ಹಾಸನ ಚಲೋ ಬೃಹತ್ ಹೋರಾಟದ ವೇದಿಕೆಗೆ ಬಂದು ಹಾಸನ ಜಿಲ್ಲಾಧಿಕಾರಿ ಮನವಿ ಸ್ವೀಕರಿಸದ ಹಿನ್ನೆಲೆಯಲ್ಲಿ ನೂರಾರು ಹೋರಾಟಗಾರರು ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಿದರು.
ಸಂತ್ರಸ್ತ ಮಹಿಳೆಯರ ಪರವಾಗಿ ನಡೆಯುತ್ತಿರುವ ಹೋರಾಟಕ್ಕೆ ಡಿಸಿ ಬಾರದ ಹಿನ್ನೆಲೆ ಜಿಲ್ಲಾಧಿಕಾರಿ ಕಚೇರಿ ಬಳಿ ಜಮಾಯಿಸಿದ ಹೋರಾಟಗಾರರು ಧಿಕ್ಕಾರ ಕೂಗಿ ಆಕ್ರೋಶ ಹೊರಹಾಕಿದರು.
ಹಾಸನ ಚಲೋ ಹೋರಾಟಗಾರರು ಜಿಲ್ಲಾಧಿಕಾರಿ ಕಚೇರಿ ಮುತ್ತಿಗೆಗೆ ಮುಂದಾದ ಹಿನ್ನೆಲೆ ಜಿಲ್ಲಾಧಿಕಾರಿ ಕಚೇರಿ ಮುಂಭಾಗದ ರಸ್ತೆಯಲ್ಲಿ ಕೆಲಕಾಲ ವಾಹನ ಸಂಚಾರಕ್ಕೆ ತೊಡಕಾಯಿತು.
ಈ ಸುದ್ದಿ ಓದಿದ್ದೀರಾ? ಪ್ರಜ್ವಲ್ ರೇವಣ್ಣ ಅತ್ಯಾಚಾರ ಪ್ರಕರಣ | ಹಾಸನ ಚಲೋ; ವಿಕೃತ ಕಾಮಿ ಪ್ರಜ್ವಲ್ ಬಂಧನಕ್ಕೆ ಮೊಳಗಿದ ಘೋಷಣೆ
ಡಿಸಿ ಆಗಮನಕ್ಕೆ ಹೋರಾಟಗಾರರು ಪಟ್ಟುಹಿಡಿದ ಹಿನ್ನೆಲೆ ಸ್ಥಳಕ್ಕೆ ಬಂದ ಹೆಚ್ಚುವರಿ ಜಿಲ್ಲಾಧಿಕಾರಿ ಹೋರಾಟಗಾರರ ಅಹವಾಲನ್ನು ಆಲಿಸಿ, ಮನವಿ ಸ್ವೀಕರಿಸಿದರು.
