ಹಾಸನ | ಡಿ.29 ರಿಂದ 31ರವರೆಗೆ ಸಿಪಿಐಎಂ 24ನೇ ರಾಜ್ಯ ಸಮ್ಮೇಳನ 

Date:

ಸಮಗ್ರ, ಸಮೃದ್ಧ ಮತ್ತು ಸೌಹಾರ್ದ ಕರ್ನಾಟಕಕ್ಕಾಗಿ ಡಿಸೆಂಬರ್ 29ರಿಂದ 31ರವರೆಗೆ ತುಮಕೂರು ನಗರದಲ್ಲಿ ಭಾರತ ಕಮ್ಯೂನಿಸ್ಟ್ ಪಕ್ಷ(ಮಾರ್ಕ್ಸ್‌ವಾದಿ) ಸಿಪಿಐಎಂ 24ನೇ ರಾಜ್ಯ ಸಮ್ಮೇಳನ ನಡೆಯಲಿದ್ದು, ಇದರ ಅಂಗವಾಗಿ ಸಿಪಿಐಎಂ ಹಾಸನ ಜಿಲ್ಲಾ ಕಚೇರಿಯಲ್ಲಿ ಪೋಸ್ಟರ್‌ ಬಿಡುಗಡೆ ಮಾಡಲಾಯಿತು.

- Advertisement -

ಪೋಸ್ಟರ್ ಬಿಡುಗಡೆ ಮಾಡಿ ಮಾತನಾಡಿದ ಪಕ್ಷದ ಜಿಲ್ಲಾ ಕಾರ್ಯದರ್ಶಿ ಎಚ್ ಆರ್ ನವೀನ್ ಕುಮಾರ್, “ಸೆಪ್ಟಂಬರ್ 29ರಂದು ನಡೆಯುವ ಬೃಹತ್ ಮೆರವಣಿಗೆ ಮತ್ತು ಬಹಿರಂಗ ಸಭೆಯಲ್ಲಿ ಕೇಂದ್ರ ಮತ್ತು‌ ರಾಜ್ಯ ಸರ್ಕಾರಗಳ ಜನವಿರೋಧಿ ನೀತಿಗಳ ಕುರಿತು ಚರ್ಚಿಸಲಾಗುವುದು. ರೈತರು, ಕಾರ್ಮಿಕರು, ದಲಿತರು, ಮಹಿಳೆಯರು ಒಟ್ಟಾರೆ ದುಡಿಯುವ ಜನಸಮುದಾಯ ತೀವ್ರ ಸಂಕಷ್ಟವನ್ನು ಅನುಭವಿಸುತ್ತಿದೆ. ಈ ನೀತಿಗಳ ಕುರಿತು ಚರ್ಚಿಸಿ ಪ್ರಬಲ ಪ್ರತಿರೋಧವನ್ನು ಒಡ್ಡಲು ಜನಸಮುದಾಯವನ್ನು ಸಂಘಟಿಸುವ ಕುರಿತು ಮತ್ತು ಬಂಡವಾಳಶಾಹಿ ನೀತಿಗಳನ್ನು ಜಾರಿಗೆ ತರುತ್ತಿರುವ ಬಿಜೆಪಿ, ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳ ನೀತಿಗಳಿಗೆ ಪರ್ಯಾಯವಾಗಿ ದುಡಿಯುವ ವರ್ಗದ ನೀತಿಗಳಿಗಾಗಿ ಪರ್ಯಾಯ ರಾಜಕೀಯ ಆಂದೋಲನ ರೂಪಿಸಲು ಈ ಸಮ್ಮೇಳನದಲ್ಲಿ ಗಂಭೀರವಾಗಿ ಚರ್ಚಿಸಲಾಗುವುದು” ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಬಹಿರಂಗಸಭೆಯಲ್ಲಿ ಕೇರಳದ ಮಾಜಿ ಶಿಕ್ಷಣ ಸಚಿವರು ಮತ್ತು ಸಿಪಿಐಎಂ ಪಾಲಿಟ್ ಬ್ಯೂರೋ ಸದ್ಯರಾದ ಎಂ ಎ ಬೇಬಿ, ಬಿ ವಿ ರಾಘವಲು, ಮಾಜಿ ಸಂಸದ ಎ ವಿಜಯರಾಘವನ್, ರಾಜ್ಯ ಕಾರ್ಯದರ್ಶಿ ಯು ಬಸವರಾಜ ಭಾಗವಹಿಸಿ ಭಾಷಣ ಮಾಡಲಿದ್ದಾರೆ. ರಾಜ್ಯದ ಎಲ್ಲ ಜಿಲ್ಲೆಗಳಿಂದ ಜಿಲ್ಲಾ ಸಮ್ಮೇಳನಗಳಲ್ಲಿ ಪ್ರಜಾಸತ್ತಾತ್ಮಕವಾಗಿ ಆಯ್ಕೆಯಾದ ಮುನ್ನೂರಕ್ಕೂ ಹೆಚ್ಚು ಪ್ರತಿನಿಧಿಗಳು ಭಾಗವಹಿಸುತ್ತಾರೆ. ಹಾಸನ ಜಿಲ್ಲೆಯಿಂದಲೂ ಮೆರವಣಿಗೆ ಮತ್ತು ಬಹಿರಂಗ ಸಭೆಯಲ್ಲಿ ಪಕ್ಷದ ಸದಸ್ಯರು ಹಾಗೂ ಹಿತೈಷಿಗಳು ದೊಡ್ಡ ಸಂಖ್ಯೆಯಲ್ಲಿ‌ ಭಾಗವಹಿಸಲಿದ್ದಾರೆ” ಎಂದು ಹೇಳಿದರು.

ಇದನ್ನೂ ಓದಿದ್ದೀರಾ?ಹಾಸನ | ಮಲೆನಾಡಿನ ಅರಣ್ಯ ಕಾಯ್ದೆ, ಭೂಮಿ-ವಸತಿ ಸಮಸ್ಯೆ ಕುರಿತು ಸಂಸತ್ತಿನಲ್ಲಿ ಧ್ವನಿ ಎತ್ತುವೆ: ಸಂಸದ ಶ್ರೇಯಸ್ ಪಟೇಲ್

ಈ ಸಂದರ್ಭದಲ್ಲಿ ಪಕ್ಷದ ಜಿಲ್ಲಾ ಸಮಿತಿ ಸದಸ್ಯರುಗಳಾದ ಧರ್ಮೇಶ್, ಜಿ ಪಿ ಸತ್ಯನಾರಾಯಣ, ಎಂ ಜಿ ಪೃಥ್ವಿ, ಅರವಿಂದ ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಾರವಾರ | ಗ್ರಾಮ ಆಡಳಿತ ಅಧಿಕಾರಿ ಪರೀಕ್ಷೆ ಸುಸೂತ್ರ: ಒಟ್ಟು 11,671 ಅಭ್ಯರ್ಥಿಗಳು ಹಾಜರು

ಕಾರವಾರ: ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ವತಿಯಿಂದ ಕಂದಾಯ ಇಲಾಖೆಯ ಗ್ರಾಮ...

ಹಾಸನ | ₹426 ಕೋಟಿ; ಹಾಸನ-ಬೇಲೂರು ಚತುಷ್ಪಥ ರಸ್ತೆ ಅಭಿವೃದ್ಧಿ ಯೋಜನೆ; ಸಂಸದ ಶ್ರೇಯಸ್ ಪಟೇಲ್ 

ಹಾಸನ ನಗರದಲ್ಲಿ ಸುದ್ದಿಗಾರರೊಂದಿಗೆ ಸಂಸದ ಶ್ರೇಯಸ್ ಪಟೇಲ್ ಮಾತನಾಡಿ, ಹಾಸನ -...

ಯಲ್ಲಾಪುರ | ವಜ್ರಳ್ಳಿಯಲ್ಲಿ ರಸ್ತೆ ಕಾಮಗಾರಿಗೆ ಸಂಗ್ರಹಿಸಿದ್ದ ₹36 ಸಾವಿರ ಮೌಲ್ಯದ ಕಡಿ, ಎಂ-ಸ್ಯಾಂಡ್ ಕಳವು

ಯಲ್ಲಾಪುರ: ರಸ್ತೆ ಕಾಮಗಾರಿಗಾಗಿ ಸಂಗ್ರಹಿಸಿಟ್ಟಿದ್ದ ಕಡಿ ಹಾಗೂ ಎಂ-ಸ್ಯಾಂಡ್ ಕಳವು ಮಾಡಿರುವ...

ದಸರಾ, ಅಭಿಮನ್ಯು ಬೀಳ್ಕೊಡುಗೆಗೆ ಗಾಯನದ ಸ್ಪರ್ಶ

ವಿಶ್ವವಿಖ್ಯಾತ ಮೈಸೂರು ದಸರಾ ಹಾಗೂ ದಸರಾ ಆನೆ ಅಭಿಮನ್ಯುವಿನ ಬೀಳ್ಕೊಡುಗೆಯನ್ನು ಒಳಗೊಂಡ...