ಹಾಸನ ಚಲೋ | ಪ್ರಕರಣದಲ್ಲಿ ಹಾಲಿ, ಮಾಜಿಗಳೆಲ್ಲರೂ ನುಣುಚಿಕೊಳ್ಳಲು ಯತ್ನಿಸುತ್ತಿದ್ದಾರೆ: ಮಲ್ಲಿಗೆ ಸಿರಿಮನೆ

Date:

ಪ್ರಕರಣ ಬಯಲಿಗೆ ಬಂದಾಗ ಒಂದೇ ರೀತಿಯ ಪ್ರತಿಕ್ರಿಯೆಗಳು ಬಂದವು. ಅಪರಾಧಿಗಳು ಮತ್ತವರ ಕುಟುಂಬಗಳು ಪೆನ್‌ಡ್ರೈವ್‌ನ ಹಂಚಿದ್ಯಾರು ಎಂಬುದರ ಬಗ್ಗೆ ಮಾತನಾಡುತ್ತಾ ಪ್ರಕರಣದಿಂದ ನುಣುಚಿಕೊಳ್ಳಲು ಯತ್ನಿಸಿದರು. ಸಂತ್ರಸ್ತ ಮಹಿಳೆಯರನ್ನೇ ಅಪರಾಧಿಗಳನ್ನಾಗಿ ಮಾಡುವ ಯತ್ನಗಳು ನಡೆದವು. ಸರ್ಕಾರವೂ ಕೂಡ ಪ್ರಕರಣದಲ್ಲಿ ತಮ್ಮದು ಹೆಚ್ಚಿನ ಪಾತ್ರವಿಲ್ಲ ಎಂಬಂತೆ ನುಣುಚಿಕೊಳ್ಳಲು ಯತ್ನಿಸಿತು. ಈ ಎಲ್ಲ ನುಣುಚುಕೋರರ ಬಣ್ಣ ಬಯಲಾಗಿದೆ. ಇದು, ಇಡೀ ವ್ಯವಸ್ಥೆಯ ವೈಫಲ್ಯ ಎಂದು ಕರ್ನಾಟಕ ಜನಶಕ್ತಿಯ ಮಲ್ಲಿಗೆ ಸಿರಿಮನೆ ಹೇಳಿದರು.

- Advertisement -

“ಹೆಣ್ಣು ಮಕ್ಕಳು ತಮ್ಮ ಚಿಕ್ಕ ಕೆಲಸಕ್ಕಾಗಿ, ಪ್ರಮೋಷನ್‌ಗಾಗಿ, ಪಂಚಾಯತಿ ಮಟ್ಟದ ಟಿಕೆಟ್‌ಗಾಗಿ ಇಂತಹ ಕಾಮಕರ ದೌರ್ಜನ್ಯ ಬಲಿಯಾಗಬೇಕಿರುವ ಪರಿಸ್ಥಿತಿಯನ್ನು ಈ ವ್ಯವಸ್ಥೆ ಮಹಿಳೆಯರಿಗೆ ನೀಡಿದೆ. ಈ ವ್ಯವಸ್ಥೆಯನ್ನು ಬದಲಿಸಲು ಇಡೀ ದೇಶ ಒಗ್ಗೂಡಿ ಹೋರಾಟ ನಡೆಸಬೇಕು. ಇಂತಹ ದೌರ್ಜನ್ಯ ಪ್ರಕರಣಗಳನ್ನ ಸಮಗ್ರವಾಗಿ ಪರಿಶೀಲಿಸಲು ಉನ್ನತ ಸಮಿತಿಯನ್ನು ಸರ್ಕಾರ ರಚನೆ ಮಾಡಬೇಕು. ಗುಹೆಯಲ್ಲಿ ಅವಿತಿರುವ ಪ್ರಧಾನಿ ಮೋದಿ ಅವರು ಗುಹೆಯಿಂದ ಹೊರಬರಬೇಕು. ತಮ್ಮದೇ ಮಿತ್ರ ಪಕ್ಷದ ಸಂಸದ ಎಸಗಿರುವ ದೌರ್ಜನ್ಯದ ವಿರುದ್ಧ ಕ್ರಮಕ್ಕೆ ಮುಂದಾಗಬೇಕು” ಎಂದು ಆಗ್ರಹಿಸಿದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿರಸಿ | ರಾಜೇಂದ್ರ ಸಿರ್ಸಿಕರ್‌ಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಗೌರವ

ಶಿರಸಿ: ಪ್ರಾಣಿ-ಪಕ್ಷಿಗಳ ರಕ್ಷಣೆ ಮತ್ತು ಪುನರ್ವಸತಿ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿರಸಿಯ ರಾಜೇಂದ್ರ...

ಧಾರವಾಡ | ಪೊಲೀಸ್ ಹೆಸರೇಳಿ ರೂ. 15,700 ವಂಚನೆ: ನಾಲ್ಕು ಬೈಕ್‍ಗಳು ನಗದು ವಶ

ಪೊಲೀಸ್ ಹೆಸರೇಳಿ ವ್ಯಕ್ತಿಯೊಬ್ಬರಿಂದ ₹15,700 ಹಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ...

ಗೋಕರ್ಣ | ಕುಡ್ಲೆ ಕಡಲತೀರದಲ್ಲಿ ಸಮುದ್ರ ಸುಳಿಗೆ ಸಿಲುಕಿದ್ದ ಬೆಂಗಳೂರಿನ ಇಬ್ಬರು ಪ್ರವಾಸಿಗರ ರಕ್ಷಣೆ

ಗೋಕರ್ಣ: ಸಮುದ್ರದಲ್ಲಿ ಈಜುತ್ತಿದ್ದ ವೇಳೆ ಅಪಾಯಕಾರಿ ಸುಳಿಗೆ ಸಿಲುಕಿದ ಬೆಂಗಳೂರಿನ ಇಬ್ಬರು...