ಹಾಸನ ಚಲೋ | ಪ್ರಜ್ವಲ್-ರೇವಣ್ಣಗೆ ‘ಓನ್ಲೀ ಜೈಲ್ – ನೋ ಬೇಲ್’ ಎಂದು ಸರ್ಕಾರ ಹೇಳಬೇಕು: ಸುಭಾಷಿಣಿ ಅಲಿ

Date:

ಹಾಸನದಲ್ಲಿ ನಡೆದಿರುವ ಲೈಂಗಿಕ ದಬ್ಬಾಳಿಕೆಯನ್ನು ಖಂಡಿಸಿ, ಸಂತ್ರಸ್ತೆಯರಿಗೆ ಧೈರ್ಯ ತುಂಬಲು ನಾವಿಲ್ಲಿದ್ದೇವೆ. ರೇವಣ್ಣ ಕುಟುಂಬವು ರಾಜಕೀಯ, ಹಣ ಬಲದಿಂದ ನಡೆಸುವ ಅವ್ಯವಹಾರಗಳಿಗೆ, ದರ್ಪಕ್ಕೆ ಇನ್ನು ಉಳಿಗಾಲವಿಲ್ಲ. ಕೇಂದ್ರದಲ್ಲಿರುವ ಬಿಜೆಪಿ ಸರ್ಕಾರ ‘ಬಲತ್ಕಾರಿಗಳ ಬಚಾವು’ ಮಾಡುವ ಸರ್ಕಾರವಾಗಿದೆ. ಆ ಸರ್ಕಾರವನ್ನು ಚುನಾವಣೆಯಲ್ಲಿ ಕೆಳಗಿಸಬೇಕು ಎಂದು ಮಹಿಳಾ ಹೋರಾಟಗಾರ್ತಿ ಸುಭಾಷಿಣಿ ಅಲಿ ಹೇಳಿದ್ದಾರೆ.

ಹಾಸನದಲ್ಲಿ ಪ್ರಜ್ವಲ್ ರೇವಣ್ಣನ ಬಂಧನಕ್ಕೆ ಆಗ್ರಹಿಸಿ ನಡೆದ ಬೃಹತ್ ಹೋರಾಟದಲ್ಲಿ ಅವರು ಮಾತನಾಡಿದರು. “ಶತಮಾನಗಳಿಂದಲೂ ಮಹಿಳಾ ಸಂಘಟನೆ ಸಂಘರ್ಷ ಮಾಡುತ್ತಿದೆ. ಸಂವಿಧಾನ ಜಾರಿಯಾದ ನಂತರವೂ ದೇಶದ ನಾನಾ ಭಾಗಗಳಲ್ಲಿ ಮಹಿಳೆಯರ ಮೇಲೆ ದಬ್ಬಾಳಿಕೆ ನಡೆಯುತ್ತಲೇ ಇದೆ. ಭಾರತದಲ್ಲಿ ಸಾವಂತವಾದ, ಪುರಷವಾದ ಬೇರೂರಿದೆ. ಜೊತೆಗೆ, ಬಂಡವಾಳ ಮತ್ತು ಮತೀಯವಾದವೂ ಸೇರಿಕೊಂಡಿದೆ. ಇವುಗಳನ್ನು ಒಡೆಯದಿದ್ದರೆ, ನಮಗಾರಿಗೂ ಉಳಿವಿಲ್ಲ” ಎಂದರು.

“ಪ್ರಜ್ವಲ್ ರೇವಣ್ಣ ಮತ್ತು ಆತನ ತಂದೆ ರೇವಣ್ಣನನ್ನು ಬಂಧಿಸಿ, ಜೈಲಿಗಟ್ಟಬೇಕು. ಅವರಿಗೆ ‘ಓನ್ಲೀ ಜೈಲ್ – ನೋ ಬೈಲ್’ (ಜೈಲು ಮಾತ್ರ – ಜಾಮೀನು ಇಲ್ಲ) ಆಗಬೇಕು. ಇದೇ ನಮ್ಮ ಪ್ರಮುಖ ಒತ್ತಾಯ. ರೇವಣ್ಣ ಕುಟುಂಬ ತನಿಖೆಯಲ್ಲಿ ತಮ್ಮ ಪ್ರಭಾವವನ್ನು ಬಳಸಬಹುದು. ಕರ್ನಾಟಕ ಸರ್ಕಾರಕ್ಕೆ ನಾವು ಎಚ್ಚರಿಕೆ ನೀಡುತ್ತಿದ್ದೇವೆ. ಆರೋಪಿಗಳಿಗೆ ತಪ್ಪಿಸಿಕೊಳ್ಳಲು ಅವಕಾಶ ನೀಡಬಾರದು. ಅವರನ್ನು ಜೈಲಿಗಟ್ಟಬೇಕು” ಎಂದು ಒತ್ತಾಯಿಸಿದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

“ಸಂತ್ರಸ್ತ ಮಹಿಳೆಯರೊಂದಿಗೆ ನಾವಿದ್ದೇವೆ. ಅವರೊಂದಿಗೆ ಕೊನೆವರೆಗೂ ಹೋರಾಡುತ್ತೇವೆ. ಅವರಿಗೆ ನ್ಯಾಯ ಸಿಗುವವರೆಗೂ ಹೋರಾಟ ನಡೆಯುತ್ತದೆ. ಸಂತ್ರಸ್ತೆಯರು ಎದೆಗುಂದಬೇಕಿಲ್ಲ” ಎಂದು ಸಂತ್ರಸ್ತೆಯರಿಗೆ ಧೈರ್ಯ ತುಂಬುವ ಮಾತನಾಡಿದರು.

“ಸರ್ಕಾರಿ ಅಧಿಕಾರಿಗಳು, ಕಾರ್ಯಕರ್ತರು ಅಸಹಾಯಕ ಹೆಣ್ನುಮಕ್ಕಳು ಸಣ್ಣ ಪುಟ್ಟ ಸಹಾಯ ಕೇಳಲು ಬಂದಾಗ ಅವರ ಮೇಲೆ ರೇವಣ್ಣ ಮತ್ತು ಆತನ ಪುತ್ರ ದೌರ್ಜನ್ಯ ಎಸಗಿದ್ದಾರೆ. ಸಂತ್ರಸ್ತ ಮಹಿಳೆಯರಿಗೆ ನ್ಯಾಯ ಒದಗಿಸಬೇಕು. ಪರಿಹಾರ ನೀಡಬೇಕು. ಆಪ್ತ ಸಮಾಲೋಚನೆ ಒದಗಿಸಬೇಕು” ಎಂದು ಆಗ್ರಹಿಸಿದರು.

 

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ನಮ್ಮನ್ನು ಬೆಂಬಲಿಸಿ

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೇವದಾರಿ ಗಣಿಗಾರಿಕೆ ಯೋಜನೆ ಬಗ್ಗೆ ಕಳವಳ ಬೇಡ: ಕೇಂದ್ರ ಸಚಿವ ಕುಮಾರಸ್ವಾಮಿ

ಬಳ್ಳಾರಿಯ ಸಂಡೂರು ವ್ಯಾಪ್ತಿಯ ದೇವದಾರಿ ಪ್ರದೇಶದಲ್ಲಿ ಕುದುರೆಮುಖ ಕಬ್ಬಿಣ ಅದಿರು ಕಂಪನಿ...

ಜೂನ್ 19ರಂದು ಅಂಗನವಾಡಿ ನೌಕರರ ಸಂಘ ಅನಿರ್ದಿಷ್ಟಾವಧಿ ಹೋರಾಟ

ಅಂಗನವಾಡಿ ಕೇಂದ್ರಗಳಲ್ಲಿ ಇಸಿಸಿಇ (ECCE) ಜಾರಿಗಾಗಿ ಒತ್ತಾಯಿಸಿ, ಕೂಸಿನ ಮನೆ ರದ್ದು...

ಗದಗ | ಅತಿವೃಷ್ಟಿಯಿಂದಾದ ಹಾನಿಯ ಕುರಿತು ಸಭೆ; ಮುಂಜಾಗೃತಾ ಕ್ರಮಕ್ಕೆ ಡಿಸಿ ಸೂಚನೆ

ಅಧಿಕ ಮಳೆಯಿಂದಾಗುವ ಅತಿವೃಷ್ಟಿ ನಿಯಂತ್ರಣಕ್ಕೆ ಗದಗ ಜಿಲ್ಲೆಯ ವಿವಿಧ ಇಲಾಖೆಯ ಅಧಿಕಾರಿಗಳು...

ಸಾಹಿತಿಗಳೂ ರಾಜಕಾರಣಿಗಳೇ, ಸರ್ಕಾರದಿಂದ ನೇಮಕವಾಗಿದ್ದಾರೆ, ಸಭೆ ಮಾಡಿದ್ದೇನೆ: ಡಿ ಕೆ ಶಿವಕುಮಾರ್

ಇತ್ತೀಚೆಗೆ ಕೆಪಿಸಿಸಿ ಕಚೇರಿಗೆ ಸಾಹಿತ್ಯ, ಸಂಸ್ಕೃತಿ ಹಾಗೂ ಇತರ ಅಕಾಡೆಮಿಗಳ ಅಧ್ಯಕ್ಷರ...