಪುರ ಬಳಿಯ ಹೇಮಾವತಿ ನದಿಯಲ್ಲಿ ಶನಿವಾರ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿದೆ.
ಹೇಮಾವತಿ ಸೇತುವೆ ಬಳಿ ನದಿಯಲ್ಲಿ ಶವ ತೇಲುತ್ತಿದ್ದನ್ನು ಗಮನಿಸಿದ ಸಾರ್ವಜನಿಕರು, ತಕ್ಷಣವೇ ಸಕಲೇಶಪುರ ನಗರ ಠಾಣೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಸ್ಥಳಕ್ಕೆ ಆಗಮಿಸಿದ ಪೊಲೀಸರು, ಮೃತದೇಹವನ್ನು ನದಿ ನೀರಿನಿಂದ ಹೊರೆಗೆ ತೆಗೆದು ಮರಣೋತ್ತರ ಪರೀಕ್ಷೆಗೆ ಪಟ್ಟಣದ ತಾಲೂಕು ಸಾರ್ವಜನಿಕ ಆಸ್ಪತ್ರೆ ಶವಗಾರಕ್ಕೆ ಸಾಗಿಸಿದ್ದಾರೆ. ಮೃತ ವ್ಯಕ್ತಿಯ ಗುರುತು ಪತ್ತೆಯಾಗಿಲ್ಲ.
ಈ ಸುದ್ದಿ ಓದಿದ್ದೀರಾ? ಬೊಮ್ಮನಹಳ್ಳಿ ಕಾಂಗ್ರೆಸ್ ಅಭ್ಯರ್ಥಿಯಾದ ಚಿತ್ರ ನಿರ್ಮಾಪಕ ಉಮಾಪತಿ ಗೌಡ
ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಸಕಲೇಶಪುರ ನಗರ ಠಾಣೆ ಪೊಲೀಸರು ತನಿಖೆ ಆರಂಭಿಸಿದ್ದಾರೆ.