ಹಾಸನ | ಆ.15ರಂದು ಜನಾರೋಗ್ಯ ಸ್ವಾತಂತ್ರ‍್ಯಕ್ಕಾಗಿ ಸಾಮೂಹಿಕ ಧರಣಿ: ಧರ್ಮೇಶ್

Date:

ಹಾಸನದ ಹಿಮ್ಸ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಆರಂಭಿಸಲು ಹಾಗೂ ಜಿಲ್ಲೆಯ ಜನರ ಪರವಾಗಿ ಜನಾರೋಗ್ಯದ ಹಕ್ಕೊತ್ತಾಯಗಳನ್ನು ಮಂಡಿಸಲು ಆಗಸ್ಟ್‌ 15ರಂದು ʼಸಾಮೂಹಿಕ ಧರಣಿ ಸತ್ಯಾಗ್ರಹ’ ನಡೆಸಲು ತೀರ್ಮಾನಿಸಲಾಗಿದೆ. ಎಂದು ಸಾಮಾಜಿಕ ಕಾರ್ಯಕರ್ತ, ಸಿಐಟಿಯು ಜಿಲ್ಲಾಧ್ಯಕ್ಷ ಧರ್ಮೇಶ್‌ ತಿಳಿಸಿದರು.

- Advertisement -

ನಗರದ ಪತ್ರಿಕಾಭವನದಲ್ಲಿ ಸಮಾನ ಮನಸ್ಕರಿಂದ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ಆಗಸ್ಟ್ 14ರಂದು ಹಾಸನ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದ ನಂತರ ಆಗಸ್ಟ್ 15ರ ಸ್ವಾತಂತ್ರ್ಯ ದಿನದಂದು ಹಿಮ್ಸ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಕಟ್ಟಡದ ಮುಂದೆ ‘ಜನಾರೋಗ್ಯದ ಸ್ವಾತಂತ್ರ‍್ಯಕ್ಕಾಗಿ ಸಾಮೂಹಿಕ ಧರಣಿ ಸತ್ಯಾಗ್ರಹ ನಡೆಸಲಾಗುತ್ತಿದೆ. ಸ್ಥಳಕ್ಕೆ ಜಿಲ್ಲಾ ಉಸ್ತುವಾರಿ ಸಚಿವರು, ಸಂಸದರು, ಶಾಸಕರು ಹಾಗೂ ಡಿಸಿಯವರು ಆಗಮಿಸಿ ಹಕ್ಕೊತ್ತಾಯ ಈಡೇರಿಸಲು ಕ್ರಮಕೈಗೊಳ್ಳಬೇಕೆಂದು ಒತ್ತಾಯ ಮಾಡಲಾಗುವುದು. ನಗರದಲ್ಲಿ ಹಿಮ್ಸ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯನ್ನು ಕೂಡಲೇ ಆರಂಭಿಸುವಂತೆ ಹಾಗೂ ಹಾಸನ ಜಿಲ್ಲೆಯ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯನ್ನು ಭಾರತೀಯ ಸಾರ್ವಜನಿಕ ಆರೋಗ್ಯ ಮಾನದಂಡಗಳಿಗೆ (ಐಪಿಎಚ್ಎಸ್) ಅನುಗುಣವಾಗಿ ಸೌಲಭ್ಯಗಳನ್ನು ನೀಡಿ ಉನ್ನತೀಕರಿಸಿ ಸಬಲೀಕರಿಸುವಂತೆ ಆಗ್ರಹಿಸಲಾಗುವುದು. ಮೊದಲಿಗೆ ಜಿಲ್ಲೆಯ ವಿವಿಧ ಜನಪರ ಸಂಘಟನೆಗಳು, ಸಂಘ ಸಂಸ್ಥೆಗಳು ಮತ್ತು ನಾಗರಿಕರಿಂದ ನಿರಂತರ ಸರಣಿ ಪ್ರತಿಭಟನೆಗಳನ್ನು ನಡೆಸಲಾಗುವುದು” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ನುಡಿ ನಮನ | ಕನ್ನಡ ವಿಚಾರ ಪರಂಪರೆಗೆ ಕೆವಿಎನ್...

ನಮ್ಮೊಳಗಿನ ತಾಕಲಾಟ, ಹೊಯ್ದಾಟ, ತೀರಗಳೇ ತಲುಪದ ಭಾರಿ ಅಲೆಗಳ ಏರಾಟದಲ್ಲಿ ಸಿಲುಕಿ ಒದ್ದಾಡುವಾಗ ಒಮ್ಮೆ ಕೆವಿಎನ್‌ ಜತೆ ಮಾತನಾಡಿದರೆ ಸಾಕು… ಕಂಡ ಆಪ್ತರು “ ಏನೋ ಇವತ್ತು ನಿನಗೆ ಬಂಪರ್‌ ಲಾಟರಿ ಹೊಡೀತಾ’’...

E20 ಹೆಸರಲ್ಲಿ E31 ಸುಲಿಗೆ: ಕರ್ನಾಟಕದಲ್ಲಿ ಮೋದಿ ಸರ್ಕಾರದ...

ದೇಶದ ಇಂಧನ ಮಾರುಕಟ್ಟೆಯ ಇತಿಹಾಸದಲ್ಲೇ ಅತ್ಯಂತ ಕರಾಳವಾದ, ಜನರ ಕಣ್ಣಿಗೆ ಮಣ್ಣು ಎರಚಿ ಅವರ ವಾಹನಗಳ ಎಂಜಿನ್‌ಗಳನ್ನು ನಾಶಪಡಿಸುವ ಮತ್ತು ಜೇಬಿಗೆ ಕತ್ತರಿ ಹಾಕುವ ಬೃಹತ್ ದರೋಡೆಕೋರತನ ಕರ್ನಾಟಕದಲ್ಲಿ ಬಯಲಾಗಿದೆ. ಪೆಟ್ರೋಲ್‌ನಲ್ಲಿ 20%ರ...

ಮೀಟರ್ ಹಾಕಲ್ಲ, ನಿಗದಿತ ಬಾಡಿಗೆಗೆ ಬರಲ್ಲ: ಆಟೋ ಸುಲಿಗೆಯಿಂದ...

ಶಿವಮೊಗ್ಗ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಆಟೋಗಳ ಸಂಚಾರ ಮತ್ತು ಆಟೋ ಪ್ರಯಾಣಿಕರ ಸಮಸ್ಯೆ ಇಂದು ಸಾರ್ವಜನಿಕ ಚರ್ಚೆಯ ವಿಷಯವಾಗಿದೆ. ನಗರದ ರಸ್ತೆಗಳಲ್ಲಿ ಆಟೋಗಳ ಸಂಖ್ಯೆ ಹೆಚ್ಚುತ್ತಿರುವುದು, ನಿಗದಿತ ದರಕ್ಕಿಂತ ಹೆಚ್ಚಿನ ಬಾಡಿಗೆ ಕೇಳುವುದು,...

ಹೃದ್ರೋಗ, ಪಾರ್ಶ್ವವಾಯು, ಕಿಡ್ನಿ ಸಮಸ್ಯೆ, ಮೆದುಳು ಮತ್ತು ನರರೋಗ, ಕ್ಯಾನ್ಸರ್ ಮತ್ತಿತರೆ ಮಾರಣಾಂತಿಕ ಖಾಯಿಲೆಗಳು ಎಲ್ಲಾ ವಯೋಮಾನದ ಜನರಲ್ಲಿ ಹೆಚ್ಚಾಗುತ್ತಿವೆ. ಜಿಲ್ಲೆಯ ಜನಾರೋಗ್ಯದ ಸ್ಥಿತಿ ಹಾಗೂ ಜಿಲ್ಲೆಯ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ನಡುವಿನ ಅಂತರಗಳು ಹೆಚ್ಚಾಗಿವೆ. ಹೀಗಾಗಿ ಸೂಕ್ತ ಸಮಯದಲ್ಲಿ ಖಾಯಿಲೆಗಳ ಪತ್ತೆ, ಸೂಕ್ತ ತಪಾಸಣೆ ಮತ್ತು ಸೂಕ್ತ ಚಿಕಿತ್ಸೆ ದೊರೆಯದೆ ಮರಣಗಳು ಹೆಚ್ಚಾಗುತ್ತಿವೆ. ಜೊತೆಗೆ ಖಾಸಗಿಯಲ್ಲಿ ದುಬಾರಿಯಾದ ತಪಾಸಣೆ ಮತ್ತು ಚಿಕೆತ್ಸೆಗೆ ಒಳಗಾದವರು ಅತ್ಯಂತ ಆರ್ಥಿಕ ದುಸ್ಥಿತಿಗೆ ತಳ್ಳಲ್ಪಟ್ಟಿರುವ ಉದಾಹರಣೆಗಳು ಸಾಕಷ್ಟಿವೆ. ಉತ್ತಮ ಗುಣಮಟ್ಟದ ಶಿಕ್ಷಣ ಮತ್ತು ಆರೋಗ್ಯಕ್ಕಾಗಿ ಜನರು ಖಾಸಗಿ ವ್ಯವಸ್ಥೆಯನ್ನು ಅವಲಂಭಿಸಬೇಕಾದ ಅನಿವಾರ್ಯತೆಯಿಂದಾಗಿ ತೀವ್ರ ಆರ್ಥಿಕ ಶೋಷಣೆಗೆ ಒಳಗಾಗುತ್ತಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದರು.

ಶಸ್ತ್ರ ಚಿಕಿತ್ಸೆ, ಮೂತ್ರಪಿಂಡ, ಗ್ಯಾಸ್ಟ್ರೋ ಎಂಟಾಲಜಿ, ಕ್ಯಾನ್ಸರ್, ಪ್ಲಾಸ್ಟಿಕ್ ಸರ್ಜರಿ ಸೇರಿದಂತೆ ಮಾರಣಾಂತಿಕ ರೋಗ ತಪಾಸಣೆಯ ಹತ್ತು ವಿಶೇಷ ವಿಭಾಗಗಳ ಗಂಭೀರ ಸ್ವರೂಪದ ಆರೋಗ್ಯದ ಸಮಸ್ಯೆಗಳಿಗೆ ಚಿಕಿತ್ಸೆ ಒದಗಿಸಲು ಇಲ್ಲಿ ಸಾಧ್ಯತೆ ಇದ್ದು, ಇಲ್ಲಿ ರೋಗ ತಪಾಸಣೆ ಮತ್ತು ಚಿಕಿತ್ಸೆ ನೀಡಲು ವೈದ್ಯಕೀಯ ವಿಭಾಗಗಳು, ಕ್ಯಾತ್ ಲ್ಯಾಬ್, ಅತ್ಯಂತ ಸುಸಜ್ಜಿತವಾದ ಅತ್ಯುತ್ತಮ ಗುಣಮಟ್ಟದ ವೈದ್ಯಕೀಯ ಸೌಲಭ್ಯಗಳಿರುವ ಪ್ರತ್ಯೇಕ ಶಸ್ತ್ರ ಚಿಕಿತ್ಸಾ ಘಟಕಗಳನ್ನು ಕೂಡಲೇ ಪ್ರಾರಂಭಿಸಬೇಕು. ನುರಿತ ತಜ್ಞ ವೈದ್ಯರು, ವೈದ್ಯರು, ವೈದ್ಯಕೀಯ ಮತ್ತು ವೈದ್ಯಕೀಯೇತರ ಸಿಬ್ಬಂದಿಗಳನ್ನು ನೇಮಕ ಮಾಡಿ, ಸೂಪರ್ ಸ್ಪೆಶಾಲಿಟಿ ಆಸ್ಪತ್ರೆಯ ಕಾರ್ಯಾರಂಭಕ್ಕೆ ಅಗತ್ಯ ಅನುಕೂಲಗಳನ್ನು ತುರ್ತಾಗಿ ಒದಗಿಸಿ, ಕೂಡಲೇ ಸರ್ಕಾರವು ಅಗತ್ಯವಿರುವ ಅನುದಾನವನ್ನು ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿದರು.

ಹಿರಿಯ ಸಾಹಿತಿ ರೂಪ ಹಾಸನ್ ಮಾತನಾಡಿ, “ಜಿಲ್ಲೆಯಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರಗಳು ಮತ್ತು ಸಮುದಾಯ ಆರೋಗ್ಯ ಕೇಂದ್ರಗಳ ಸಂಖ್ಯೆಯನ್ನು ಹೆಚ್ಚಿಸಿ ಅವುಗಳಿಗೆ ಐ.ಪಿ.ಎಚ್.ಎಸ್. ಮಾನದಂಡಗಳ ಅನುಸಾರ ಪ್ರಾಥಮಿಕ ಸೌಲಭ್ಯಗಳಾದ ಸುಸಜ್ಜಿತ ವೈದ್ಯಕೀಯ ಪ್ರಯೋಗಾಲಯ, ಇಸಿಜಿ, ಎಕೋ, ಎಕ್ಸ್ ರೇ, ತುರ್ತು ಚಿಕಿತ್ಸಾ ಘಟಕ ಮತ್ತು ಅಂಬುಲೆನ್ಸ್ ಹಾಗೂ ತಜ್ಞ ವೈದ್ಯರು ಮತ್ತು ಸಿಬ್ಬಂದಿಗಳನ್ನು ಒದಗಿಸಬೇಕು. ತಾಲ್ಲೂಕು ಆಸ್ಪತ್ರೆಗಳನ್ನು ಐ.ಪಿ.ಎಚ್.ಎಸ್. ಮಾನದಂಡಗಳಿಗೆ ಅನುಗುಣವಾಗಿ ಮೇಲ್ದರ್ಜೆಗೇರಿಸಿ ಹೃದಯ ಮತ್ತು ಮೂತ್ರಪಿಂಡ ಸಂಬಂಧಿ ಹಾಗೂ ಇನ್ನಿತರೆ ಮಾರಣಾಂತಿಕ ಖಾಯಿಲೆಗಳ ತುರ್ತು ಚಿಕಿತ್ಸಾ ಘಟಕಗಳನ್ನು ತೆರೆಯಬೇಕು” ಎಂದರು.

“ಕೋವಿಡ್ ಲಸಿಕೆಯ ದುಷ್ಪರಿಣಾಮಗಳಿಂದಾಗಿ ಈ ಬಗೆಯ ಆರೋಗ್ಯ ತುರ್ತು ಪರಿಸ್ಥಿತಿಯು ಎಲ್ಲೆಡೆ ಉಂಟಾಗುತ್ತಿದೆ ಎಂಬ ಅನುಮಾನವು ಜನರನ್ನು ಕಾಡುತ್ತಿದ್ದು, ಈ ಕುರಿತು ಪ್ರತಿ ಆಕಸ್ಮಿಕ ಮತ್ತು ಹಠಾತ್ ಸಾವಿಗೀಡಾದ ವ್ಯಕ್ತಿಯ ಮರಣೋತ್ತರ ಪರೀಕ್ಷೆ ಮಾಡಿ, ಪ್ರತ್ಯೇಕ ಮತ್ತು ಆಳವಾದ ಕೂಲಂಕಷ ಅಧ್ಯಯನ ನಡೆಸಿ, ವರದಿ ಬಿಡುಗಡೆ ಮಾಡುವ ಮೂಲಕ ಜನರಲ್ಲಿರುವ ಅನುಮಾನಗಳನ್ನು ದೂರ ಮಾಡಬೇಕು” ಎಂದು ಒತ್ತಾಯಿಸಿದರು.

ಇದನ್ನೂ ಓದಿ: ಹಾಸನ | ಗ್ರಾ.ಪಂ. ನೌಕರರಿಗೆ ವೈಜ್ಞಾನಿಕ ಕನಿಷ್ಠ ವೇತನ ಜಾರಿಗೊಳಿಸುವಂತೆ ಸಿಐಟಿಯು ಆಗ್ರಹ

“ನಗರ ಮತ್ತು ಗ್ರಾಮೀಣ ಪ್ರದೇಶದ ಜನರಲ್ಲಿ ಪೌಷ್ಟಿಕ ಆಹಾರ, ನೈರ್ಮಲ್ಯ, ನಿಯಮಿತ ಆರೋಗ್ಯ ತಪಾಸಣೆ ಹಾಗೂ ಮಾನಸಿಕ ಒತ್ತಡ ನಿವಾರಣೆಯ ಕುರಿತು ಜನಜಾಗೃತಿ ಮೂಡಿಸಬೇಕು. ನಗರವೂ ಸೇರಿದಂತೆ ಎಲ್ಲಾ ನಗರಗಳಲ್ಲಿರುವ ಉಪಹಾರ ಗೃಹಗಳು, ರೆಸ್ಟೋರೆಂಟ್, ಹೊಟೇಲ್‌ಗಳು, ಫಾಸ್ಟ್ ಫುಡ್ ಕೋರ್ಟ್ ಮತ್ತು ಬೀದಿಬದಿಯ ಆಹಾರಗಳು ಮತ್ತು ಪಾನೀಯಗಳ ಗುಣಮಟ್ಟವನ್ನು ನಿಯಮಿತವಾಗಿ ತಪಾಸಣೆಗೆ ಒಳಪಡಿಸಿ, ಆರೋಗ್ಯಕರವಾಗಿರುವುದನ್ನು ಖಾತ್ರಿಪಡಿಸಬೇಕು. ಹಾಗೂ ಯಾವುದೇ ಹಾನಿಕಾರಕ ರಾಸಾಯನಿಕ, ಕೃತಕ ಹಾಗೂ ಕಲುಷಿತ ಎಣ್ಣೆ ಮತ್ತು ಕೃತಕ ಬಣ್ಣಗಳು ಬಳಕೆಯಾಗದಂತೆ ಎಚ್ಚರಿಕೆವಹಿಸಬೇಕು ಎಂದರು. ಕೃಷಿಯಲ್ಲಿ ಅಪಾಯಕಾರಿ ಕ್ರಿಮಿ/ಕೀಟನಾಶಕಗಳು ಮತ್ತು ರಾಸಾಯನಿಕಗಳ ಉತ್ಪಾದನೆ, ಮಾರಾಟ ಮತ್ತು ಬಳಕೆಯ ಮೇಲೆ ನಿಯಂತ್ರಣ ಹೇರಬೇಕು” ಎಂದು ಹೇಳಿದರು.

“ಈ ಬೇಡಿಕೆಗಳು ಈಡೇರುವವರೆಗೂ, ಹಾಸನ ಜಿಲ್ಲೆಯ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯನ್ನು ಬಲಪಡಿಸುವವರೆಗೂ- ಹಾಸನ ಜಿಲ್ಲೆಯ ಎಲ್ಲಾ ಜನಪರ ಸಂಘಟನೆಗಳು, ಸಂಘ ಸಂಸ್ಥೆಗಳು ಮತ್ತು ನಾಗರಿಕರು ನಿರಂತರವಾದ ಪ್ರತಿಭಟನೆ ನಡೆಸಿ ಸ್ವಾತಂತ್ರ್ಯ ದಿನದಂದು ನಡೆಯುತ್ತಿರುವ ‘ಜನಾರೋಗ್ಯದ ಸ್ವಾತಂತ್ರ್ಯಕ್ಕಾಗಿ ಸಾಮೂಹಿಕ ಧರಣಿ ಸತ್ಯಾಗ್ರಹದಲ್ಲಿ ಅತಿ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಯಶಸ್ವಿಗೊಳಿಸಬೇಕೆಂದು ಈ ಮೂಲಕ ಮನವಿ ಈ ಮೂಲಕ ಮನವಿ ಮಾಡಿಕೊಳ್ಳುತ್ತಿದ್ದೇವೆ” ಎಂದರು.

ಪತ್ರಿಕಾಗೋಷ್ಠಿಯಲ್ಲಿ ಹಿರಿಯ ದಲಿತ ಮುಖಂಡ ಎಚ್.ಕೆ. ಸಂದೇಶ್, ಡಿ.ವೈ.ಎಫ್.ಐ. ಜಿಲ್ಲಾ ಕಾರ್ಯದರ್ಶಿ ಎಂ.ಜಿ. ಪೃಥ್ವಿ, ವಕೀಲರು ಮತ್ತು ಮುಸ್ಲಿಂ ಮುಖಂಡ ಎಚ್.ಇ. ಅನ್ಶಾದ್ ಪಾಳ್ಯ, ಜನನಿ ಫೌಂಡೇಷನ್ ಅಧ್ಯಕ್ಷೆ ಭಾನುಮತಿ ಇತರರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಗಲಕೋಟೆ |ಅವಧಿ ಮೀರಿದ ಆಹಾರ ಮಾರಾಟ: 16 ಅಂಗಡಿಗಳ ವಿರುದ್ಧ ಪ್ರಕರಣ

ಅವಧಿ ಮೀರಿದ ಆಹಾರ ಪದಾರ್ಥಗಳ ಮಾರಾಟ ಹಾಗೂ ಅಗತ್ಯ ಪರವಾನಗಿ ಇಲ್ಲದೆ...

ವಿಜಯಪುರ |ಪದವಿಯೊಂದೇ ಸಾಲದು, ಪ್ರಾಯೋಗಿಕ ಕೌಶಲಗಳೂ ಅಗತ್ಯ: ಡಾ. ಅಕ್ಷಯ ಯಾರ್ದಿ

ಇಂದಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ಶಿಕ್ಷಣದ ಜೊತೆಗೆ ಸಂವಹನ, ಮಾತುಗಾರಿಕೆ, ಸುದ್ದಿ ನಿರೂಪಣೆ...

ಬಾಗೇಪಲ್ಲಿ | ಪ್ರಮುಖ ಬೇಡಿಕೆಗಳ ಈಡೇರಿಕೆಗೆ ಪಿಂಚಣಿದಾರರಿಂದ ಮನವಿ

ಕರ್ನಾಟಕ ರಾಜ್ಯ ಸರ್ಕಾರಿ ಪಿಂಚಣಿದಾರರ ಒಕ್ಕೂಟದ ಪದಾಧಿಕಾರಿಗಳು ಬಾಗೇಪಲ್ಲಿ ತಹಶಿಲ್ದಾರ್ ಮನೀಷಾ...