ಹಾಸನ ಚಲೋ | ದೇವರೇ ಕಳಿಸಿದ ಮೋದಿ ಅವರೇ ಸಂತ್ರಸ್ತೆಯರಿಗೆ ನ್ಯಾಯ ಕೊಡಿಸಿ: ಮಾವಳ್ಳಿ ಶಂಕರ್

Date:

Advertisements

ನಾಡಿನ ಜನರ ಪರವಾಗಿ ಧನಿ ಎತ್ತಿದ್ದ ಹಾಸನ ಜಿಲ್ಲೆಯಲ್ಲಿ ಇಂದು ಬೃಹತ್ ಶೋಷಣೆ ನಡೆದಿದೆ. ಪ್ರಕರಣದ ಆರೋಪಿ ಪ್ರಜ್ವಲ್-ರೇವಣ್ಣ ಕುಟುಂಬಕ್ಕೂ ನಮಗೂ ಸಂಬಂಧ ಇಲ್ಲವೆಂದು ಕುಮಾರಸ್ವಾಮಿ ಹೇಳಿದ್ದರು. ಆದ್ರೆ, ಇಂದು ಅವರು ಮಾಧ್ಯಮಗಳ ಮುಂದೆ ಪದೇ-ಪದೇ ಬಂದು ನಾನಾ ರೀತಿಯಲ್ಲಿ ಮಾತನಾಡುತ್ತಿದ್ದಾರೆ. ತಮ್ಮ ಕುಟುಂಬದ ಕಾಮುಕರ ಪರವಾಗಿರುವ ಕುಮಾರಸ್ವಾಮಿ ಮತ್ತು ಅವರ ಕುಟುಂಬವನ್ನು ಬಗ್ಗುಬಡಿಯಬೇಕು.

ಹಾಸನದಲ್ಲಿ ನಡೆದ ಬೃಹತ್ ಪ್ರತಿಭಟನೆಯಲ್ಲಿ ಅವರು ಮಾತನಾಡಿದರು. “ಕಾನೂನಿನ ಮುಂದೆ ರೇವಣ್ಣ ಕುಟುಂಬದ ನಿಂಬೆಕಾಯಿಗಳು ಕೆಲಸಕ್ಕೆ ಬರುವುದಿಲ್ಲ. ದೇವರೇ ನನ್ನನ್ನ ಕಳಿಸಿದ್ದಾರೆ ಅಂತ ಪ್ರಧಾನಿ ಹೇಳ್ತಿದ್ದಾರೆ. ದೇವರಾದ ಮೋದಿ ಅವರಿಗೆ ನಾನು ಹೇಳುತ್ತಿದ್ದೇನೆ. ವಿವೇಕಾನಂದರನ್ನ, ದೇವರನ್ನ ನೀವು ಅವಮಾನಿಸಬೇಡಿ. ಪ್ರಜ್ವಲ್ ಪ್ರಕರಣದಲ್ಲಿ ಮೋದಿ ಮೌನವಾಗಿದ್ದಾರೆ. ಪ್ರಜ್ವಲ್ ವಿದೇಶಕ್ಕೆ ಹಾರಿಹೋಗಿದ್ದ ಹಿಂದೆಯೂ ಕೇಂದ್ರ ಸರ್ಕಾರ ನಿಂತಿದೆ. ಪ್ರಕರಣವನ್ನು ಹಳ್ಳ ಹಿಡಿಸಲು ಕೇಂದ್ರ ಸರ್ಕಾರ ಯತ್ನಿಸುತ್ತಿದೆ. ಅದಕ್ಕೆ ಆಸ್ಪದ ಕೊಡದೆ, ರಾಜ್ಯ ಸರ್ಕಾರ ಪ್ರಕರಣವನ್ನು ಸರಿಯಾದ ರೀತಿಯಲ್ಲಿ ತನಿಖೆ ನಡೆಸಬೇಕು” ಎಂದು ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ಮಾತನಾಡಿದ ಸಿಐಟಿಯು ಮುಖಂಡೆ ವರಲಕ್ಷ್ಮಿ, “ಮಹಿಳೆಯರ ಮೇಲೆ ನಡೆಯುವ ದೌರ್ಜನ್ಯ ಪ್ರಕರಣಗಳನ್ನ ಪಕ್ಷಗಳು ತಮ್ಮ ರಾಜಕೀಯಕ್ಕೆ ಬಳಸಿಕೊಳ್ಳಲು ಯತ್ನಿಸುತ್ತಿವೆ. ಹುಬ್ಬಳ್ಳಿಯಲ್ಲಿ ನಡೆದ ನೇಹಾ ಪ್ರಕರಣವನ್ನು ಬಿಜೆಪಿ ತನ್ನ ಸ್ವಾರ್ಥ ರಾಜಕಾರಣಕ್ಕೆ ಬಳಸಿಕೊಂಡಿತು. ಆಕೆಯ ಕುಟುಂಬಸ್ಥರನ್ನು ಭೇಟಿ ಮಾಡಿದ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ ನಡ್ಡಾ, ಹೆಣ್ಣು ಮಕ್ಕಳ ರಕ್ಷಣೆಗೆ ನಮ್ಮ ಸರ್ಕಾರ ಪಣ ತೊಟ್ಟಿದೆ ಎಂದು ಹೇಳಿದ್ದರು. ಆದರೆ, ಹಾಸನ ಪ್ರಕರಣದಲ್ಲಿ ಅವರು ಎಲ್ಲಿದ್ದಾರೆ. ಆರೋಪಿಗಳನ್ನು ರಕ್ಷಿಸಲು ಯತ್ನಿಸುತ್ತಿದ್ದಾರೆ” ಎಂದು ಆರೋಪಿಸಿದರು.

Advertisements

 

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

ಮಂಗಳೂರು | ನ್ಯಾಯಬೆಲೆ ಅಂಗಡಿಯಲ್ಲಿ ‘ಗೋಣಿಚೀಲ’ಕ್ಕಾಗಿ ಜಗಳ: ಮಹಿಳೆಯ ವಿಡಿಯೋ ಮಾಡಿ ತೇಜೋವಧೆಗೆ ಯತ್ನ!

ನ್ಯಾಯಬೆಲೆ ಅಂಗಡಿಯಲ್ಲಿ 'ಗೋಣಿಚೀಲ' ನೀಡುವಂತೆ ಪಟ್ಟು ಹಿಡಿದದ್ದಲ್ಲದೇ, ಗ್ರಾಹಕನೋರ್ವ ನ್ಯಾಯಬೆಲೆ ಅಂಗಡಿಯವರ...

ಮೈಸೂರು | ಜಿ ಟಿ ದೇವೇಗೌಡರ ದಲಿತ ವಿರೋಧಿ ಹೇಳಿಕೆ ಖಂಡಿಸಿ ವಿದ್ಯಾರ್ಥಿಗಳಿಂದ ಪ್ರತಿಭಟನೆ

ಮೈಸೂರು ವಿಶ್ವವಿದ್ಯಾನಿಲಯದ ಸಂಶೋಧಕರ ಸಂಘ ಹಾಗೂ ದಲಿತ ವಿದ್ಯಾರ್ಥಿ ಒಕ್ಕೂಟದ ವಿದ್ಯಾರ್ಥಿಗಳು...

Download Eedina App Android / iOS

X