ಹಾಸನ | ಅಂಗನವಾಡಿ ಕಾರ್ಯಕರ್ತೆಯರ ಅಗತ್ಯತೆ ಪೂರೈಕೆಗೆ ಆಗ್ರಹ

Date:

ಅಂಗನವಾಡಿ ಕಾರ್ಯಕರ್ತೆಯರನ್ನು ನಿರ್ಲಕ್ಷ್ಯ ಮಾಡುತ್ತಿರುವ ಕೇಂದ್ರ ಸರ್ಕಾರದ ಧೋರಣೆಯನ್ನು ಖಂಡಿಸಿ, ರಾಜ್ಯ ಸರ್ಕಾರ ಅಂಗನವಾಡಿ ಕಾರ್ಯಕರ್ತೆಯರ ಗೌರವಧನ ಬಿಡುಗಡೆ ಮಾಡಬೇಕೆಂದು ಒತ್ತಾಯಿಸಿದರು.

- Advertisement -

ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘದ ಕಾರ್ಯಕರ್ತೆಯರು ಹಾಸನದ ಸಿಡಿಪಿಒ ಮುಖಾಂತರ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮನವಿ ಸಲ್ಲಿಸಿ ಪ್ರತಿಭಟನೆ ನಡೆಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಗಾಂಧಿಯ ಆರ್ಥಿಕ ಸಾಮಾಜಿಕ ಸಂಕೇತಗಳು: ಉಪ್ಪು, ಖಾದಿ, ಚರಕ...

ಗ್ರಾಮೀಣ ಭಾರತದ ಆರ್ಥಿಕತೆ ಮನಗಂಡಿದ್ದ ಗಾಂಧಿ ಹಾಲಿನ ಬಗೆಗಿನ ಕಠೋರ ನಿಲುವನ್ನು ನಿರಾಕರಿಸಿ ತನ್ನನ್ನು ತಾನು ಮೇಕೆಯ ಮಮಕಾರದ ಹಾಲಿಗೆ ಕೊಟ್ಟುಕೊಂಡಿದ್ದರು. ಈಗಿನ ಪಶುಪಾಲಕ ಸಮುದಾಯಗಳ ಸಾವಯವ ಬದುಕಿನ ರೀತಿ ನೀತಿ ಗಮನಿಸಿ......

“ಇಂದು ದೇಶಾದ್ಯಂತ ಪ್ರತಿಭಟನೆ ನಡೆಸಿ “ಕರಾಳ ದಿನ” ಆಚರಿಸುತ್ತಿದ್ದೇವೆ. ದೇಶ ಎದುರಿಸುತ್ತಿರುವ ಗಂಭೀರ ಸವಾಲುಗಳ ಬಗ್ಗೆ ನಿಮ್ಮ ಮಂತ್ರಿಮಂಡಲದ ನಿರ್ಲಕ್ಷ್ಯ ಧೋರಣೆ ವಿರೋಧಿಸಿ ಈ ಪ್ರತಿಭಟನೆ ಮಾಡುತ್ತಿದ್ದೇವೆ. ದೇಶದ ಜನತೆ ಭಾರೀ ಪ್ರಮಾಣದ ಅಪೌಷ್ಟಿಕತೆ ಎದುರಿಸುತ್ತಿದ್ದಾರೆ. ದೇಶದ 26 ಲಕ್ಷ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರ ಜೀವನ ಅತ್ಯಂತ ಶೋಚನೀಯ ಸ್ಥಿತಿಯಲ್ಲಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

“ದೇಶದ ಎಲ್ಲ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರಿಗೆ ಕನಿಷ್ಠ ವೇತನ ನಿಗದಿ ಮಾಡಿ, ಜಾರಿಗೊಳಿಸಬೇಕು. ಇಎಸ್‌ಐ, ಪಿಎಫ್‌, ಪಿಂಚಣಿ, ಎಕ್ಸ್‌ಗ್ರೇಷಿಯಾ ಸೇರಿದಂತೆ ಇತರೆ ಸಾಮಾಜಿಕ ಭದ್ರತೆಗಳನ್ನು ಒದಗಿಸಬೇಕು” ಎಂದು ಒತ್ತಾಯಿಸಿದರು.

“45 ಮತ್ತು 46ನೇ ಇಂಡಿಯನ್ ಲೇಬರ್ ಕಾನ್ಫರೆನ್ಸ್‌ಗಳ ಶಿಫಾರಸು ಜಾರಿ ಮಾಡಲೇಬೇಕು. ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರಿಗೆ ಗ್ರಾಚ್ಯುಟಿ ಕೊಡುವ ಕುರಿತಂತೆ ಸುಪ್ರೀಂ ಕೋರ್ಟ್ ನೀಡಿರುವ ತೀರ್ಪನ್ನು ಕೂಡಲೇ ಜಾರಿ ಮಾಡಬೇಕು” ಎಂದು ಆಗ್ರಹಿಸಿದರು.

“ಸುಪ್ರಿಂ ಕೋರ್ಟ್ ಮತ್ತು ಸಂಸದೀಯ ಮಂಡಳಿಗಳ ಶಿಫಾರಸುಗಳ ಪ್ರಕಾರ ದೇಶದ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರಿಗೆ ಮೂಲ ವೇತನ ನಿಗದಿ, ವೇತನ ಹೆಚ್ಚಳ ನಿಗದಿ ಸೇರಿದಂತೆ ಇತರೆ ಭತ್ಯೆಗಳ ಪರಿಶೀಲನೆ ಮತ್ತು ನಿಗದಿಗಾಗಿ ಕೇಂದ್ರ ಮತ್ತು ರಾಜ್ಯ ಸರ್ಕಾರ ಕೂಡಲೇ ಸಮಿತಿ ರಚಿಸಬೇಕು” ಎಂದು ಒತ್ತಾಯಿಸಿದರು.

“ನಮಗೆ ಏಕ ರೂಪದ ಸೇವಾ ನಿಯಮಗಳನ್ನು ಕೂಡಲೇ ರೂಪಿಸಬೇಕು. ಸಂಘಟನೆ ಮಾಡಿದ ಮತ್ತು ಮುಷ್ಕರಗಳಲ್ಲಿ ಭಾಗವಹಿಸಿದ ಕಾರಣಕ್ಕಾಗಿ ದೆಹಲಿಯಲ್ಲಿ ಕಾನೂನು ಬಾಹಿರವಾಗಿ ಕೆಲಸದಿಂದ ವಜಾ ಮಾಡಿರುವ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರನ್ನು ಕೂಡಲೇ ಮರುನೇಮಕ ಮಾಡಬೇಕು. ಅಲ್ಲದೇ, ನಾವು ಸಂಘಟಿತರಾಗುವ, ಪ್ರತಿಭಟಿಸುವ ಹಕ್ಕನ್ನು ಖಾತರಿ ಮಾಡಬೇಕು” ಎಂದು ಮನವಿ ಮಾಡಿದರು.

“ನಾವು ಪರಿಣಾಮಕಾರಿಯಾಗಿ ಕೆಲಸ ಮಾಡಲು ಉತ್ತಮ ಗುಣಮಟ್ಟದ ಮೊಬೈಲ್‌ಗಳನ್ನು ಕೊಡಬೇಕು. ಹಂತಹಂತವಾಗಿ ಅವುಗಳಿಗೆ ಬದಲಾಗಿ ಟ್ಯಾಬ್ಲೆಟ್‌ಗಳನ್ನು ಕೊಡಬೇಕು. ಅವುಗಳಿಗೆ ನೆಟ್ವರ್ಕ್, ಡಾಟ್ ಪ್ಯಾಕ್‌ಗಳನ್ನು ಖಾತರಿ ಮಾಡಬೇಕು. ಆ ಮೊಬೈಲ್ ಅಥವಾ ಟ್ಯಾಬ್ಲೆಟ್‌ಗಳಲ್ಲಿ ಪ್ರಾದೇಶಿಕ ಭಾಷೆಗಳ ಪ್ರೋಗ್ರಾಮ್‌ಗಳನ್ನು ಅಳವಡಿಸಬೇಕು. ಹಾಗಾದಾಗ ಮಾತ್ರ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಮೇಲಿನ ಕೆಲಸದ ಒತ್ತಡ ಕಡಿಮೆ ಮಾಡಲು ಸಾಧ್ಯವಾಗುತ್ತದೆ” ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

ಈ ಸುದ್ದಿ ಓದಿದ್ದೀರಾ? ಬಳ್ಳಾರಿ | ಕಂದಾಯ ಇಲಾಖೆ ಅಧಿಕಾರಿಗಳಿಂದಲೇ ಭೂಗಳ್ಳರಿಗೆ ಬೆಂಬಲ; ಆರೋಪ

“ಇಲಾಖಾ ಕೆಲಸ ಮಾಡುವವರನ್ನು ಯಾವುದೇ ಕಾರಣಕ್ಕೂ ಬಲಿಪಶುಗಳನ್ನಾಗಿ ಮಾಡಬಾರದು, ಕಿರುಕುಳ ನೀಡಬಾರದು. ‘ಪೋಷಣ್ ಅಭಿಯಾನ’ಕ್ಕೆ ಆಧಾರ್ ಅಥವಾ ಫೋನ್ ನಂಬರ್ ಲಿಂಕ್ ಮಾಡುವುದು ಕಡ್ಡಾಯ ಎಂಬ ಅದೇಶವನ್ನು ಹಿಂಪಡೆಯಬೇಕು. ಆ ಸಂಬಂಧ ಸುಪ್ರಿಂ ಕೋರ್ಟ್‌ನ ಮಾರ್ಗದರ್ಶನ ಪಾಲಿಸಬೇಕು” ಎಂದು ಆಗ್ರಹಿಸಿ ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿದರು.

ಕೊರೊನಾ ಸಾಂಕ್ರಾಮಿಕದ ಸಂದರ್ಭದಲ್ಲಿ ತಮ್ಮ ಜೀವ ಮತ್ತು ಜೀವನಗಳನ್ನು ಪಣಕ್ಕಿಟ್ಟು, ಅಪೌಷ್ಟಿಕತೆ ವಿರುದ್ಧ ಸಮರೋಪಾದಿಯಲ್ಲಿ ಕರ್ತವ್ಯ ನಿರ್ವಹಿಸಿದ ಲಕ್ಷಾಂತರ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ದೀರ್ಘಕಾಲದ ಬೇಡಿಕೆಗಳಾಗಿದ್ದು, ಇವುಗಳನ್ನು ಕೂಡಲೇ ಈಡೇರಿಸಬೇಕು” ಎಂದು ಆಗ್ರಹಿಸಿದರು.

ಜಿಲ್ಲಾಧ್ಯಕ್ಷೆ ಟಿ ಎಚ್‌ ಜಯಂತಿ, ತಾಲೂಕು ಅಧ್ಯಕ್ಷೆ ಎಂ ಬಿ ಪುಷ್ಪ, ಪ್ರಧಾನ ಕಾರ್ಯದರ್ಶಿ ಲಲಿತಾ, ಖಜಾಂಚಿ ಮೀನಾಕ್ಷಿ ಸೇರಿದಂತೆ ಬಹುತೇಕರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾವೇರಿ | ಗಾಂಧಿ ಕಂಡ ಕನಸನ್ನ ಸೌಹಾರ್ದಗೊಳಿಸೋಣ: ಬಸವರಾಜ ಪೂಜಾರ

"ಸರ್ಕಾರದ ಕಾರ್ಯಕ್ರಮದ ಭಾಗವಾಗಿ ಮಾತ್ರ ಗಾಂಧಿ ಜಯಂತಿ ಅತ್ಯಂತ ವಿಜೃಂಭಣೆಯಿಂದ ಆಚರಣೆ...

SIR: ಕೊಡಗಿನ ಬ್ಯಾಡಗೊಟ್ಟದಲ್ಲಿ 66 ಮುಸ್ಲಿಂ ಮತಗಳ ಅಳಿಸುವಿಕೆಗೆ Form-7 ಅರ್ಜಿ

ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಯ ಸಂದರ್ಭದಲ್ಲಿ ಮತದಾರರ...

ಅ.4ರಿಂದ ವಿಜಯಪುರ – ತಿರುಪತಿ ದಸರಾ ಎಕ್ಸ್‌ಪ್ರೆಸ್ ರೈಲು ಸೇವೆ ಆರಂಭ

ದಸರಾ ಹಬ್ಬದ ಹಿನ್ನೆಲೆಯಲ್ಲಿ ತಿರುಪತಿ–ವಿಜಯಪುರ ನಡುವೆ ಪ್ರಯಾಣಿಕರ ಅನುಕೂಲಕ್ಕಾಗಿ ಸಾಪ್ತಾಹಿಕ ವಿಶೇಷ...

ವಿಜಯಪುರ | ರೂ. 2,500 ಸಬ್ಸಿಡಿಗೆ ವಿರೋಧ: ಸರ್ಕಾರಕ್ಕೆ ದೇಣಿಗೆ ಸಂಗ್ರಹಿಸಿ ಕೊಟ್ಟ ರೈತರು!

ಭೀಕರ ಬರದಿಂದ ನಲುಗಿರುವ ರೈತರಿಗೆ ರಾಜ್ಯ ಸರ್ಕಾರ ಘೋಷಿಸಿರುವ ₹2,500 ಇನ್‌ಪುಟ್...