ಹಾಸನ | ಪೊಲೀಸ್ ಇಲಾಖೆಗೆ ಬೊಲೇರೊ ವಾಹನ ವಿತರಣೆ; ಹೆಚ್. ಎಸ್ ಸ್ವರೂಪ್ ಪ್ರಕಾಶ್

Date:

ಸ್ಥಳೀಯ ಶಾಸಕರ ಕ್ಷೇಮಾಭಿವೃದ್ಧಿ ನಿಧಿ ಹಾಗೂ ಖಾಸಗಿ ಆಸ್ಪತ್ರೆಗಳ ಮಾಲೀಕರ ಸಂಘದ ವತಿಯಿಂದ ಹಾಸನ ಜಿಲ್ಲಾ ಪೊಲೀಸ್ ಇಲಾಖೆಗೆ ಶಾಸಕ ಸ್ವರೂಪ್ ಪ್ರಕಾಶ್‌ ಬೊಲೇರೋ ವಾಹನವನ್ನು ವಿತರಿಸಲಾಗಿದೆ.

- Advertisement -

ಶಾಸಕ ಸ್ವರೂಪ್ ಪ್ರಕಾಶ್ ಜೊತೆ ಎಸ್ಪಿ ಶುಭನ್ವಿತಾ ಅವರು ಹಸಿರು ನಿಶಾನೆ ತೋರುವ ಮೂಲಕ ವಾಹನಕ್ಕೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಶಾಸಕ ಹೆಚ್. ಎಸ್ ಸ್ವರೂಪ್ ಪ್ರಕಾಶ್‌ ಮಾತನಾಡಿ, ಹಾಸನ ಜಿಲ್ಲಾ ಪೊಲೀಸ್ ಇಲಾಖೆ ಉತ್ತಮವಾಗಿ ಕಾರ್ಯ ನಿರ್ವಹಿಸುತ್ತಿದೆ ಆದರೆ ಸಿಬ್ಬಂದಿಗಳ ಕೊರತೆ ಹಾಗೂ ಮೂಲಭೂತ ಸೌಕರ್ಯಗಳ ಕೊರತೆಯಿಂದ ಒಂದಷ್ಟು ಸಮಸ್ಯೆಗಳಾಗುತ್ತಿವೆ ಈ ಬಗ್ಗೆ ಸರ್ಕಾರದ ಗಮನ ಸೆಳೆಯುವ ಕೆಲಸ ಮಾಡಿದ್ದೇನೆ, ಜಿಲ್ಲೆಯಲ್ಲಿ ಪೊಲೀಸ್‌ ಇಲಾಖೆಯಲ್ಲಿ ವಾಹನಗಳ ಕೊರತೆ ಇರುವುದು ತನ್ನ ಗಮನಕ್ಕೆ ಬಂದ ನಂತರ ಖಾಸಗಿ ಆಸ್ಪತ್ರೆ ಮಾಲೀಕರ ಸಂಘದ ಸಹಯೋಗದಲ್ಲಿ ಒಂದು ಬೊಲೆರೋ ವಾಹನ ನೀಡಲಾಗಿದೆ ಮುಂದಿನ ದಿನಗಳಲ್ಲಿ ಇನ್ನೂ ಮೂರು ವಾಹನಗಳನ್ನು ನೀಡಲು ಯೋಚಿಸಲಾಗಿದೆ ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಗಾಂಧಿಯ ಆರ್ಥಿಕ ಸಾಮಾಜಿಕ ಸಂಕೇತಗಳು: ಉಪ್ಪು, ಖಾದಿ, ಚರಕ...

ಗ್ರಾಮೀಣ ಭಾರತದ ಆರ್ಥಿಕತೆ ಮನಗಂಡಿದ್ದ ಗಾಂಧಿ ಹಾಲಿನ ಬಗೆಗಿನ ಕಠೋರ ನಿಲುವನ್ನು ನಿರಾಕರಿಸಿ ತನ್ನನ್ನು ತಾನು ಮೇಕೆಯ ಮಮಕಾರದ ಹಾಲಿಗೆ ಕೊಟ್ಟುಕೊಂಡಿದ್ದರು. ಈಗಿನ ಪಶುಪಾಲಕ ಸಮುದಾಯಗಳ ಸಾವಯವ ಬದುಕಿನ ರೀತಿ ನೀತಿ ಗಮನಿಸಿ......

ದಕ್ಷಿಣ ಆಫ್ರಿಕಾದಲ್ಲಿ ಗಾಂಧಿ ಮೊಳಗಿಸಿದ್ದ ಮತ ಹಕ್ಕಿನ ಕೂಗಿಗೆ...

ಮತದಾನ ಕೇವಲ ಹಕ್ಕಲ್ಲ, ಅದು ಪ್ರಜೆಯೊಬ್ಬನ ಘನತೆ ಹಾಗೂ ಅಸ್ತಿತ್ವದ ಸಂಕೇತ. 131 ವರ್ಷಗಳ ಹಿಂದೆ ದಕ್ಷಿಣ ಆಫ್ರಿಕಾದಲ್ಲಿ ಇದೇ ಮತಾಧಿಕಾರಕ್ಕಾಗಿ ಗಾಂಧೀಜಿ ಬ್ರಿಟಿಷರ ವಿರುದ್ಧ ಸಿಡಿದೆದ್ದಿದ್ದರು. ಆದರೆ, ಇಂದು ಸ್ವತಂತ್ರ ಭಾರತದಲ್ಲಿ...

ಇದನ್ನೂ ಓದಿದ್ದೀರಾ?ಹಾಸನ | ವಿಷ ಸೇವಿಸಿ ಮಹಿಳೆ ಸಾವು

ಹಾಸನ ವಿಧಾನಸಭಾ ಕ್ಷೇತ್ರಕ್ಕೆ ಇನ್ನೂ ಒಂದು ಹೆಚ್ಚುವರಿ ಪೊಲೀಸ್‌ ಠಾಣೆ ಹಾಗೂ ಹೆಚ್ಚುವರಿ ಸಿಬ್ಬಂದಿಗಳ ನೇಮಕಕ್ಕೆ ಸರ್ಕಾರಕ್ಕೆ ಮನವಿ ಮಾಡಲಾಗಿತ್ತು. ಆದರೆ ಆಗುವುದಿಲ್ಲ ಎಂಬ ಉತ್ತರ ನೀಡುವ ಮೂಲಕ ಸರ್ಕಾರ ಹಾಸನವನ್ನು ಕಡೆಗಣಿಸಿದೆ. ಅಲ್ಲದೆ ಶಾಸಕರಿಗೆ ಬರುವ ಅನುದಾನವನ್ನು ಕಡಿತಗೊಳಿಸಿ ಅಭಿವೃದ್ಧಿಗೆ ಮಾರಕವಾಗಿದೆ ಮುಂದಿನ ದಿನಗಳಲ್ಲಾದರೂ ಹೆಚ್ಚಿನ ಅನುದಾನ ಹಾಗೂ ಹೆಚ್ಚಿನ ಸಿಬ್ಬಂದಿಗಳ ನೇಮಕ ಮಾಡಿ ಪೊಲೀಸ್‌ ಇಲಾಖೆಗೆ ಶಕ್ತಿ ತುಂಬುವ ಕೆಲಸ ಮಾಡಬೇಕಾಗಿದೆ. ಹಾಸನ ನಗರ ಭಾಗದಲ್ಲಿ ಪ್ರತಿದಿನ 12 ಲಕ್ಷಕ್ಕೂ ಹೆಚ್ಚು ವಾಹನಗಳು ಸಂಚಾರ ಮಾಡುತ್ತವೆ, ಅದಕ್ಕನುಗುಣವಾಗಿ ಪೋಲಿಸ್‌ ಇಲಾಖೆಗೆ ಸಿಬ್ಬಂದಿಗಳ ನೇಮಕವಾಗಬೇಕು ಇದಲ್ಲದೆ ನಗರಸಭೆ, ಮಹಾನಗರ ಪಾಲಿಕೆಯಾಗಿ ಮೇಲ್ದರ್ಜೆಗೇರಿದ್ದು ಅದಕ್ಕೂ ಮುಂದಿನ ಮೂರು ವರ್ಷಗಳ ಕಾಲ ಅನುದಾನ ನೀಡಲು ಆಗುವುದಿಲ್ಲ ಎಂಬ ಲಿಖಿತ ಉತ್ತರ ನೀಡಿದ್ದಾರೆ ಎಂದು ಶಾಸಕ ಎಚ್. ಎಸ್ ಸ್ವರೂಪ್ ಪ್ರಕಾಶ್ ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾವೇರಿ | ಗಾಂಧಿ ಕಂಡ ಕನಸನ್ನ ಸೌಹಾರ್ದಗೊಳಿಸೋಣ: ಬಸವರಾಜ ಪೂಜಾರ

"ಸರ್ಕಾರದ ಕಾರ್ಯಕ್ರಮದ ಭಾಗವಾಗಿ ಮಾತ್ರ ಗಾಂಧಿ ಜಯಂತಿ ಅತ್ಯಂತ ವಿಜೃಂಭಣೆಯಿಂದ ಆಚರಣೆ...

SIR: ಕೊಡಗಿನ ಬ್ಯಾಡಗೊಟ್ಟದಲ್ಲಿ 66 ಮುಸ್ಲಿಂ ಮತಗಳ ಅಳಿಸುವಿಕೆಗೆ Form-7 ಅರ್ಜಿ

ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಯ ಸಂದರ್ಭದಲ್ಲಿ ಮತದಾರರ...

ಅ.4ರಿಂದ ವಿಜಯಪುರ – ತಿರುಪತಿ ದಸರಾ ಎಕ್ಸ್‌ಪ್ರೆಸ್ ರೈಲು ಸೇವೆ ಆರಂಭ

ದಸರಾ ಹಬ್ಬದ ಹಿನ್ನೆಲೆಯಲ್ಲಿ ತಿರುಪತಿ–ವಿಜಯಪುರ ನಡುವೆ ಪ್ರಯಾಣಿಕರ ಅನುಕೂಲಕ್ಕಾಗಿ ಸಾಪ್ತಾಹಿಕ ವಿಶೇಷ...

ವಿಜಯಪುರ | ರೂ. 2,500 ಸಬ್ಸಿಡಿಗೆ ವಿರೋಧ: ಸರ್ಕಾರಕ್ಕೆ ದೇಣಿಗೆ ಸಂಗ್ರಹಿಸಿ ಕೊಟ್ಟ ರೈತರು!

ಭೀಕರ ಬರದಿಂದ ನಲುಗಿರುವ ರೈತರಿಗೆ ರಾಜ್ಯ ಸರ್ಕಾರ ಘೋಷಿಸಿರುವ ₹2,500 ಇನ್‌ಪುಟ್...