ಹಾಸನ | ಗ್ರಾ.ಪಂ. ನೌಕರರಿಗೆ ವೈಜ್ಞಾನಿಕ ಕನಿಷ್ಠ ವೇತನ ಜಾರಿಗೊಳಿಸುವಂತೆ ಸಿಐಟಿಯು ಆಗ್ರಹ

Date:

ಪಂಚಾಯತ್ ರಾಜ್ ಸಂಸ್ಥೆಗಳಲ್ಲಿ ಉದ್ಯೋಗ ಉದ್ದಿಮೆಗಳಲ್ಲಿ ದುಡಿಯುವ ನೌಕರರಿಗೆ ಕನಿಷ್ಠ ವೇತನ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸಿಐಟಿಯು ನೇತೃತ್ವದೊಂದಿಗೆ ಕರ್ನಾಟಕ ರಾಜ್ಯ ಗ್ರಾಮ ಪಂಚಾಯತ್ ನೌಕರರ ಸಂಘದಿಂದ ಹಾಸನ ಜಿಲ್ಲಾ ಕಾರ್ಮಿಕ ಇಲಾಖೆ ಎದುರು ಪ್ರತಿಭಟನೆ ನಡೆಸಿ ಕಾರ್ಮಿಕ ಅಧಿಕಾರಿಗೆ ಮನವಿ ಸಲ್ಲಿಸಿದರು.

- Advertisement -

ಸಿಐಟಿಯು ಜಿಲ್ಲಾಧ್ಯಕ್ಷ ಧರ್ಮೇಶ್ ಮಾತನಾಡಿ, “ಕರ್ನಾಟಕ ಸರ್ಕಾರವು ʼಪಂಚಾಯತ್ ರಾಜ್ʼ ಸಂಸ್ಥೆಯಲ್ಲಿ ಉದ್ಯೋಗ ಉದ್ದಿಮೆ ಮಾಡುವ ನೌಕರರಿಗೆ 2021 ನವೆಂಬರ್ ತಿಂಗಳಲ್ಲಿ ಅವೈಜ್ಞಾನಿಕವಾಗಿ ಜಾರಿ ಮಾಡಿರುವ ಕನಿಷ್ಠ ವೇತನವನ್ನು ಕರ್ನಾಟಕ ಗೌರವಾನ್ವಿತ ಉಚ್ಚನ್ಯಾಯಾಲಯದಲ್ಲಿ ಪ್ರಶ್ನೆ ಮಾಡಿ ಸಂಘವು ರಿಟ್ ದಾಖಲೆ ಮಾಡಿದ ನಂತರ ನ್ಯಾಯಾಲಯದಲ್ಲಿ ವಾದ-ವಿವಾದಗಳು 2023 ಸೆಪ್ಟಂಬರ್‌ನಿಂದ ಆರಂಭವಾಗಿ 2024ರಲ್ಲಿ ಮಾನ್ಯ ನ್ಯಾಯಾಲಯದ ಏಕಸದಸ್ಯ ಪೀಠವು ಸುಪ್ರೀಂ ಕೋರ್ಟ್ ಮಾರ್ಗದರ್ಶನದಂತೆ ಕನಿಷ್ಠ ವೇತನ ನಿಗದಿ ಪಡಿಸಲು 10 ವಾರಗಳ ಗಡುವು ನೀಡಿದ ಮೇಲೆ ಮೂರು ವರ್ಷ ನಾಲ್ಕು ತಿಂಗಳ ನಂತರ 2025ರಂದು ಸರ್ಕಾರ ಕನಿಷ್ಠ ವೇತನ ಅಧಿಸೂಚನೆ ಹೊರಡಿಸಿ ಆಕ್ಷೇಪಣೆ ಸಲ್ಲಿಸಲು ಅವಕಾಶ ನೀಡಲಾಗಿತ್ತು” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

“ಕರವಸೂಲಿಗಾರ, ಗುಮಾಸ್ತ, ಕ್ಲರ್ಕ್, ಕ್ಲರ್ಕ್ ಕಂ ಡೇಟಾ ಎಂಟ್ರಿ ಆಪರೇಟರ್ ಹುದ್ದೆಗಳನ್ನು ಅತ್ತಿ ಕುಶಲರಾಗಿ ಪರಿಗಣಿಸಿ ಮೂಲ ವೇತನ ₹38,021.86 ನಿಗದಿಪಡಿಸಬೇಕು. ವಾಟರ್‌ಮ್ಯಾನ್‌(ನೀರುಗಂಟಿ), ಪಂಪ್ ಆಪರೇಟರ್ ಕಂ ಮೆಕ್ಯಾನಿಕ್ ಹುದ್ದೆಗಳನ್ನು ʼಕುಶಲʼರಾಗಿ ಪರಿಗಣಿಸಿ’ ಮೂಲ ವೇತನ ₹33,062.50 ನಿಗದಿಪಡಿಸಬೇಕು. ಅಟೆಂಡರ್, ಜವಾನರು ʼಅರೆ ಕುಶಲʼರಾಗಿ ಪರಿಗಣಿಸಿ ಮೂಲ ವೇತನ ₹28750 ನಿಗದಿಪಡಿಸಬೇಕು. ಕಸಗುಡಿಸುವವರು/ಸ್ವಚ್ಛಾತಾಗಾರರು ʼಅಕುಶಲʼರಾಗಿ ಪರಿಗಣಿಸಿ ಮೂಲ ವೇತನ ₹25,000 ನಿಗದಿಪಡಿಸಬೇಕು” ಎಂದು ಒತ್ತಾಯಿಸಿದರು.

ಈ ಸುದ್ದಿ ಓದಿದ್ದೀರಾ? ಬೀದರ್‌ | ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಗ್ರಾಮ ಪಂಚಾಯಿತಿ ನೌಕರರ ಪ್ರತಿಭಟನೆ

“ಕನಿಷ್ಠ ವೇತನದ ಜಾರಿಯನ್ನು 2025ರಿಂದ ಅನ್ವಯವಾಗುವಂತೆ ಜಾರಿ ಮಾಡಬೇಕು ಜತೆಗೆ 9,469 ಅಂಶಗಳಿಗಿಂತ ಹೆಚ್ಚಾಗುವ ಪ್ರತಿ ಅಂಶಕ್ಕೆ ದಿನಕ್ಕೆ ಆರು ಪೈಸೆ ನಿಗದಿಯಾಗಬೇಕು. ಗ್ರಾಮ ಪಂಚಾಯಿತಿಗಳಲ್ಲಿ ದುಡಿಯುವ ಸಿಬ್ಬಂದಿಗಳಿಗೆ ʼಸೇವಾ ಹಿರಿತನದʼ ಮಾನ್ಯತೆ ನೀಡಿ ಮೂಲ ವೇತನಕ್ಕೆ ಶೇ.2ರಷ್ಟು ಹೆಚ್ಚಳವನ್ನು ಪ್ರತಿ ವರ್ಷ ಪರಿಗಣಿಸಿ ಹೆಚ್ಚುವರಿ ಭತ್ಯೆ ನೀವುವಂತಹ ಬೇಡಿಕೆಗಳನ್ನು ಬಗೆಹರಿಸುವಂತೆ ಒತ್ತಾಯಿಸಿ ರಾಜ್ಯಾದ್ಯಾಂತ ಎಲ್ಲ ಜಿಲ್ಲಾ ಕಾರ್ಮಿಕ ಅಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ಮಾಡಲಾಗುತ್ತಿದೆ” ಎಂದು ತಿಳಿಸಿದರು.

ಪ್ರತಿಭಟನೆಯಲ್ಲಿ ಸಂಘಟನೆ ಪ್ರಧಾನ ಕಾರ್ಯದರ್ಶಿ ಕೆ ಟಿ ಹೊನ್ನೇಗೌಡ, ಖಜಾಂಚಿ ಕುಮಾರಸ್ವಾಮಿ, ಚನ್ನರಾಯಪಟ್ಟಣ ತಾಲೂಕು ಅಧ್ಯಕ್ಷ ಕರಿಯಪ್ಪ, ಅರಕಲಗೂಡು ಕಾರ್ಯದರ್ಶಿ ಅಶೋಕ್, ಬೇಲೂರು ತಾಲೂಕು ಕಾರ್ಯದರ್ಶಿ ನಂದೀಶ್, ಅರಸೀಕೆರೆ ತಾಲೂಕು ಅಧ್ಯಕ್ಷ ಚಂದ್ರಶೇಖರ್, ಡಿವೈಎಫ್‌ವೈ ಜಿಲ್ಲಾ ಕಾರ್ಯದರ್ಶಿ ಎಂ ಜಿ ಪೃಥ್ವಿ, ಸಿಐಟಿಯು ಜಿಲ್ಲಾ ಕಾರ್ಯದರ್ಶಿ ಅರವಿಂದ್ ಸೇರಿದಂತೆ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿರಸಿ | ರಾಜೇಂದ್ರ ಸಿರ್ಸಿಕರ್‌ಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಗೌರವ

ಶಿರಸಿ: ಪ್ರಾಣಿ-ಪಕ್ಷಿಗಳ ರಕ್ಷಣೆ ಮತ್ತು ಪುನರ್ವಸತಿ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿರಸಿಯ ರಾಜೇಂದ್ರ...

ಧಾರವಾಡ | ಪೊಲೀಸ್ ಹೆಸರೇಳಿ ರೂ. 15,700 ವಂಚನೆ: ನಾಲ್ಕು ಬೈಕ್‍ಗಳು ನಗದು ವಶ

ಪೊಲೀಸ್ ಹೆಸರೇಳಿ ವ್ಯಕ್ತಿಯೊಬ್ಬರಿಂದ ₹15,700 ಹಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ...

ಗೋಕರ್ಣ | ಕುಡ್ಲೆ ಕಡಲತೀರದಲ್ಲಿ ಸಮುದ್ರ ಸುಳಿಗೆ ಸಿಲುಕಿದ್ದ ಬೆಂಗಳೂರಿನ ಇಬ್ಬರು ಪ್ರವಾಸಿಗರ ರಕ್ಷಣೆ

ಗೋಕರ್ಣ: ಸಮುದ್ರದಲ್ಲಿ ಈಜುತ್ತಿದ್ದ ವೇಳೆ ಅಪಾಯಕಾರಿ ಸುಳಿಗೆ ಸಿಲುಕಿದ ಬೆಂಗಳೂರಿನ ಇಬ್ಬರು...