ನಾನು ಹಾಸನ ಜಿಲ್ಲಾ ಉಸ್ತುವಾರಿ, ತುಮಕೂರಿನ ಮಂತ್ರಿ ಪರಮೇಶ್ವರ್ ಅವರು ನನಗೆ ಹಾಸನದ ಚುನಾವಣೆ ಉಸ್ತುವಾರಿ ಕೊಟ್ಟಿದ್ದರು. ಹಾಗಾಗಿ ಈ ಜಿಲ್ಲೆಯ ಚುನಾವಣೆ ಬಗ್ಗೆ ಹೆಚ್ಚು ಒತ್ತು ನೀಡಿದೆ. ತುಮಕೂರು ಚುನಾವಣೆ ಬಗ್ಗೆ ನಾನು ಹೆಚ್ಚು ತಲೆ ಕೆಡಿಸಿಕೊಳ್ಳಲು ಹೋಗಲಿಲ್ಲ. ನನ್ನದೊಂದು ಮಧುಗಿರಿ ಕ್ಷೇತ್ರಕ್ಕೆ ಸೀಮಿತವಾಗಿದ್ದೆ ಎಂದು ಹಾಸನ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎನ್.ರಾಜಣ್ಣ ಹೇಳಿದರು.
ಹಾಸನ ಜಿಲ್ಲೆಯ ಸಕಲೇಶಪುರದಲ್ಲಿ ನಿರ್ಮಾಣವಾಗುತ್ತಿರುವ ಬಸವೇಶ್ವರ ಪುತ್ಥಳಿ ಕಾಮಗಾರಿ ವೀಕ್ಷಿಸಿಸಲು ಬಂದ ವೇಳೆ ಮಾತನಾಡಿದರು.
“ಹಾಸನದಲ್ಲಿ ಕಾಂಗ್ರೆಸ್ ಅಭ್ಯರ್ಥಿಯನ್ನು ಗೆಲ್ಲಿಸದಿದ್ದರೆ ಹಾಸನಕ್ಕೆ ಬರುವುದಿಲ್ಲವೆಂದು ಹೇಳಿದ್ದೆ.
ಎಲ್ಲರೂ ಒಗ್ಗಟ್ಟಾಗಿ ಕೆಲಸ ಮಾಡಿದ್ದಾರೆ. ಎಲ್ಲ ಪಕ್ಷ, ಜಾತಿಯವರೂ ಕಾಂಗ್ರೆಸ್ ಅಭ್ಯರ್ಥಿ ಶ್ರೇಯಸ್ ಅರಿಗೆ ಮತ ಹಾಕಿದ್ದಾರೆ. ಪುಟ್ಟಸ್ವಾಮಿಗೌಡರ ಹೆಸರಿನ ಆಧಾರದ ಮೇಲೆ ಬಹುಮತ ಬರಲು ಸಾಧ್ಯವಾಗಿದೆ. ಈ ಕ್ಷೇತ್ರದ ಜನರು ಗೆಲ್ಲಿಸಿದ್ದಾರೆ. ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆ. ನಾನು ಗೆಲ್ಲಿಸಿದ್ದೀನಿ ಅಂತ ಹೇಳಿದರೆ, ಅದು ದುರಂಹಕಾರದ ಮಾತಾಗುತ್ತದೆ” ಎಂದು ಹೇಳಿದರು.
“ದೇವೇಗೌಡರನ್ನು ಸೋಲಿಸಿದ್ದು ನಾನೇ, ಅದರಲ್ಲಿ ಅನುಮಾನ ಏನು ಇಲ್ಲ”
ನಮ್ಮ ಕ್ಷೇತ್ರದಲ್ಲಿ ಬಿಜೆಪಿಗೆ ಎರಡು ಸಾವಿರ ಓಟು ಕೂಡಾ ಇರಲಿಲ್ಲ. ನಾನು ಅವರಿಗೆ ಎಂಬತ್ತು ಸಾವಿರ ಓಟು ಕೊಡಿಸಿದ್ದೆ. ಅದರಿಂದ ದೇವೇಗೌಡರು ಸೋತರು. ಅವರು ಸೋಲಲು ನಾನೇ ಕಾರಣ, ನಾನೇ ಸೋಲಿಸಿದ್ದು. ಅದರಲ್ಲಿ ಅನುಮಾನ ಏನಿಲ್ಲ. ತುಮಕೂರಿನಲ್ಲಿ ನಡೆದ ಅನೇಕ ಸಭೆಗಳಲ್ಲಿ ನಾನು ಇದನ್ನು ಹೇಳಿದ್ದೀನಿ” ಎಂದರು.
ಈ ಸುದ್ದಿ ಓದಿದ್ದೀರಾ? ಗದಗ | ಸಂಘಟನೆಗಳಿಗೆ ಎಲ್ಲರ ಸಹಕಾರ ಮುಖ್ಯ: ಎಚ್ ಎಸ್ ಜೋಗಣ್ಣವರ
“ದೇವೇಗೌಡರು ತುಮಕೂರಿಗೆ ಬಂದು ನನ್ನನ್ನು ಸೋಲಿಸಿ ಎಂದು ಎದೆ ಬಡಿದುಕೊಂಡು ಕಣ್ಣೀರಿಟ್ಟರು. ನಾನು ಮುಚ್ಚುಮರೆ ಮಾಡುವ ಅವಶ್ಯಕತೆ ನನಗೇನಿಲ್ಲ” ಎಂದು ಹೇಳಿದ್ದಾರೆ.
